ಬೀದರ್‌ | ಪರಿಸರ ಸಂರಕ್ಷಣೆ ನಮ್ಮೆಲ್ಲರ ಹೊಣೆ

Date:

ನಾವೆಲ್ಲರೂ ಒಂದೊಂದು ಗಿಡವನ್ನು ಕನಿಷ್ಠ 3 ವರ್ಷಗಳ ಕಾಲ ಕಾಳಜಿಯಿಂದ ಬೆಳೆಸಿದರೆ ಅದು ನಮ್ಮನ್ನು ನೂರು ವರ್ಷಗಳವರೆಗೆ ಕಾಪಾಡುತ್ತದೆ. ಪರಿಸರ ಸಂರಕ್ಷಣೆ ಮಾಡುವುದು ನಮ್ಮೆಲ್ಲರ ಹೊಣೆಯಾಗಿದೆ ಎಂದು ಬಸವಕಲ್ಯಾಣದ ಪ್ರಧಾನ ಸಿವಿಲ್ ನ್ಯಾಯಾಧೀಶ ಹನುಮಂತರಾಯ ಕುಲಕರ್ಣಿ ಹೇಳಿದರು.

- Advertisement -

ಬಸವಕಲ್ಯಾಣ ತಾಲೂಕಿನ ಜವಾಹರ್ ನವೋದಯ ವಿದ್ಯಾಲಯದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ತಾಲೂಕು ವಕೀಲರ ಸಂಘ ಹಾಗೂ ವಲಯ ಅರಣ್ಯಾಧಿಕಾರಿಗಳ ಕಚೇರಿ ಸಹಯೋಗದಲ್ಲಿ ಶುಕ್ರವಾರ ಆಯೋಜಿಸಿದ್ದ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ರಾಮಲೀಲೆಗಳಲ್ಲಿ ರಾಮ, ಹನುಮ, ಲಕ್ಷ್ಮಣ ಪಾತ್ರಗಳಲ್ಲಿ ದಾನಿಶ್ –...

ರಾಮನಾಗಿ ದಾನಿಶ್. ಹನುಮಂತನಾಗಿ ಯೂನುಸ್. ಲಕ್ಷ್ಮಣನಾಗಿ ಶೇರ್ ಖಾನ್. ರಾವಣನಾಗಿ ಇಕ್ಬಾಲ್ ಅಹ್ಮದ್. ಇವರೆಲ್ಲರೂ ಮುಸ್ಲಿಂ ಕಲಾವಿದರು. ಆದರೆ, ಇವರು ಅಭಿನಯಿಸಿರುವುದು ಹಿಂದುಗಳ ಮಹಾಕಾವ್ಯ ರಾಮಾಯಣದ ಪಾತ್ರಗಳಲ್ಲಿ. ಉತ್ತರ ಭಾರತದ ಹಲವು ರಾಮಲೀಲೆಗಳಲ್ಲಿ...

ಅಮೆರಿಕದ ಮಧ್ಯಂತರ ಚುನಾವಣೆ: ಬೆಲೆ ಏರಿಕೆ, ಇರಾನ್ ಯುದ್ಧದ...

ಅಮೆರಿಕದಲ್ಲಿ ಏರುತ್ತಿರುವ ಪೆಟ್ರೋಲ್ ಬೆಲೆ, ದುಬಾರಿಯಾಗುತ್ತಿರುವ ದಿನಬಳಕೆಯ ವಸ್ತುಗಳು ಹಾಗೂ ಇರಾನ್ ವಿರುದ್ಧದ ಯುದ್ಧದ ಆರ್ಥಿಕ ಪರಿಣಾಮಗಳು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆಡಳಿತಕ್ಕೆ ದೊಡ್ಡ ರಾಜಕೀಯ ಸವಾಲಾಗಿವೆ. ನವೆಂಬರ್ 3ರಂದು ನಡೆಯಲಿರುವ ಮಧ್ಯಂತರ...

ಖಾಲಿದ್‌ರಂತೆ ಸಿಜೆಪಿ ನಾಯಕರನ್ನೂ ದೀರ್ಘ ಜೈಲುವಾಸದ ಸುಳಿಯಲ್ಲಿ ಸಿಲುಕಿಸುವ...

