ಬೀದರ್‌ | ರೈತ ಹುತಾತ್ಮ ದಿನಾಚರಣೆ : ಬರಪೀಡಿತ ಜಿಲ್ಲೆಯನ್ನಾಗಿ ಘೋಷಿಸಲು ರೈತ ಸಂಘ ಆಗ್ರಹ

Date:

ಬೀದರ್ ನಗರದ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾ ಘಟಕದ ಪದಾಧಿಕಾರಿಗಳು ರೈತ ಹುತಾತ್ಮ ದಿನಾಚರಣೆ ಅಂಗವಾಗಿ ಸೋಮವಾರ ಪ್ರತಿಭಟನೆ ನಡೆಸಿ, ಬೀದರ್‌ ಜಿಲ್ಲೆ ಬರಪೀಡಿತ ಎಂದು ಘೋಷಿಸಿ ರೈತರಿಗೆ ಪ್ರತಿ ಎಕರೆಗೆ ₹50 ಸಾವಿರ ಪರಿಹಾರ ನೀಡುವಂತೆ ರಾಜ್ಯ ಸರ್ಕಾರಕ್ಕೆ ಆಗ್ರಹಿಸಿದರು.

- Advertisement -

ರೈತ ಸಂಘದ ಜಿಲ್ಲಾಧ್ಯಕ್ಷ ಶ್ರೀಮಂತ ಬಿರಾದಾರ ಮಾತನಾಡಿ, “ಡಾ. ಬಿ.ಆರ್.ಅಂಬೇಡ್ಕರ್ ಅವರು ನೀಡಿದ ಶಿಕ್ಷಣ, ಸಂಘಟನೆ ಮತ್ತು ಹೋರಾಟ ಎಂಬ ಸಂದೇಶದಂತೆ ರೈತರು ತಮ್ಮ ಹಕ್ಕುಗಳಿಗಾಗಿ ನಿರಂತರ ಹೋರಾಟ ನಡೆಸುತ್ತಿದ್ದು, ಆ ಹೋರಾಟದಲ್ಲಿ ಪ್ರಾಣ ತ್ಯಾಗ ಮಾಡಿದ ರೈತ ಹುತಾತ್ಮರ ಸ್ಮರಣಾರ್ಥ ಪ್ರತಿವರ್ಷ ಜುಲೈ 21ರಂದು ರೈತರ ಹುತಾತ್ಮ ದಿನಾಚರಣೆಯನ್ನು ಆಚರಿಸಲಾಗುತ್ತಿದೆ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಅಮೆರಿಕದ ಮಧ್ಯಂತರ ಚುನಾವಣೆ: ಬೆಲೆ ಏರಿಕೆ, ಇರಾನ್ ಯುದ್ಧದ...

ಅಮೆರಿಕದಲ್ಲಿ ಏರುತ್ತಿರುವ ಪೆಟ್ರೋಲ್ ಬೆಲೆ, ದುಬಾರಿಯಾಗುತ್ತಿರುವ ದಿನಬಳಕೆಯ ವಸ್ತುಗಳು ಹಾಗೂ ಇರಾನ್ ವಿರುದ್ಧದ ಯುದ್ಧದ ಆರ್ಥಿಕ ಪರಿಣಾಮಗಳು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆಡಳಿತಕ್ಕೆ ದೊಡ್ಡ ರಾಜಕೀಯ ಸವಾಲಾಗಿವೆ. ನವೆಂಬರ್ 3ರಂದು ನಡೆಯಲಿರುವ ಮಧ್ಯಂತರ...

ಖಾಲಿದ್‌ರಂತೆ ಸಿಜೆಪಿ ನಾಯಕರನ್ನೂ ದೀರ್ಘ ಜೈಲುವಾಸದ ಸುಳಿಯಲ್ಲಿ ಸಿಲುಕಿಸುವ...

ಚುನಾವಣಾ ಆಯೋಗದ ಅಕ್ರಮ ಪ್ರಶ್ನಿಸಿದ ಸಿಜೆಪಿ ನಾಯಕರ ವಿರುದ್ಧ ಸರಣಿ ದೂರು ದಾಖಲಿಸಲಾಗುತ್ತಿದೆ. ಮೋದಿ ಸರ್ಕಾರದ ಅವಧಿಯಲ್ಲಿ ‘ವಿಚಾರಣೆಯೇ ಒಂದು ಶಿಕ್ಷೆ’ ಎನ್ನುವ ತಂತ್ರ ಪುನರಾವರ್ತನೆಯಾಗುತ್ತಿದೆಯೇ? ಉಮರ್‌ ಖಾಲಿದ್‌ ರೀತಿಯಲ್ಲೇ ಸೌರವ್ ದಾಸ್,...

