ಬೀದರ್‌ | ಕುಡಿಯುವ ನೀರಿನ ಅಭಾವ: ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ ₹6 ಕೋಟಿ ಹೆಚ್ಚುವರಿ ಅನುದಾನ : ಈಶ್ವರ ಖಂಡ್ರೆ

Date:

ರಾಜ್ಯಾದ್ಯಂತ ಬರ ಪರಿಸ್ಥಿತಿ ಆವರಿಸಿದ್ದು, ಸಾರ್ವಜನಿಕರಿಗೆ ಯಾವುದೇ ರೀತಿಯ ಕುಡಿಯುವ ನೀರಿನ ಅಭಾವ ತಲೆದೋರದಂತೆ ಸರ್ಕಾರ ಸಂಪೂರ್ಣ ಸಿದ್ಧತೆ ಮಾಡಿಕೊಂಡಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರು ಹಾಗೂ ಬೀದರ್ ಜಿಲ್ಲಾ ಉಸ್ತುವಾರಿ ಸಚಿವರಾದ ಈಶ್ವರ ಖಂಡ್ರೆ ತಿಳಿಸಿದರು.

- Advertisement -

ಸೋಮವಾರ ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಆಯೋಜಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಜಿಲ್ಲೆಯಲ್ಲಿ ಕುಡಿಯುವ ನೀರು, ಬರ ಪರಿಸ್ಥಿತಿ, ಕೇಂದ್ರದ ಅವೈಜ್ಞಾನಿಕ ಬರ ಅಧ್ಯಯನ ಮಾನದಂಡಗಳು, ವಿಬಿ-ಜಿ ರಾಮ್ ಜಿ ಯೋಜನೆ, ಬಿ.ಎಸ್.ಎಸ್.ಕೆ. ಕಾರ್ಖಾನೆಯ ಪ್ರಸ್ತುತ ಆರ್ಥಿಕ ಸಂಕಷ್ಟ ಹಾಗೂ ಡಿಸಿಸಿ ಬ್ಯಾಂಕ್‌ನ ಸ್ಥಿತಿಗತಿ ಕುರಿತು ವಿವರಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಪ್ರಚಾರ, ರಾಹುಲ್ ವ್ಯಕ್ತಿತ್ವ ಮತ್ತು ರೆಜಿಮ್ ಚೇಂಜ್

ಮೋದಿ ಅನುಭವಿ ನಟನಂತೆ, ಪ್ರದರ್ಶಕನಂತೆ ಕಾಣುತ್ತಾರೆ. ರಾಹುಲ್ ಗಾಂಧಿ ಪಾತ್ರದ ಒಳಹೊಕ್ಕು ನಟಿಸುವ ಕಲಾವಿದನಂತೆ ಕಾಣುತ್ತಾರೆ. ಈ ನಿಟ್ಟಿನಲ್ಲಿ ರಾಹುಲ್ ರಾಜಕೀಯ ನಡೆಗಳು ಮೋದಿಯವರ ರಾಜಕೀಯ ನಡೆಗಳೊಂದಿಗೆ ವಿಶ್ಲೇಷಣೆಗೊಳಗಾಗುತ್ತಿವೆ. ಕಳೆದ 12 ವರ್ಷಗಳ...

137 ಜೀವ ರಕ್ಷಕ ಕ್ಯಾನ್ಸರ್ ಔಷಧಗಳ ದರ ಶೇ.70ರಷ್ಟು...

ಕ್ಯಾನ್ಸರ್ ಚಿಕಿತ್ಸೆಯ ದುಬಾರಿ ವೆಚ್ಚದಿಂದ ಕಂಗೆಟ್ಟಿರುವ ರೋಗಿಗಳಿಗೆ ಕೇಂದ್ರ ಸರ್ಕಾರದಿಂದ ಕೊಂಚ ನಿರಾಳತೆಯ ಸುದ್ದಿಯೊಂದಿದೆ! 137 ಜೀವರಕ್ಷಕ ಕ್ಯಾನ್ಸರ್ ಔಷಧಗಳ ಬೆಲೆ ಇಳಿಕೆಯಾಗುವ ಸಾಧ್ಯತೆಯಿದ್ದು, ಕೆಲವು ಔಷಧಗಳ ಗರಿಷ್ಠ ಚಿಲ್ಲರೆ ಬೆಲೆ ಶೇ.70ರವರೆಗೆ...

