ಬೀದರ್‌ | ಬಿಸಿಯೂಟ ಯೋಜನೆಯ ಜವಾಬ್ದಾರಿ ಅಡುಗೆ ನೌಕರರಿಗೆ ವಹಿಸಿ: ಸಿಐಟಿಯು ಆಗ್ರಹ

Date:

ಸರ್ಕಾರಿ, ಅನುದಾನಿತ ಶಾಲೆಗಳಲ್ಲಿ ಬಿಸಿಯೂಟ ಯೋಜನೆಯ ನಿರ್ವಹಣೆಯ ಜವಾಬ್ದಾರಿಯನ್ನು ಶಿಕ್ಷಕರ ಬದಲಿಗೆ ಅಡುಗೆ ನೌಕರರಿಗೆ ವಹಿಸಬೇಕು ಹಾಗೂ ಸೆಂಟ್ರಲ್ ಕ್ಲಸ್ಟರ್ ಕಿಚನ್ ಪದ್ಧತಿಯನ್ನು ಕೈಬಿಡಬೇಕು ಎಂದು ಅಕ್ಷರ ದಾಸೋಹ ನೌಕರರ ಸಂಘದ (ಸಿಐಟಿಯು) ಜಿಲ್ಲಾ ಸಮಿತಿ ಆಗ್ರಹಿಸಿದೆ.

- Advertisement -

ಶಿಕ್ಷಕರು ಶಾಲಾ ಪಠ್ಯಕ್ರಮದ ಬೋಧನೆಗೆ ಹೆಚ್ಚಿನ ಗಮನಹರಿಸಬೇಕು. ಬಿಸಿಯೂಟ ಯೋಜನೆಯ ಸಂಪೂರ್ಣ ನಿರ್ವಹಣೆಯ ಜವಾಬ್ದಾರಿಯನ್ನು ಅಡುಗೆ ನೌಕರರಿಗೆ ವಹಿಸಬೇಕು. ಅಗತ್ಯವಿದ್ದರೆ ಅವರ ಕೆಲಸದ ಅವಧಿಯನ್ನು ವಿಸ್ತರಿಸಬೇಕು. ಅಡುಗೆ ನೌಕರರಲ್ಲಿ ಎಸ್‌ಎಸ್‌ಎಲ್‌ಸಿ, ಪಿಯುಸಿ ಹಾಗೂ ಪದವೀಧರರೂ ಇರುವುದರಿಂದ ಯೋಜನೆಯನ್ನು ಸಮರ್ಥವಾಗಿ ನಿರ್ವಹಿಸುವ ಸಾಮರ್ಥ್ಯ ಮತ್ತು ಅನುಭವ ಅವರಿಗಿದೆ ಎಂದು ಸಂಘದ ಮನವಿಯಲ್ಲಿ ತಿಳಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಒಬಿಸಿ ಮೀಸಲಾತಿ ಮತ್ತು ಕೆನೆಪದರ: ಸುಪ್ರೀಂನ ಮಾರ್ಚ್ ತೀರ್ಪಿನ...

ಒಬಿಸಿ ಮೀಸಲಾತಿ ಸೌಲಭ್ಯ ಪಡೆಯಲು 'ಕೆನೆಪದರ' ನಿರ್ಧರಿಸುವಾಗ ಕೇವಲ ಪೋಷಕರ ವಾರ್ಷಿಕ ವೇತನವನ್ನೇ ಏಕೈಕ ಮಾನದಂಡವಾಗಿ ಪರಿಗಣಿಸುವಂತಿಲ್ಲ ಎಂದು ಸುಪ್ರೀಂ ಕೋರ್ಟ್ ತನ್ನ ಮಾರ್ಚ್ ತೀರ್ಪನ್ನು ಪುನರುಚ್ಚರಿಸಿದೆ. 1993ರ ಮೂಲ ನಿಯಮಗಳೇನು? ಕೆಳಹಂತದ...

ಮೈಕ್ರೋಸಾಫ್ಟ್‌ ಸರ್ವರ್ ಕ್ರಾಶ್; ತಲ್ಲಣಗೊಂಡ ಆನ್‌ ಲೈನ್‌ ಜಗತ್ತು!

ಆಧುನಿಕ ಕಚೇರಿ ವ್ಯವಹಾರ ಮತ್ತು ಡಿಜಿಟಲ್ ಸಂವಹನದ ಬೆನ್ನೆಲುಬಂತಿರುವ ತಂತ್ರಜ್ಞಾನ ದೈತ್ಯ ಮೈಕ್ರೋಸಾಫ್ಟ್‌ನ ಸರ್ವರ್‌ಗಳಲ್ಲಿ ಕಾಣಿಸಿಕೊಂಡ ಅನಿರೀಕ್ಷಿತ ತಾಂತ್ರಿಕ ದೋಷವು ಜಾಗತಿಕ ಮಟ್ಟದಲ್ಲಿ ಭಾರಿ ಅಲ್ಲೋಲಕಲ್ಲೋಲ ಸೃಷ್ಟಿಸಿದೆ. ಗುರುವಾರ (ನವೆಂಬರ್ 12) ಸಂಜೆಯಿಂದ...

