ಬೀದರ್‌ | ಛತ್ರಪತಿ ಶಿವಾಜಿ ಮಹಾರಾಜರ ಆದರ್ಶ ಮೈಗೂಡಿಸಿಕೊಳ್ಳಿ : ಸಂಸದ ಸಾಗರ ಖಂಡ್ರೆ

Date:

ಛತ್ರಪತಿ ಶಿವಾಜಿ ಮಹಾರಾಜರ ಜೀವನ ಮತ್ತು ಆದರ್ಶ ಕೇವಲ ಭಾರತಕ್ಕೆ ಮಾತ್ರವಲ್ಲ ಇಡೀ ವಿಶ್ವಕ್ಕೆ ಮಾದರಿಯಾಗಿದೆ ಎಂದು ಲೋಕಸಭಾ ಸದಸ್ಯ ಸಾಗರ ಖಂಡ್ರೆ ತಿಳಿಸಿದರು.

- Advertisement -

ಭಾಲ್ಕಿ ತಾಲೂಕಿನ ಬಾಳೂರ ಗ್ರಾಮದಲ್ಲಿ ಗ್ರಾಮಸ್ಥರ ವತಿಯಿಂದ ಆಯೋಜಿಸಿದ ಛತ್ರಪತಿ ಶಿವಾಜಿ ಮಹಾರಾಜರ ಅಶ್ವಾರೂಢ ಪುತ್ಥಳಿ ಅನಾವರಣಗೊಳಿಸಿ ಅವರು ಮಾತನಾಡಿ, ʼಪ್ರತಿಯೊಬ್ಬರೂ ತಾಯಿಗೆ ಗೌರವ ಕೊಡಬೇಕು. ಶಿವಾಜಿಯವರ ಜೀವನ ಮತ್ತು ಆದರ್ಶಗಳನ್ನು ಪ್ರತಿಯೊಬ್ಬರೂ ಮೈಗೂಡಿಸಿಕೊಳ್ಳಬೇಕುʼ ಎಂದು ಸಲಹೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಡಲಿಗೆ ಲಕ್ಷಾಂತರ ಬಂಡವಾಳ, ಗಡಿಯಲ್ಲಿ ದಂಡ: ಕೇಳುವವರಿಲ್ಲ ಕರಾವಳಿ...

ಸಮುದ್ರದ ಅಲೆಗಳ ನಡುವೆ ಜೀವದ ಹಂಗು ತೊರೆದು, ಲಕ್ಷಾಂತರ ರೂಪಾಯಿ ಬಂಡವಾಳ ಹೂಡಿ ಮೀನುಗಾರಿಕೆಗೆ ತೆರಳುವ ಮೀನುಗಾರರ ಬದುಕು ಈಗ ಹಲವು ಸವಾಲುಗಳನ್ನು ಎದುರಿಸುತ್ತಿದೆ. ಒಂದು ಕಡೆ ಸಮುದ್ರದ ಅಪಾಯ, ಮತ್ತೊಂದು ಕಡೆ...

ರಾಜಕೀಯದ ಅಂಧಾನುಸರಣೆ ಮತ್ತು ಮನೋವಿಜ್ಞಾನ — ಮೋದಿ ಆಡಳಿತ...

ರಾಜಕೀಯ ನಾಯಕನ ನಿರ್ಧಾರವನ್ನು ಪ್ರಶ್ನಿಸಿದರೆ ತನ್ನದೇ ಗುಂಪಿನವರು ವಿರೋಧಿಸಬಹುದು, ಅಪಹಾಸ್ಯ ಮಾಡಬಹುದು ಅಥವಾ ತನ್ನ ರಾಜಕೀಯ ನಿಷ್ಠೆ, ದೇಶಪ್ರೇಮ ಹಾಗೂ ಧರ್ಮನಿಷ್ಠೆಯ ಬಗ್ಗೆ ಅನುಮಾನ ವ್ಯಕ್ತಪಡಿಸಬಹುದು ಎಂಬ ಭಯದಿಂದ ಕೆಲವರು ಮೌನವಾಗಿರಬಹುದು. ಇನ್ನೂ...

