ಬೀದರ್‌ | ಬರ : ಪ್ರತಿ ಎಕರೆಗೆ ₹50 ಸಾವಿರ ಪರಿಹಾರ, ರೈತರ ಸಾಲ ಮನ್ನಾಗೆ ಆಗ್ರಹಿಸಿ ರೈತರಿಂದ ಬೈಕ್‌ ರ‍್ಯಾಲಿ

Date:

ರೈತರು ಬೆಳೆಯುವ ಎಲ್ಲ ಬೆಳೆಗಳಿಗೆ ಸ್ವಾಮಿನಾಥನ್ ಆಯೋಗದ ಶಿಫಾರಸಿನಂತೆ ಕಾನೂನುಬದ್ಧ ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ) ನಿಗದಿಪಡಿಸುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಸಂಯುಕ್ತ ಕಿಸಾನ ಮೋರ್ಚಾ ಹಾಗೂ ಕಾರ್ಮಿಕ ಸಂಘಗಳ ಒಕ್ಕೂಟದ ನೇತ್ರತ್ವದಲ್ಲಿ ಸೋಮವಾರ ನಗರದಲ್ಲಿ ಬೈಕ್ ರ‍್ಯಾಲಿ ನಡೆಯಿತು.

- Advertisement -

ನಗರದ ಅಂಬೇಡ್ಕರ್ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಬೈಕ್ ರ‍್ಯಾಲಿ ನಡೆಸಿದ ರೈತರು ಜಿಲ್ಲಾಧಿಕಾರಿಗಳ ಮೂಲಕ ಪ್ರಧಾನಮಂತ್ರಿ, ಕೇಂದ್ರ ಗೃಹ ಹಾಗೂ ಸಹಕಾರ ಸಚಿವ ಅಮಿತ್ ಶಾ ಹಾಗೂ ಕರ್ನಾಟಕ ಸಿಎಂ ಡಿ.ಕೆ.ಶಿವಕುಮಾರ ಅವರ ಹೆಸರಿಗೆ ಬರೆದ ಹಕ್ಕೊತ್ತಾಯ ಪತ್ರವನ್ನು ಅಪರ ಜಿಲ್ಲಾಧಿಕಾರಿ ಸುರೇಖಾ ಅವರಿಗೆ ಸಲ್ಲಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ವಿರಾಟ್ ಕೊಹ್ಲಿ: ದಂತಕಥೆಯ ಪಯಣದ ಮತ್ತೊಂದು ಸುವರ್ಣ ಅಧ್ಯಾಯ

ಕ್ರಿಕೆಟ್ ಕೇವಲ ಒಂದು ಆಟವಲ್ಲ, ಅದೊಂದು ಜೀವಂತ ಭಾವನೆ ಎಂದು ನಂಬಿರುವ ಕೋಟ್ಯಂತರ ಭಾರತೀಯರಿಗೆ ವಿರಾಟ್ ಕೊಹ್ಲಿ ಕೇವಲ ಒಬ್ಬ ಆಟಗಾರನಲ್ಲ; ಬದಲಾಗಿ ಅದ್ಭುತ ಕಾವ್ಯದಂತಿರುವ ಒಂದು ಸುವರ್ಣ ಶಕೆ. ನವೆಂಬರ್ 5,...

‘ವಿಬಿ-ಜಿ ರಾಮ್‌ ಜಿ’ ಅನುಷ್ಠಾನದಲ್ಲಿ ಎಡವಟ್ಟು! ಕೂಲಿ ಸಿಗದೆ...

ಗ್ರಾಮೀಣ ಬಡ ಕುಟುಂಬಗಳಿಗೆ ಆಸರೆಯಾಗಬೇಕಿದ್ದ ‘ವಿಬಿ-ಜಿ ರಾಮ್ ಜಿ’ (VB-G RAM G) ಯೋಜನೆ, ಅನುಷ್ಠಾನದ ಎಡವಟ್ಟುಗಳಿಂದಾಗಿ ಗೊಂದಲದ ಗೂಡಾಗಿದೆ. ಕೆಲಸ ಮಾಡಿದರೂ ತಿಂಗಳುಗಟ್ಟಲೆ ಕೂಲಿ ಸಿಗದೆ ಬಡ ಕಾರ್ಮಿಕರು ಆರ್ಥಿಕ ಸಂಕಷ್ಟಕ್ಕೆ...

