ಬೀದರ್‌ | ಅಲೆಮಾರಿ ಜನಾಂಗದವರಿಗೆ ಒಕ್ಕಲೆಬ್ಬಿಸಬೇಡಿ :‌ ಡಾ.ಮೂರ್ತಿ ಎಲ್.

Date:

ಬೀದರ್‌ ನಗರದ ನೌಬಾದ್ ಸುತ್ತಲಿನ ವಿವಿಧ ಪ್ರದೇಶಗಳಲ್ಲಿ ಕಳೆದ ಹಲವು ವರ್ಷಗಳಿಂದ ತಾತ್ಕಾಲಿಕ ಗುಡಿಸಲು ನಿರ್ಮಿಸಿಕೊಂಡು ವಾಸಿಸುತ್ತಿರುವ ಅಲೆಮಾರಿ ಜನಾಂಗದವರನ್ನು ಸದ್ಯಕ್ಕೆ ಒಕ್ಕಲೆಬ್ಬಿಸದಂತೆ ಜಿಲ್ಲಾಡಳಿತಕ್ಕೆ ಸೂಚಿಸುವುದಾಗಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಆಯೋಗದ ಅಧ್ಯಕ್ಷ ಡಾ.ಮೂರ್ತಿ ಎಲ್.ತಿಳಿಸಿದರು.

- Advertisement -

ನೌಬಾದ್ ಸಮೀಪದ ಚೌಳಿ ಕಮಾನ್ ಹತ್ತಿರದ ಪ್ರದೇಶಗಳಲ್ಲಿ ತಾತ್ಕಾಲಿಕವಾಗಿ ಗುಡಿಸಲು ನಿರ್ಮಿಸಿಕೊಂಡು ವಾಸಿಸುತ್ತಿರುವ ಸಿಂಧೋಳ, ಮಾಂಗರವಾಡಿ ಅಲೆಮಾರಿ ಜನಾಂಗದವರನ್ನು ಭೇಟಿ ಮಾಡಿ ಮಾತನಾಡಿ, ʼಇಲ್ಲಿನ ಅಲೆಮಾರಿ ಜನಾಂಗದವರ ಸ್ಥಿತಿ ತೀರ ಚಿಂತಾಜನಕವಾಗಿದೆ. ವಸತಿ, ಶಿಕ್ಷಣ, ಉದ್ಯೋಗ ವಿದ್ಯುತ್ ಹಾಗೂ ಶೌಚಾಲಯ ವಂಚಿತರಾಗಿರುವ ಈ ಜನಾಂಗಕ್ಕೆ ಖಾಯಂ ವಸತಿ ದೊರಕಿಸುವ ನಿಟ್ಟಿನಲ್ಲಿ ಸರಕಾರದ ಹಾಗೂ ಸಮಾಜ ಕಲ್ಯಾಣ ಸಚಿವ ಹೆಚ್.ಸಿ.ಮಹಾದೇವಪ್ಪ ಅವರ ಗಮನಕ್ಕೆ ವರದಿ ಸಲ್ಲಿಸುವುದಾಗಿ ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

ಬೆವರಿನ ಹಣಕ್ಕೆ ಮೋದಿ ಸರ್ಕಾರದ ಕಂಟಕ: ಹೊಸ ಪಿಎಫ್...

ತಮ್ಮದೇ ಬೆವರಿನ ಗಳಿಕೆ, ತುರ್ತು ಬದುಕಿನ ಆಸರೆ ಪಿಎಫ್. ಆದರೆ ಇಂದು ಆ ಹಣವನ್ನು ಪಡೆಯಲಾಗದೆ ಗಾರ್ಮೆಂಟ್ಸ್ ಕಾರ್ಮಿಕರು ಕಣ್ಣೀರು ಹಾಕುವಂತಾಗಿದೆ. ಬಟ್ಟೆ ಕಾರ್ಖಾನೆಗಳ ಶ್ರಮಿಕರ ಬದುಕಿಗೆ ಕೇಂದ್ರದ ಮೋದಿ ಸರ್ಕಾರದ ಹೊಸ...