‘ದೇಶ್ ಕೋ ಬಿಕನೇ ನಹೀ ದೂಂಗಾ’ ಎಂದು ನವಮಂಗಳೂರು...

​ರೈಲ್ವೆ, ವಿಮಾನ ನಿಲ್ದಾಣ, ಟೆಲಿಕಾಂ ಸೇರಿದಂತೆ ದೇಶದ ಪ್ರಮುಖ ಜಯಶೀಲ ಸಾರ್ವಜನಿಕ ವಲಯಗಳನ್ನು ಈಗಾಗಲೇ ಆಯ್ದ ಕಾರ್ಪೊರೇಟ್ ಕುಳಗಳಿಗೆ ಒಪ್ಪಿಸಿರುವ ಮೋದಿ ಸರ್ಕಾರ, ಈಗ ತನ್ನ ದೃಷ್ಟಿಯನ್ನು ಕಡಲತೀರಗಳತ್ತ ಹರಿಸಿದೆ. ದೇಶದ ಆಮದು-ರಫ್ತು...

“ಮುಖ್ಯಮಂತ್ರಿಗಳ ನೇತೃತ್ವದಲ್ಲಿ ಕಲಬುರಗಿ, ಬೆಳಗಾವಿ ಹಾಗೂ ಮೈಸೂರು ವಿಭಾಗ ಮಟ್ಟದಲ್ಲಿ ಸರಣಿ ಪ್ರಗತಿ ಪರಿಶೀಲನಾ ಸಭೆಗಳನ್ನು ನಡೆಸಿ ಪರಿಸ್ಥಿತಿಯನ್ನು ಪರಿಶೀಲಿಸಲಾಗಿದೆ. ರಾಜ್ಯದಲ್ಲಿ ಕುಡಿಯುವ ನೀರಿನ ನಿರ್ವಹಣೆಗಾಗಿ ಸರ್ಕಾರ ಇದುವರೆಗೆ ಒಟ್ಟು ₹306 ಕೋಟಿ ಅನುದಾನ ಬಿಡುಗಡೆ ಮಾಡಿದೆ. ಇದರಲ್ಲಿ ಗ್ರಾಮೀಣ ಭಾಗದ ಪ್ರತಿಯೊಂದು ವಿಧಾನಸಭಾ ಕ್ಷೇತ್ರಕ್ಕೆ ತಲಾ ₹1 ಕೋಟಿ ಸೇರಿದಂತೆ ₹189 ಕೋಟಿ ಹಾಗೂ ಕ್ರಿಯಾ ಯೋಜನೆಗೆ ಸಂಬಂಧಿಸಿದಂತೆ ₹110 ಕೋಟಿಗೆ ಅನುಮೋದನೆ ನೀಡಲಾಗಿದೆ. ಬೀದರ್ ಜಿಲ್ಲೆಗೆ ಈಗಾಗಲೇ ಬಿಡುಗಡೆಯಾಗಿರುವ ₹4 ಕೋಟಿ ಜತೆಗೆ ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ ತಲಾ ₹6 ಕೋಟಿ ಹೆಚ್ಚುವರಿ ಅನುದಾನ ಒದಗಿಸಲಾಗಿದೆ” ಎಂದು ಮಾಹಿತಿ ನೀಡಿದರು.