ವೀರಪ್ಪ ಮೊಯ್ಲಿ ಹೇಳಿಕೆ- ಕಾಂಗ್ರೆಸ್‌ನ ರಾಜಕೀಯ ನಿರ್ಧಾರಗಳ ನೆರಳಲ್ಲಿ...

ಮೊಯ್ಲಿ ಅವರ ಹೇಳಿಕೆಯ ಮತ್ತೊಂದು ಪ್ರಮುಖ ಭಾಗ ಪಕ್ಷದ ಆಂತರಿಕ ಸುಧಾರಣೆಗೆ ಸಂಬಂಧಿಸಿದೆ. ಸೋನಿಯಾ ಗಾಂಧಿ ಕಾಂಗ್ರೆಸ್ ಅಧ್ಯಕ್ಷೆಯಾಗಿದ್ದ ಅವಧಿಯಲ್ಲಿ ಪಕ್ಷವನ್ನು ಭವಿಷ್ಯದ ರಾಜಕೀಯ ಸವಾಲುಗಳಿಗೆ ಸಿದ್ಧಗೊಳಿಸಲು ಮಹತ್ವದ ಬದಲಾವಣೆಗಳನ್ನು ತರಲು ಬಯಸಿದ್ದರು;...

ʼಈಗಾಗಲೇ ಜಿಲ್ಲೆಯಲ್ಲಿ 25 ಲಕ್ಷ ವೆಚ್ಚದಲ್ಲಿ ಮರಾಠಾ ಭವನ ಕಾಮಗಾರಿ ಆರಂಭಿಸಲಾಗಿದೆ. ಬೀದರ-ನಾಂದೇಡ ರೈಲ್ವೆ ಕಾಮಗಾರಿಗೆ ರಾಜ್ಯ ಸರ್ಕಾರದ ಪಾಲಿನ ಅನುದಾನ ಕೊಡಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ. ಮರಾಠಾ ಸಮುದಾಯದ ಸಮಸ್ಯೆಗಳ ಕುರಿತು ಸಂಸತ್ತಿನಲ್ಲಿ ಧ್ವನಿ ಎತ್ತುವೆ ಎಂದ ಅವರು ಮರಾಠಾ ಸಮಾಜದ ಏನೇ ಸಮಸ್ಯೆಗಳಿದ್ದರೂ ಅವುಗಳಿಗೆ ಸ್ಪಂದಿಸುತ್ತೇನೆʼ ಎಂದು ಭರವಸೆ ನೀಡಿದರು.

ಬೆಂಗಳೂರಿನ ಪೂಜ್ಯ ಮಂಜುನಾಥ ಭಾರತಿ ಸ್ವಾಮೀಜಿ ಮಾತನಾಡಿ, ʼಶಿವಾಜಿ ಮಹಾರಾಜರ ನಡೆದಾಡುವ ವಿಶ್ವವಿದ್ಯಾಲಯವಾಗಿದ್ದರು ಎಂದು ಡಾ.ಬಾಬಾ ಸಾಹೇಬ ಅಂಬೇಡ್ಕರ್‌ ಅವರು ಹೇಳಿದ್ದರು. ಕೇವಲ ಮೂರ್ತಿ ಸ್ಥಾಪನೆ ಮಾಡಿದರೆ ಸಲ್ಲದು ಅದರ ಜೊತೆಗೆ ಸಮಾಜದ ಏಳಿಗೆಗೆ ಶ್ರಮಿಸಬೇಕುʼ ಎಂದು ಕರೆ ನೀಡಿದರು.

