ಬೀದರ್‌ | ವಸತಿ ಶಾಲೆಗಳ ಪ್ರಾಂಶುಪಾಲರು, ಮೇಲ್ವಿಚಾರಕರ ವರ್ಗಾವಣೆಗೆ ಡಿವಿಪಿ ಆಗ್ರಹ

Date:

ಬೀದರ್ ಜಿಲ್ಲೆಯ ವಿವಿಧ ವಸತಿ ಶಾಲೆಗಳಲ್ಲಿ ಹಲವು ವರ್ಷಗಳಿಂದ ಒಂದೇ ಸ್ಥಳದಲ್ಲಿ ಕಾರ್ಯನಿರ್ವಹಿಸುತ್ತಿರುವ ಪ್ರಾಂಶುಪಾಲರು ಹಾಗೂ ಮೇಲ್ವಿಚಾರಕರನ್ನು ನಿಯಮಾನುಸಾರ ಅಂತರಜಿಲ್ಲಾ ವರ್ಗಾವಣೆ ಮಾಡಬೇಕು. ಕಳೆದ ಐದು ವರ್ಷಗಳಲ್ಲಿ ಶಾಲೆಗಳಿಗೆ ಬಿಡುಗಡೆಯಾದ ಅನುದಾನದ ಬಳಕೆ ಕುರಿತು ಸಮಗ್ರ ತನಿಖೆ ನಡೆಸಬೇಕು ಎಂದು ಆಗ್ರಹಿಸಿ ದಲಿತ ವಿದ್ಯಾರ್ಥಿ ಪರಿಷತ್ ಆಗ್ರಹಿಸಿದೆ.

- Advertisement -

ಈ ಸಂಬಂಧ ಪರಿಷತ್ತಿನ ಪದಾಧಿಕಾರಿಗಳು ಅಪರ ಜಿಲ್ಲಾಧಿಕಾರಿ ಸುರೇಖಾ ಅವರಿಗೆ ಮನವಿ ಸಲ್ಲಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

‘Epstein’ ವಿವಾದದ ನಡುವೆಯೂ ಹರದೀಪ್ ಪುರಿಗೆ ಮಣೆ: ಸಿಖ್...

'Epstein files' ವಿವಾದವು ಹರದೀಪ್ ಸಿಂಗ್ ಪುರಿ ಅವರ ರಾಜಕೀಯ ಬದುಕಿನಲ್ಲಿ ಸಣ್ಣದೊಂದು ಬಿರುಗಾಳಿ ಎಬ್ಬಿಸಿದ್ದು ಸುಳ್ಳಲ್ಲ. ವಿರೋಧ ಪಕ್ಷಗಳ ಟೀಕೆಗಳು ಮತ್ತು ನೈತಿಕ ಹೊಣೆಗಾರಿಕೆಯ ಪ್ರಶ್ನೆಗಳು ಅವರನ್ನು ಸಂಪುಟದಿಂದ ಹೊರಗಟ್ಟುವ ಹಂತಕ್ಕೆ...

ಅಮೆರಿಕದಲ್ಲಿ ನೋಂದಾಯಿಸಿಕೊಂಡ RSS Friends; RSS ಜೊತೆ ಮೌಖಿಕ...

RSS Friends ಎಂಬ ಸಂಘಟನೆಯು ಅಮೆರಿಕದಲ್ಲಿ ಆರ್‌ಎಸ್‌ಎಸ್‌ನ ವಿದೇಶಿ ಏಜೆಂಟ್ ಆಗಿ ನೋಂದಾಯಿಸಿಕೊಂಡಿದೆ. ತನ್ನ ಉದ್ದೇಶಿತ ಚಟುವಟಿಕೆಗಳು ಮುಖ್ಯವಾಗಿ ಮಾಹಿತಿ ಪ್ರಸಾರ, ಶೈಕ್ಷಣಿಕ ಕಾರ್ಯಗಳು, ಸಾರ್ವಜನಿಕ ಸಂಪರ್ಕ ಮತ್ತು ಸಮುದಾಯದೊಂದಿಗಿನ ತೊಡಗಿಸಿಕೊಳ್ಳುವಿಕೆಯನ್ನು ಒಳಗೊಂಡಿರುತ್ತವೆ...

