ಬೀದರ್‌ | ಬರ ಘೋಷಣೆ, ಸಾಲಮನ್ನಾ, ಎಕರೆಗೆ ₹50 ಸಾವಿರ ಪರಿಹಾರಕ್ಕೆ ಆಗ್ರಹಿಸಿ ರೈತರಿಂದ ರಸ್ತೆ ತಡೆ

Date:

ಬೀದರ್ ಜಿಲ್ಲೆಯನ್ನು ಬರಪೀಡಿತ ಜಿಲ್ಲೆ ಎಂದು ಘೋಷಿಸುವುದು, ರೈತರ ಸಂಪೂರ್ಣ ಸಾಲ ಮನ್ನಾ ಹಾಗೂ ಪ್ರತಿ ಎಕರೆಗೆ ₹50 ಸಾವಿರ ಪರಿಹಾರ ಸೇರಿದಂತೆ ರೈತರ ವಿವಿಧ ಜ್ವಲಂತ ಸಮಸ್ಯೆಗಳನ್ನು ಬಗೆಹರಿಸುವಂತೆ ಆಗ್ರಹಿಸಿ ರೈತ ಸಂಘಟನೆಗಳು, ಕಾರಂಜಾ ಮುಳುಗಡೆ ಸಂತ್ರಸ್ತರ ಹಿತರಕ್ಷಣಾ ಸಮಿತಿ ಸೇರಿದಂತೆ ವಿವಿಧ ಸಂಘಟನೆಗಳ ನೇತೃತ್ವದಲ್ಲಿ ರಸ್ತೆ ತಡೆ ನಡೆಯಿತು.

- Advertisement -

ಬೀದರ್‌ ನಗರದ ನೌಬಾದ್‌ನ ಬಸವೇಶ್ವರ ವೃತ್ತದಲ್ಲಿ ಜಿಲ್ಲೆಯ ವಿವಿಧ ತಾಲೂಕುಗಳಿಂದ ಆಗಮಿಸಿದ ರೈತರು, ಸಂಘಟಕರು ಕೆಲವೊತ್ತು ಬೀದರ್-ಭಾಲ್ಕಿ, ಬೀದರ್-ಹುಮನಾಬಾದ್‌ ಮಾರ್ಗದ ಹೆದ್ದಾರಿ ತಡೆದರು. ಬರಪೀಡಿತ ಜಿಲ್ಲೆ ಘೋಷಿಸಿ, ರೈತರ ಸಾಲಮನ್ನಾ ಮಾಡಿ ಎಂಬಿತ್ಯಾದಿ ಘೋಷಣೆ ಕೂಗಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ಸಂಪತ್ತು ಮತ್ತು ಮನುಷ್ಯನ ನೈತಿಕತೆ: ಅರ್ಥಶಾಸ್ತ್ರದ ಇಗ್ ನೊಬೆಲ್...

ಪ್ರತಿವರ್ಷ ನೊಬೆಲ್ ಪ್ರಶಸ್ತಿ ಘೋಷಣೆಯಾಗುವ ಕೆಲವೇ ದಿನಗಳ ಮೊದಲು ಹಾರ್ವರ್ಡ್ ವಿಶ್ವವಿದ್ಯಾಲಯದಲ್ಲಿ ನೊಬೆಲ್ ಪುರಸ್ಕೃತರ ಸಮ್ಮುಖದಲ್ಲೇ ಇಗ್ ನೊಬೆಲ್ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಗುತ್ತದೆ. "ಮೊದಲು ಜನರನ್ನು ನಗಿಸಬೇಕು, ನಂತರ ಅವರನ್ನು ಆಳವಾಗಿ ಯೋಚಿಸುವಂತೆ...