“ಹಳೆಯ ಕೊಳವೆಬಾವಿಗಳು ಬತ್ತಿಹೋಗಿರುವ ಕಡೆಗಳಲ್ಲಿ ಹೊಸ ಕೊಳವೆಬಾವಿ ಕೊರೆಸುವುದು, ಬಾಡಿಗೆ ಆಧಾರದ ಮೇಲೆ ಕೊಳವೆಬಾವಿಗಳನ್ನು ಪಡೆದುಕೊಳ್ಳುವುದು ಅಥವಾ ಟ್ಯಾಂಕರ್‌ಗಳ ಮೂಲಕ ನೀರು ಸರಬರಾಜು ಮಾಡಲು ಸ್ಪಷ್ಟ ಸೂಚನೆ ನೀಡಲಾಗಿದೆ. ಯಾವುದೇ ಗ್ರಾಮದಲ್ಲಿ ನೀರಿನ ಸಮಸ್ಯೆ ಕಂಡುಬಂದಲ್ಲಿ 24 ಗಂಟೆಗಳ ಕಾಲಮಿತಿಯಲ್ಲಿ ಸಮರ್ಪಕವಾಗಿ ನೀರು ಪೂರೈಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಖಡಕ್ ನಿರ್ದೇಶನ ನೀಡಲಾಗಿದೆ” ಎಂದು ಹೇಳಿದರು.

“ಕೇಂದ್ರ ಸರ್ಕಾರವು ಬರಪೀಡಿತ ಪ್ರದೇಶ ಘೋಷಿಸಲು ನಿಗದಿಪಡಿಸಿರುವ ಮಾನದಂಡಗಳು ಅವೈಜ್ಞಾನಿಕವಾಗಿದ್ದು, ವಾಸ್ತವ ಸ್ಥಿತಿಗೆ ದೂರವಾಗಿವೆ. ಉಪಗ್ರಹ ಚಿತ್ರಣ, ಮಣ್ಣಿನ ತೇವಾಂಶ ಹಾಗೂ ಸಸ್ಯವರ್ಗದ ಆಧಾರದ ಮೇಲೆ ಬರ ನಿರ್ಧರಿಸುವ ನಿಯಮಗಳಿಂದಾಗಿ ನೈಜವಾಗಿ ಸಂಕಷ್ಟದಲ್ಲಿರುವ ರೈತರಿಗೆ ಅನ್ಯಾಯವಾಗುತ್ತಿದೆ. ಸತತ ಮೂರು ವಾರಗಳ ಕಾಲ ಒಣಹವೆ ಇರಬೇಕು ಹಾಗೂ ಶೇ.60ಕ್ಕಿಂತ ಹೆಚ್ಚು ಮಳೆ ಕೊರತೆಯಾಗಿದ್ದರೆ ಮಾತ್ರ ಬರ ಎಂದು ಪರಿಗಣಿಸುವ ಕಠಿಣ ಮಾನದಂಡಗಳಿಂದಾಗಿ ಬೆಳೆ ಹಾನಿಯಾಗಿದ್ದರೂ ಬರಪೀಡಿತ ಪ್ರದೇಶವೆಂದು ಘೋಷಿಸಲು ಸಾಧ್ಯವಾಗುತ್ತಿಲ್ಲ” ಎಂದು ಕಳವಳ ವ್ಯಕ್ತಪಡಿಸಿದರು.

“ಮುಂಗಾರು ಹಂಗಾಮಿನಲ್ಲಿ ಬೀದರ್ ಸೇರಿದಂತೆ ರಾಜ್ಯದ ಹಲವು ಭಾಗಗಳಲ್ಲಿ ಬೆಳೆ ಸಂಪೂರ್ಣ ನಾಶವಾಗಿದ್ದರೂ ಕೇಂದ್ರದ ಮಾರ್ಗಸೂಚಿಗಳು ತೊಡಕಾಗಿವೆ. ಈ ಮಾನದಂಡಗಳನ್ನು ತಕ್ಷಣವೇ ಸಡಿಲಗೊಳಿಸಿ ರೈತರ ನೆರವಿಗೆ ಧಾವಿಸುವಂತೆ ಮುಖ್ಯಮಂತ್ರಿ ಹಾಗೂ ರಾಜ್ಯದ ಕಂದಾಯ ಸಚಿವರ ನೇತೃತ್ವದ ನಿಯೋಗವು ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಲಿದೆ” ಎಂದು ತಿಳಿಸಿದರು.