ʼಶಿವಾಜಿ ಮಹಾರಾಜರು ಜನಿಸಿ 396 ವರ್ಷಗಳು ಕಳೆದರೂ ಇಂದಿಗೂ ಹಳ್ಳಿ-ಹಳ್ಳಿಗಳಲ್ಲಿ ಅವರ ಪುತ್ಥಳಿ ಸ್ಥಾಪನೆಯಾಗುತ್ತಿವೆ ಎಂದರೆ ಅವರ ಹೋರಾಟದ ಮಾದರಿ ಜನರ ಹೃದಯದಲ್ಲಿ ಅಚ್ಚಳಿಯದೆ ಉಳಿದಿದೆ ಎಂದರ್ಥʼ ಎಂದರು.

ಪುಣೆಯ ಪೂಜ್ಯ ದಾದಾ ಮಹಾರಾಜ್ ನಗರಕರ್ ಮಾತನಾಡಿ, ʼಬೀದರ ಜಿಲ್ಲೆಯಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಸಂಶೋಧನಾ ಕೇಂದ್ರ ಸ್ಥಾಪನೆಯಾಗಬೇಕು. ಈ ಕುರಿತು ರಾಜ್ಯದ ಅರಣ್ಯ ಜೀವಿಶಾಸ್ತ್ರ ಪರಿಸರ ಹಾಗೂ ಬೀದರ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆಯವರು ವಿಧಾನಸಭೆಯಲ್ಲಿ ಧ್ವನಿ ಎತ್ತಲಿʼ ಎಂದು ತಿಳಿಸಿದರು.

1002478540

ಬೀದರ ಚಿದಂಬರ ಆಶ್ರಮದ ಪೂಜ್ಯ ಡಾ.ಶಿವಕುಮಾರ ಮಹಾಸ್ವಾಮಿ ಮಾತನಾಡಿ, ʼಜಾತಿ ವ್ಯವಸ್ಥೆಯೇ ನಮ್ಮ ದೇಶವನ್ನು ಹಾಳು ಮಾಡಿದೆ. ಸ್ವಾರ್ಥಕ್ಕಾಗಿ ಜನಪ್ರತಿನಿಧಿಗಳು ಒಡೆದಾಳುವ ನೀತಿ ಅನುಸರಿಸುವುದು ಸಲ್ಲದು. ಹಿಮಾಲಯದಿಂದ ಹಿಂದೂ ಮಹಾಸಾಗರದವರೆಗೆ ಜೀವಿಸುವ ಪ್ರತಿಯೊಬ್ಬರೂ ಹಿಂದೂಗಳೇ ಆಗಿದ್ದಾರೆʼ ಎಂದು ಪ್ರತಿಪಾದಿಸಿದರು.

ಸಮಾಜದ ಮುಖಂಡರಾದ ಪದ್ಮಾಕರ ಪಾಟೀಲ ಮಾತನಾಡಿ, ʼಶಿವಾಜಿ ಮಹಾರಾಜರು ಕೇವಲ ಮರಾಠರಿಗೆ ಸೀಮಿತವಲ್ಲ. ಅವರು ಇಡೀ ದೇಶದ ಜನತೆಯ ಸ್ವಾಭಿಮಾನದ ಸಂಕೇತವಾಗಿದ್ದಾರೆ. ಸಾಗರ ಖಂಡ್ರೆಯವರು ಮರಾಠಾ ಸಮಾಜದ ಕೈಹಿಡಿದರೆ ನಾವು ಅವರನ್ನು ನಿರಂತರವಾಗಿ ಕೈಹಿಡಿಯುತ್ತೇವೆ. ಮರಾಠರಿಗೆ ರಾಜಕೀಯ ಸ್ಥಾನಮಾನ ಸಿಗಬೇಕು. ಬಡತನ ತೊಲಗಬೇಕು. ಸಮಾಜದಲ್ಲಿ ಐಕ್ಯತೆ ಮೂಡಬೇಕುʼ ಎಂದು ತಿಳಿಸಿದರು.