ಸ್ಮರಣೆ | ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳಿಗೇ ಜೈಲುಶಿಕ್ಷೆ ವಿಧಿಸಿ,...

ನ್ಯಾಯಮೂರ್ತಿಗಳ ವಿರುದ್ಧ ಜಾತಿ ತಾರತಮ್ಯದ ಆರೋಪ ಮಾಡಿ, ನ್ಯಾಯಾಂಗದೊಂದಿಗಿನ ಸಂಘರ್ಷ ನಡೆಸಿ, ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿಗೇ ಐದು ವರ್ಷಗಳ ಶಿಕ್ಷೆಯ ಆದೇಶ ಹೊರಡಿಸಿ, ಕೊನೆಗೆ ತಾವೇ ಆರು ತಿಂಗಳ ಜೈಲುವಾಸ ಅನುಭವಿಸಿದ್ದವರು,...

ಅಡುಗೆಗೆ ಅಗತ್ಯವಾದ ಮೊಟ್ಟೆಗಳನ್ನು ಕುಕ್ಕುಟ ಮಹಾಮಂಡಳಿಯ ಮೂಲಕ ಶಾಲೆಗಳಿಗೆ ನೇರವಾಗಿ ಸರಬರಾಜು ಮಾಡಲು ಕ್ರಮ ಕೈಗೊಳ್ಳಬೇಕು. ಖಾಸಗಿ ಹಾಗೂ ಧಾರ್ಮಿಕ ಸಂಸ್ಥೆಗಳ ಪಾಲ್ಗೊಳ್ಳುವಿಕೆಗೆ ಅವಕಾಶ ಕಲ್ಪಿಸುವ ಸಾಧ್ಯತೆಯಿರುವ ಸೆಂಟ್ರಲ್ ಕ್ಲಸ್ಟರ್ ಕಿಚನ್ ಪದ್ಧತಿಯನ್ನು ಯಾವುದೇ ಕಾರಣಕ್ಕೂ ಜಾರಿಗೊಳಿಸಬಾರದು ಎಂದು ಒತ್ತಾಯಿಸಿದೆ.

ಶಾಲೆಗಳಲ್ಲಿಯೇ ಬಿಸಿಯೂಟ ತಯಾರಿಸುವ ಬದಲಿಗೆ ಕ್ಲಸ್ಟರ್ ಕಿಚನ್ ಸೆಂಟರ್‌ಗಳನ್ನು ಆರಂಭಿಸಿದರೆ, ಈಗಾಗಲೇ ಕಾರ್ಯನಿರ್ವಹಿಸುತ್ತಿರುವ ಅಡುಗೆ ನೌಕರರು ಉದ್ಯೋಗ ಕಳೆದುಕೊಳ್ಳುವ ಆತಂಕವಿದೆ. ಇದರಿಂದ ಅವರ ಕುಟುಂಬಗಳು ಸಂಕಷ್ಟಕ್ಕೆ ಸಿಲುಕಲಿವೆ. ಆದ್ದರಿಂದ ಸರ್ಕಾರ ಈ ಪದ್ಧತಿಯನ್ನು ಜಾರಿಗೊಳಿಸುವ ನಿರ್ಧಾರದಿಂದ ಹಿಂದೆ ಸರಿಯಬೇಕು ಎಂದು ಮನವಿ ಮಾಡಿದೆ.

ಇದಲ್ಲದೆ, ಬಿಸಿಯೂಟ ನೌಕರರಿಗೆ ಕೇಂದ್ರ ಸರ್ಕಾರ ನೀಡುತ್ತಿದ್ದ ₹1,000 ತಡೆಹಿಡಿಯಲಾಗಿದ್ದು, ರಾಜ್ಯ ಸರ್ಕಾರದಿಂದಲೂ ಎರಡು ತಿಂಗಳ ಗೌರವಧನ ಮಾತ್ರ ಪಾವತಿಯಾಗಿದೆ. ಬಾಕಿ ಗೌರವಧನವನ್ನು ಕೂಡಲೇ ಬಿಡುಗಡೆ ಮಾಡಬೇಕು. ಗೌರವಧನವನ್ನು ಕಾರ್ಮಿಕ ವೇತನದ ಮಾದರಿಯಲ್ಲಿ ಜಾರಿಗೊಳಿಸಬೇಕು. ನೌಕರರ ಸೇವೆಯನ್ನು ಖಾಯಂಗೊಳಿಸಬೇಕು, ಹೆರಿಗೆ ರಜೆ ಮಂಜೂರು ಮಾಡಬೇಕು ಹಾಗೂ ಆಕಸ್ಮಿಕವಾಗಿ ಮರಣ ಹೊಂದಿದ ನೌಕರರ ಕುಟುಂಬದ ಸದಸ್ಯರಿಗೆ ಅದೇ ಹುದ್ದೆಯಲ್ಲಿ ಉದ್ಯೋಗ ನೀಡಬೇಕು ಎಂದು ಆಗ್ರಹಿಸಿದೆ.