ರೈತ ಸಂಘದ ಜಿಲ್ಲಾಧ್ಯಕ್ಷ ಶ್ರೀಮಂತ ಬಿರಾದಾರ, “ರೈತರು ಪ್ರತಿವರ್ಷ ಅತಿವೃಷ್ಟಿ, ಅನಾವೃಷ್ಟಿ, ಬೆಳೆಗಳಿಗೆ ವೈಜ್ಞಾನಿಕ ಬೆಲೆ ದೊರೆಯದಿರುವುದು ಸೇರಿದಂತೆ ಹಲವು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಈ ವರ್ಷವೂ ಮುಂಗಾರು ಮಳೆ ಸಮರ್ಪಕವಾಗಿ ಬಾರದ ಹಿನ್ನೆಲೆಯಲ್ಲಿ ಬಿತ್ತನೆ ಮಾಡಿರುವ ಬೆಳೆಗಳು ಒಣಗುತ್ತಿದ್ದು, ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

WhatsApp Image 2026 08 21 at 3.05.41 PM

“ಮುಂಗಾರು ಮಳೆ ಕೊರತೆಯಿಂದ ಉಂಟಾಗಿರುವ ಪರಿಸ್ಥಿತಿ ಪರಿಗಣಿಸಿ ಬೀದರ್ ಜಿಲ್ಲೆಯನ್ನು ಬರಪೀಡಿತ ಜಿಲ್ಲೆ ಎಂದು ಘೋಷಿಸಬೇಕು. ರೈತರ ಸಂಪೂರ್ಣ ಸಾಲ ಮನ್ನಾ ಮಾಡಬೇಕು ಹಾಗೂ ಪ್ರತಿ ಎಕರೆಗೆ ₹50 ಸಾವಿರ ಪರಿಹಾರ ನೀಡಬೇಕು. ಬಿಎಸ್‌ಎಸ್‌ಕೆ ಕಾರ್ಖಾನೆ ಮಾರಾಟ ಮಾಡದೆ ಪರ್ಯಾಯ ವ್ಯವಸ್ಥೆ ಕಲ್ಪಿಸಿ ಪುನರಾರಂಭಿಸಬೇಕು. ಕಾರ್ಮಿಕರ ಬಾಕಿ ವೇತನ ಸೇರಿದಂತೆ ಶಾಸನಬದ್ಧವಾಗಿ ಪಾವತಿಸಬೇಕಾದ ಎಲ್ಲ ಹಣವನ್ನು ಕೂಡಲೇ ಪಾವತಿಸಬೇಕು” ಎಂದು ಒತ್ತಾಯಿಸಿದರು.

ಕಾರಂಜಾ ಮುಳುಗಡೆ ಸಂತ್ರಸ್ತರಿಗೆ ವೈಜ್ಞಾನಿಕ ರೀತಿಯಲ್ಲಿ ಸೂಕ್ತ ಪರಿಹಾರ ನೀಡಬೇಕು. ಏತ ನೀರಾವರಿ ಯೋಜನೆಯ ಕಾಲುವೆಗಳಿಗೆ ನೀರು ಹರಿಸಿ ರೈತರ ಕೃಷಿಗೆ ಅನುಕೂಲ ಕಲ್ಪಿಸಬೇಕು. ಎಂಜಿಎಸ್‌ಎಸ್‌ಕೆ ಹೊರತುಪಡಿಸಿ ಜಿಲ್ಲೆಯ ಇತರ ಸಕ್ಕರೆ ಕಾರ್ಖಾನೆಗಳು ರೈತರಿಗೆ ಬಾಕಿ ಉಳಿಸಿಕೊಂಡಿರುವ ಹಣವನ್ನು ಶೀಘ್ರ ಪಾವತಿಸುವಂತೆ ಕ್ರಮ ಕೈಗೊಳ್ಳಬೇಕು. ರೈತರ ಕೃಷಿ ಪಂಪ್‌ಸೆಟ್‌ಗಳಿಗೆ ಹಗಲಿನ ವೇಳೆಯಲ್ಲಿ ಏಳು ಗಂಟೆಗಳ ಕಾಲ ನಿರಂತರ ಹಾಗೂ ಗುಣಮಟ್ಟದ ವಿದ್ಯುತ್ ಪೂರೈಸಬೇಕು. ಕಾಡುಪ್ರಾಣಿಗಳಿಂದ ರೈತರ ಬೆಳೆಗಳಿಗೆ ಆಗುತ್ತಿರುವ ಹಾನಿ ತಡೆಯಲು ಶಾಶ್ವತ ಪರ್ಯಾಯ ವ್ಯವಸ್ಥೆ ಕಲ್ಪಿಸಬೇಕು” ಎಂದು ಪ್ರತಿಭಟನಾನಿರತ ರೈತರು ಆಗ್ರಹಿಸಿದರು.