ಇದನ್ನೂ ಓದಿ : ಬೀದರ್‌ | ಮೇ 23, 24ರಂದು ಬಸವಗಿರಿಯಲ್ಲಿ ʼಬಸವೋತ್ಸವʼ : ಪ್ರಭುದೇವ ಸ್ವಾಮೀಜಿ

ಶಿವಚರಿತ್ರೆಕಾರರಾದ ಪ್ರೇರಣಾತಾಯಿ ತೋರಣಾ, ಎಂಎಲ್‌ಸಿ ಎಂ.ಜಿ.ಮುಳೆ, ಕಾರ್ಯಕ್ರಮದ ಅಧ್ಯಕ್ಷರಾದ ಖಂಡೋಬಾ ಕೊಂಡಿಬಾರಾವ ಶಿಂಧೆ, ಉಪಾಧ್ಯಕ್ಷ ಪಂಡಿತ ಜಾಧವ್, ಮುಖಂಡರಾದ ಅಶೋಕರಾವ ಸೋಂಜೆ, ಹಣಮಂತರಾವ ಚವ್ಹಾಣ, ಸಂದೀಪ ತೇಲಗಾಂವಕರ್, ಕಿಶನರಾವ ಪಾಟೀಲ ಇಂಚೂರಕರ್, ಬಾಬುರಾವ ಕಾರಬಾರಿ, ಈಶ್ವರಸಿಂಗ್ ಠಾಕೂರ್, ಜನಾರ್ಧನ ಬಿರಾದಾರ, ದಿಗಂಬರ ಮಾನಕಾರಿ, ವೆಂಕಟರಾವ ಮಾಯಿಂದೆ, ನಾರಾಯಣ ಗಣೇಶ, ಬಲಭೀಮ ಥೋರಾತ್, ವೆಂಕಟರಾವ ಕುಲಕರ್ಣಿ, ಡಾ.ಸುಕಾನಂದ ಡಾವರಗಾಂವೆ, ಸಕಲ ಮರಾಠಾ ಸಮಾಜದ ಸಂಯೋಜಕ ಪ್ರದೀಪ ಬಿರಾದಾರ, ವಿನೋದ ಥೋರಾತ್, ಅಂಬಾದಾಸ ಸೇರಿದಂತೆ ಗಣ್ಯರು, ಗ್ರಾಮಸ್ಥರು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ |ಅಕ್ಕಮಹಾದೇವಿ ಮಹಿಳಾ ವಿವಿಯಲ್ಲಿ ಸಂಶೋಧನಾ ಹುದ್ದೆಗಳಿಗೆ ಅರ್ಜಿ ಆಹ್ವಾನ

ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ...

ಮಂಡ್ಯ | ಯಶಸ್ವಿಯಾಗಿ ನಡೆದ ಉಚಿತ ಆರೋಗ್ಯ ತಪಾಸಣೆ ಮತ್ತು ರಕ್ತದಾನ ಶಿಬಿರ

ಮಂಡ್ಯ ತಾಲೂಕು ಹೊಳಲು ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ...

ಅಕ್ರಮ ಮಾದಕವಸ್ತು ಸಾಗಣೆ ಜಾಲ ಭೇದಿಸಿದ NCB; ನಾಲ್ವರ ಬಂಧನ!

ರಾಷ್ಟ್ರ ರಾಜಧಾನಿ ದೆಹಲಿಯಿಂದ ಕಾಶ್ಮೀರ ಕಣಿವೆಗೆ ಅಕ್ರಮವಾಗಿ ಔಷಧೀಯ ಮಾದಕವಸ್ತುಗಳನ್ನು ಪೂರೈಸುತ್ತಿದ್ದ...

ವಿಜಯಪುರ |ಬೆಳಕಿನ ಹಬ್ಬದ ಸಂಭ್ರಮದೊಂದಿಗೆ ಸಂವಿಧಾನದ ಮೌಲ್ಯಗಳ ಜಾಗೃತಿ

ಬೆಳಕಿನ ಹಬ್ಬದ ಸಂಭ್ರಮದ ನಡುವೆಯೇ ಸಂವಿಧಾನದ ಆಶಯ, ಸಮಾನತೆ, ಸ್ವಾತಂತ್ರ್ಯ ಹಾಗೂ...