ಬೀದರ್‌ | ಡಾ.ಬಿ.ಆರ್.ಅಂಬೇಡ್ಕರವರ 135ನೇ ಜಯಂತಿ : ಅದ್ದೂರಿಯಾಗಿ ಆಚರಣೆಗೆ ನಿರ್ಧಾರ

Date:

ಜಿಲ್ಲೆಯಲ್ಲಿ ಬರುವ ಏಪ್ರಿಲ್ 14ರಂದು ಡಾ.ಬಿ.ಆರ್.ಅಂಬೇಡ್ಕರವರ 135ನೇ ಜಯಂತಿಯನ್ನು ಅದ್ದೂರಿಯಾಗಿ ಆಚರಿಸೋಣ ಎಂದು ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ತಿಳಿಸಿದ್ದಾರೆ.

- Advertisement -

ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಶುಕ್ರವಾರ ನಡೆದ ಪೂರ್ವಭಾವಿ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿ ಅವರು, ʼಏ.14ರಂದು ಜಿಲ್ಲೆಯ ಎಲ್ಲಾ ಸರ್ಕಾರಿ, ಅರೆ ಸರ್ಕಾರೇತರ ಕಚೇರಿಗಳಲ್ಲಿ ಬೆಳಿಗ್ಗೆ 9ಗಂಟೆಗೆ ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪೂಜೆ ಮತ್ತು ಮಾಲಾರ್ಪಣೆ ಸಲ್ಲಿಸಿ ನಂತರ 9.30 ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿ ಮತ್ತು ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಲ್ಲಿ ಅಂಬೇಡ್ಕರ್ ಪುತ್ಥಳಿಗೆ ಪೂಜೆ ಮತ್ತು ಮಾಲಾರ್ಪಣೆ ನೆರವೇರಿಸಲಾಗುವುದುʼ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಬಳಿಕ ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರದ ಮೆರವಣಿಗೆಯು ಅಂಬೇಡ್ಕರ್ ವೃತ್ತದಿಂದ ಆರಂಭಗೊಂಡು ಭಗತ್‌ ಸಿಂಗ್ ವೃತ್ತ, ಬಸವೇಶ್ವರ ವೃತ್ತ, ಶಿವಾಜಿ ವೃತ್ತದ ಮಾರ್ಗವಾಗಿ ಪುನಃ ಅಂಬೇಡ್ಕರ್ ವೃತ್ತದಲ್ಲಿ ಮೆರವಣಿಗೆ ಮುಕ್ತಾಯಗೊಳ್ಳಲಿದೆ. ನಂತರ ಸಂಜೆ 5 ಗಂಟೆಗೆ ಅಂಬೇಡ್ಕರ್‌ ವೃತ್ತದ ಎದುರುಗಡೆ ವೇದಿಕೆ ಕಾರ್ಯಕ್ರಮ ನಡೆಯಲಿದೆʼ ಎಂದರು.

WhatsApp Image 2026 03 28 at 7.37.04 PM

ಅಂದು ನಗರದಲ್ಲಿರುವ ಎಲ್ಲಾ ಮಹನೀಯರ ವೃತ್ತದ ಮೇಲೆ ದೀಪಾಲಂಕಾರ ಮಾಡುವುದು. ಜಯಂತಿ ದಿನದಂದು ಸುತ್ತಮುತ್ತಲಿನ ಗ್ರಾಮಗಳಿಂದ ಆಗಮಿಸುವ ಸಾರ್ವಜನಿಕರಿಗೆ ಪ್ರಯಾಣಕ್ಕೆ ಅನುಕೂಲವಾಗಲು ಸಾರಿಗೆ ವ್ಯವಸ್ಥೆ ಮಾಡುವಂತೆ ಕೆಕೆಆರ್‌ಟಿಸಿ ಅಧಿಕಾರಿಗೆ ಸೂಚಿಸಿದರು. ಡಾ.ಬಿ.ಆರ್.ಅಂಬೇಡ್ಕರ್ ಭಾವಚಿತ್ರ, ಹೂವಿನ ಅಲಂಕಾರ ಮತ್ತು ವೇದಿಕೆ ಕಾರ್ಯಕ್ರಮದಲ್ಲಿ ಅತಿಥಿಗಳಿಗೆ ಮಾಲಾರ್ಪಣೆ ಹಾಗೂ ಉದ್ಘಾಟನೆ ಕಾರ್ಯಕ್ರಮ ವ್ಯವಸ್ಥೆಯನ್ನು ಸಮಾಜ ಕಲ್ಯಾಣ ಇಲಾಖೆಯಿಂದ ಮಾಡುವುದು. ಮಹಾನಗರ ಪಾಲಿಕೆ ವತಿಯಿಂದ ಕುಡಿಯುವ ನೀರಿನ ವ್ಯವಸ್ಥೆ, ಪೊಲೀಸ್ ಇಲಾಖೆ ವತಿಯಿಂದ ಸೂಕ್ತ ಬಂದೋಬಸ್ತ್ ಮಾಡುವುದು. ನಿಗದಿಪಡಿಸಿದ ಸಮಿತಿಯವರು ಸದರಿ ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ಏರ್ಪಡಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

 ಸದರಿ ಸಭೆಯಲ್ಲಿ ವಿವಿಧ ಸಂಘ-ಸಂಸ್ಥೆಗಳು, ಸಮಾಜದ ಮುಖಂಡರು ಕಾರ್ಯಕ್ರಮದ ಕುರಿತು ಸಭೆಯಲ್ಲಿ ಚರ್ಚಿಸಿದರು.