ರೈತರ ಸಮಸ್ಯೆಗಳಿಗೆ ತಕ್ಷಣ ಪರಿಹಾರ ದೊರೆಯದಿದ್ದರೆ ಮುಂದಿನ ದಿನಗಳಲ್ಲಿ ಜನರು, ಜಾನುವಾರುಗಳು ಹಾಗೂ ಎತ್ತಿನ ಬಂಡಿಗಳೊಂದಿಗೆ ರಾಷ್ಟ್ರೀಯ ಹೆದ್ದಾರಿಗೆ ಇಳಿದು ಉಗ್ರ ಹೋರಾಟ ನಡೆಸಬೇಕಾಗುತ್ತದೆ ಎಂದು ಹೋರಾಟಗಾರರು ಎಚ್ಚರಿಕೆ ನೀಡಿದ ಅವರು, ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಪತ್ರ ಸಲ್ಲಿಸಿದರು.

ಇದನ್ನೂ ಓದಿ : ವಚನ ಕಲ್ಯಾಣ | ಬೇನೆ ಬಂದಡೆ ಒರಲು, ಜೀವ ಹೋದಡೆ ಸಾಯಿ, ಇದಕ್ಕಾ ದೇವರ ಹಂಗೇಕೆ!

ಪ್ರತಿಭಟನೆಯಲ್ಲಿ ರೈತ ಸಂಘದ ಜಿಲ್ಲಾ ಗೌರವಾಧ್ಯಕ್ಷ ಸಿದ್ರಾಮಪ್ಪ ಆಣದೂರೆ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ದಯಾನಂದ ಸ್ವಾಮಿ ಸಿರ್ಸಿ, ರಾಜ್ಯ ಕಾರ್ಯದರ್ಶಿ ಮಹಿಳಾ ಘಟಕದ ಶೋಭಾವತಿ ಕಾರಭಾರಿ, ರಾಜ್ಯ ಪ್ರತಿನಿಧಿ ಶೇಷರಾವ ಕಣಜಿ, ರಾಜ್ಯ ಪ್ರಧಾನ ಕಾರ್ಯದರ್ಶಿ ಮಲ್ಲನಗೌಡ ಪಾಟೀಲ, ಕಾರಂಜಾ ಮುಳುಗಡೆ ಹಿತರಕ್ಷಣಾ ಸಮಿತಿ ನಿರ್ದೇಶಕ ರಾಜಕುಮಾರ ಕೋಸಂ, ಕಾರಂಜಾ ಮುಳುಗಡೆ ಸಂತ್ರಸ್ತರ ಅಧ್ಯಕ್ಷ ಚಂದ್ರಶೇಖರ ಪಾಟೀಲ, ರಾಜ್ಯ ಉಪಾಧ್ಯಕ್ಷ ಚಂದ್ರಶೇಖರ ಜಮಖಂಡೆ, ರೈತ ಸಂಘದ ಜಿಲ್ಲಾ ಉಪಾಧ್ಯಕ್ಷ ಶಂಕರೆಪ್ಪ ಪಾರಾ, ಬಿಎಸ್‌ಎಸ್‌ಕೆ ಎಸ್‌ಸಿ/ಎಸ್‌ಟಿ ಯೂನಿಯನ್ ಅಧ್ಯಕ್ಷ ಮಲ್ಲಿಕಾರ್ಜುನ ಭಂಡಾರಿ, ಬಿಎಸ್‌ಎಸ್‌ಕೆ ಕಾರ್ಮಿಕ ಸಂಘದ ಅಧ್ಯಕ್ಷ ಅರ್ಜುನ ತಮಗಿಕರ್, ಜಿಲ್ಲಾ ಸಂಘಟನಾ ಕಾರ್ಯದರ್ಶಿ ರಾಮರಾವ ಕೇರೂರೆ, ಹಸಿರು ಸೇನೆ ಜಿಲ್ಲಾ ಸಂಚಾಲಕ ನೀಲಕಂಠ ಬುಯ್ಯಾ, ಜಿಲ್ಲಾ ಉಪಾಧ್ಯಕ್ಷ ಸಿದ್ದಣ್ಣ ಭೂಶೆಟ್ಟಿ, ರೈತ ಸಂಘದ ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಮಹಾನಂದಾ ದೇಶಮುಖ, ಬೀದರ್ ತಾಲ್ಲೂಕು ಅಧ್ಯಕ್ಷ ನಾಗಯ್ಯ ಸ್ವಾಮಿ, ಕಮಲನಗರ ತಾಲ್ಲೂಕು ಅಧ್ಯಕ್ಷ ಪ್ರವೀಣ ಕುಲಕರ್ಣಿ, ಭಾಲ್ಕಿ ತಾಲ್ಲೂಕು ಅಧ್ಯಕ್ಷ ಬಾಬುರಾವ ಜೋಳದಾಬಕಾ, ಹುಮನಾಬಾದ ತಾಲ್ಲೂಕು ಅಧ್ಯಕ್ಷ ಸತೀಶ ನನ್ನೂರೆ, ಔರಾದ ತಾಲ್ಲೂಕು ಅಧ್ಯಕ್ಷ ಪ್ರಕಾಶ ಬಾವಗೆ ಹಾಗೂ ಬಸವಕಲ್ಯಾಣ ತಾಲ್ಲೂಕು ಅಧ್ಯಕ್ಷ ಸುಭಾಷ ರಗಟೆ ಸೇರಿದಂತೆ ವಿವಿಧ ತಾಲ್ಲೂಕುಗಳ ಪದಾಧಿಕಾರಿಗಳು, ಕಾರಂಜಾ ಮುಳುಗಡೆ ಸಂತ್ರಸ್ತರು, ರೈತರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಅ.7ರಂದು ಆಣದೂರ ಆರೋಗ್ಯ ಕೇಂದ್ರದಲ್ಲಿ ಸಾಮೂಹಿಕ ರಕ್ತದಾನ ಶಿಬಿರ