ಎಚ್ಚೆತ್ತುಕೊಳ್ಳುತ್ತಿವೆ DMK, YSRCP; ಡಿಲಿಮಿಟೇಷನ್‌ ಮಸೂದೆ ಮತ್ತೆ ಸೋಲುವ...

ಮೋದಿಯವರ ಅಹಂಕಾರದ ಆಡಳಿತಕ್ಕೆ ದಕ್ಷಿಣ ಭಾರತವು ಎಂದಿಗೂ ತಲೆಬಾಗುವುದಿಲ್ಲ, ಮತ್ತು ಈ ಬಾರಿಯ ಅವರ ಹತಾಶೆಯ ರಾಜಕೀಯ ಕುತಂತ್ರಗಳು ಅವರ ಪಾಲಿಗೆ ತಿರುಗುಬಾಣವಾಗಿ ದೇಶದ ಪ್ರಜಾಪ್ರಭುತ್ವವು ಗೆಲ್ಲುವುದು ಖಚಿತ ಮಹಿಳಾ ಮೀಸಲಾತಿ ಎಂಬ ಪವಿತ್ರ...
  • ಬೀದರ್ ಜಿಲ್ಲೆಯನ್ನು ತಕ್ಷಣವೇ ಬರಪೀಡಿತ ಜಿಲ್ಲೆಯನ್ನಾಗಿ ಘೋಷಿಸಿ, ಪ್ರತಿ ಎಕರೆಗೆ ₹50 ಸಾವಿರ ಪರಿಹಾರ ನೀಡಬೇಕು.
  • ರೈತರ ಸಂಪೂರ್ಣ ಕೃಷಿ ಸಾಲ ಮನ್ನಾ ಮಾಡಬೇಕು. ಅರ್ಹ ರೈತರಿಗೆ ಬೆಳೆ ವಿಮೆ ಪರಿಹಾರವನ್ನು ಶೀಘ್ರ ಬಿಡುಗಡೆ ಮಾಡಬೇಕು.ಜಿಲ್ಲೆಯ
  • ಕಬ್ಬು ಬೆಳೆಗಾರರಿಗೆ ಬಾಕಿ ಇರುವ ಸುಮಾರು ₹10 ಕೋಟಿ ಹಣವನ್ನು ತಕ್ಷಣ ಪಾವತಿಸಬೇಕು. ಬೀದರ್‌ ಸಹಕಾರ ಸಕ್ಕರೆ ಕಾರ್ಖಾನೆಯನ್ನು ಪುನರಾರಂಭಿಸಬೇಕು. ಕೃಷಿ ಪಂಪ್‌ಸೆಟ್‌ಗಳಿಗೆ ಹಗಲಿನಲ್ಲಿ ನಿರಂತರ 7ಗಂಟೆಗಳ ಗುಣಮಟ್ಟದ ವಿದ್ಯುತ್ ಪೂರೈಸಬೇಕು. ಬೆಳೆ ಹಾನಿ ಮಾಡುತ್ತಿರುವ ಕಾಡುಪ್ರಾಣಿಗಳ ಹಾವಳಿಗೆ ಶಾಶ್ವತ ಪರಿಹಾರ ಕಲ್ಪಿಸಬೇಕು ಎಂದು ಮನವಿಯಲ್ಲಿ ತಿಳಿಸಲಾಗಿದೆ.

ಬಳಿಕ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಅವರ ಹೆಸರಿಗೆ ಬರೆದ ಮನವಿಯನ್ನು ಜಿಲ್ಲಾಧಿಕಾರಿ ಅವರಿಗೆ ಸಲ್ಲಿಸಿದರು.