ಚುನಾವಣಾ ಆಯೋಗದ ಅಕ್ರಮ ಪ್ರಶ್ನಿಸಿದ ಸಿಜೆಪಿ ನಾಯಕರ ವಿರುದ್ಧ ಸರಣಿ ದೂರು ದಾಖಲಿಸಲಾಗುತ್ತಿದೆ. ಮೋದಿ ಸರ್ಕಾರದ ಅವಧಿಯಲ್ಲಿ ‘ವಿಚಾರಣೆಯೇ ಒಂದು ಶಿಕ್ಷೆ’ ಎನ್ನುವ ತಂತ್ರ ಪುನರಾವರ್ತನೆಯಾಗುತ್ತಿದೆಯೇ? ಉಮರ್‌ ಖಾಲಿದ್‌ ರೀತಿಯಲ್ಲೇ ಸೌರವ್ ದಾಸ್,...

ʼ1972ರಲ್ಲಿ ವಿಶ್ವಸಂಸ್ಥೆ ಕೈಗೊಂಡ ನಿರ್ಧಾರದಂತೆ ಪ್ರತಿ ವರ್ಷ ಜೂ.5ರಂದು ವಿಶ್ವ ಪರಿಸರ ದಿನವನ್ನು ಆಚರಿಸಲಾಗುತ್ತಿದೆ. ಪರಿಸರ ಸಂರಕ್ಷಣೆ ಹಾಗೂ ಸುಸ್ಥಿರ ಅಭಿವೃದ್ಧಿಯ ಉದ್ದೇಶದಿಂದ ಈ ದಿನಾಚರಣೆಗೆ ಚಾಲನೆ ನೀಡಲಾಗಿದೆ. ʼಮೂರು ವರ್ಷ ನನ್ನನ್ನು ಬೆಳೆಸು ನಾನು ನಿನ್ನನ್ನು ನೂರು ವರ್ಷ ಬೆಳೆಸುತ್ತೇನೆʼ ಎಂದು ಗಿಡ ಮನುಷ್ಯನಿಗೆ ಹೇಳುತ್ತದೆ. ಈ ನಿಟ್ಟಿನಲ್ಲಿ ಗಿಡ-ಮರ ಸಂರಕ್ಷಣೆಗೆ ಮುಂದಾಗೋಣʼ ಎಂದು ಕರೆ ನೀಡಿದರು.

ನ್ಯಾಯಾಧೀಶ ಜ್ಞಾನೇಶ್ವರ ವಿಠಲ ಮಾಳಗಿ ಮಾತನಾಡಿ, ʼಪ್ರತಿಯೊಬ್ಬ ವಿದ್ಯಾರ್ಥಿಯೂ ತನ್ನ ಹೆಸರಿನಲ್ಲಿ ಒಂದು ಗಿಡ ನೆಟ್ಟು ಅದನ್ನು ಸಂರಕ್ಷಿಸುವ ಮೂಲಕ ಪರಿಸರಕ್ಕೆ ಅಮೂಲ್ಯ ಕೊಡುಗೆ ನೀಡಬೇಕುʼ ಎಂದು ಕರೆ ನೀಡಿದರು.

WhatsApp Image 2026 06 05 at 2.51.24 PM

ಬಸವಕಲ್ಯಾಣ ಸಾಮಾಜಿಕ ವಲಯ ಅರಣ್ಯಾಧಿಕಾರಿ ಪ್ರೇಮಶೇಖರ್ ಮಾತನಾಡಿ, “ವಿಶ್ವದಲ್ಲಿ ಅರಣ್ಯ ನಾಶವಾಗುತ್ತಿದೆ, ಪರಿಸರ ಹಾಳಾಗುತ್ತಿದೆ. ಪ್ರತಿಯೊಬ್ಬ ವ್ಯಕ್ತಿ ಕೈಜೋಡಿಸಿದರೆ ಪರಿಸರ ಸಂರಕ್ಷಣೆ ಸಾಧ್ಯ. ಪ್ರತಿ ವರ್ಷ ಪರಿಸರ ಸಂರಕ್ಷಣೆಯ ಘನ ಉದ್ದೇಶವನ್ನು ಗಿಡ ನೆಡುವುದರ ಮೂಲಕ ಅದನ್ನು ನೆರವೇರಿಸಬೇಕು” ಎಂದು ವಿದ್ಯಾರ್ಥಿಗಳಿಗೆ ಕರೆ ಕೊಟ್ಟರು.

ಜವಾಹರ್ ನವೋದಯ ವಿದ್ಯಾಲಯದ ಪ್ರಾಚಾರ್ಯ ನಾಗರಾಜನ್ ಅವರು ಎಲ್ಲರಿಗೂ ಪರಿಸರ ಸಂರಕ್ಷಣೆಯ ಪ್ರತಿಜ್ಞಾ ವಿಧಿ ಬೋಧಿಸಿದರು.

