ಬೀದರ್ ಜಿಲ್ಲಾ ಪ್ರಥಮ ದಲಿತ-ಬಂಡಾಯ ಸಮ್ಮೇಳನ : ಸರ್ವಾಧ್ಯಕ್ಷರಾಗಿ ಮಾರುತಿ ಬೌದ್ಧೆ ಆಯ್ಕೆ

Date:

ಬೀದರ್ ಜಿಲ್ಲಾ ಪ್ರಥಮ ದಲಿತ-ಬಂಡಾಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಪ್ರಗತಿಪರ ಚಿಂತಕ ಹಾಗೂ ದಲಿತ ಹೋರಾಟಗಾರ ಮಾರುತಿ ಬೌದ್ಧೆ ಅವರನ್ನು ಆಯ್ಕೆ ಮಾಡಲಾಗಿದೆ.

- Advertisement -

ಕಳೆದ ನಾಲ್ಕು ದಶಕಗಳಿಂದ ಸಾಮಾಜಿಕ ಸಮಾನತೆಗಾಗಿ ಶ್ರಮಿಸುತ್ತಿರುವ ಮಾರುತಿ ಬೌದ್ಧೆ ಅವರು ದೀನದಲಿತರು, ರೈತರು, ಕೂಲಿ ಕಾರ್ಮಿಕರು ಹಾಗೂ ಮಹಿಳೆಯರ ವಿವಿಧ ಸಮಸ್ಯೆಗಳ ಪರಿಹಾರಕ್ಕಾಗಿ ಅನೇಕ ಹೋರಾಟಗಳಲ್ಲಿ ತೊಡಗಿಸಿಕೊಂಡಿದ್ದಾರೆ. ಬುದ್ಧ, ಬಸವ ಮತ್ತು ಅಂಬೇಡ್ಕರ್ ಅವರ ತತ್ವಾದರ್ಶಗಳನ್ನು ಮೈಗೂಡಿಸಿಕೊಂಡಿರುವ ಅವರು, ಹೋರಾಟವನ್ನೇ ಬದುಕಿನ ಮುಖ್ಯ ಧ್ಯೇಯವಾಗಿಸಿಕೊಂಡು ನಿಸ್ವಾರ್ಥವಾಗಿ ಸಮಾಜಸೇವೆಯಲ್ಲಿ ತೊಡಗಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಪ್ರಚಾರ, ರಾಹುಲ್ ವ್ಯಕ್ತಿತ್ವ ಮತ್ತು ರೆಜಿಮ್ ಚೇಂಜ್

ಮೋದಿ ಅನುಭವಿ ನಟನಂತೆ, ಪ್ರದರ್ಶಕನಂತೆ ಕಾಣುತ್ತಾರೆ. ರಾಹುಲ್ ಗಾಂಧಿ ಪಾತ್ರದ ಒಳಹೊಕ್ಕು ನಟಿಸುವ ಕಲಾವಿದನಂತೆ ಕಾಣುತ್ತಾರೆ. ಈ ನಿಟ್ಟಿನಲ್ಲಿ ರಾಹುಲ್ ರಾಜಕೀಯ ನಡೆಗಳು ಮೋದಿಯವರ ರಾಜಕೀಯ ನಡೆಗಳೊಂದಿಗೆ ವಿಶ್ಲೇಷಣೆಗೊಳಗಾಗುತ್ತಿವೆ. ಕಳೆದ 12 ವರ್ಷಗಳ...

137 ಜೀವ ರಕ್ಷಕ ಕ್ಯಾನ್ಸರ್ ಔಷಧಗಳ ದರ ಶೇ.70ರಷ್ಟು...

