ಬೀದರ್ | ಬರ ಪರಿಸ್ಥಿತಿ : ವಿಶೇಷ ಪ್ಯಾಕೇಜ್ ಘೋಷಿಸಲು ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

Date:

ಬೀದರ್ ಜಿಲ್ಲೆಯಲ್ಲಿ ಮಳೆಯ ಕೊರತೆಯಿಂದ ಕೃಷಿ ಚಟುವಟಿಕೆಗಳಿಗೆ ತೀವ್ರ ಹಿನ್ನಡೆಯಾಗಿದ್ದು, ಬೆಳೆ ನಷ್ಟ ಹಾಗೂ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ರೈತರ ನೆರವಿಗೆ ರಾಜ್ಯ ಸರ್ಕಾರ ಬರ ನಿರ್ವಹಣೆಗೆ ವಿಶೇಷ ಪ್ಯಾಕೇಜ್ ಘೋಷಿಸಬೇಕು ಎಂದು ಬೀದರ್ ದಕ್ಷಿಣ ಕ್ಷೇತ್ರದ ಶಾಸಕ ಡಾ.ಶೈಲೇಂದ್ರ ಬೆಲ್ದಾಳೆ ವಿಧಾನಸಭೆಯಲ್ಲಿ ಮಾತನಾಡಿ ಒತ್ತಾಯಿಸಿದರು.

- Advertisement -

ವಿಧಾನಸಭೆ ಕಲಾಪದಲ್ಲಿ ಜಿಲ್ಲೆಯ ಬರ ಪರಿಸ್ಥಿತಿ ಹಾಗೂ ರೈತರ ಸಮಸ್ಯೆಗಳನ್ನು ಪ್ರಸ್ತಾಪಿಸಿದ ಅವರು, ಮಳೆ ಕೊರತೆಯಿಂದ ಹಲವು ಪ್ರದೇಶಗಳಲ್ಲಿ ಬೆಳೆಗಳು ಒಣಗಿದ್ದು, ರೈತರ ಕೃಷಿ ಆದಾಯಕ್ಕೆ ಹೊಡೆತ ಬಿದ್ದಿದೆ. ತಾವು ಅಧಿಕಾರಿಗಳೊಂದಿಗೆ ಜಮೀನುಗಳಿಗೆ ಭೇಟಿ ನೀಡಿ ಪರಿಸ್ಥಿತಿ ಪರಿಶೀಲಿಸಿದ್ದು, ರೈತರ ಸಂಕಷ್ಟವನ್ನು ಕಣ್ಣಾರೆ ಕಂಡಿರುವುದಾಗಿ ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

‘ಹಾಸ್ಟೆಲ್‌’ ಇಲ್ಲದ ಶಿಕ್ಷಣದ ಸ್ವರೂಪ ಹೇಗಿರಲಿದೆ?

ಸಾಮಾನ್ಯವಾಗಿ ʼಶಿಕ್ಷಣʼ ಎಂದರೆ ʼತರಗತಿ, ಪಠ್ಯಪುಸ್ತಕ ಮತ್ತು ಪರೀಕ್ಷೆಗಳʼ ಸುತ್ತ ಹೆಣೆದುಕೊಂಡಿರುವ ಕಲ್ಪನೆ. ಆದರೆ ಒಬ್ಬ ವಿದ್ಯಾರ್ಥಿ ದಿನದ ಬಹುಪಾಲು ಕಳೆಯುವ ಜಾಗ ʼಹಾಸ್ಟೆಲ್‌ʼ. ಹೆಚ್ಚಾಗಿ ಚರ್ಚೆಗೆ ಬಾರದ ಈ ʼಹಾಸ್ಟೆಲ್‌ʼ ಎಂಬ...

ಬರದ ಬೇಗೆಯಲ್ಲಿ ರಾಜ್ಯ ಬೆಂದರೂ ಅನುದಾನಕ್ಕ ದನಿ ಎತ್ತದ...

