ಬೀದರ್‌ | ಸಂಗೊಳ್ಳಿ ರಾಯಣ್ಣಗೆ ಜಾತಿಗೆ ಸೀಮಿತಗೊಳಿಸದಿರಿ : ಬಂಡೆಪ್ಪ ಖಾಶೆಂಪುರ

Date:

ಕ್ರಾಂತಿ ವೀರ ಸಂಗೊಳ್ಳಿ ರಾಯಣ್ಣ ಅವರನ್ನು ಯಾವುದೇ ಒಂದು ಜಾತಿಗೆ ಸೀಮಿತಗೊಳಿಸಬಾರದು, ರಾಯಣ್ಣ ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿ ಅಪ್ರತಿಮ ದೇಶಪ್ರೇಮಿ ಎಂದು ಮಾಜಿ ಸಚಿವ ಬಂಡೆಪ್ಪ ಖಾಶೆಂಪುರ ಹೇಳಿದರು.

- Advertisement -

ಬೀದರ್ ನಗರದ ಪೂಜ್ಯ ಚನ್ನಬಸವ ಪಟ್ಟದ್ದೇವರು ರಂಗ ಮಂದಿರದಲ್ಲಿ ಗೊಂಡ ಪರ ಸಂಘಟನೆಗಳ ಒಕ್ಕೂಟದಿಂದ ಸ್ವಾತಂತ್ರ್ಯೋತ್ಸವ ಹಾಗೂ ಸಂಗೊಳ್ಳಿ ರಾಯಣ್ಣ ಜಯಂತಿ ನಿಮಿತ್ತ ಈಚೆಗೆ ಆಯೋಜಿಸಿದ್ದ ಯುವ ಜಾಗೃತಿ ಸಮಾವೇಶ ಉದ್ಘಾಟಿಸಿ ಮಾತನಾಡಿ, ʼಪರಾಕ್ರಮಿ, ದೇಶಭಕ್ತರಾಗಿದ್ದ ರಾಯಣ್ಣ ಇಡೀ ದೇಶದ ಆಸ್ತಿಯಾಗಿದ್ದಾರೆ, ಯುವ ಸಮೂಹ ಅವರ ಆದರ್ಶಗಳನ್ನು ಮೈಗೂಡಿಸಿಕೊಳ್ಳಬೇಕು” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಭದ್ರಾವತಿ | ಕಲುಷಿತ ಕುಡಿಯುವ ನೀರು ಸರಬರಾಜು; ರೋಗಭೀತಿಯಲ್ಲಿ...

ಭದ್ರಾವತಿ ತಾಲೂಕಿನ ಶಿವರಾಮನಗರ ಗ್ರಾಮದಲ್ಲಿ ನಗರಸಭೆ ಕಲುಷಿತ ಕುಡಿಯುವ ನೀರನ್ನು ಸರಬರಾಜು ಮಾಡುತ್ತಿರುವುದು ಗ್ರಾಮಸ್ಥರಲ್ಲಿ ತೀವ್ರ ಅಸಮಾಧಾನಕ್ಕೆ ಕಾರಣವಾಗಿದೆ. ಈ ವಿಷಯದಲ್ಲಿ ನಗರಸಭೆ ಆಡಳಿತ ಮತ್ತು ಆರೋಗ್ಯ ಇಲಾಖೆ ಕಣ್ಮುಚ್ಚಿ ಕುಳಿತಿರುವುದಾಗಿ ಸ್ಥಳೀಯರು...

15 ವರ್ಷಗಳಿಂದ ಪ್ಲಾಸ್ಟಿಕ್‌ ದೂರವಿಟ್ಟ ಗ್ರಾಮ; ನಮ್ಮೂರಿಗೂ ಇದು...

ಒಂದು ಗ್ರಾಮವೆಂದರೆ, ಇಂದಿಗೂ ಮಣ್ಣಿನ ರಸ್ತೆಗಳು, ಕಚ್ಚಾ ಮನೆಗಳು, ಹೊಲ-ಗದ್ದೆಗಳು ಮಾತ್ರ ನೆನಪಾಗುತ್ತವೆ. ಅಲ್ಲಿನ ಜನರ ಬದುಕಿನ ಶಿಸ್ತು, ಸಾರ್ವಜನಿಕ ಸ್ಥಳಗಳ ಮೇಲಿನ ಅವರ ಹೊಣೆಗಾರಿಕೆ ಮತ್ತು ಮುಂದಿನ ಪೀಳಿಗೆಯ ಬಗ್ಗೆ ಇರುವ...

ʼಹಿಂದೆ ಸರಿಯುವ ಮಾತೇ ಇಲ್ಲʼ; ದೆಹಲಿ ಬೀದಿಗಳಲ್ಲಿ ಅಬ್ಬರಿಸುತ್ತಿರುವ...