ಕ್ಯಾನ್ಸರ್ ಚಿಕಿತ್ಸೆಯ ದುಬಾರಿ ವೆಚ್ಚದಿಂದ ಕಂಗೆಟ್ಟಿರುವ ರೋಗಿಗಳಿಗೆ ಕೇಂದ್ರ ಸರ್ಕಾರದಿಂದ ಕೊಂಚ ನಿರಾಳತೆಯ ಸುದ್ದಿಯೊಂದಿದೆ! 137 ಜೀವರಕ್ಷಕ ಕ್ಯಾನ್ಸರ್ ಔಷಧಗಳ ಬೆಲೆ ಇಳಿಕೆಯಾಗುವ ಸಾಧ್ಯತೆಯಿದ್ದು, ಕೆಲವು ಔಷಧಗಳ ಗರಿಷ್ಠ ಚಿಲ್ಲರೆ ಬೆಲೆ ಶೇ.70ರವರೆಗೆ...

‘ದೇಶ್ ಕೋ ಬಿಕನೇ ನಹೀ ದೂಂಗಾ’ ಎಂದು ನವಮಂಗಳೂರು...

​ರೈಲ್ವೆ, ವಿಮಾನ ನಿಲ್ದಾಣ, ಟೆಲಿಕಾಂ ಸೇರಿದಂತೆ ದೇಶದ ಪ್ರಮುಖ ಜಯಶೀಲ ಸಾರ್ವಜನಿಕ ವಲಯಗಳನ್ನು ಈಗಾಗಲೇ ಆಯ್ದ ಕಾರ್ಪೊರೇಟ್ ಕುಳಗಳಿಗೆ ಒಪ್ಪಿಸಿರುವ ಮೋದಿ ಸರ್ಕಾರ, ಈಗ ತನ್ನ ದೃಷ್ಟಿಯನ್ನು ಕಡಲತೀರಗಳತ್ತ ಹರಿಸಿದೆ. ದೇಶದ ಆಮದು-ರಫ್ತು...

ದಲಿತ ಸಂಘರ್ಷ ಸಮಿತಿಯ ಜಿಲ್ಲಾಧ್ಯಕ್ಷರಾಗಿ ಸುದೀರ್ಘ ಕಾಲ ಸೇವೆ ಸಲ್ಲಿಸಿರುವ ಅವರು, ತಮ್ಮ ಸಾಮಾಜಿಕ ಕಾಳಜಿ ಹಾಗೂ ಹೋರಾಟದ ಅನುಭವದ ಹಿನ್ನೆಲೆಯಲ್ಲಿ ರಾಜ್ಯ ದಲಿತ ಸಂಘರ್ಷ ಸಮಿತಿಯ ರಾಜ್ಯ ಸಂಘಟನಾ ಸಂಚಾಲಕರಾಗಿಯೂ ಕಾರ್ಯನಿರ್ವಹಿಸುತ್ತಿದ್ದಾರೆ. ಅವರ ಸಾಮಾಜಿಕ ಸೇವೆಯನ್ನು ಗುರುತಿಸಿ ರಾಜ್ಯ ಸರ್ಕಾರವು ಕಳೆದ ವರ್ಷ ರಾಜ್ಯೋತ್ಸವ ಸಮಿತಿಗೆ ಸದಸ್ಯರನ್ನಾಗಿ ನೇಮಕ ಮಾಡಿತ್ತು.

Advertisements

ಈಚೆಗೆ ಕನ್ನಡ ಸಾಹಿತ್ಯ ಪರಿಷತ್ತಿನ ಬೀದರ್ ಜಿಲ್ಲಾ ಘಟಕದ ಅಧ್ಯಕ್ಷ ಸುರೇಶ ಚೆನ್ನಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ನಡೆದ ಜಿಲ್ಲಾ ಕಾರ್ಯಕಾರಿ ಮಂಡಳಿ ಸಭೆಯಲ್ಲಿ ಮಾರುತಿ ಬೌದ್ಧೆ ಅವರನ್ನು ಸಮ್ಮೇಳನದ ಸರ್ವಾಧ್ಯಕ್ಷರನ್ನಾಗಿ ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು.