ಖಾಲಿಯಾಗುತ್ತಿವೆ ಉತ್ತರ ಕನ್ನಡದ ಹಳ್ಳಿಗಳು: 40ಕ್ಕೂ ಹೆಚ್ಚು ಗ್ರಾಮಗಳಲ್ಲಿ...

ಮಕ್ಕಳ ಗದ್ದಲ, ಕೃಷಿ ಚಟುವಟಿಕೆಯ ಹಿಗ್ಗು, ಹಬ್ಬ-ಹರಿದಿನಗಳ ಸಂಭ್ರಮದಿಂದ ಕಂಗೊಳಿಸುತ್ತಿದ್ದ ಹಳ್ಳಿಗಳು ಇವತ್ತು ನಿಶ್ಶಬ್ದವಾಗಿ ನಿಂತಿವೆ. ಪ್ರಕೃತಿಯ ಮಡಿಲಲ್ಲಿ ಕಟ್ಟಿಕೊಂಡಿದ್ದ ಬದುಕು ನಿಧಾನವಾಗಿ ಕರಗಿ ಹೋಗುತ್ತಿದೆ. ಊರು ತೊರೆದು ಪಟ್ಟಣ ಸೇರವುದು ಅನಿವಾರ್ಯವ...

ಕೇಂದ್ರ ಸರ್ಕಾರ 2020ರಲ್ಲಿ ಜಾರಿಗೊಳಿಸಿದ್ದ ಮೂರು ಕೃಷಿ ಕಾಯ್ದೆಗಳನ್ನು ಹಿಂಪಡೆದಿದ್ದರೂ, ರಾಜ್ಯದಲ್ಲಿ ಕೃಷಿ ಸಂಬಂಧಿತ ಕಾಯ್ದೆಗಳಿಗೆ ತಿದ್ದುಪಡಿ ಮಾಡಲಾಗುತ್ತಿರುವುದರಿಂದ ಕೃಷಿ ಕ್ಷೇತ್ರದಲ್ಲಿ ಕಾರ್ಪೊರೇಟ್ ಕಂಪನಿಗಳ ಪ್ರವೇಶಕ್ಕೆ ಅವಕಾಶವಾಗುತ್ತಿದೆ. ವಿದ್ಯುತ್ ಉತ್ಪಾದನೆ ಸೇರಿದಂತೆ ವಿವಿಧ ಯೋಜನೆಗಳಿಗೆ ಕೃಷಿ ಭೂಮಿ ಖರೀದಿಯಾಗುತ್ತಿರುವುದರಿಂದ ರೈತರು ಕೃಷಿ ಚಟುವಟಿಕೆಗಳಿಂದ ಹೊರಗುಳಿಯುವ ಪರಿಸ್ಥಿತಿ ನಿರ್ಮಾಣವಾಗುತ್ತಿದೆ ಎಂದು ಆರೋಪಿಸಿದರು.

ರಾಜ್ಯದಲ್ಲಿ ಅನಾವೃಷ್ಟಿಯಿಂದಾಗಿ ಬೆಳೆಗಳು ಸಂಪೂರ್ಣ ಹಾನಿಗೀಡಾಗಿದ್ದು, ರೈತರು ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ. ರಾಜ್ಯದಲ್ಲಿ 100ಕ್ಕೂ ಅಧಿಕ ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಿದ ಬಳಿಕ ಸಿಎಂ ಡಿ.ಕೆ.ಶಿವಕುಮಾರ ಅವರು ₹2,500 ಪರಿಹಾರ ನೀಡುವೆ ಎಂದು ಘೋಷಿಸಿದ್ದು ನಾಚಿಕೆಗೇಡಿನ ಸಂಗತಿಯಾಗಿದೆ. ರಾಜ್ಯದಲ್ಲಿ ತೀವ್ರ ಪರಿಸ್ಥಿತಿ ಹಿನ್ನೆಲೆ ಎನ್‌ಡಿಆರ್‌ಎಫ್, ಎಸ್‌ಡಿಆರ್‌ಎಫ್ ಪರಿಷ್ಕರಿಸಿ ಪರಿಹಾರ ಘೋಷಿಸಬೇಕು. ಬರ ಪರಿಸ್ಥಿತಿ ಮನಗಂಡು ರಾಜ್ಯದ ಶಾಸಕರು, ಸಚಿವರು ಸರ್ಕಾರದಿಂದ ಪಡೆಯುವ ಸಂಬಳ, ಖರ್ಚು ವೆಚ್ಚಗಳ ಅನುದಾನವನ್ನು ರಾಜ್ಯದ ಪರಿಹಾರ ನಿಧಿಗೆ ನೀಡಬೇಕು. ಸರ್ಕಾರಿ ನೌಕರರು ಒಂದು ದಿನದ ಸಂಬಳ ರಾಜ್ಯದ ಬರ ನಿಧಿಗೆ ದೇಣಿಗೆ ರೀತಿಯಲ್ಲಿ ಕೊಡಬೇಕು” ಎಂದು ಆಗ್ರಹಿಸಿದರು.