ಸದಾ ಕಾಲ 'ಮೋದಿ ಜಪ' ಮಾಡುತ್ತಾ, ಕೇವಲ ರಾಜಕೀಯಕ್ಕಾಗಿ ಮತ್ತು ಪಕ್ಷದ ಅಜೆಂಡಾಗಳಿಗಾಗಿ ರಾಜ್ಯಾದ್ಯಂತ ಸುತ್ತುವ ಈ ಸಂಸದರಿಗೆ, ನಾಡಿನ ಜನತೆ ಬರಗಾಲದ ತೀವ್ರ ಸಂಕಷ್ಟದಲ್ಲಿ ಬೆಂದು ಹೋಗುತ್ತಿರುವಾಗ ಅದೇ ಪ್ರಧಾನಿ ನರೇಂದ್ರ...

SIR ಅಕ್ರಮ | ಗ್ಯಾನೇಶ್‌ ಕುಮಾರ್ ‘ಅಪರಾಧಿ’ಯಾದ್ರೆ, ಮೋದಿ-ಅಮಿತ್...

ಭಾರತೀಯ ಪ್ರಜಾಪ್ರಭುತ್ವದ ಇತಿಹಾಸದಲ್ಲೇ ಅತ್ಯಂತ ಕರಾಳ ಅಧ್ಯಾಯವೊಂದು ಈಗ ಜಗಜ್ಜಾಹೀರಾಗಿದೆ. ಪ್ರತಿಯೊಬ್ಬ ನಾಗರಿಕನ ಅತಿ ದೊಡ್ಡ ರಾಜಕೀಯ ಶಕ್ತಿಯಾಗಿರುವ 'ಮತದಾನದ ಹಕ್ಕು' ಮತ್ತು ಅದನ್ನು ಕಾಯಬೇಕಾದ ಸಾಂವಿಧಾನಿಕ ಸಂಸ್ಥೆಯನ್ನೇ ಆಡಳಿತಾರೂಢ ಮೋದಿ-ಅಮಿತ್ ಶಾ...

ಪ್ರತಿ ಎಕರೆಗೆ ₹50 ಸಾವಿರ ಪರಿಹಾರಕ್ಕೆ ಆಗ್ರಹ

ಬರದಿಂದ ಬೆಳೆ ನಷ್ಟ ಅನುಭವಿಸಿರುವ ರೈತರಿಗೆ ಪ್ರತಿ ಎಕರೆಗೆ ₹50 ಸಾವಿರ ಪರಿಹಾರ ನೀಡಬೇಕು. ಈಗಾಗಲೇ ಬೆಳೆ ಹಾನಿ ಸಮೀಕ್ಷೆ ನಡೆಸಿ ವರದಿ ಸಲ್ಲಿಸಿರುವುದರಿಂದ ಅರ್ಹ ರೈತರ ಪಟ್ಟಿಯನ್ನು ಸಿದ್ಧಪಡಿಸಿ, ಪರಿಹಾರ ಮೊತ್ತವನ್ನು ನೇರವಾಗಿ ರೈತರ ಖಾತೆಗೆ ಜಮಾ ಮಾಡಬೇಕು ಎಂದು ಆಗ್ರಹಿಸಿದರು.

ಬರ ಪರಿಸ್ಥಿತಿಯಲ್ಲಿ ಲಭ್ಯವಿರುವ ನೀರಿನ ಮೂಲಗಳನ್ನು ಬಳಸಿಕೊಂಡು ಬೆಳೆಗಳನ್ನು ಉಳಿಸಿಕೊಳ್ಳಲು ಕೃಷಿ ಪಂಪ್‌ಸೆಟ್‌ಗಳಿಗೆ ಕನಿಷ್ಠ 8 ಗಂಟೆ ವಿದ್ಯುತ್ ಪೂರೈಕೆ ಮುಂದುವರಿಸಬೇಕು. ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾದರೆ ಸಂಕಷ್ಟದಲ್ಲಿರುವ ರೈತರಿಗೆ ಮತ್ತಷ್ಟು ತೊಂದರೆಯಾಗಲಿದೆ ಎಂದು ವಿವರಿಸಿದರು.