WhatsApp Image 2026 10 10 at 6.59.31 PM 8
ಜಾಹೀರಾತು

ಸಭೆಯಲ್ಲಿ ಬೀದರ್ ತಾಲೂಕು ಅಧ್ಯಕ್ಷ ಟಿ.ಎಂ. ಮಚ್ಚೆ, ಔರಾದ್ ಅಧ್ಯಕ್ಷ ಅಮರವಾಡಿ ಬಿ.ಎಂ., ಹುಮನಾಬಾದ್ ಅಧ್ಯಕ್ಷ ಸೂಗಿ ಶ್ರೀಕಾಂತ, ಭಾಲ್ಕಿ ಅಧ್ಯಕ್ಷ ನಾಗಭೂಷಣ ಮಾಮಡಿ, ಹುಲಸೂರು ಅಧ್ಯಕ್ಷ ನಾಗರಾಜ ಹಾವಣ್ಣ, ಬಸವಕಲ್ಯಾಣದ ಕಾರ್ಯದರ್ಶಿ ಸಂತೋಷ ಅಕ್ಕಣ್ಣ ಸೇರಿದಂತೆ ಕಾರ್ಯಕಾರಿ ಮಂಡಳಿ ಸದಸ್ಯರಾದ ವಿಜಯಕುಮಾರ ಗೌರೆ, ವಿಜಯಕುಮಾರ ಸೋನಾರೆ, ಡಾ.ಮಲ್ಲಿಕಾರ್ಜುನ ನಿಂಗದಳ್ಳಿ, ಡಾ.ರಾಜಕುಮಾರ ಅಲ್ಲೂರೆ, ಸಂಜೀವಕುಮಾರ ಅಲ್ಲೂರೆ, ದೇವೇಂದ್ರ ಕರಂಜೆ, ರೂಪಾ ಪಾಟೀಲ, ವೀರಶೆಟ್ಟಿ ಚೆನ್ನಶೆಟ್ಟಿ, ಸಿದ್ಧಾರೂಢ ಭಾಲ್ಕೆ ಹಾಗೂ ಅಶೋಕ ದಿಡಗೆ ಉಪಸ್ಥಿತರಿದ್ದರು.

ಕಾರ್ಯದರ್ಶಿ ಎಂ.ಎಸ್. ಮನೋಹರ ಸ್ವಾಗತಿಸಿದರು. ಕಾರ್ಯದರ್ಶಿ ಸಚಿನ ಮಠಪತಿ ವಂದಿಸಿದರು. ಕೋಶಾಧ್ಯಕ್ಷ ಡಾ. ಶಿವಶಂಕರ ಟೋಕರೆ ಕಾರ್ಯಕ್ರಮ ನಿರೂಪಿಸಿದರು.

ಹಿತೈಷಿಗಳಿಂದ ಹರ್ಷ

ಕನ್ನಡ ಸಾಹಿತ್ಯ ಪರಿಷತ್ತಿನ ಬೀದರ್ ಜಿಲ್ಲಾ ಘಟಕದ ವತಿಯಿಂದ ನಡೆಯಲಿರುವ ಬೀದರ ಜಿಲ್ಲೆಯ ಪ್ರಪ್ರಥಮ ಜಿಲ್ಲಾ ದಲಿತ ಬಂಡಾಯ ಸಮ್ಮೇಳನದ  ಸರ್ವಾಧಕ್ಷ್ಯರಾಗಿ ಹಿರಿಯ ದಲಿತ ಬಂಡಾಯ ಹೋರಾಟಗಾರ ಹಾಗೂ ಸಾಮಾಜಿಕ ಚಿಂತಕ ಮಾರುತಿ ಬೌದ್ಧೆ ಅವರನ್ನು ಆಯ್ಕೆ ಮಾಡಿರುವುದಕ್ಕೆ ಅವರ ಹಿತೈಷಿಗಳು, ಸಂಗಡಿಗರು ಹಾಗೂ ಬಹುಕಾಲದಿಂದ ಅವರೊಂದಿಗೆ ಸಾಮಾಜಿಕ ನ್ಯಾಯದ ಹೋರಾಟಗಳಲ್ಲಿ ಹೆಜ್ಜೆ ಹಾಕಿರುವ ಸಂಗಾತಿಗಳು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಕಾರ್ಯಕಾರಿ ಸಮಿತಿಗೆ ಕೃತಜ್ಞತೆ ಸಲ್ಲಿಸಿ ಹರ್ಷ ವ್ಯಕ್ತಪಡಿಸಿದ್ದಾರೆ.

