ಬೀದರ್‌ | ಟನ್ ಕಬ್ಬಿಗೆ ₹2,950 ದರ ನೀಡಿ, ಕಬ್ಬಿನ ಬಿಲ್‌ ಶೀಘ್ರ ಪಾವತಿಸಿ : ರೈತರ ಆಗ್ರಹ

Date:

ಬೀದರ್‌ ಸಹಕಾರ ಸಕ್ಕರೆ ಕಾರ್ಖಾನೆ ಪುನಾರಂಭ, ಕಬ್ಬಿನ ಬಾಕಿ ಹಣ ಪಾವತಿ, ರೈತರ ಸಾಲಮನ್ನಾ ಹಾಗೂ ಸಹಕಾರ ಸಂಘಗಳಲ್ಲಿ ನಡೆಯುತ್ತಿರುವ ಅಕ್ರಮಗಳ ತನಿಖೆ ನಡೆಸುವಂತೆ ಸಂಯುಕ್ತ ಕಿಸಾನ್ ಮೋರ್ಚಾದ ಜಿಲ್ಲಾ ಘಟಕದ ಪದಾಧಿಕಾರಿಗಳು ಮಂಗಳವಾರ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಅವರಿಗೆ ಮನವಿ ಸಲ್ಲಿಸಿದರು.

- Advertisement -

ಕಳೆದ 2025ರ ಅಕ್ಟೋಬರ್ 12ರಿಂದ 18ರವರೆಗೆ ಅಂಬೇಡ್ಕರ್‌ ವೃತ್ತ ಸಮೀಪದ ಜಿಲ್ಲಾ ಉಸ್ತುವಾರಿ ಸಚಿವರ ಕಚೇರಿ ಎದುರು ಕಬ್ಬಿನ ದರ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಧರಣಿ ಸತ್ಯಾಗ್ರಹ ನಡೆಸಲಾಗಿತ್ತು. ನಂತರ ಜಿಲ್ಲಾಡಳಿತದ ಭರವಸೆ ಮೇರೆಗೆ ಧರಣಿ ಹಿಂಪಡೆಯಲಾಗಿತ್ತು. ಪ್ರತಿ ಟನ್ ಕಬ್ಬಿಗೆ ₹2,950 ದರ ನಿಗದಿಯಾದರೂ, ಸಕ್ಕರೆ ಕಾರ್ಖಾನೆ ಆಡಳಿತ ಮಂಡಳಿಗಳು ರೈತರಿಗೆ ಹಣ ಪಾವತಿಸಿಲ್ಲ. ಬಾಕಿ ಹಣವನ್ನು ಶೇ 18ರಷ್ಟು ಬಡ್ಡಿಯೊಂದಿಗೆ ಪಾವತಿಸಲು ಹಾಗೂ ತಪ್ಪಿತಸ್ಥರ ವಿರುದ್ಧ ಅಪರಾಧಿಕ ಪ್ರಕರಣ ದಾಖಲಿಸಬೇಕೆಂದು ರೈತ ಮುಖಂಡರು ಒತ್ತಾಯಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಲಬುರಗಿ | ‘ನಮ್ಮನ್ನ ಎಲ್ಲಿಗೆ ಕಳುಹಿಸುತ್ತೀರಿ?’: ತಗ್ಗಿನ ಬೇಲಿಯ...

92ಕ್ಕೂ ಅಧಿಕ ಸ್ಲಂ ಕುಟುಂಬಗಳ ಬದುಕು ಕೇವಲ ಜಮೀನಿನ ಹಕ್ಕಿನ ಪ್ರಶ್ನೆಯಲ್ಲ; ಅವರ ಸುರಕ್ಷಿತ ಓಡಾಟ, ಕುಡಿಯುವ ನೀರು ಹಾಗೂ ನಿತ್ಯದ ಬದುಕಿನ ಹಕ್ಕಿನ ಪ್ರಶ್ನೆಯೂ ಹೌದು. ನ್ಯಾಯಾಲಯದ ವಿಚಾರಣೆ ಅಂತಿಮಗೊಳ್ಳುವವರೆಗೆ ಯಾವುದೇ...

