ಬೀದರ್ |‌ ತೈಲ, ರಸಗೊಬ್ಬರ ದರ ಏರಿಕೆಯಿಂದ ರೈತರಿಗೆ ಸಂಕಷ್ಟ

Date:

ರಸಗೊಬ್ಬರ, ಡೀಸೆಲ್ ಹಾಗೂ ಪೆಟ್ರೋಲ್ ದರ ನಿರಂತರ ಏರಿಕೆಯಿಂದ ರೈತರು, ಕಾರ್ಮಿಕ ವರ್ಗ ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದು, ಗ್ರಾಮೀಣ ಆರ್ಥಿಕ ನೀತಿ ಘೋಷಣೆ, ರೈತರ ಸಾಲಮನ್ನಾ ಮಾಡಬೇಕೆಂದು ಸಂಯುಕ್ತ ಕಿಸಾನ್ ಮೋರ್ಚಾ ಜಿಲ್ಲಾ ಘಟಕ ಆಗ್ರಹಿಸಿದೆ.

- Advertisement -

ಈ ಕುರಿತು ಜಿಲ್ಲಾ ಘಟಕದ ಪದಾಧಿಕಾರಿಗಳು ಪ್ರಧಾನ ಮಂತ್ರಿ ಹಾಗೂ ಮುಖ್ಯಮಂತ್ರಿಗಳ ಹೆಸರಿಗೆ ಬರೆದ ಹಕ್ಕೊತ್ತಾಯ ಪತ್ರವನ್ನು ಬುಧವಾರ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಅವರಿಗೆ ಸಲ್ಲಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

“ಸರ್ಕಾರ ಘೋಷಿಸಿರುವ ಬೆಂಬಲ ಬೆಲೆ ರೈತರಿಗೆ ಸಮರ್ಪಕ ಪ್ರಯೋಜನಕಾರಿಯಾಗಿಲ್ಲ. ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ) ಕಾನೂನು ಜಾರಿಗೆ ತರಬೇಕು. ಈ ಬಗ್ಗೆ ಸಂಸತ್ತಿನಲ್ಲಿ ಕಾನೂನು ರೂಪಿಸಬೇಕು. ಮುಂಗಾರು ಹಾಗೂ ಹಿಂಗಾರು ಹಂಗಾಮಿನ ಸಂದರ್ಭದಲ್ಲಿ ರಸಗೊಬ್ಬರ, ಡೀಸೆಲ್ ಮತ್ತು ಪೆಟ್ರೋಲ್ ದರ ಏರಿಕೆಯಿಂದ ಕೃಷಿ ವೆಚ್ಚ ದುಪ್ಪಟ್ಟಾಗಿದ್ದು, ಟ್ರ್ಯಾಕ್ಟರ್ ಉಳುಮೆ, ನೀರಾವರಿ ಪಂಪ್‌ಸೆಟ್ ಬಳಕೆ ಹಾಗೂ ಬೆಳೆ ಸಾಗಾಣಿಕೆ ವೆಚ್ಚ ಹೆಚ್ಚಳದಿಂದ ರೈತರು ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ” ಎಂದು ದೂರಿದರು.

“ರೈತರ ಸಂಪೂರ್ಣ ಸಾಲ ಮನ್ನಾ ಮಾಡಬೇಕು, 60 ವರ್ಷ ಮೇಲ್ಪಟ್ಟ ರೈತರಿಗೆ ಮಾಸಿಕ ₹10 ಸಾವಿರ ಗೌರವಧನ ನೀಡಬೇಕು. ರಸಗೊಬ್ಬರ ದರ ಇಳಿಕೆ ಅಥವಾ ನೇರ ನಗದು ವರ್ಗಾವಣೆ ಮೂಲಕ ಸಹಾಯಧನ ನೀಡಬೇಕು, ರೈತರಿಗೆ ಡೀಸೆಲ್ ಮತ್ತು ಪೆಟ್ರೋಲ್ ರಿಯಾಯಿತಿ ದರದಲ್ಲಿ ಒದಗಿಸಬೇಕು. ರೈತರಿಗೆ ಸೌಲಭ್ಯ ಪಡೆಯಲು ಜಾರಿಯಲ್ಲಿರುವ ಇ-ವ್ಯವಸ್ಥೆ ರದ್ದುಪಡಿಸಿ, ಪಹಣಿ ಪರಿಶೀಲನೆ ಆಧಾರದ ಮೇಲೆ ಸೌಲಭ್ಯ ವಿತರಿಸಬೇಕು” ಎಂದು ಒತ್ತಾಯಿಸಿದರು.

IMG 20260527 145327
ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಅವರಿಗೆ ಮನವಿ ಪತ್ರ ಸಲ್ಲಿಸಿದರು.