ದಲಿತ ಬಂಡಾಯ ಚಳವಳಿ ಕೇವಲ ಸಾಹಿತ್ಯಿಕ ಅಭಿವ್ಯಕ್ತಿಯಲ್ಲ; ಅದು ಶೋಷಣೆ, ಜಾತಿ ತಾರತಮ್ಯ, ಅಸಮಾನತೆ ಮತ್ತು ಅನ್ಯಾಯದ ವಿರುದ್ಧ ಧ್ವನಿ ಎತ್ತಿದ ಸಾಮಾಜಿಕ ಪರಿವರ್ತನೆಯ ಚಳವಳಿಯಾಗಿದೆ. ಸಾಹಿತ್ಯವನ್ನು ಜನರ ಬದುಕಿನೊಂದಿಗೆ ಬೆಸೆದು, ಸಮಾಜದ ಕಟ್ಟಕಡೆಯ ವ್ಯಕ್ತಿಯ ನೋವು, ಹಕ್ಕು, ಸ್ವಾಭಿಮಾನ ಮತ್ತು ಸಮಾನತೆಯ ಆಶಯಗಳಿಗೆ ಧ್ವನಿಯಾಗಿಸಿದ ಚಳವಳಿಯ ಪರಂಪರೆಯಲ್ಲಿ ಮಾರುತಿ ಬೌಧೆ ಅವರಂತಹ ಹೋರಾಟಗಾರರಿಗೆ ಸಮ್ಮೇಳನದ ಅಧ್ಯಕ್ಷತೆಯ ಜವಾಬ್ದಾರಿ ದೊರೆತಿರುವುದು ಸಂತಸದ ಸಂಗತಿಯಾಗಿದೆ ಎಂದು ಅವರ ಹಿತೈಷಿಗಳು ಅಭಿಪ್ರಾಯಪಟ್ಟಿದ್ದಾರೆ.

ಮಾರುತಿ ಬೌದ್ಧೆ ಅವರು ದಲಿತ ಬಂಡಾಯ ಚಳವಳಿಯ ಆಶಯಗಳೊಂದಿಗೆ ಗುರುತಿಸಿಕೊಂಡು, ಸಾಮಾಜಿಕ ಅಸಮಾನತೆ ಮತ್ತು ಶೋಷಣೆಯ ವಿರುದ್ಧದ ಹೋರಾಟಗಳಲ್ಲಿ ತಮ್ಮದೇ ಆದ ಬದ್ಧತೆಯನ್ನು ಪ್ರದರ್ಶಿಸಿದವರು. ಸಮಾಜದ ಅಂಚಿನಲ್ಲಿರುವ ಜನರ ನೋವು-ನಲಿವುಗಳಿಗೆ ಸ್ಪಂದಿಸುವುದು, ಸಮಾನತೆ ಮತ್ತು ಸ್ವಾಭಿಮಾನದ ಮೌಲ್ಯಗಳನ್ನು ಎತ್ತಿಹಿಡಿಯುವುದು ಹಾಗೂ ಪ್ರಜಾಸತ್ತಾತ್ಮಕ ಆಶಯಗಳಿಗೆ ಬಲ ತುಂಬುವುದು ಅವರ ಸಾರ್ವಜನಿಕ ಬದುಕಿನ ಪ್ರಮುಖ ನೆಲೆಗಳಾಗಿವೆ. ಅವರೊಂದಿಗಿನ ದೀರ್ಘಕಾಲದ ಒಡನಾಟ ಮತ್ತು ಹೋರಾಟದ ಅನುಭವಗಳನ್ನು ಸ್ಮರಿಸಿರುವ ಸಂಗಾತಿಗಳು, ಈ ಆಯ್ಕೆಯನ್ನು ಒಬ್ಬ ವ್ಯಕ್ತಿಗೆ ದೊರೆತ ಗೌರವ ಮಾತ್ರವಲ್ಲದೆ, ದಲಿತ ಬಂಡಾಯ ಚಳವಳಿಯ ಆಶಯಗಳಿಗೆ ಸಂದ ಮನ್ನಣೆಯೆಂದು ಪರಿಗಣಿಸಿದ್ದಾರೆ.

