ಬೀದರ್‌ | ಅಧಿಕ ಶುಲ್ಕ: ಖಾಸಗಿ ಕಾಲೇಜುಗಳ ವಿರುದ್ಧ ಕ್ರಮಕ್ಕೆ ಕರವೇ ಆಗ್ರಹ

Date:

ವಿದ್ಯಾರ್ಥಿಗಳಿಂದ ಅಧಿಕ ಶುಲ್ಕ ಪಡೆಯುತ್ತಿರುವ ಜಿಲ್ಲೆಯ ಖಾಸಗಿ ಪದವಿಪೂರ್ವ ಕಾಲೇಜುಗಳ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆ ಪದಾಧಿಕಾರಿಗಳು ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರನ್ನು ಬೆಂಗಳೂರಿನಲ್ಲಿ ಭೇಟಿಯಾಗಿ ಮನವಿ ಪತ್ರ ಸಲ್ಲಿಸಿದರು.

- Advertisement -

“ಜಿಲ್ಲೆಯ ಕೆಲ ಖಾಸಗಿ ಶಿಕ್ಷಣ ಸಂಸ್ಥೆಗಳು ಸರ್ಕಾರದ ನಿಯಮ ಗಾಳಿಗೆ ತೋರುತ್ತಿವೆ. ನೀಟ್, ಕೆಸಿಇಟಿ, ಜೆಇಇ ತರಬೇತಿ ಹೆಸರಲ್ಲಿ ವಿದ್ಯಾರ್ಥಿಗಳಿಂದ ಲಕ್ಷಾಂತರ ರೂಪಾಯಿ ಶುಲ್ಕ ವಸೂಲಿ ಮಾಡುತ್ತಿವೆ ಎಂದು ವೇದಿಕೆಯ ಜಿಲ್ಲಾ ಘಟಕದ ಅಧ್ಯಕ್ಷ ಸೋಮನಾಥ ಮುಧೋಳ ಸಚಿವರಿಗೆ ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಅಧಿಕೃತ ಕೆಲಸಕ್ಕೆ WHATSAPP ವೆಬ್ ಅಪಾಯಕಾರಿ ಏಕೆ? ಗೃಹ...

ಕಚೇರಿ, ಸಾರ್ವಜನಿಕ ಅಥವಾ ಹಲವರು ಹಂಚಿಕೊಂಡು ಬಳಸುವ ಕಂಪ್ಯೂಟರ್‌ಗಳಲ್ಲಿ WHATSAPP ವೆಬ್ ಬಳಸುವವರಿಗೆ ಕೇಂದ್ರ ಗೃಹ ಸಚಿವಾಲಯ ಮಹತ್ವದ ಭದ್ರತಾ ಎಚ್ಚರಿಕೆ ನೀಡಿದೆ. ಸಚಿವಾಲಯದ ಅಧೀನದ ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರದ...

ಆನೆ ಓಡಿಸಲು ಜೇನುನೊಣ ಸಾಕು! ಏನಿದು ತಂತ್ರ?

ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದ ಕೃಷಿಕರು ಆನೆ ಹಾವಳಿ ತಡೆಗೆ ಸರಳ ಮತ್ತು ವಿನೂತನ ಪ್ರಯೋಗಕ್ಕೆ ಮುಂದಾಗಿದ್ದಾರೆ. ಆನೆ ಬರುವ ದಾರಿಯಲ್ಲಿ ಜೇನು ಪೆಟ್ಟಿಗೆಗಳನ್ನಿಟ್ಟು ಗಜಪಡೆಯನ್ನು ಹಿಮ್ಮೆಟ್ಟಿಸುವ ಮಾರ್ಗವಿದು. ಆನೆಗಳ ಸೊಂಡಿಲಿನ ಒಳಭಾಗ...

ವೈದ್ಯರಿಲ್ಲ, ಔಷಧವೂ ಇಲ್ಲ! ದಶಕ ಕಳೆದರೂ ಚೇತರಿಸದ ಗಜೇಂದ್ರಗಡ...

ಗಜೇಂದ್ರಗಡ ತಾಲೂಕು ಘೋಷಣೆಯಾಗಿ ದಶಕ ಕಳೆದರೂ ಇಂದಿಗೂ ಸಮುದಾಯ ಆರೋಗ್ಯ ಕೇಂದ್ರವನ್ನು ಮೇಲ್ದರ್ಜೆಗೆ ಏರಿಸಿಲ್ಲ. ವೈದ್ಯರ ಕೊರತೆ, ಅಗತ್ಯ ಔಷಧಿಗಳ ಕೊರತೆ, ಸಿಬ್ಬಂದಿಗಳ ಕೊರತೆ ಇರುವುದರಿಂದ, ಇಲ್ಲಿಗೆ ಬರುವ ರೋಗಿಗಳಿಗೆ ಸರಿಯಾದ ಚಿಕತ್ಸೆ,...

ಪೋಷಕರು ಶುಲ್ಕ ಕಟ್ಟಲು ವಿಳಂಬ ಮಾಡಿದರೆ ವಿದ್ಯಾರ್ಥಿಗಳ ಮೇಲೆ ಒತ್ತಡ ಹೇರಲಾಗುತ್ತಿದೆ. ಇದರಿಂದ ವಿದ್ಯಾರ್ಥಿಗಳು ಮಾನಸಿಕವಾಗಿ ಕುಗ್ಗುತ್ತಿದ್ದು, ಅವರಿಗೆ ಏಕಾಗ್ರತೆಯಿಂದ ವ್ಯಾಸಂಗ ಮಾಡಲು ಸಾಧ್ಯವಾಗುತ್ತಿಲ್ಲ ಎಂದು ದೂರಿದರು.