ಕುರ್ಚಿಗಾಗಿ ನಿಲುವುಗಳೇ ಬಲಿ; ವಿಶ್ವಾಸಾರ್ಹತೆಯನ್ನೇ ಕಳೆದುಕೊಳ್ಳುತ್ತಿರುವ ಎಚ್‌ಡಿಕೆ

ಕರ್ನಾಟಕ ರಾಜಕಾರಣದಲ್ಲಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರಷ್ಟು ವೇಗವಾಗಿ ತಮ್ಮ ರಾಜಕೀಯ ನಿಲುವುಗಳನ್ನು ಬದಲಿಸಿಕೊಳ್ಳುವ ಮತ್ತೊಬ್ಬ ನಾಯಕ ಸಿಗುವುದು ಕಷ್ಟ. ನಿನ್ನೆ ವಿರೋಧಿಸಿದವರನ್ನು ಇಂದು ಸಮರ್ಥಿಸಿಕೊಳ್ಳುವುದು, ಹಿಂದೆ ಜೊತೆಗಿದ್ದವರನ್ನೇ ಇಂದು ದೂರುವುದು,...

ಸಮಾಜ ಕಲ್ಯಾಣ, ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಗಳ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ಮೊರಾರ್ಜಿ ದೇಸಾಯಿ, ಕಿತ್ತೂರು ರಾಣಿ ಚೆನ್ನಮ್ಮ, ಇಂದಿರಾ ಗಾಂಧಿ, ಡಾ.ಬಿ.ಆರ್.ಅಂಬೇಡ್ಕರ್ ಸೇರಿದಂತೆ ವಿವಿಧ ವಸತಿ ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ಗುಣಮಟ್ಟದ ಆಹಾರ, ಶುದ್ಧ ಕುಡಿಯುವ ನೀರು, ಸೂಕ್ತ ಭದ್ರತೆ ಹಾಗೂ ಅಗತ್ಯ ಮೂಲಸೌಕರ್ಯಗಳು ಸಮರ್ಪಕವಾಗಿ ದೊರೆಯುತ್ತಿಲ್ಲ ಎಂಬ ದೂರುಗಳಿವೆ ಎಂದು ಆರೋಪಿಸಿದರು.

ವಸತಿ ಶಾಲೆಗಳ ಅಭಿವೃದ್ಧಿ ಮತ್ತು ನಿರ್ವಹಣೆಗಾಗಿ ಸರ್ಕಾರ ಪ್ರತಿವರ್ಷ ಲಕ್ಷಾಂತರ ರೂಪಾಯಿ ಅನುದಾನ ಬಿಡುಗಡೆ ಮಾಡುತ್ತಿದ್ದರೂ, ಕೆಲವು ಶಾಲೆಗಳಲ್ಲಿ ಅದರ ಸಮರ್ಪಕ ಬಳಕೆಯಾಗುತ್ತಿಲ್ಲ ಎಂಬ ಆರೋಪಗಳಿವೆ. ಈ ಹಿನ್ನೆಲೆಯಲ್ಲಿ ಸಂಬಂಧಪಟ್ಟ ಅಧಿಕಾರಿಗಳು ಜಿಲ್ಲೆಯ ಎಲ್ಲ ವಸತಿ ಶಾಲೆಗಳಿಗೆ ಖುದ್ದಾಗಿ ಭೇಟಿ ನೀಡಿ ಪರಿಶೀಲನೆ ನಡೆಸಬೇಕು. ವಿದ್ಯಾರ್ಥಿಗಳೊಂದಿಗೆ ನೇರವಾಗಿ ಸಂವಾದ ನಡೆಸಿ, ಸಮಸ್ಯೆಗಳನ್ನು ಆಲಿಸಬೇಕು ಎಂದು ಒತ್ತಾಯಿಸಿದ್ದಾರೆ.