WhatsApp Image 2026 10 10 at 7.46.08 PM 21
ಜಾಹೀರಾತು

ಸಮ್ಮೇಳನವು ಕೇವಲ ಭಾಷಣ ಮತ್ತು ಸಾಹಿತ್ಯಿಕ ಚರ್ಚೆಗಳಿಗೆ ಸೀಮಿತವಾಗದೆ, ಜಿಲ್ಲೆಯ ದಲಿತ ಸಮುದಾಯಗಳ ಬದುಕಿನ ಸವಾಲುಗಳು, ಸಾಮಾಜಿಕ ನ್ಯಾಯ, ಸಂವಿಧಾನಿಕ ಹಕ್ಕುಗಳು, ಶಿಕ್ಷಣ, ಸ್ವಾಭಿಮಾನ, ಸಾಂಸ್ಕೃತಿಕ ಅಸ್ಮಿತೆ ಮತ್ತು ಸಮಾನ ಅವಕಾಶಗಳ ಕುರಿತು ಅರ್ಥಪೂರ್ಣ ಚರ್ಚೆಗೆ ವೇದಿಕೆಯಾಗಲಿ ಎಂಬ ಆಶಯವನ್ನು ಅವರು ವ್ಯಕ್ತಪಡಿಸಿದ್ದಾರೆ. ಯುವ ಬರಹಗಾರರು, ಹೋರಾಟಗಾರರು, ಚಿಂತಕರು ಹಾಗೂ ಪ್ರಗತಿಪರ ಮನೋಭಾವದ ಜನರಿಗೆ ಈ ಸಮ್ಮೇಳನ ಹೊಸ ಪ್ರೇರಣೆ ನೀಡಲಿ ಎಂಬ ನಿರೀಕ್ಷೆಯನ್ನೂ ಹಂಚಿಕೊಂಡಿದ್ದಾರೆ.

ಅವರ ಅಧ್ಯಕ್ಷತೆಯಲ್ಲಿ ನಡೆಯುವ ಜಿಲ್ಲಾ ದಲಿತ ಬಂಡಾಯ ಸಮ್ಮೇಳನವು ಶೋಷಿತರ ಧ್ವನಿಯಾಗಿ, ಸಾಮಾಜಿಕ ನ್ಯಾಯದ ಆಶಯಗಳನ್ನು ಪ್ರತಿಪಾದಿಸುವ ಹಾಗೂ ಪ್ರಗತಿಪರ ಚಿಂತನೆಗಳಿಗೆ ಹೊಸ ಚೈತನ್ಯ ನೀಡುವ ಸಮ್ಮೇಳನವಾಗಲಿ ಎಂದು ಆಶಿಸಿದ್ದಾರೆ.