ಚುನಾವಣಾ ಆಯೋಗದ ಸಭೆ: ಪರಿಹಾರವಲ್ಲ, ತೇಪೆ ಹಚ್ಚುವ ಕಾರ್ಯಕ್ರಮ

ಅವೈಜ್ಞಾನಿಕ 'SIR' ಪ್ರಕ್ರಿಯೆ ಮತ್ತು ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಸಾರ್ವಜನಿಕವಾಗಿ ಬಯಲಾದ ಬೆನ್ನಲ್ಲೇ ಬಿಡುಗಡೆಯಾದ ಚುನಾವಣಾ ಆಯೋಗದ ಪತ್ರಿಕಾ ಪ್ರಕಟಣೆ, ತಪ್ಪುಗಳನ್ನು ತಿದ್ದುವ ಬದಲು ವ್ಯವಸ್ಥೆಯ ಲೋಪಗಳಿಗೆ ತೇಪೆ ಹಚ್ಚುವ ಯತ್ನದಂತೆ ಕಾಣುತ್ತಿದೆ. ದೇಶದ ಇತಿಹಾಸದಲ್ಲೇ...

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ...

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ ಮತ್ತು ಅದಕ್ಕೆ ಸಿಕ್ಕ ಸಾರ್ವಜನಿಕ ಚಪ್ಪಾಳೆಗಳು, ಕೇವಲ ಹಸಿವನ್ನೇ ಶ್ರಮದ ಇಂಧನವನ್ನಾಗಿ ನೋಡುವ ಸಮಾಜದ ಕ್ರೂರ ಮನಸ್ಥಿತಿಯನ್ನು ಅನಾವರಣಗೊಳಿಸುತ್ತವೆ. ಬಸವರಾಜ ಹೊರಟ್ಟಿ...

ಹುಮನಾಬಾದ್ ತಾಲೂಕಿನ ಹಳ್ಳಿಖೇಡ್ (ಬಿ) ಸಮೀಪದ ಬೀದರ ಸಹಕಾರ ಸಕ್ಕರೆ ಕಾರ್ಖಾನೆಯನ್ನು (ಬಿಎಸ್‌ಎಸ್‌ಕೆ) ನಿಯಮಬಾಹಿರವಾಗಿ ಮುಚ್ಚಲಾಗಿದ್ದು, ಕಾರ್ಖಾನೆಯನ್ನು ಪುನಾರಂಭಿಸಿ ಸರ್ಕಾರ ವಶಕ್ಕೆ ತೆಗೆದುಕೊಳ್ಳಬೇಕು, ಅಲ್ಲಿನ ಯಂತ್ರೋಪಕರಣಗಳು ಕಾಣೆಯಾಗಿರುವುದಾಗಿ ತಿಳಿದುಬಂದಿದ್ದು, ಈ ಕುರಿತು ತನಿಖೆ ನಡೆಸಬೇಕುʼ ಎಂದು ಆಗ್ರಹಿಸಿದ್ದಾರೆ.

ʼಕಾರ್ಖಾನೆಯ ಕಾರ್ಮಿಕರಿಗೆ ಸುಮಾರು ₹32 ಕೋಟಿ ವೇತನ ಬಾಕಿಯಿದ್ದು, ₹1.19 ಕೋಟಿ ಉಪಧಾನ ಪರಿಹಾರ ಬಾಕಿ ಉಳಿದಿರುವುದಾಗಿ ತಿಳಿದುಬಂದಿದೆ. ಈ ಬಾಕಿ ಹಣವನ್ನು ತಕ್ಷಣ ಪಾವತಿಸಲು ಕ್ರಮಕೈಗೊಳ್ಳಬೇಕು. ಜಿಲ್ಲೆಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳಲ್ಲಿ ಅಕ್ರಮಗಳು ನಡೆಯುತ್ತಿದ್ದು, ಅಷ್ಟೂರು, ಕಿಟ್ಟಾ ಹಾಗೂ ನಂದಗಾಂವ ಪ್ರದೇಶಗಳಲ್ಲಿ ನಡೆದಿರುವ ಪ್ರಕರಣಗಳ ಕುರಿತು ನಿಷ್ಪಕ್ಷಪಾತ ತನಿಖೆ ನಡೆಸಬೇಕುʼ ಎಂದು ಮನವಿಯಲ್ಲಿ ತಿಳಿಸಲಾಗಿದೆ.

