ಬೀದರ್ ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿ ಸಾರ್ವಜನಿಕರಿಗೆ ಕುಡಿಯುವ ನೀರಿಗೆ ಸಂಬಂಧಿಸಿದ ಸಮಸ್ಯೆಗಳು ಹಾಗೂ ದೂರುಗಳನ್ನು ಸ್ವೀಕರಿಸಿ, ತ್ವರಿತವಾಗಿ ಪರಿಹರಿಸುವ ಉದ್ದೇಶದಿಂದ ಜಿಲ್ಲಾ ಹಾಗೂ ತಾಲೂಕು ಮಟ್ಟದಲ್ಲಿ ಸಹಾಯವಾಣಿ ಸಂಖ್ಯೆಗಳನ್ನು ಪ್ರಕಟಿಸಲಾಗಿದೆ ಎಂದು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಕಾರ್ಯನಿರ್ವಾಹಕ ಅಭಿಯಂತರರು ತಿಳಿಸಿದ್ದಾರೆ.
ಗ್ರಾಮೀಣ ಪ್ರದೇಶದಲ್ಲಿ ಕುಡಿಯುವ ನೀರಿಗೆ ಸಂಬಂಧಿಸಿದ ಯಾವುದೇ ಸಮಸ್ಯೆ ಎದುರಾದಲ್ಲಿ ಸಾರ್ವಜನಿಕರು ಕೆಳಗಿನ ಸಹಾಯವಾಣಿ ಸಂಖ್ಯೆಗಳಿಗೆ ಕರೆ ಮಾಡಿ ದೂರು ದಾಖಲಿಸಬಹುದಾಗಿದೆ.
ಜಿಲ್ಲಾ ಮಟ್ಟದ ಸಂಖ್ಯೆ : 9480587444, ಔರಾದ್ (ಬಿ): 9845069667, ಕಮಲನಗರ: 9880913616, ಬಸವಕಲ್ಯಾಣ: 9975405793, ಹುಲಸೂರು: 7829528788, ಹುಮನಾಬಾದ್: 9448196206, ಚಿಟಗುಪ್ಪ: 9731572359, ಬೀದರ್: 7676725111, ಭಾಲ್ಕಿ: 9448196202
ಸಾರ್ವಜನಿಕರು ಕುಡಿಯುವ ನೀರಿಗೆ ಸಂಬಂಧಿಸಿದ ಸಮಸ್ಯೆಗಳನ್ನು ಈ ಸಹಾಯವಾಣಿ ಸಂಖ್ಯೆಗಳ ಮೂಲಕ ತಿಳಿಸಿ, ಸೂಕ್ತ ಪರಿಹಾರ ಪಡೆದುಕೊಳ್ಳುವಂತೆ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಕಾರ್ಯನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಇದನ್ನೂ ಓದಿ : ಕಲಬುರಗಿಯಲ್ಲಿ ಸೆ.27ರಂದು ಬಸವಾದಿ ಶರಣರ ಹಿಂದೂ ಸಮಾವೇಶ : ಕನೇರಿ ಸ್ವಾಮೀಜಿಗೆ ಅನುಮತಿ ಬೇಡ