ʼಸದ್ಯ 80 ಕುಟುಂಬಗಳು ನೌಬಾದ್‌ನ ಕೆಐಡಿಬಿ ಸರಕಾರಿ ಸ್ಥಳದಲ್ಲಿ ತಾತ್ಕಾಲಿಕವಾಗಿ ಗುಡಿಸಲು ನಿರ್ಮಿಸಿಕೊಂಡು ವಾಸವಾಗಿದ್ದಾರೆ. ಈ ಸಮುದಾಯಕ್ಕೆ 2 ಎಕರೆ ಪ್ರದೇಶದಲ್ಲಿ ಖಾಯಂ ವಸತಿ ನಿರ್ಮಿಸಲು ಬೇಡಿಕೆಯಿದ್ದು, ಬೀದರ ಜಿಲ್ಲಾಡಳಿತ ಹಾಗೂ ಸರಕಾರದ ಗಮನಕ್ಕೆ ತರಲಾಗುವುದುʼ ಎಂದು ತಿಳಿಸಿದರು.

ಬಳಿಕ ನಗರದ ವಿವಿಧ ವಸತಿ ನಿಲಯಗಳಿಗೆ ಭೇಟಿ ನೀಡಿ ವ್ಯವಸ್ಥೆಯನ್ನು ಪರಿಶೀಲಿಸಿ ಯಾವುದೇ ಸಮಸ್ಯೆಯಾಗದಂತೆ ಜವಾಬ್ದಾರಿ ವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ರಾಜಗೊಂಡ ಕಾಲೋನಿಗೆ ಭೇಟಿ ನೀಡಿ ಸಮಸ್ಯೆ ಆಲಿಸಿದರು.

ಇದನ್ನೂ ಓದಿ : ಬೀದರ್‌ | ಕುರಿ, ಮೇಕೆ ಘಟಕ ಸ್ಥಾಪನೆ ಯೋಜನೆಗೆ ಅರ್ಜಿ ಆಹ್ವಾನ

ಮಾಜಿ ಎಂಎಲ್ಸಿ ಅರವಿಂದಕುಮಾರ ಅರಳಿ, ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಯೋಗೇಶ ಸೇರಿದಂತೆ ಅಲೆಮಾರಿ ಸಮಾಜದ ಮುಖಂಡರು ಮತ್ತಿತರರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಯುವ ಪೀಳಿಗೆ ಸಾಮಾಜಿಕ ಪ್ರಜ್ಞೆ ಬೆಳೆಸಿಕೊಳ್ಳಲಿ: ಮುಬಾಶಿರ್ ಸಿಂಧೆ

ಯುವ ಪೀಳಿಗೆ ಸಾಮಾಜಿಕ ಪ್ರಜ್ಞೆ ಬೆಳೆಸಿಕೊಂಡು ಸಮಾಜದ ಅಭಿವೃದ್ಧಿಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕು...

ಬೀದರ್‌ | ಐತಿಹಾಸಿಕ ಕರೇಜ್ ಅಭಿವೃದ್ಧಿಗೆ ಬುಡಾ ಕೈಜೋಡಿಸಲಿ

ಬೀದರ್‌ ನಗರದಲ್ಲಿರುವ ಐತಿಹಾಸಿಕ ಕರೇಜ್ ಜಲವ್ಯವಸ್ಥೆಯನ್ನು ಸಂರಕ್ಷಿಸಿ, ಅಂತರ್ಜಲ ಮರುಪೂರಣ ಹಾಗೂ...

ಬೀದರ್‌ | ʼಯುವ ಸೌರಭʼ ಸಾಂಸ್ಕೃತಿಕ ಕಾರ್ಯಕ್ರಮ, ಪ್ರತಿಭೆ ಅನಾವರಣ

ವಿದ್ಯಾರ್ಥಿಗಳಲ್ಲಿರುವ  ಪ್ರತಿಭೆಯನ್ನು ಅನಾವರಣಗೊಳಿಸಲು ‘ಯುವ ಸೌರಭ’ದಂತಹ ಸಾಂಸ್ಕೃತಿಕ ಕಾರ್ಯಕ್ರಮಗಳು ಸೂಕ್ತ ವೇದಿಕೆಯಾಗಿವೆ....

ಬಸವಕಲ್ಯಾಣ | ಕಿಟ್ಟಾ ಗ್ರಾಮದ 20 ಬಡ ಕುಟುಂಬಗಳಿಗೆ ನಿವೇಶನ ನೀಡಲು ಆಗ್ರಹ

ಬಸವಕಲ್ಯಾಣ ತಾಲ್ಲೂಕಿನ ಕಿಟ್ಟಾ ಗ್ರಾಮದ ಸರ್ವೆ ನಂ. 249ರಲ್ಲಿ ಸುಮಾರು 20...