ಬೀದರ್‌ ತಾಲೂಕಿನ ಆಣದೂರ ಪ್ರಾಥಮಿಕ ಆರೋಗ್ಯ ಕೇಂದ್ರದ ಆವರಣದಲ್ಲಿ ಅ.7ರಂದು ಬೆಳಿಗ್ಗೆ...

ಧಾರವಾಡ | ಪಶ್ಚಿಮ ಪದವೀಧರ ಕ್ಷೇತ್ರದಲ್ಲಿ ಕಾಂಗ್ರೆಸ್ ಶಕ್ತಿ ಪ್ರದರ್ಶನ

ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ವಿಧಾನ ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿ...

ಧಾರವಾಡ | ಸಂವಿಧಾನ, ಪ್ರಜಾಪ್ರಭುತ್ವದ ರಕ್ಷಣೆಗೆ ಒಗ್ಗೂಡಿದ ಪ್ರಗತಿಪರ ಧ್ವನಿಗಳು

ಸಂವಿಧಾನ, ಪ್ರಜಾಪ್ರಭುತ್ವ, ಅಭಿವ್ಯಕ್ತಿ ಸ್ವಾತಂತ್ರ್ಯ ಮತ್ತು ಸಾಮಾಜಿಕ ಸೌಹಾರ್ದತೆಯ ರಕ್ಷಣೆಗಾಗಿ ಧಾರವಾಡದಲ್ಲಿ...

ರಾಜ್ಯಸಭಾ ಚುನಾವಣೆ: ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ, ಇಬ್ಬರು ಕೇಂದ್ರ ಸಚಿವರಿಗೆ ಕೊಕ್

ಉತ್ತರ ಪ್ರದೇಶದಿಂದ ತೆರವಾಗಲಿರುವ ಎಂಟು ರಾಜ್ಯಸಭಾ ಸ್ಥಾನಗಳಿಗೆ ಬಿಜೆಪಿ ಸೋಮವಾರ (ಅ....