ಇದನ್ನೂ ಓದಿ : ಈಶಾನ್ಯ ಶಿಕ್ಷಕರ ಕ್ಷೇತ್ರದ ಚುನಾವಣೆ : ಶೇ.86.97ರಷ್ಟು ದಾಖಲೆ ಮತದಾನ

ಪ್ರಮುಖರಾದ ವಿಠಲದಾಸ ಪ್ಯಾಗೆ, ಕಾಶಿನಾಥ ಚೆಲ್ವಾ, ವಿಜಯಕುಮಾರ ,ಗಾಯಕವಾಡ, ಗಾಲಿಬ್ ಹಾಶ್ಮಿ, ಖಲೀಲ್ ಮಿಯಾ ಅರುಣ ಪಟೇಲ್, ಬಾಬು ಟೈಗರ್, ಮಹೇಶ ಗೋರನಾಳಕರ್, ವಿನಯಕುಮಾರ, ಮಾಳಗೆ,  ಅಶೋಕ ಗಾಯಕವಾಡ, ಕಂಠೆಪ್ಪ ಪೂಜಾರಿ , ವಾಮನ್ ಮೈಸಲಗೆ, ಶಿವಶರಣಪ್ಪಾ ಹುಗ್ಗಿ ಪಾಟೀಲ್, ಮಲ್ಲಿಕಾರ್ಜುನ ಪಾಟೀಲ್ ಅನುಪಮ್ , ರಾಜಕುಮಾರ ವಾಘಮೊರೆ, ಅಭಿ ಕಾಳೆ, ಸುಂದರ ಮಾಳೆಗಾಂವ, ಜಗದೀಶ್ವರ ಬಿರಾದರ, ವಿನೋದ್ ಕುಮಾರ್ ಬಂದ್ಗೆ  ಮತ್ತಿತರರು ಹರ್ಷ ವ್ಯಕ್ತಪಡಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಹಲ್ಲೆಗೊಳಗಾಗಿ ರೈಲ್ವೆ ಹಳಿ ಮೇಲೆ ಬಿದ್ದಿದ್ದ ಯುವಕ ಚಿಕಿತ್ಸೆ ಫಲಿಸದೆ ಸಾವು

ಶಿವಮೊಗ್ಗ ರೈಲ್ವೆ ಹಳಿ ಬಳಿ ಗಂಭೀರ ಗಾಯಗಳೊಂದಿಗೆ ಪತ್ತೆಯಾಗಿದ್ದ 26 ವರ್ಷದ...

ನೇಣು ಬಿಗಿದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ; ತರಾತುರಿಯಲ್ಲಿ ಅಂತ್ಯಕ್ರಿಯೆ, ಕಾರಣ ನಿಗೂಢ!

ಸೊರಬ ತಾಲೂಕಿನ ಮುಟಗುಪ್ಪೆ ಗ್ರಾಮದಲ್ಲಿ 22 ವರ್ಷದ ಯುವತಿಯೊಬ್ಬರು ಮನೆಯಲ್ಲಿ ನೇಣು...

ಶಿವಮೊಗ್ಗ | ಗಾಂಜಾ ಮಾರಾಟ ಆರೋಪ: ಐವರು ಅರೆಸ್ಟ್‌, 1.23 ಕೆಜಿ ಮಾದಕ ವಸ್ತು ಜಪ್ತಿ

ಶಿವಮೊಗ್ಗ ನಗರದ ಅನುಪಿನಕಟ್ಟೆ ಸಮೀಪ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪದಡಿ ತುಂಗಾನಗರ...

ಬೀದರ್‌ | ಸಿಇಸಿ ಜ್ಞಾನೇಶ ಕುಮಾರ್ ವಜಾ, ಎಸ್‌ಐಆರ್‌ ರದ್ದತಿಗೆ ಆಗ್ರಹ, ತಿರಂಗಾ ಮೆರವಣಿಗೆ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ರದ್ದುಗೊಳಿಸಬೇಕು, ಕೇಂದ್ರ ಮುಖ್ಯ...