ಇದನ್ನೂ ಓದಿ : ಬಸವಕಲ್ಯಾಣ | ಸಂಸತ್‌ ಚಲೋ : ವಿದ್ಯಾರ್ಥಿಗಳ ಮೇಲಿನ ಲಾಠಿ ಜಾರ್ಜ್‌ ಖಂಡಿಸಿ ಪ್ರತಿಭಟನೆ

ಪ್ರತಿಭಟನೆಯಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾ ಗೌರವಾಧ್ಯಕ್ಷ ಸಿದ್ರಾಮಪ್ಪ ಆಣದೂರೆ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ದಯಾನಂದ ಸ್ವಾಮಿ ಸಿರ್ಸಿ, ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಮಹಾನಂದಾ ದೇಶಮುಖ, ರಾಜ್ಯ ಪ್ರತಿನಿಧಿ ಶೇಷರಾವ ಕಣಜಿ, ರಾಜ್ಯ ಉಪಾಧ್ಯಕ್ಷ ಚಂದ್ರಶೇಖರ ಜಮಖಂಡ, ಹಸಿರು ಸೇನೆ ಸಂಚಾಲಕ ನೀಲಕಂಠ ಬುಯ್ಯಾ, ಜಿಲ್ಲಾ ಉಪಾಧ್ಯಕ್ಷ ಶಂಕರೆಪ್ಪ ಪಾರಾ, ಸಿದ್ದಣ್ಣ ಭೂಶೆಟ್ಟಿ, ತಾಲ್ಲೂಕು ಅಧ್ಯಕ್ಷರಾದ ಬಾಬುರಾವ ಜೋಳದಬಕಾ, ನಾಗಯ್ಯ ಸ್ವಾಮಿ, ಪ್ರವೀಣ ಕುಲಕರ್ಣಿ, ಪ್ರಕಾಶ ಬಾವಗೆ, ಸುಭಾಷ ರಗಟೆ, ಸತೀಶ ನನ್ನೂರೆ, ಅನೀಲಕುಮಾರ ಕಣಜಿ ಸೇರಿದಂತೆ ರೈತ ಮುಖಂಡರಾದ ವೀರಶೆಟ್ಟಿ ಬಿರಾದಾರ, ಮಲ್ಲಿಕಾರ್ಜುನ ಚಕ್ಕಿ, ರಾಜಕುಮಾರ ಪಾಟೀಲ, ವೆಂಕಟರಾವ ವಲ್ಲಪೆ, ಬಸಪ್ಪ ಆಲೂರೆ ಹಾಗೂ ಅನೇಕ ರೈತರು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾತ್ರೋರಾತ್ರಿ ತುರ್ತು ವಿಚಾರಣೆ ಕೋರಿ ದೆಹಲಿ ಹೈಕೋರ್ಟ್ ಮೊರೆಹೋದ ಸಿಜೆಪಿ ನಾಯಕರು

ತಮ್ಮ ನ್ಯಾಯಾಂಗ ಬಂಧನ ವಿಸ್ತರಣೆಯನ್ನು ಪ್ರಶ್ನಿಸಿ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ)...

ಹೊರದೇಶಗಳ ದೊಂಬಿಯನ್ನು ಭಾರತದ ಯುವ ಹೋರಾಟಕ್ಕೆ ಸಮೀಕರಿಸುತ್ತಿರುವ ʼಮಡಿಲ ಮಾಧ್ಯಮʼಗಳು; ಇದೇನಾ ಪತ್ರಿಕೋದ್ಯಮ?

ಹೊರದೇಶಗಳ ಬೀದಿಗಳಲ್ಲಿ ನಡೆಯುವ ದೊಂಬಿ, ಲೂಟಿಗೂ, ಭಾರತದ ಯುವಕರು ಸಂವಿಧಾನದತ್ತ ಹಕ್ಕಿಗಾಗಿ...

ಪ್ರಧಾನಿ ಮೋದಿ ಜೊತೆ ನಾಳೆ ಖರ್ಗೆ ಸಭೆ: ಎಸ್‌ಐಆರ್, ಕ್ಷೇತ್ರ ಪುನರ್‌ವಿಂಗಡಣೆ, ಮಹಿಳಾ ಮೀಸಲಾತಿ ಕುರಿತು ಚರ್ಚೆ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್), ಕ್ಷೇತ್ರ ಮರುವಿಂಗಡಣೆ ಮತ್ತು...

ಏಷ್ಯನ್ ಪ್ಯಾರಾ ಗೇಮ್ಸ್: ಮಹಿಳೆಯರ 200 ಮೀಟರ್ಸ್ ಓಟದಲ್ಲಿ ಸಿಮ್ರಾನ್‌ಗೆ ಚಿನ್ನ, ತೇಜಲ್‌ಬೆನ್‌ಗೆ ಕಂಚು

ಮಂಗಳವಾರ ಜಪಾನಿನ ನಗೋಯಾದಲ್ಲಿ ನಡೆದ ಏಷ್ಯನ್ ಪ್ಯಾರಾ ಗೇಮ್ಸ್‌ನ ಮಹಿಳೆಯರ 200...