ಕೃಷಿ ಆದಾಯ ಕುಸಿದಿರುವ ಹಿನ್ನೆಲೆಯಲ್ಲಿ ರೈತರ ಮೇಲಿನ ಸಾಲದ ಹೊರೆ ಹೆಚ್ಚಾಗುತ್ತಿದೆ. ರೈತರ ಆರ್ಥಿಕ ಸಂಕಷ್ಟವನ್ನು ಪರಿಗಣಿಸಿ ಮಹಾರಾಷ್ಟ್ರ ಮಾದರಿಯಲ್ಲಿ ಸಾಲ ಮನ್ನಾ ಮಾಡುವ ಕುರಿತು ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಅವರು ಆಗ್ರಹಿಸಿದರು.

ಕುಡಿಯುವ ನೀರಿಗೆ ಪ್ರತಿ ಕ್ಷೇತ್ರಕ್ಕೆ ₹5 ಕೋಟಿ

“ಬರದ ಪರಿಣಾಮ ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಉಲ್ಬಣಿಸುವ ಸಾಧ್ಯತೆ ಇರುವುದರಿಂದ ಮುನ್ನೆಚ್ಚರಿಕಾ ಕ್ರಮವಾಗಿ ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ ₹5 ಕೋಟಿ ಅನುದಾನ ಬಿಡುಗಡೆ ಮಾಡಬೇಕು. ಅಗತ್ಯವಿರುವ ಗ್ರಾಮಗಳನ್ನು ಗುರುತಿಸಿ ಟ್ಯಾಂಕರ್, ಬೋರ್‌ವೆಲ್ ಹಾಗೂ ಪರ್ಯಾಯ ಜಲಮೂಲಗಳ ಮೂಲಕ ಕುಡಿಯುವ ನೀರು ಪೂರೈಸಲು ಕ್ರಮ ಕೈಗೊಳ್ಳಬೇಕು” ಎಂದು ತಿಳಿಸಿದರು.

ಬರ ನಿರ್ವಹಣೆಯನ್ನು ಕೇವಲ ಬೆಳೆ ಪರಿಹಾರಕ್ಕೆ ಸೀಮಿತಗೊಳಿಸದೆ, ಕೃಷಿ, ಕುಡಿಯುವ ನೀರು, ಜಾನುವಾರುಗಳಿಗೆ ಮೇವು ಹಾಗೂ ಗ್ರಾಮೀಣ ಜನರ ಜೀವನೋಪಾಯದ ಸಮಸ್ಯೆಗಳನ್ನು ಸಮಗ್ರವಾಗಿ ಪರಿಗಣಿಸಬೇಕು. ಬರಪೀಡಿತ ಪ್ರದೇಶಗಳಲ್ಲಿ ಪರಿಸ್ಥಿತಿ ಅಧ್ಯಯನ ನಡೆಸಿ ತುರ್ತು ಪರಿಹಾರ ಕ್ರಮ ಕೈಗೊಳ್ಳಬೇಕು ಎಂದು ಶಾಸಕ ಬೆಲ್ದಾಳೆ ಸರ್ಕಾರವನ್ನು ಒತ್ತಾಯಿಸಿದರು.

