ಜಿಲ್ಲಾ ಗೊಂಡ ವಿದ್ಯಾರ್ಥಿ ಸಂಘದ ವತಿಯಿಂದ ನಗರದ ಪೂಜ್ಯ ಚನ್ನಬಸವ ಪಟ್ಟದ್ದೇವರು ರಂಗ ಮಂದಿರದಲ್ಲಿ ಜುಲೈ 19 ರಂದು ಬೆಳಿಗ್ಗೆ 9ಕ್ಕೆ ಗೊಂಡ (ಕುರುಬ) ಸಮಾಜದ ವಿದ್ಯಾರ್ಥಿಗಳಿಗೆ ಜಿಲ್ಲಾ ಮಟ್ಟದ ಪ್ರತಿಭಾ ಪುರಸ್ಕಾರ ಪ್ರದಾನ ಸಮಾರಂಭ ಹಮ್ಮಿಕೊಳ್ಳಲಾಗಿದೆ.
2026ನೇ ಸಾಲಿನ ಎಸ್‍ಎಸ್‍ಎಲ್‍ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇ 80ಕ್ಕೂ ಅಧಿಕ ಅಂಕ ಗಳಿಸಿದ ಸಮಾಜದ 200 ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಪ್ರದಾನ ಮಾಡಲಾಗುವುದು. ಸಮಾರಂಭದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿವೆ. ಜನಪ್ರತಿನಿಧಿಗಳು, ಗಣ್ಯರು ಹಾಗೂ ಸಾಹಿತಿಗಳು ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಜಿಲ್ಲಾ ಗೊಂಡ ವಿದ್ಯಾರ್ಥಿ ಸಂಘದ ಅಧ್ಯಕ್ಷ ಸಂತೋಷಕುಮಾರ ಜೋಳದಾಪಕೆ ತಿಳಿಸಿದ್ದಾರೆ.
ಅರ್ಜಿ ಸಲ್ಲಿಕೆಗೆ ಅವಕಾಶ:
ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಸಲ್ಲಿಕೆಗೆ ಜುಲೈ 12 ರ ವರೆಗೆ ಅವಕಾಶ ಕಲ್ಪಿಸಲಾಗಿದ್ದು, ಗೊಂಡ (ಕುರುಬ) ಸಮಾಜದ ಅರ್ಹ ಅಭ್ಯರ್ಥಿಗಳು ದೃಢೀಕೃತ ಅಂಕಪಟ್ಟಿ, ಜಾತಿ ಪ್ರಮಾಣ ಪತ್ರ ಹಾಗೂ ಪಾಸ್‍ಪೋರ್ಟ್ ಅಳತೆಯ ಇತ್ತೀಚಿನ ಎರಡು ಭಾವಚಿತ್ರಗಳೊಂದಿಗೆ ನಗರದ ಬಿವಿಬಿ ಕಾಲೇಜು ರಸ್ತೆಯಲ್ಲಿ ಇರುವ ಎಕ್ಸಿಸ್ ಬ್ಯಾಂಕ್ ಕೆಳ ಮಹಡಿಯಲ್ಲಿರುವ ಆದರ್ಶ ಐಟಿಐ ಕಾಲೇಜಿನಲ್ಲಿ ಅರ್ಜಿ ಸಲ್ಲಿಸಬಹುದು ಎಂದು ತಿಳಿಸಿದ್ದಾರೆ.
ಇದನ್ನೂ ಓದಿ : ಬೀದರ್ | ಅನಧಿಕೃತ ಕೋಚಿಂಗ್ ಸೆಂಟರ್‌ಗಳ ವಿರುದ್ಧ ಕ್ರಮ ಕೈಗೊಳ್ಳದಿದ್ದರೆ ಹೋರಾಟ : ನಮ್ಮ ಕರ್ನಾಟಕ ಸೇನೆ
ಹೆಸರು ನೊಂದಣಿ ಹಾಗೂ ಹೆಚ್ಚಿನ ಮಾಹಿತಿಗೆ ಕಾಲೇಜಿನ ಕಿರಿಯ ತರಬೇತಿ ಅಧಿಕಾರಿ ವಿಜಯಕುಮಾರ ಬ್ಯಾಲಹಳ್ಳಿ (ಮೊ:8970189141) ಅವರನ್ನು ಸಂಪರ್ಕಿಸಬಹುದು ಎಂದು ಹೇಳಿದ್ದಾರೆ.