ಇದನ್ನೂ ಓದಿ : ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಶೀಘ್ರ ಜಾರಿಗೊಳಿಸಲು ಸಂಸದ ಸಾಗರ ಖಂಡ್ರೆ ಒತ್ತಾಯ

ಮಹಾನಗರ ಪಾಲಿಕೆ ಆಯುಕ್ತ ಮುಕುಲ್ ಜೈನ್, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಚಂದ್ರಕಾಂತ ಪೂಜಾರಿ, ಜಿಲ್ಲಾ ಪಂಚಾಯತ ಉಪಕಾರ್ಯದರ್ಶಿ ಶರಣಸಪ್ಪ ಕೋಟೆಪ್ಪಗೋಳ, ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಯೋಗೇಶ., ಸಮಾಜದ ಮುಖಂಡರಾದ ಮಾರುತಿ ಬೌದ್ಧೆ, ಅನೀಲಕುಮಾರ ಬೆಲ್ದಾರ, ಮಹೇಶ ಗೋರನಾಳಕರ್, ವಿನಯಕುಮಾರ ಮಾಳಗೆ, ಉಮೇಶಕುಮಾರ ಸೋರಳ್ಳಿಕರ್, ಅಮೃತರಾವ ಚಿಮಕೋಡೆ, ರಾಜಕುಮಾರ ಮೂಲಭಾರತಿ, ಪ್ರೇಮಕುಮಾರ ರೂದನೂರ, ವಿಷ್ಣುವರ್ಧನ್ ಮಾಲ್ದೊಡ್ಡಿ, ಪಂಡಿತರಾವ ಚಿದ್ರಿ, ತುಕಾರಾಮ ಕುದರೆ, ಬಕ್ಕಪ್ಪ ದಂಡಿನ, ರಾಜಕುಮಾರ, ಪ್ರಸನ್ನ ಡಾಂಗೆ, ಅಭಿ ಕಾಳೆ, ಬಾಬುರಾವ ಮಲ್ಕಾಪೂರೆ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಇತರರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಸೆ.29ರಂದು ನೀರು, ಬರ, ಪರಿಸರ ಕುರಿತು ವಿಚಾರ ಸಂಕಿರಣ

ಕರ್ನಾಟಕ ವಿದ್ಯಾವರ್ಧಕ ಸಂಘ ಧಾರವಾಡ, ಸಿದ್ದಾರ್ಥ ಪದವಿ ಪೂರ್ವ ಕಾಲೇಜು, ಟೀಮ್...

ಬೀದರ್‌ | ಶಿಕ್ಷಕರು ಸಮಾಜದ ಭವಿಷ್ಯ ನಿರ್ಮಿಸುವ ಶಿಲ್ಪಿಗಳು: ಪುಣ್ಯವತಿ ವಿಸಾಜಿ

ಶಿಕ್ಷಕರು ಕೇವಲ ಪಾಠ ಬೋಧಿಸುವವರಲ್ಲ. ವಿದ್ಯಾರ್ಥಿಗಳ ವ್ಯಕ್ತಿತ್ವ ರೂಪಿಸುವ ಜೊತೆಗೆ ಸಮಾಜದ...

ಬೀದರ್‌ | ಅಂಬೇಡ್ಕರ್ ಚಿಂತನೆ ವಿದ್ಯಾರ್ಥಿಗಳ ಬದುಕಿಗೆ ಮಾರ್ಗದರ್ಶನವಾಗಲಿ: ಸಿದ್ರಾಮ ಸಿಂಧೆ

ಡಾ.ಬಿ.ಆರ್.ಅಂಬೇಡ್ಕರ್ ಅವರ ಬದುಕು, ಸಾಧನೆ ಹಾಗೂ ಬರಹಗಳನ್ನು ವಿದ್ಯಾರ್ಥಿಗಳು ಆಳವಾಗಿ ಅಧ್ಯಯನ...

Bhalki Ground Report | ಮುಸ್ಲಿಮರ ಮತ ಹಕ್ಕಿಗೆ ಕನ್ನ: ಬಗೆದಷ್ಟು ಬಯಲಾಗ್ತಿದೆ ‘ಫಾರ್ಮ್-7’ರ ಸಂಚು?

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಸಚಿವ ಈಶ್ವರ ಬಿ.ಖಂಡ್ರೆ ಅವರು ಪ್ರತಿನಿಧಿಸುವ...