WhatsApp Image 2026 10 10 at 7.46.08 PM 28

ವಸತಿ ಶಾಲೆಗಳಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗಗಳು ಹಾಗೂ ಆರ್ಥಿಕವಾಗಿ ದುರ್ಬಲ ಕುಟುಂಬಗಳ ವಿದ್ಯಾರ್ಥಿಗಳು ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ಅವರ ಶೈಕ್ಷಣಿಕ ಹಿತದೃಷ್ಟಿಯಿಂದ ಶಾಲೆಗಳಲ್ಲಿನ ಅವ್ಯವಸ್ಥೆಗಳನ್ನು ಸರಿಪಡಿಸಿ, ಗುಣಮಟ್ಟದ ಶಿಕ್ಷಣದ ಜೊತೆಗೆ ಅಗತ್ಯ ಸೌಲಭ್ಯಗಳನ್ನು ಒದಗಿಸಬೇಕು ಎಂದು ಮನವಿಯಲ್ಲಿ ಆಗ್ರಹಿಸಲಾಗಿದೆ.

ಹಲವು ವರ್ಷಗಳಿಂದ ಒಂದೇ ಶಾಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಪ್ರಾಂಶುಪಾಲರು ಹಾಗೂ ಮೇಲ್ವಿಚಾರಕರನ್ನು ನಿಯಮಾನುಸಾರ ಅಂತರಜಿಲ್ಲಾ ವರ್ಗಾವಣೆ ಮಾಡಬೇಕು. ಕಳೆದ ಐದು ವರ್ಷಗಳಲ್ಲಿ ವಸತಿ ಶಾಲೆಗಳಿಗೆ ಬಿಡುಗಡೆಯಾದ ಅನುದಾನದ ಬಳಕೆ ಕುರಿತು ಜಿಲ್ಲಾ ಮಟ್ಟದ ತನಿಖಾ ತಂಡ ರಚಿಸಿ ಪರಿಶೀಲನೆ ನಡೆಸಬೇಕು. ವಿದ್ಯಾರ್ಥಿಗಳಿಗೆ ಕಳಪೆ ಗುಣಮಟ್ಟದ ಆಹಾರ ನೀಡಿರುವುದು ತನಿಖೆಯಲ್ಲಿ ದೃಢಪಟ್ಟರೆ ಸಂಬಂಧಪಟ್ಟವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದರು.

ಜಿಲ್ಲೆಯ ಎಲ್ಲ ವಸತಿ ಶಾಲೆಗಳ ನಿರ್ವಹಣೆ, ಆಹಾರದ ಗುಣಮಟ್ಟ, ಕುಡಿಯುವ ನೀರು, ಸ್ವಚ್ಛತೆ ಹಾಗೂ ಭದ್ರತೆಯನ್ನು ಪರಿಶೀಲಿಸಲು ವಿಶೇಷ ತಂಡ ರಚಿಸಬೇಕು. ಅನುದಾನ ದುರ್ಬಳಕೆಯಾಗಿರುವುದು ಕಂಡುಬಂದಲ್ಲಿ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು. ಮನವಿಗೆ ಸೂಕ್ತ ಸ್ಪಂದನೆ ದೊರೆಯದಿದ್ದರೆ ಜಿಲ್ಲಾಧಿಕಾರಿಗಳ ಕಚೇರಿ ಎದುರು ಧರಣಿ ಸತ್ಯಾಗ್ರಹ ನಡೆಸಲಾಗುವುದು ಎಂದು ದಲಿತ ವಿದ್ಯಾರ್ಥಿ ಪರಿಷತ್ ಮುಖಂಡರು ಎಚ್ಚರಿಸಿದ್ದಾರೆ.