ಜಿಲ್ಲೆಯ ನಾಲ್ಕು ತಾಲೂಕುಗಳಲ್ಲಿ ಬರ ಘೋಷಣೆಯಾಗಿದ್ದು, ಕೃಷಿ ಮತ್ತು ಕಂದಾಯ ಇಲಾಖೆಗಳು ಜಂಟಿಯಾಗಿ ಭಾಲ್ಕಿಯಲ್ಲಿ ಗ್ರೌಂಡ್ ಟ್ರೂಥಿಂಗ್ ಪರಿಶೀಲನೆ ನಡೆಸಲಿವೆ. ಕೇಂದ್ರದ ಪ್ರಸ್ತುತ ಬರ ಪರಿಹಾರ ಮಾನದಂಡಗಳನ್ನು ಹೆಚ್ಚಿಸುವಂತೆ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಲಾಗಿದೆ. ಕಳೆದ ವರ್ಷ ದಾಖಲೆಯ ₹264 ಕೋಟಿ ಬೆಳೆ ವಿಮೆ ಹಾಗೂ ಪ್ರವಾಹ ಹಾನಿಗೆ ಎಸ್‌ಡಿಆರ್‌ಎಫ್/ಎನ್‌ಡಿಆರ್‌ಎಫ್ ಮತ್ತು ರಾಜ್ಯದ ಟಾಪ್‌ಅಪ್ ಸೇರಿ ಒಟ್ಟು ₹525 ಕೋಟಿಗೂ ಹೆಚ್ಚು ಹಣವನ್ನು ನೇರವಾಗಿ ರೈತರ ಖಾತೆಗಳಿಗೆ ಜಮೆ ಮಾಡಲಾಗಿದೆ ಎಂದು ವಿವರಿಸಿದರು.

ವಲಸೆ ತಡೆಯುವ ಉದ್ದೇಶದಿಂದ ಕಳೆದ ಜುಲೈ 1ರಿಂದ ಜಿಲ್ಲೆಯ 181 ಗ್ರಾಮ ಪಂಚಾಯಿತಿಗಳಲ್ಲಿಯೂ ಉದ್ಯೋಗ ಖಾತರಿ ಕಾಮಗಾರಿಗಳನ್ನು ಚುರುಕುಗೊಳಿಸಲಾಗಿದೆ. ಕಳೆದ ಎರಡು ತಿಂಗಳಲ್ಲಿ 110 ಲಕ್ಷ ಮಾನವ ದಿನಗಳನ್ನು ಸೃಜಿಸಿ ವಿವಿಧ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದೆ ಎಂದು ಮಾಹಿತಿ ನೀಡಿದರು.

1968–69ರಲ್ಲಿ ಜಿಲ್ಲೆಯ ಮೊದಲ ಕೃಷಿ ಆಧಾರಿತ ಸಕ್ಕರೆ ಕಾರ್ಖಾನೆ ಆರಂಭವಾದ ಇತಿಹಾಸವನ್ನು ಹಾಗೂ ತಮ್ಮ ತಂದೆಯ ಕೊಡುಗೆಯನ್ನು ಸ್ಮರಿಸಿದ ಸಚಿವ ಈಶ್ವರ ಖಂಡ್ರೆ, ಪ್ರಸ್ತುತ ಬೀದರ್ ಸಹಕಾರ ಸಕ್ಕರೆ ಕಾರ್ಖಾನೆ (ಬಿ.ಎಸ್.ಎಸ್.ಕೆ.) ನಷ್ಟದಲ್ಲಿದ್ದು, ಕೋಟ್ಯಂತರ ರೂಪಾಯಿ ಸಾಲದ ಸುಳಿಯಲ್ಲಿ ಸಿಲುಕಿದೆ. ಆಡಳಿತ ಮಂಡಳಿಯ ನಿರ್ಲಕ್ಷ್ಯ ಮತ್ತು ಅಕ್ರಮಗಳಿಂದಾಗಿ ಶೇ.5ಕ್ಕಿಂತ ಕಡಿಮೆ ಸಾಲ ವಸೂಲಿ ಪ್ರಮಾಣ ದಾಖಲಾಗುತ್ತಿದೆ. ಈ ಕುರಿತು ಸಕ್ಕರೆ ಹಾಗೂ ಸಹಕಾರ ಇಲಾಖೆಯಿಂದ ತನಿಖೆ ನಡೆಸಲು ಸೂಚಿಸಲಾಗಿದೆ ಎಂದು ತಿಳಿಸಿದರು.