ಜಿಲ್ಲೆಯ ಶಾಲಾ ಶಿಕ್ಷಣ ಇಲಾಖೆಯಲ್ಲಿ ಉಪ ನಿರ್ದೇಶಕ, ವಿಷಯ ಪರಿವೀಕ್ಷಕ ಸೇರಿ 14 ಹುದ್ದೆಗಳು ಖಾಲಿ ಇರುವ ಕಾರಣ ಶೈಕ್ಷಣಿಕ ಪ್ರಗತಿಗೆ ಹಿನ್ನಡೆಯಾಗುತ್ತಿದೆ. ಇಲಾಖೆಗೆ ಮಂಜೂರಾದ 42 ಹುದ್ದೆಗಳ ಪೈಕಿ 28 ಸಿಬ್ಬಂದಿ ಮಾತ್ರ ಇದ್ದಾರೆ. ಸಿಬ್ಬಂದಿ ಕೊರತೆಯಿಂದ ಇರುವ ಸಿಬ್ಬಂದಿ ಮೇಲೆ ಕೆಲಸದ ಭಾರ ಹೆಚ್ಚಾಗಿದೆ. ಯಾರಾದರೂ ರಜೆ ಪಡೆದರೆ ಒತ್ತಡದಲ್ಲಿ ಕಾರ್ಯನಿರ್ವಹಿಸುವಂತಾಗಿದೆ. ಕಡತಗಳ ವಿಲೇವಾರಿ ಮೇಲೆ ಪರಿಣಾಮ ಉಂಟಾಗುತ್ತಿದೆ ಎಂದು ತಿಳಿಸಿದರು.

ಜಿಲ್ಲೆಯ ಶೈಕ್ಷಣಿಕ ಅಭಿವೃದ್ಧಿಯ ಹಿತದೃಷ್ಟಿಯಿಂದ ಖಾಲಿ ಇರುವ  ಎಲ್ಲ ಹುದ್ದೆಗಳನ್ನು ಕೂಡಲೇ ಭರ್ತಿ ಮಾಡಬೇಕು ಎಂದು ಬೇಡಿಕೆ ಮಂಡಿಸಿದರು. ತಮ್ಮ ಮನವಿಗೆ ಸಚಿವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ಶಾಲಾ ಶಿಕ್ಷಣ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿ ಹಾಗೂ ಅಧಿಕ ಶುಲ್ಕ ಪಡೆಯುತ್ತಿರುವ ಖಾಸಗಿ ಕಾಲೇಜುಗಳ ವಿರುದ್ಧ ಕ್ರಮ ಕೈಗೊಳ್ಳುವ ಭರವಸೆ ನೀಡಿರುವುದಾಗಿ ತಿಳಿಸಿದ್ದಾರೆ.

ಇದನ್ನೂ ಓದಿ : ಬೀದರ್‌ | ಮಲ್ಲಿಕಾರ್ಜುನ ಖರ್ಗೆ ಭಾಷಣ ಮಾಡಿದ ಸ್ಥಳ ʼಶುದ್ಧೀಕರಣʼ ಮಾನವ ಸಮಾಜ ತಲೆತಗ್ಗಿಸುವ ಕೃತ್ಯ

ವೇದಿಕೆಯ ಸಾಮಾಜಿಕ ಜಾಲತಾಣ ವಿಭಾಗದ ರಾಜ್ಯ ಪ್ರಧಾನ ಸಂಚಾಲಕ ಸಚಿನ್ ಗಾಣಗೇರ, ಮುಖಂಡ ಗಣಪತಿ ಖಡಕೆ ಮತ್ತಿತರರು ಇದ್ದರು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಂಗಳೂರು | ವಾಣಿಜ್ಯ ಮಳಿಗೆಗಳಿಗೆ ರಾತ್ರಿ 11.45ರಿಂದ ಬೆಳಗ್ಗೆ 5.30ರವರೆಗೆ ನಿರ್ಬಂಧ!

ನಗರದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವುದು ಹಾಗೂ ತಡರಾತ್ರಿ ನಡೆಯುವ ಅಹಿತಕರ ಘಟನೆಗಳನ್ನು...

ಮಂಗಳೂರು | ಪ್ರತಿಭಟನಾಕಾರರ ಅಹವಾಲು ಆಲಿಸಲು ಸಚಿವರ ನಿಯೋಜನೆ: ಸಲೀಂ ಅಹ್ಮದ್

ಡಿಸೆಂಬರ್ 2ರಿಂದ 11ರವರೆಗೆ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಯಲಿರುವ ವಿಧಾನಮಂಡಲದ ಚಳಿಗಾಲದ...

ಅಧಿಕೃತ ಕೆಲಸಕ್ಕೆ WHATSAPP ವೆಬ್ ಅಪಾಯಕಾರಿ ಏಕೆ? ಗೃಹ ಸಚಿವಾಲಯದ ಎಚ್ಚರಿಕೆಯ ಹಿಂದಿನ ವಾಸ್ತವ

ಕಚೇರಿ, ಸಾರ್ವಜನಿಕ ಅಥವಾ ಹಲವರು ಹಂಚಿಕೊಂಡು ಬಳಸುವ ಕಂಪ್ಯೂಟರ್‌ಗಳಲ್ಲಿ WHATSAPP ವೆಬ್...