ಚುನಾವಣಾ ಆಯೋಗದ (ECI) ವಿಶೇಷ ತೀವ್ರ ಪರಿಷ್ಕರಣೆ (SIR) ವಿರುದ್ಧ ಮತ್ತು CEC ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ INDIA ಬ್ಲಾಕ್ ಸಂಸತ್ ಸದಸ್ಯರು ದೆಹಲಿ ಬೀದಿಗಳಲ್ಲಿ ಬೃಹತ್‌ ಪ್ರತಿಭಟನೆ ನಡೆಸುತ್ತಿದ್ದಾರೆ. ಯುವಕರು...

ಜಿಲ್ಲಾ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಅಮೃತರಾವ್ ಚಿಮಕೋಡೆ ಮಾತನಾಡಿ, “ಹಿಂದೆ ಸಂಗೊಳ್ಳಿ ರಾಯಣ್ಣ ಬ್ರಿಟಿಷರ ವಿರುದ್ಧ ಹೊರಾಡಿದ್ದರು. ಇಂದಿನ ಯುವಕರು ಮಾದಕ ವಸ್ತುಗಳ ವಿರುದ್ಧ ಹೋರಾಟ ನಡೆಸಬೇಕಾಗಿದೆ. ರಾಯಣ್ಣ ಅವರ ತತ್ವ, ಆದರ್ಶಗಳನ್ನು ಯುವಕರು ಪಾಲಿಸಬೇಕು” ಎಂದರು.

ವಿಧಾನ ಪರಿಷತ್ ಮಾಜಿ ಸಭಾಪತಿ ರಘುನಾಥರಾವ್ ಮಲ್ಕಾಪುರೆ ಮಾತನಾಡಿ, “ಜಿಲ್ಲೆಯಲ್ಲಿ ಗೊಂಡ ಸಮಾಜದ ಸರ್ವಾಂಗೀಣ ಅಭಿವೃದ್ಧಿಗಾಗಿ ಗೊಂಡ ಪರ ಸಂಘಟನೆಗಳು ಒಗ್ಗೂಡಿ ಹೋರಾಡಬೇಕು. ಜಾತಿ ಪ್ರಮಾಣ ಪತ್ರ ಸೇರಿದಂತೆ ಅನೇಕ ಸೌಲಭ್ಯಗಳಿಗಾಗಿ ನಮ್ಮ ಹೋರಾಟ ನಿರಂತರವಾಗಿರಬೇಕು” ಎಂದರು.

WhatsApp Image 2026 08 24 at 3.53.01 PM

ಅಧ್ಯಕ್ಷತೆ ವಹಿಸಿದ್ದ ಗೊಂಡ ಪರ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ತುಕಾರಾಮ ಚಿಮಕೋಡೆ ಮಾತನಾಡಿ, “ಒಕ್ಕೂಟವು ಆರು ವರ್ಷಗಳಿಂದ ಗೊಂಡ ಸಮಾಜದ ಹಿತ ರಕ್ಷಣೆಗೆ ಶ್ರಮಿಸುತ್ತಿದೆ. ಸಮಾಜಕ್ಕೆ ಅನ್ಯಾಯವಾದಾಗ, ಪ್ರತಿಭಟಿಸಿದೆ. ಒಳ್ಳೆಯ ಕೆಲಸವನ್ನು ಬೆಂಬಲಿಸುತ್ತ ಬಂದಿದೆ. ಯುವಕರೇ ದೇಶದ ಸಂಪತ್ತು ಆಗಿರುವ ಕಾರಣ ಅವರಿಗೆ ಸೂಕ್ತ ಮಾರ್ಗ ತೋರಲು ಯುವ ಜಾಗೃತಿ ಸಮಾವೇಶ ಹಮ್ಮಿಕೊಳ್ಳಲಾಗಿದೆ” ಎಂದು ತಿಳಿಸಿದರು.

ಬಳಿಕ ಯುವಕರೊಂದಿಗೆ ನಡೆದ ಯುವ ಸಂವಾದದಲ್ಲಿ ಔರಾದ್‌ ತಾಲೂಕು ಕಸಾಪ ಅಧ್ಯಕ್ಷ ಬಾಲಾಜಿ ಅಮರವಾಡಿ, ಸಾಹಿತಿ, ಪತ್ರಕರ್ತ ಬಾಲಾಜಿ ಕುಂಬಾರ್ ಹಾಗೂ ಕರ್ನಾಟಕ ರಾಜ್ಯ ವನ್ಯಜೀವಿ ಮಂಡಳಿ ಸದಸ್ಯ ವಿನಯಕುಮಾರ ಮಾಳಗೆ ಅವರು ಸಂವಾದ ನಡೆಸಿಕೊಟ್ಟರು.