ರಾಜ್ಯದಲ್ಲಿ ಬರ ಪರಿಸ್ಥಿತಿ ಹಿನ್ನೆಲೆಯಲ್ಲಿ ರೈತರ ಎಲ್ಲ ರೀತಿಯ ಸಾಲಗಳನ್ನು ಮನ್ನಾ ಮಾಡಬೇಕು.ಪ್ರತಿ ಎಕರೆಗೆ ₹50 ಸಾವಿರ ಪರಿಹಾರ ಹಾಗೂ ಕೃಷಿ ಕಾರ್ಮಿಕರ ಪ್ರತಿ ಕುಟುಂಬಕ್ಕೆ ₹50 ಸಾವಿರ ಸಹಾಯಧನ ನೀಡಬೇಕು. ಜಿಲ್ಲೆಯ ಪ್ರಮುಖ ವಾಣಿಜ್ಯ ಬೆಳೆಯಾದ ಕಬ್ಬು ಬೆಳೆಗಾರರ ಹಿತದೃಷ್ಟಿಯಿಂದ ಹಳ್ಳಿಖೇಡ್‌ (ಬಿ)ನ ಬಿಎಸ್‌ಎಸ್‌ಕೆ ಸಕ್ಕರೆ ಕಾರ್ಖಾನೆಯನ್ನು ಪುನರಾರಂಭಿಸಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಆರ್ಥಿಕ ನೆರವು ನೀಡಬೇಕು ಎಂದರು.

ಪ್ರಸ್ತುತ ವರ್ಷ ಪ್ರತಿ ಟನ್‌ ಕಬ್ಬಿಗೆ ₹5 ಸಾವಿರ ದರ ನಿಗದಿಪಡಿಸುವ ಕುರಿತು ಜಿಲ್ಲಾಧಿಕಾರಿಗಳು ವಾರದೊಳಗೆ ರೈತರ ಸಭೆ ನಡೆಸಿ ನಿರ್ಣಯ ತೆಗೆದುಕೊಳ್ಳಬೇಕು. ಕಳೆದ ಸಾಲಿನಲ್ಲಿ ಕಬ್ಬು ಪೂರೈಸಿದ ರೈತರಿಗೆ ಬಾಕಿ ಹಣ ಪಾವತಿಸಬೇಕು, ಹಿಂದಿನ ಪದ್ಧತಿಯಂತೆ ಕಬ್ಬು ಪೂರೈಸಿದ ರೈತರಿಗೆ ಸಕ್ಕರೆ ನೀಡಬೇಕು. ಕಾರ್ಖಾನೆಯ ಆಡಳಿತ ಮಂಡಳಿಯಲ್ಲಿ ನಡೆದಿರುವುದಾಗಿ ಆರೋಪಿಸಲಾಗಿರುವ ಅಕ್ರಮಗಳ ಕುರಿತು ಕಳೆದ ಸುಮಾರು 15 ವರ್ಷಗಳಲ್ಲಿ ಚುನಾಯಿತರಾಗಿದ್ದ ಆಡಳಿತ ಮಂಡಳಿಗಳ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಬೇಕು. ಷೇರುದಾರ ರೈತರ ಹಿತ ರಕ್ಷಿಸುವುದರ ಜೊತೆಗೆ ಕಾರ್ಮಿಕರ ಬಾಕಿ ವೇತನ ಸೇರಿದಂತೆ ಒಟ್ಟು ಸುಮಾರು ₹38 ಕೋಟಿ ಬಾಕಿ ಹಣ ಪಾವತಿಸಬೇಕು ಎಂದು ಮನವಿಯಲ್ಲಿ ಆಗ್ರಹಿಸಲಾಗಿದೆ.