WhatsApp Image 2026 10 10 at 6.59.09 PM 9

ಜಿಲ್ಲಾ ಸಂಚಾಲಕ ಸಂದೀಪ ಕಾಂಟೆ, ಜಿಲ್ಲಾ ಸಂಘಟನಾ ಕಾರ್ಯದರ್ಶಿ ಅನೀಲಕುಮಾರ ಮಡ್ಡೆ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಮೇಶ ಮಾಲೆ, ಬೀದರ್ ತಾಲೂಕು ಸಂಚಾಲಕ ಸಾಯಿ ಕೌರವ ಹಾಗೂ ಯುವ ಮುಖಂಡರಾದ ಮಹೇಂದ್ರಕುಮಾರ ಹೊಸಮನಿ ಮತ್ತು ವಿನೋದ ಸಿಂಧೆ ಉಪಸ್ಥಿತರಿದ್ದರು.

ಇದನ್ನೂ ಓದಿ : ಬೀದರ್‌ | ಶಿಕ್ಷಕರು ಬದುಕಿನ ಭವಿಷ್ಯ ರೂಪಿಸಿದ ಶಿಲ್ಪಿಗಳು: ಪತ್ರಕರ್ತ ಗೌರೀಶ ಅಕ್ಕಿ

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಸವಕಲ್ಯಾಣ | ಕರ್ನಾಟಕ ಸಂಗೀತ ಕ್ಷೇತ್ರಕ್ಕೆ ಶರಣರ ಮಹತ್ವದ ಕೊಡುಗೆ: ಬಸವಲಿಂಗ ಪಟ್ಟದ್ದೇವರು

ಬಸವಾದಿ ಶರಣರು ವಚನಗಳ ಜೊತೆಗೆ ಅನೇಕ ವಚನೇತರ ಸಾಹಿತ್ಯವನ್ನೂ ರಚಿಸಿದ್ದಾರೆ. ಅವುಗಳಲ್ಲಿ...

ಅಮೆರಿಕದಲ್ಲಿ ನೋಂದಾಯಿಸಿಕೊಂಡ RSS Friends; RSS ಜೊತೆ ಮೌಖಿಕ ಒಪ್ಪಂದವಿದೆ ಎಂದ ಸಂಘಟನೆ

RSS Friends ಎಂಬ ಸಂಘಟನೆಯು ಅಮೆರಿಕದಲ್ಲಿ ಆರ್‌ಎಸ್‌ಎಸ್‌ನ ವಿದೇಶಿ ಏಜೆಂಟ್ ಆಗಿ...

ಬೀದರ್‌ | ಭಾರತದ ಸಂವಿಧಾನ ವಿಶ್ವಕ್ಕೆ ಮಾದರಿ: ಡಿಸಿ ಶಿಲ್ಪಾ ಶರ್ಮಾ

ಭಾರತದ ಸಂವಿಧಾನವು ವಿಶಿಷ್ಟ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಹೊಂದಿದ್ದು, ಇಡೀ ವಿಶ್ವಕ್ಕೆ ಮಾದರಿಯಾಗಿದೆ....

ಆತ್ಮಹತ್ಯೆ ಮಾಡಿಕೊಂಡ ರೈತರ ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳಬೇಡಿ: ಶಿವಸೇನೆ ಶಾಸಕನ ವಿವಾದಾತ್ಮಕ ಹೇಳಿಕೆ

ರೈತರು ಆತ್ಮಹತ್ಯೆ ಮಾಡಿಕೊಂಡರೆ ಅವರ ಅಂತ್ಯಕ್ರಿಯೆಯಲ್ಲಿ ಯಾರೂ ಪಾಲ್ಗೊಳ್ಳಬಾರದು, ಮೃತದೇಹಗಳನ್ನು ಪ್ರಾಣಿಗಳು...