ಇದನ್ನೂ ಓದಿ : ವಚನ ಕಲ್ಯಾಣ | ನುಡಿದರೆ ಗುರುವಾಗಿ ನುಡಿಯಬೇಕು!

ಮುಖಂಡರಾದ ಬಾಬುರಾವ್ ಮಲ್ಕಾಪುರ, ಬಸವರಾಜ ಮಾಳಗೆ, ಮಲ್ಲಿಕಾರ್ಜುನ ಬಿರಾದರ್, ಶಕುಂತಲಾ ಬೆಲ್ದಾಳೆ, ಆನಂದ ಕಾಶೆಂಪುರ, ಎಂ.ಎಸ್.ಕಟಗಿ, ಬಾಬುರಾವ್ ಲದ್ದೆ, ಭೀಮಸಿಂಗ್, ಇಂದುಮತಿ ಚಿದ್ರಿ, ಅನಿಲಕುಮಾರ ಬೆಲ್ದಾರ್, ಪ್ರದೀಪ್ ಜಂಜೀರೆ, ದೇವೇಂದ್ರ ಸೋನಿ, ಪಂಡಿತ ಚಿಮಕೋಡ್, ರಾಮ ಚಾಂದೋರಿ, ಸಂಗಪ್ಪ ಚಿದ್ರಿ, ಒಕ್ಕೂಟದ ಬೀದರ್ ತಾಲ್ಲೂಕು ಘಟಕದ ಅಧ್ಯಕ್ಷ ಕುಶಾಲ್ ಹಾಸಗೊಂಡ, ಕಾರ್ಯದರ್ಶಿ ಪಂಡಿತ ಹಾವಗೊಂಡ, ಗುಂಡಪ್ಪ ಚಾಂಬೋಳ್ ಇದ್ದರು. ನಾಗೇಶ ಜಾನಕನೋರ ನಿರೂಪಿಸಿದರು. ಮಾಣಿಕಪ್ಪ ಬರಿದಾಬಾದ್ ಸ್ವಾಗತಿಸಿದರು. ಸಿದ್ದು ಗಾದಗಿ ವಂದಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಭದ್ರಾವತಿ | ಕಲುಷಿತ ಕುಡಿಯುವ ನೀರು ಸರಬರಾಜು; ರೋಗಭೀತಿಯಲ್ಲಿ ಗ್ರಾಮಸ್ಥರು

ಭದ್ರಾವತಿ ತಾಲೂಕಿನ ಶಿವರಾಮನಗರ ಗ್ರಾಮದಲ್ಲಿ ನಗರಸಭೆ ಕಲುಷಿತ ಕುಡಿಯುವ ನೀರನ್ನು ಸರಬರಾಜು...

ವಿಜಯಪುರ | ಕೆ-ಸೆಟ್ ಪರೀಕ್ಷೆ ಪಾರದರ್ಶಕತೆಗೆ ಕಟ್ಟುನಿಟ್ಟಿನ ಕ್ರಮ: ಡಾ. ಔದ್ರಾಮ

ಅ. 11ರಂದು ನಡೆಯಲಿರುವ ಕೆ-ಸೆಟ್ ಪರೀಕ್ಷೆಯನ್ನು ಪಾರದರ್ಶಕ ಹಾಗೂ ಅಚ್ಚುಕಟ್ಟಾಗಿ ನಡೆಸಲು...

15 ವರ್ಷಗಳಿಂದ ಪ್ಲಾಸ್ಟಿಕ್‌ ದೂರವಿಟ್ಟ ಗ್ರಾಮ; ನಮ್ಮೂರಿಗೂ ಇದು ಸಾಧ್ಯವಲ್ಲವೇ?

ಒಂದು ಗ್ರಾಮವೆಂದರೆ, ಇಂದಿಗೂ ಮಣ್ಣಿನ ರಸ್ತೆಗಳು, ಕಚ್ಚಾ ಮನೆಗಳು, ಹೊಲ-ಗದ್ದೆಗಳು ಮಾತ್ರ...

ಕ್ಯಾನ್ಸರ್ ರೋಗಿಗಳಿಗೆ ಗುಡ್‌ನ್ಯೂಸ್‌; ದುಬಾರಿ ಔಷಧಗಳ ಬೆಲೆ ಶೇ.70ರವರೆಗೆ ಇಳಿಕೆ?

ದೇಶದಲ್ಲಿ ದುಬಾರಿಯಾಗಿರುವ ಕೆಲವು ಕ್ಯಾನ್ಸರ್ ಔಷಧಗಳ ಬೆಲೆ ಶೀಘ್ರದಲ್ಲೇ ಭಾರಿ ಪ್ರಮಾಣದಲ್ಲಿ...