ಬೀದರ್| ಎಫ್‌ಐಡಿ ರದ್ದು, ರಸಗೊಬ್ಬರ ಕೊರತೆ ನಿವಾರಣೆಗೆ ರೈತ ಸಂಘ ಆಗ್ರಹ

Date:

ಬೀದರ್ ಜಿಲ್ಲೆಯಾದ್ಯಂತ ಉಂಟಾಗಿರುವ ರಸಗೊಬ್ಬರ ಕೊರತೆ ನಿವಾರಣೆ, ಎಫ್‌ಐಡಿ ವ್ಯವಸ್ಥೆ ರದ್ದುಪಡಿಸುವುದು ಹಾಗೂ ಕಾರಂಜಾ ಜಲಾಶಯದಿಂದ ಭೂಮಿ ಕಳೆದುಕೊಂಡ ಸಂತ್ರಸ್ತ ರೈತರಿಗೆ ಸೂಕ್ತ ಪರಿಹಾರ ಒದಗಿಸುವಂತೆ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ಆಗ್ರಹಿಸಿದೆ.

- Advertisement -

ಈ ಕುರಿತು ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದ ಸಂಘದ ಪದಾಧಿಕಾರಿಗಳು, ʼಪ್ರಸ್ತುತ ಸರ್ಕಾರ ಎಫ್‌ಐಡಿ ವ್ಯವಸ್ಥೆಯಡಿ ಕೇವಲ ಒಂದು ಚೀಲ ರಸಗೊಬ್ಬರ ಮಾತ್ರ ವಿತರಿಸಲು ಆದೇಶಿಸಿರುವುದು ರೈತರಿಗೆ ತೀವ್ರ ಅನಾನುಕೂಲ ಉಂಟುಮಾಡುತ್ತಿದೆʼ ಎಂದು ದೂರಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

ಬೆವರಿನ ಹಣಕ್ಕೆ ಮೋದಿ ಸರ್ಕಾರದ ಕಂಟಕ: ಹೊಸ ಪಿಎಫ್...

ತಮ್ಮದೇ ಬೆವರಿನ ಗಳಿಕೆ, ತುರ್ತು ಬದುಕಿನ ಆಸರೆ ಪಿಎಫ್. ಆದರೆ ಇಂದು ಆ ಹಣವನ್ನು ಪಡೆಯಲಾಗದೆ ಗಾರ್ಮೆಂಟ್ಸ್ ಕಾರ್ಮಿಕರು ಕಣ್ಣೀರು ಹಾಕುವಂತಾಗಿದೆ. ಬಟ್ಟೆ ಕಾರ್ಖಾನೆಗಳ ಶ್ರಮಿಕರ ಬದುಕಿಗೆ ಕೇಂದ್ರದ ಮೋದಿ ಸರ್ಕಾರದ ಹೊಸ...

“ಬೆಳೆಗಳಿಗೆ ಅಗತ್ಯವಿರುವಂತೆ 2-3 ಕ್ವಿಂಟಲ್ ರಸಗೊಬ್ಬರ ವಿತರಿಸಿದಾಗ ಮಾತ್ರ ರೈತರಿಗೆ ಅನುಕೂಲವಾಗುತ್ತದೆ. ಈಗಾಗಲೇ ಮಳೆಯ ಆರಂಭದೊಂದಿಗೆ ರಸಗೊಬ್ಬರದ ಕೊರತೆ ಎದ್ದು ಕಾಣುತ್ತಿದ್ದು, ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ತಕ್ಷಣವೇ ರಸಗೊಬ್ಬರ ಮಾರಾಟಗಾರರೊಂದಿಗೆ ಸಭೆ ನಡೆಸಿ, ರೈತರಿಗೆ ಬೇಕಾದಷ್ಟು ಗೊಬ್ಬರ ವಿತರಿಸಲು ಜಿಲ್ಲಾಡಳಿತ ಕ್ರಮ ಕೈಗೊಳ್ಳಬೇಕು” ಎಂದು ಒತ್ತಾಯಿಸಿದರು.ಇ

“ಕಾರಂಜಾ ಜಲಾಶಯ ನಿರ್ಮಾಣದಿಂದ ಭೂಮಿ ಕಳೆದುಕೊಂಡ ರೈತರು ನಿರಂತರ ಹೋರಾಟ ನಡೆಸುತ್ತಿದ್ದರೂ ಸರ್ಕಾರ ಸಂಪೂರ್ಣ ನಿರ್ಲಕ್ಷ್ಯ ವಹಿಸಿದೆ. ರೈತರ ಸಮಸ್ಯೆಗಳನ್ನು ಶೀಘ್ರದಲ್ಲೇ ಪರಿಹರಿಸದಿದ್ದರೆ ಮುಂದಿನ ದಿನಗಳಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ಉಗ್ರ ಹೋರಾಟ ಹಮ್ಮಿಕೊಳ್ಳಲಾಗುವುದು” ಎಂದು ಎಚ್ಚರಿಕೆ ನೀಡಿದರು.