ಅತಿವೃಷ್ಠಿ-ಅನಾವೃಷ್ಠಿಯಿಂದ ರೈತರ ಆರ್ಥಿಕ ಸ್ಥಿತಿ ಹದಗೆಟ್ಟಿರುವುದರಿಂದ, ಎಲ್ಲಾ ರೀತಿಯ ಸಾಲಮನ್ನಾ ಮಾಡಬೇಕು ಡಿಸಿಸಿ ಬ್ಯಾಂಕ್ ಹಾಗೂ ಸಕ್ಕರೆ ಕಾರ್ಖಾನೆಗಳಲ್ಲಿ ಖಾಸಗಿ ವ್ಯಕ್ತಿಗಳನ್ನು ವ್ಯವಸ್ಥಾಪಕ ನಿರ್ದೇಶಕರನ್ನಾಗಿ ನೇಮಕ ಮಾಡುವುದನ್ನು ಕೈಬಿಟ್ಟು, ಸರ್ಕಾರದ ಅಧಿಕಾರಿಗಳನ್ನು ನೇಮಕಕ್ಕೆ ಶಿಫಾರಸು ಮಾಡಬೇಕು. ಕಾರಂಜಾ ಆಣೆಕಟ್ಟಿನಿಂದ ಕಾಲುವೆಗಳಿಗೆ ನೀರು ಹರಿಸಲು ಕ್ರಮ ಕೈಗೊಳ್ಳಬೇಕುʼ ಎಂದು ರೈತ ಮುಖಂಡರು ಒತ್ತಾಯಿಸಿದ್ದಾರೆ.

ಇದನ್ನೂ ಓದಿ : ಬೀದರ್‌ | 43 ಗ್ರಾಮಗಳಲ್ಲಿ ನೀರಿನ ಅಭಾವ : ನೀರು ಸರಬರಾಜಿಗೆ ಅಡ್ಡಿಪಡಿಸಿದರೆ ನಿರ್ದಾಕ್ಷಿಣ್ಯ ಕ್ರಮ

ಈ ವೇಳೆ ಸಂಯುಕ್ತ ಕಿಸಾನ್‌ ಮೋರ್ಚಾದ ಪ್ರಮುಖರಾದ ಶಿವರಾಯ ಮುದಾಳೆ, ಮಲ್ಲಿಕಾರ್ಜುನ ಸ್ವಾಮಿ, ವೀರಾರೆಡ್ಡಿ ಪಾಟೀಲ್, ಬಾಬುರಾವ ಹೊನ್ನಾ, ಶಿವರಾಜ ಪಾಟೀಲ್ ಅತಿವಾಳ, ಬಸವರಾಜ ಅಷ್ಟೂರ, ನಜೀರ ಅಹ್ಮದ್, ಶಫಾಯತ್ ಅಲಿ, ನನ್ನೇಸಾಬ್, ಭಾವುರಾವ ನೆಲವಾಡೆ, ಶಾಂತಮ್ಮಾ ಮೂಲಗೆ, ರುದ್ರಯ್ಯಾ ಸ್ವಾಮಿ, ವಿಠಲರಾವ, ವೀರಶೆಟ್ಟಿ, ಚಂದ್ರಕಾಂತ ಪಾಟೀಲ್, ವಿಜಯಕುಮಾರ ಬಾವಗಿ, ನಾಗಶೆಟ್ಟೆಪ್ಪಾ, ಎಂ.ಡಿ.ಸಮದ್ ಪಟೇಲ್, ಶೈಲೇಶ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

ಕಬ್ಬಿನ ಬಿಲ್ಲು ಪಾವತಿಸದಿದ್ದರೆ ಜಿಲ್ಲಾಧಿಕಾರಿ ಕಚೇರಿಗೆ ಬೀಗ

ಬೀದರ ಜಿಲ್ಲೆಯ ರೈತರ ಬಾಕಿ ಇರುವ ಕಬ್ಬಿನ ಸಂಪೂರ್ಣ ಬಿಲ್ ಒಂದು ವಾರದೊಳಗಾಗಿ ಪಾವತಿಸದಿದ್ದಲ್ಲಿ ಜಿಲ್ಲಾಧಿಕಾರಿ ಕಚೇರಿಗೆ ಬೀಗ ಜಡಿದು ಉಗ್ರ ಪ್ರತಿಭಟನೆ ನಡೆಸುವುದಾಗಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾ ಘಟಕ ಎಚ್ಚರಿಕೆ ನೀಡಿದೆ.

WhatsApp Image 2026 05 05 at 2.21.38 PM
ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾ ಘಟಕದ ಪದಾಧಿಕಾರಿಗಳು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.

ಈ ಸಂಬಂಧ ಮಂಗಳವಾರ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಅವರಿಗೆ ಮನವಿ ಸಲ್ಲಿಸಿದ ಸಂಘದ ಪದಾಧಿಕಾರಿಗಳು, ʼಏಪ್ರಿಲ್ ತಿಂಗಳ ಅಂತ್ಯದೊಳಗಾಗಿ ಎಲ್ಲಾ ಸಕ್ಕರೆ ಕಾರ್ಖಾನೆಗಳು ರೈತರ ಕಬ್ಬಿನ ಬಿಲ್ಲು ಪಾವತಿಸುವುದಾಗಿ ಜಿಲ್ಲಾಡಳಿತ ಭರವಸೆ ನೀಡಿದ್ದರೂ, ಗಡುವು ಕಳೆದ ಒಂದು ವಾರವಾದರೂ ಪಾವತಿ ಆಗಿಲ್ಲʼ ಎಂದು ಆರೋಪಿಸಿದ್ದಾರೆ.