ಇದನ್ನೂ ಓದಿ: ಬೀದರ್‌ | ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿಯಿಂದ ಅಣಕು ಶವಯಾತ್ರೆ

ರೈತರ ಬದುಕಿನ ಪ್ರಶ್ನೆಯಲ್ಲಿ ವಿಳಂಬ ಮಾಡದೆ ಪ್ರತಿ ಎಕರೆಗೆ ₹50 ಸಾವಿರ ಪರಿಹಾರ, 8 ಗಂಟೆ ಕೃಷಿ ವಿದ್ಯುತ್, ಸಾಲ ಮನ್ನಾ ಹಾಗೂ ಕುಡಿಯುವ ನೀರಿಗೆ ಅಗತ್ಯ ಅನುದಾನ ಸೇರಿದಂತೆ ಪ್ರಮುಖ ಬೇಡಿಕೆಗಳಿಗೆ ಸರ್ಕಾರ ತ್ವರಿತವಾಗಿ ಸ್ಪಂದಿಸಿ, ರೈತರ ಬದುಕು ಹಾಗೂ ಕೃಷಿ ಕ್ಷೇತ್ರವನ್ನು ರಕ್ಷಿಸುವ ನಿಟ್ಟಿನಲ್ಲಿ ಸರ್ಕಾರ ತಕ್ಷಣ ಅಗತ್ಯ ಸಂಪನ್ಮೂಲಗಳನ್ನು ಒದಗಿಸಿ ಬರ ನಿರ್ವಹಣೆಗೆ ಸಮಗ್ರ ಕಾರ್ಯಯೋಜನೆ ರೂಪಿಸಬೇಕು ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ | ಕಬ್ಬಿಗೆ ರೂ. 5,500 ಘೋಷಣೆ ಆಗುವವರೆಗೂ ಸಕ್ಕರೆ ಕಾರ್ಖಾನೆ ಆರಂಭಿಸಬೇಡಿ: ರೈತ ಸಂಘ ಕರೆ

ಪ್ರಸಕ್ತ ಸಾಲಿನ ಕಬ್ಬಿಗೆ ಪ್ರತಿ ಟನ್‌ಗೆ ರೂ.5,500 ದರ ಘೋಷಿಸುವವರೆಗೆ ಹಾಗೂ...

ECINetನಲ್ಲಿ ಅಧಿಕಾರ ಕೇಂದ್ರೀಕರಣದ ಆರೋಪ; ಕ್ಯಾಬಿನೆಟ್‌ ಕಾರ್ಯದರ್ಶಿಗೆ ಚುನಾವಣಾ ಆಯುಕ್ತರ ದೂರು

ಚುನಾವಣಾ ಆಯೋಗದ ಮತದಾರರ ಪಟ್ಟಿ ನಿರ್ವಹಣಾ ಸಾಫ್ಟ್‌ವೇರ್‌ ವ್ಯವಸ್ಥೆಯ ಕಾರ್ಯವೈಖರಿ ಹಾಗೂ...

‘ಹಾಸ್ಟೆಲ್‌’ ಇಲ್ಲದ ಶಿಕ್ಷಣದ ಸ್ವರೂಪ ಹೇಗಿರಲಿದೆ?

ಸಾಮಾನ್ಯವಾಗಿ ʼಶಿಕ್ಷಣʼ ಎಂದರೆ ʼತರಗತಿ, ಪಠ್ಯಪುಸ್ತಕ ಮತ್ತು ಪರೀಕ್ಷೆಗಳʼ ಸುತ್ತ ಹೆಣೆದುಕೊಂಡಿರುವ...

2027ರ ಯುಪಿ ಚುನಾವಣೆಗೆ ಅಖಿಲೇಶ್ ಯಾದವ್ ಸಜ್ಜು; ಎಸ್‌ಪಿ ‘ಪಿಡಿಎ ರಥಯಾತ್ರೆ’ ಶುರು

ಉತ್ತರ ಪ್ರದೇಶದ ವಿಧಾನಸಭಾ ಚುನಾವಣೆಗೆ ಸಮಾಜವಾದಿ ಪಾರ್ಟಿ (ಎಸ್‌ಪಿ) ತನ್ನ ಪ್ರಚಾರ...