ಜಿಲ್ಲೆಯ ಸುಮಾರು 4 ಲಕ್ಷ ರೈತರಿಗೆ ಜೀವನಾಡಿಯಾಗಿರುವ ಡಿಸಿಸಿ ಬ್ಯಾಂಕ್ ಹಾಗೂ ಠೇವಣಿದಾರರ ಹಿತರಕ್ಷಣೆ ಸರ್ಕಾರದ ಆದ್ಯತೆಯಾಗಿದೆ. ಕಾರ್ಖಾನೆಗಳನ್ನು ಲೀಸ್‌ಗೆ ನೀಡುವ ಮೂಲಕ ಬ್ಯಾಂಕ್‌ಗೆ ಬರಬೇಕಾದ ಹಣವನ್ನು ವಸೂಲಿ ಮಾಡುವ ಕುರಿತು ಮುಖ್ಯಮಂತ್ರಿ ಅವರೊಂದಿಗೆ ಚರ್ಚಿಸಲಾಗುವುದು ಎಂದು ಹೇಳಿದರು.

ಇದನ್ನೂ ಓದಿ : ಭಾಲ್ಕಿ | ಧರಣಿ ಸ್ಥಳಕ್ಕೆ ಸಚಿವ ಖಂಡ್ರೆ ಭೇಟಿ, ಸತ್ಯಾಗ್ರಹ ಹಿಂಪಡೆದ ರೈತರು

ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಗಿತ್ತೆ ಮಾಧವ್ ವಿಠ್ಠಲರಾವ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ್ ಗುಂಟಿ ಹಾಗೂ ಉಪ ಅರಣ್ಯ ಸಂರಕ್ಷಣಾಧಿಕಾರಿ ಸುಮೀತ್ ಸುಭಾಷರಾವ್ ಪಾಟೀಲ್ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸ್ಟಿಂಗ್ ಪ್ರಕರಣ: ಸ್ವಪಕ್ಷೀಯರು ಭಾಗಿ – ಸಚಿವ ಯತೀಂದ್ರ; ಪಾರದರ್ಶಕ ತನಿಖೆಗೆ ಸಿದ್ದರಾಮಯ್ಯ ಆಗ್ರಹ

ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ...

ಕತ್ತಲಲ್ಲಿ ಗುರುಗ್ರಾಮ್: ವಿದ್ಯುತ್‌ ಬಿಕ್ಕಟ್ಟಿನಿಂದ 1,800 ಕೈಗಾರಿಕೆಗಳ ಕೆಲಸ ಸ್ಥಗಿತ, ನೀರಿಗಾಗಿ ಜನರ ಪರದಾಟ

ಹರಿಯಾಣ ವಿದ್ಯುತ್ ಇಲಾಖೆಯ ನೌಕರರು ನಡೆಸುತ್ತಿರುವ ಮೂರು ದಿನಗಳ ಮುಷ್ಕರದಿಂದ ‌ಗುರುಗ್ರಾಮ್...

ದೆಹಲಿಯಲ್ಲಿ ಭುಗಿಲೆದ್ದ ಆಕ್ರೋಶ: ಚುನಾವಣಾ ಆಯೋಗದ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ ಪ್ರತಿಭಟನಾಕಾರರು

ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ (SIR) ಪ್ರಕ್ರಿಯೆಯನ್ನು ವಿರೋಧಿಸಿ ಹಾಗೂ ಉದ್ದೇಶಪೂರ್ವಕವಾಗಿ...

ಚೀನಾ ವಿಚಾರದಲ್ಲಿ ಮೋದಿ ಮೌನ; ಕೇಂದ್ರದ ವಿರುದ್ಧ ಜೈರಾಮ್ ರಮೇಶ್ ತೀವ್ರ ವಾಗ್ದಾಳಿ

ಅರುಣಾಚಲ ಪ್ರದೇಶದ ಗಡಿಯಲ್ಲಿ ಚೀನಾ ಸೇನೆಯೊಂದಿಗೆ ಮುಖಾಮುಖಿ ಸಂಘರ್ಷ ಮುಂದುವರಿದಿದೆ ಎಂದು...