ಕಬ್ಬಿನ ಬಿಲ್‌ ಪಾವತಿ ಆಗದಿರುವುದರಿಂದ ರೈತರು ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ. ಹೀಗಾಗಿ ಇನ್ನೂ ಒಂದು ವಾರ ಗಡುವು ನೀಡಲಾಗುತ್ತಿದೆ. ಆ ಅವಧಿಯಲ್ಲಿ ಎಲ್ಲಾ ರೈತರ ಖಾತೆಗೆ ಬಾಕಿ ಹಣ ಜಮೆ ಮಾಡಿಸದಿದ್ದಲ್ಲಿ ಜಿಲ್ಲಾಧಿಕಾರಿ ಕಚೇರಿಗೆ ಬೀಗ ಜಡಿದು ಹೋರಾಟ ಕೈಗೊಳ್ಳುವುದಾಗಿ ಎಚ್ಚರಿಸಿದ್ದಾರೆ.

ಇದನ್ನೂ ಓದಿ : ಔರಾದ್‌ | ಎರಡು ಬೈಕ್‌ಗಳ ಮುಖಾಮುಖಿ ಡಿಕ್ಕಿ : ಸ್ಥಳದಲ್ಲೇ ಓರ್ವ ಸಾವು

ಈ ಸಂದರ್ಭದಲ್ಲಿ ರೈತ ಸಂಘದ ಜಿಲ್ಲಾಧ್ಯಕ್ಷ ಸಿದ್ರಾಮಪ್ಪಾ ಆಣದೂರೆ, ಜಿಲ್ಲಾ ಕಾರ್ಯಾಧ್ಯಕ್ಷ ಶ್ರೀಮಂತ ಬಿರಾದಾರ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ದಯಾನಂದ ಸ್ವಾಮಿ ಸಿರ್ಸಿ, ಶೇಷರಾವ ಕಣಜಿ, ಪ್ರಕಾಶ ಬಾವಗೆ ಸೇರಿದಂತೆ ಮತ್ತಿತರರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮುದ್ದೇಬಿಹಾಳ | ದಾಸೋಹಿ ರೈತ ಉತ್ಪಾದಕ ಸಹಕಾರಿ ಸಂಘದ ಆರ್ಥಿಕ ಚಟುವಟಿಕೆ: ಗವಿಸಿದ್ದೇಶ್ವರ ಶ್ರೀಗಳಿಂದ ಚಾಲನೆ

ರೈತರೇ ಮಾಲೀಕರಾಗಿ, ರೈತರ ಆರ್ಥಿಕ ಸಬಲೀಕರಣವನ್ನೇ ಕೇಂದ್ರವಾಗಿಟ್ಟುಕೊಂಡು ಅಸ್ತಿತ್ವಕ್ಕೆ ಬಂದಿರುವ ದಾಸೋಹಿ...

ಸಮುದ್ರದಲ್ಲಿ ಅಲೆಗಳು ಭೋರ್ಗರೆಯುತ್ತಿರುವಾಗ ಈಜುವುದು ನನಗಿಷ್ಟ: ವೈರಲ್ ಆಯ್ತು ರಾಹುಲ್ ಗಾಂಧಿ ‘X’ ಪೋಸ್ಟ್

ಸಮುದ್ರದಲ್ಲಿ ಅಲೆಗಳು ಭೋರ್ಗರೆಯುತ್ತಿರುವಾಗ ಈಜುವುದು ನನಗಿಷ್ಟ ಎಂದು ಕಾಂಗ್ರೆಸ್ ನಾಯಕ ಹಾಗೂ...

ಗವಿಸಿದ್ದೇಶ್ವರ ಸ್ವಾಮೀಜಿ ದಸರಾ ಉದ್ಘಾಟನೆ ಆಹ್ವಾನ ತಿರಸ್ಕರಿಸಿದ್ದಾರೆಂಬ ಸುಳ್ಳುಸುದ್ದಿ: ತಪ್ಪಿತಸ್ಥನ ವಿರುದ್ಧ FIR

ಗವಿಮಠದ ಅಭಿನವ ಗವಿಸಿದ್ದೇಶ್ವರ ಸ್ವಾಮೀಜಿ ಮೈಸೂರು ದಸರಾ ಮಹೋತ್ಸವದ ಉದ್ಘಾಟನೆ ಆಹ್ವಾನವನ್ನು...