WhatsApp Image 2026 11 13 at 8.18.17 PM 1

ಈ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ನ.16ರಂದು ಕೆಲಸ ಸ್ಥಗಿತಗೊಳಿಸಿ ಜಿಲ್ಲಾ ಪಂಚಾಯಿತಿ ಕಚೇರಿ ಎದುರು ಪ್ರತಿಭಟನೆ ನಡೆಸಲು ಸಂಘ ನಿರ್ಧರಿಸಿದೆ. ಈ ಪತ್ರವನ್ನು ಮುನ್ಸೂಚನಾ ಪತ್ರವೆಂದು ಪರಿಗಣಿಸಬೇಕು ಎಂದು ಜಿಲ್ಲಾ ಸಮಿತಿ ತಿಳಿಸಿದೆ.

ಈ ಸಂದರ್ಭದಲ್ಲಿ ಅಕ್ಷರ ದಾಸೋಹ ಜಿಲ್ಲಾ ಅಧ್ಯಕ್ಷೆ ಪುಷ್ಪಾ ಮಜಗೆ, ಕಾರ್ಯದರ್ಶಿ ರೇಖಾ ಹಮೀಲಾಫುರೆ, ಖಜಾಂಚಿ ರುಕ್ಮಿಣಿ ರತನ್, ಜನವಾದಿ ಮಹಿಳಾ ಸಂಘಟನೆಯ ಸಾವಿತ್ರಿಬಾಯಿ ಚಿಕ್ಕಮಠ, ಫರ್ಜಾನಾ ಬೇಗಂ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಇದನ್ನೂ ಓದಿ : ʼಈದಿನʼ ವರದಿ ಫಲಶೃತಿ | ಬೀದರ್ ವಿವಿ: ಪಿಜಿ ತರಗತಿ ಪುನರಾರಂಭ ದಿನಾಂಕ ಮುಂದೂಡಿಕೆ

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಐಐಟಿ ರೂರ್ಕಿ ವಿದ್ಯಾರ್ಥಿ ಆತ್ಮಹತ್ಯೆ: 70 ಪರೀಕ್ಷೆಗಳು ನವೆಂಬರ್ 22ಕ್ಕೆ ಮುಂದೂಡಿಕೆ! 

ಪ್ರತಿಷ್ಠಿತ ಭಾರತೀಯ ತಂತ್ರಜ್ಞಾನ ಸಂಸ್ಥೆ (IIT) ರೂರ್ಕಿಯ 20 ವರ್ಷದ ವಿದ್ಯಾರ್ಥಿಯೊಬ್ಬರು...

NCP ಬಣಗಳ ವಿಲೀನ : ಸುನೇತ್ರ ಪವಾರ್‌ ವಿರೋಧ, ಸುಪ್ರಿಯಾ ಸುಳೆ ಪೂರ್ಣ ವಿರಾಮ

ಮಹಾರಾಷ್ಟ್ರದ ಎನ್‌ಸಿಪಿಯ ಎರಡು ಬಣಗಳ ವಿಲೀನದ ಬಗ್ಗೆ ಊಹಾಪೋಹಗಳಿಗೆ ಸುನೇತ್ರ ಪವಾರ್‌...

ಬಿಜೆಪಿ ಆಡಳಿತದಲ್ಲಿ ಭಾರತ ಈಗ ಪ್ರಜಾಪ್ರಭುತ್ವ ದೇಶವಾಗಿ ಉಳಿದಿಲ್ಲ: ರಾಹುಲ್ ಗಾಂಧಿ ವಾಗ್ದಾಳಿ

ಬಿಜೆಪಿ ಆಡಳಿತದಲ್ಲಿ ಭಾರತವು ಈಗ ಪ್ರಜಾಪ್ರಭುತ್ವವಾಗಿ ಉಳಿದಿಲ್ಲ ಎಂದು ಲೋಕಸಭೆಯ ವಿರೋಧ...

ದಾವಣಗೆರೆ | ಸಮಾಜವಾದಿ ಸಮಾಜ ನಿರ್ಮಾಣಕ್ಕೆ ರಷ್ಯಾ ಕ್ರಾಂತಿ ಪ್ರೇರಣೆ: ಪಿ ಷಣ್ಮುಖಸ್ವಾಮಿ

ಜಗತ್ತಿನ ಬಹುತೇಕ ದೇಶಗಳ ಸಮಾಜವಾದಿ ಸಮಾಜ ನಿರ್ಮಾಣಕ್ಕೆ ರಷ್ಯಾ ದೇಶ ಪ್ರೇರಣೆಯಾಗಿದೆ...