ಇದನ್ನೂ ಓದಿ : ಈ ದಿನ ಸಂಪಾದಕೀಯ | ‘ಅಹಿಂದ’ ನಾಯಕನ ನಿರ್ಗಮನ

ಕರ್ನಾಟಕ ರಾಜ್ಯ ರೈತ ಸಂಘ ಹಸಿರು ಸೇನೆಯ ಜಿಲ್ಲಾಧ್ಯಕ್ಷ ಪ್ರವೀಣಕುಮಾರ್ ರೇಕುಳಗಿ, ಪ್ರಧಾನ ಕಾರ್ಯದರ್ಶಿ ಬಸು ಪಾಟೀಲ್ ನೇಲವಾಡ, ಬೀದರ ದಕ್ಷಿಣ ತಾಲೂಕು ಅಧ್ಯಕ್ಷ ಷಣ್ಮುಕಪ್ಪ ಶೇಖಾಪೂರ್, ಬೀದರ ನಗರ ಉಪಾಧ್ಯಕ್ಷ ಸಚಿನ್ ಕಾರಪಾಕಪಲ್ಲಿ, ದಕ್ಷಿಣ ಉಪಾಧ್ಯಕ್ಷ ಓಂಕಾರ್ ಸ್ವಾಮಿ ಬಾಪುರ್, ನೆಲವಾಡ ಗ್ರಾಮ ಅಧ್ಯಕ್ಷ ಮಹೇಶ್ ಬಿರಾದಾರ್, ಉಪಾಧ್ಯಕ್ಷ ಜ್ಞಾನೇಶ್ ಹಾಗೂ ರೈತ ಮುಖಂಡರಾದ ಶರಣಪ್ಪ ಖಾಶೇಂಪುರ, ವೀರೇಶ್ ಪಾಟೀಲ್, ಶುಭಾಷ್ ಚಿದ್ರೆ ಮತ್ತು ಚಂದು ರೆಡ್ಡಿ ಉಪಸ್ಥಿತರಿದ್ದರು

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಜಿಪಂ, ತಾಪಂ ಚುನಾವಣೆ: ಸಾಮಾಜಿಕ ಜಾಲತಾಣದಲ್ಲಿ ಆಕಾಂಕ್ಷಿಗಳ ಪ್ರಚಾರ ಜೋರು!

ರಾಜ್ಯದಲ್ಲಿ ಜಿಲ್ಲಾ ಹಾಗೂ ತಾಲ್ಲೂಕು ಪಂಚಾಯಿತಿ ಕ್ಷೇತ್ರವಾರು ಮೀಸಲಾತಿ ಪ್ರಕಟವಾಗುತ್ತಿದ್ದಂತೆ, ಬೀದರ್‌...

ಸಿಜೆಪಿ ನಾಯಕರ ಬಂಧನಕ್ಕೆ ತೀವ್ರ ಖಂಡನೆ: ತಕ್ಷಣ ರಾಂಕಾ, ಸೌರವ್ ಬಿಡುಗಡೆಗೆ ವಿಪಕ್ಷಗಳ ಆಗ್ರಹ

ಏಕಪಕ್ಷೀಯ ನಿರ್ಧಾರ ಕೈಗೊಂಡ ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್...

ಪತಿಯನ್ನು ಕೊಂದು ಕಾಂಕ್ರೀಟ್ ಡ್ರಮ್‌ನಲ್ಲಿ ಹೂತಿಟ್ಟ ಪ್ರಕರಣ: ಪತ್ನಿ, ಪ್ರಿಯಕರನಿಗೆ ಗಲ್ಲು ಶಿಕ್ಷೆ

ಮರ್ಚೆಂಟ್ ನೇವಿ ಅಧಿಕಾರಿ ಸೌರಭ್ ರಜಪೂತ್ ಅವರನ್ನು ಬರ್ಬರವಾಗಿ ಹತ್ಯೆಗೈದು, ಮೃತದೇಹವನ್ನು...

ಜಂತರ್ ಮಂತರ್ ಧರಣಿ ಸ್ಥಳ ರದ್ದತಿ ಖಂಡಿಸಿ ಎಸ್‌ಎಫ್‌ಐ, ಡಿವೈಎಫ್‌ಐ ಪ್ರತಿಭಟನಾ ಮೆರವಣಿಗೆ: ಹಲವು ನಾಯಕರು ಪೊಲೀಸ್ ವಶಕ್ಕೆ

ದೇಶದ ರಾಜಧಾನಿ ದೆಹಲಿಯ ಐತಿಹಾಸಿಕ 'ಜಂತರ್ ಮಂತರ್' ಅನ್ನು ಪ್ರಜಾಸತ್ತಾತ್ಮಕ ಪ್ರತಿಭಟನಾ...