WhatsApp Image 2026 09 28 at 5.16.46 PM

ಬಡವರು, ನಿರ್ಗತಿಕರಿಗೆ ಆಹಾರ ಒದಗಿಸಲು ಗ್ರಾಮಗಳಲ್ಲಿ ಗಂಜಿ ಕೇಂದ್ರಗಳನ್ನು ಆರಂಭಿಸಬೇಕು. ವಿಬಿ-ಜಿ ರಾಮ್‌ ಜಿ ಯೋಜನೆಯಡಿ ಗ್ರಾಮೀಣ ಉದ್ಯೋಗ ಕಾರ್ಯಕ್ರಮಗಳನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಬೇಕು. ಗ್ರಾಮೀಣ ರಸ್ತೆಗಳು, ಹೊಲಗಳಿಗೆ ತೆರಳುವ ದಾರಿಗಳನ್ನು ಅಭಿವೃದ್ಧಿಪಡಿಸುವ ಜೊತೆಗೆ ಸಣ್ಣ ನೀರಾವರಿ ಕೆರೆಗಳ ಹೂಳೆತ್ತುವ ಯೋಜನೆ ಜಾರಿಗೊಳಿಸಬೇಕು ಎಂದು ಆಗ್ರಹಿಸಿದರು.

ಬೀದರ್ ಜಿಲ್ಲಾ ಕಾರ್ಮಿಕ ಸೇವೆಗಳ ವಿವಿಧೋದ್ದೇಶ ಸಹಕಾರ ಸಂಘದಲ್ಲಿ ಸೇವೆ ಸಲ್ಲಿಸುತ್ತಿರುವ ನೌಕರರಿಗೆ ಪರಿಷ್ಕೃತ ಕನಿಷ್ಠ ವೇತನ ನೀಡಬೇಕು ಹಾಗೂ ಮೀಸಲಾತಿ ಜಾರಿಗೊಳಿಸಬೇಕು. ರೈತರ ಭೂಮಿಗಳ ಸರ್ಕಾರಿ ಸರ್ವೆ ಕಾರ್ಯವನ್ನು ಸರ್ಕಾರದ ವತಿಯಿಂದಲೇ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಇದನ್ನೂ ಓದಿ : ಬೀದರ್‌ | ಜ್ಞಾನೇಶಕುಮಾರ ವಜಾಗೊಳಿಸಿ, ಬಂಧಿಸಲು ಆಗ್ರಹಿಸಿ ಕಾಂಗ್ರೆಸ್‌ ಪ್ರತಿಭಟನೆ

ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾಧ್ಯಕ್ಷ ಮಲ್ಲಿಕಾರ್ಜುನ ಸ್ವಾಮಿ, ಕಾರ್ಮಿಕ ಸಂಘಟನೆ ಮುಖಂಡ ಬಾಬುರಾವ ಹೊನ್ನಾ ಸೇರಿದಂತೆ ಕಾರ್ಮಿಕ-ರೈತ ಸಂಘಟನೆಗಳ ಪ್ರಮುಖರಾದ ಶಿವರಾಜ ಪಾಟೀಲ್ ಅತಿವಾಳ, ಶಿವರಾಯ ಮುದಾಳೆ, ನಜೀರ್ ಅಹ್ಮದ್, ಶಫಾಯತ್ ಅಲಿ, ವೀರಶೆಟ್ಟಿ ವಟಂಬೆ, ಕೊಂಡಿಬಾರಾವ ಪಾಂಡ್ರೆ, ಧೂಳಪ್ಪ ಸೋರಳ್ಳಿ, ಚಂದ್ರಕಾಂತ ಪಾಟೀಲ ಕಪಲಾಪೂರ, ರಾಜೇಂದ್ರ ಪಾಟೀಲ್ ಅಣದೂರವಾಡಿ, ವೀರಾರೆಡ್ಡಿ ಪಾಟೀಲ್, ನಾಗಶೆಟ್ಟಪ್ಪಾ ಲಂಜವಾಡ, ವಿಜಯಕುಮಾರ ಬಾವಗಿ, ಪ್ರಭು ತಗಣಿಕರ್, ಶೇಕ್ ನವಾಜ್, ಖಮರ ಪಟೇಲ್, ಮೂಯೀದ್ ಸಂತಪೂರ, ರಾಜಕುಮಾರ ಬಗದಲ್‌ಕರ್, ಖದೀರಮಿಯ್ಯಾ, ಅಶೋಕ ಕಾರಬಾರಿ, ವಿಠಲ ರೆಡ್ಡಿ ಆಣದೂರ, ಜಗದೀಶ್ವರ ಬಿರಾದರ್‌, ರಾಜಕುಮಾರ ಸ್ವಾಮಿ, ಅಶೋಕ ಪಾಟೀಲ, ಶ್ರೀವಾಸ ಜೋಶಿ, ಬಸವರಾಜ ಪಾಟೀಲ, ಸುಧಾಕರ ಬನ್ನಾಳೆ, ಪ್ರಕಾಶ ಅಲ್ಮಾಜೆ, ಸಂತೋಷ ಗುದಗೆ, ರುದ್ರಸ್ವಾಮಿ, ಮಾರುತಿ ಧರಗೊಂಡ, ಶಾಂತಮ್ಮ ಮುಳಗೆ ಹಾಗೂ ಸನ್ಮುಖಪ್ಪ ಆಣದೂರ ಸೇರಿದಂತೆ ವಿವಿಧ ಸಂಘಟನೆಗಳ ಮುಖಂಡರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

UPI ವಹಿವಾಟಿನ ಮೇಲಿನ ಶುಲ್ಕಕ್ಕೆ ತಡೆ ನೀಡಲು ಸುಪ್ರೀಂ ಕೋರ್ಟ್‌ ನಕಾರ

ಅಕ್ಟೋಬರ್ 15ರಿಂದ ಜಾರಿಗೆ ಬರಲಿರುವ 2,000 ರೂ.ಗಿಂತ ಹೆಚ್ಚಿನ ಯುಪಿಐ ವಹಿವಾಟುಗಳ...

‘ದೇಶದ ನೌಕರಶಾಹಿ ಆತ್ಮಸಾಕ್ಷಿಯ ಕರೆಯನ್ನು ಆಲಿಸಬೇಕು.’ ಮಾಜಿ ಚುನಾವಣಾ ಆಯುಕ್ತ ಅಶೋಕ್‌ ಲವಾಸ ಹೇಳಿದ ಆತ್ಮಸಾಕ್ಷಿಯ ಕತೆ

ಸಾರ್ವಜನಿಕ ಸೇವೆಯಲ್ಲಿರುವ ಪ್ರತಿಯೊಬ್ಬರೂ ತಮ್ಮ ಕರ್ತವ್ಯದ ಹಾದಿಯಲ್ಲಿ ನೈತಿಕ ಸಂದಿಗ್ಧತೆಯನ್ನು ಎದುರಿಸಿದಾಗ,...

ವರ್ಷಗಳಿಂದ ನೀರಿಲ್ಲದೆ ಸೊರಗಿದ ಗ್ರಾಮ; ಹತಾಶೆಯಿಂದ ಊರನ್ನೇ ಬಿಕರಿಗಿಟ್ಟ ನಿವಾಸಿಗಳು

ಒಂದೆಡೆ ನೀರಾವರಿ ಯೋಜನೆ, ಇನ್ನೊಂದೆಡೆ ನೀರಿಗಾಗಿ ಪರದಾಡುವ ರೈತರು. ಯೋಜನೆ ಆರಂಭವಾಗಿ...

ವಿರಾಟ್ ಕೊಹ್ಲಿ: ದಂತಕಥೆಯ ಪಯಣದ ಮತ್ತೊಂದು ಸುವರ್ಣ ಅಧ್ಯಾಯ

ಕ್ರಿಕೆಟ್ ಕೇವಲ ಒಂದು ಆಟವಲ್ಲ, ಅದೊಂದು ಜೀವಂತ ಭಾವನೆ ಎಂದು ನಂಬಿರುವ...