ಇದನ್ನೂ ಓದಿ : ‘ಕಲ್ಯಾಣ’ದಲ್ಲಿ ಏಕೈಕ ಕೃಷಿ ಡಿಪ್ಲೋಮಾ ಕಾಲೇಜು : ಕೃಷಿಕರ ಮಕ್ಕಳಿಗೆ ಶೇ.50 ಸೀಟು ಮೀಸಲು

ಕಾರ್ಯಕ್ರಮದಲ್ಲಿ ಸರ್ಕಾರಿ ಅಭಿಯೋಜಕ ಬಾಲಾಜಿ ಆದೆಪ್ಪ, ಅರಣ್ಯಾಧಿಕಾರಿ ಶಿವಕುಮಾರ, ವಕೀಲರ ಸಂಘದ ಉಪಾಧ್ಯಕ್ಷೆ ರೇಣುಕಾ ಮಠಪತಿ, ಸಹಾಯಕ ಅಭಿಯೋಜಕಿ ಜಗದೇವಿ ಚೊಂಡೆ ಸೇರಿದಂತೆ ವಿದ್ಯಾಲಯದ ಉಪನ್ಯಾಸಕರಾದ ಲಕ್ಷ್ಮಿಕಾಂತ್ ದುದ್ದಣಿಗಿ, ಕೆ.ರಾಜೇಶಂ, ಪಿ.ಡಿ.ಶಹಾ, ಮದನ್ ಲಾಮತುರೆ, ಬಾಲಾಜಿ, ಅಲ್ಕಾದೇವಿ, ಸತೀಶಕುಮಾರ್ ಸ್ವಾಮಿ ಸೇರಿದಂತೆ ವಿದ್ಯಾರ್ಥಿಗಳು, ಸಿಬ್ಬಂದಿ ಭಾಗವಹಿಸಿದ್ದರು. ವಿದ್ಯಾಲಯದ ಲಕ್ಷ್ಮಿಕಾಂತ ಸ್ವಾಗತಿಸಿದರು. ಧರ್ಮಣ್ಣ ಚಿಟ್ಟಾ ನಿರೂಪಿಸಿದರು, ಮದನ್ ಲಾಮತುರೆ ವಂದಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಆರ್‌ಎಸ್‌ಎಸ್‌ ಕೇವಲ ಪುರುಷರಿರುವ ‘ಸಂವಿಧಾನ ವಿರೋಧಿ’ ಸಂಘಟನೆ: ರಾಹುಲ್ ಗಾಂಧಿ ವಾಗ್ದಾಳಿ

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್‌) ವಿರುದ್ಧ ಮಂಗಳವಾರ ತೀವ್ರ ವಾಗ್ದಾಳಿ ನಡೆಸಿರುವ...

ಅಪ್ರಾಪ್ತ ಮಗನ ಕಾರು ಅಪಘಾತದಲ್ಲಿ ಮೂವರ ಸಾವು; ತಂದೆ ವಿರುದ್ಧದ ಪ್ರಕರಣ ರದ್ದುಗೊಳಿಸಲು ಹೈಕೋರ್ಟ್ ನಕಾರ

ಅಪ್ರಾಪ್ತ ವಯಸ್ಸಿನ ಮಗನಿಗೆ ಕಾರು ಚಲಾಯಿಸಲು ಅವಕಾಶ ನೀಡಿದ ಆರೋಪ ಎದುರಿಸುತ್ತಿರುವ...

ರಾತ್ರೋರಾತ್ರಿ ತುರ್ತು ವಿಚಾರಣೆ ಕೋರಿ ದೆಹಲಿ ಹೈಕೋರ್ಟ್ ಮೊರೆಹೋದ ಸಿಜೆಪಿ ನಾಯಕರು

ತಮ್ಮ ನ್ಯಾಯಾಂಗ ಬಂಧನ ವಿಸ್ತರಣೆಯನ್ನು ಪ್ರಶ್ನಿಸಿ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ)...

ಹೊರದೇಶಗಳ ದೊಂಬಿಯನ್ನು ಭಾರತದ ಯುವ ಹೋರಾಟಕ್ಕೆ ಸಮೀಕರಿಸುತ್ತಿರುವ ʼಮಡಿಲ ಮಾಧ್ಯಮʼಗಳು; ಇದೇನಾ ಪತ್ರಿಕೋದ್ಯಮ?

ಹೊರದೇಶಗಳ ಬೀದಿಗಳಲ್ಲಿ ನಡೆಯುವ ದೊಂಬಿ, ಲೂಟಿಗೂ, ಭಾರತದ ಯುವಕರು ಸಂವಿಧಾನದತ್ತ ಹಕ್ಕಿಗಾಗಿ...