“ಕಬ್ಬು ಬೆಳೆಗಾರರಿಗೆ ಕಾರ್ಖಾನೆಗಳಿಂದ ಪ್ರತಿ ಟನ್‌ಗೆ 1 ಕೆ.ಜಿ. ಸಕ್ಕರೆ ನೀಡಬೇಕು, ಹೈನುಗಾರಿಕೆ ರೈತರಿಗೆ ಎಮ್ಮೆ, ಹಸು ಸಾಲ ಮಂಜೂರು ಮಾಡಬೇಕು ಹಾಗೂ ಬಾಕಿ ಪ್ರೋತ್ಸಾಹಧನ ಬಿಡುಗಡೆಗೊಳಿಸಬೇಕು. ಬಗರ್‌ ಹುಕುಂ ಸಾಗುವಳಿದಾರರನ್ನು ಕ್ರಮಬದ್ಧಗೊಳಿಸುವುದು, ಇನಾಂ ಭೂಮಿ ನ್ಯಾಯಮಂಡಳಿ ರಚನೆ ಹಾಗೂ ಕೇಂದ್ರ ಸರ್ಕಾರ ಜಾರಿಗೊಳಿಸಿರುವ 4 ಕಾರ್ಮಿಕ ಸಂಹಿತೆಗಳನ್ನು ಹಿಂಪಡೆಯಬೇಕು” ಎಂದರು.

ಇದನ್ನೂ ಓದಿ : ಔರಾದ್‌ | ಗಡಿಭಾಗದಲ್ಲಿ ಕನ್ನಡತನ ಬೆಳೆಸುವುದು ಪ್ರತಿಯೊಬ್ಬರ ಕರ್ತವ್ಯ : ಪ್ರಕಾಶ ದೇಶಮುಖ

ಈ ವೇಳೆ ಸಂಯುಕ್ತ ಕಿಸಾನ್‌ ಮೋರ್ಚಾದ ಪ್ರಮುಖರಾದ ಶಿವರಾಯ ಮುದಾಳೆ, ನಜೀರ ಅಹ್ಮದ್, ಕೊಂಡಿಬಾರಾವ ಪಾಂಡ್ರೆ, ವಿಠಲರಾವ ಮೇತ್ರೆ, ಕಾಶಿನಾಥ ಭೂರೆ, ಷಣ್ಮೂಕಪ್ಪಾ, ಧೂಲಪ್ಪಾ, ಖಾಸಿಂ ಅಲಿ, ಖಮರ್ ಪಟೇಲ್, ಬಸವರಾಜ ಅಷ್ಟೂರ, ಶಫಾಯತ್ ಅಲಿ, ವಿಶ್ವನಾಥ ಧರಣೆ, ವಿಠಲ ರೆಡ್ಡಿ, ನಾಗೇಂದ್ರಪ್ಪ ಲಂಜವಾಡೆ, ಜೈಶೀಲಕುಮಾರ, ನನ್ನೇಸಾಬ್ ಟಿ. ಮಿರ್ಜಾಪೂರ, ಭಾವುರಾವ ನೆಲವಾಡೆ, ಸೇರಿದಂತೆ ಹಲವರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‌ಬೀದರ್‌ | ಮತದಾನ ಹಕ್ಕು ಕಸಿಯುವ ʼಎಸ್‌ಐಆರ್ʼ ಪ್ರಕ್ರಿಯೆ ವಿರೋಧಿಸಿ ಅ.12ರಂದು ಪ್ರತಿಭಟನೆ

ದೇಶಾದ್ಯಂತ ಎಸ್‌ಐಆರ್ ಹೆಸರಿನಲ್ಲಿ ಮತದಾರರ ಪಟ್ಟಿಯಿಂದ ಕೋಟ್ಯಂತರ ಮತದಾರರನ್ನು ಕೈಬಿಡಲಾಗಿರುವುದನ್ನು ಆರೋಪಿಸಿ,...

ವಿಜಯಪುರ | ದಸಂಸ ರಾಜ್ಯ ಸಂಘಟನಾ ಸಂಚಾಲಕಿಯಾಗಿ ಪ್ರತಿಭಾ ಹೊಸಮನಿ ಆಯ್ಕೆ

ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್‌ವಾದ) ಚಿಕ್ಕಮಗಳೂರಿನಲ್ಲಿ ಆಯೋಜಿಸಲಾಗಿದ್ದ ರಾಜ್ಯ...

ʼವೋಟ್‌ ಚೋರಿʼ ಆರೋಪಕ್ಕೆ ಪುರಾವೆ ಅಗತ್ಯʼ: ಚುನಾವಣಾ ಆಯೋಗದ ಪರ 124 ನಿವೃತ್ತ ಅಧಿಕಾರಿಗಳ ಪತ್ರ

ಚುನಾವಣಾ ಅಕ್ರಮಗಳ ಆರೋಪಗಳಿಗೆ ವಿಶ್ವಾಸಾರ್ಹ ಪುರಾವೆಗಳು ಅಗತ್ಯ ಎಂದು ಪ್ರತಿಪಾದಿಸಿರುವ 124...

ಮುದ್ದೇಬಿಹಾಳ | ದೆಹಲಿ ಸಭೆಗೂ ಮುನ್ನ ಕಬ್ಬು ಬೆಳೆಗಾರರ ಬೇಡಿಕೆ ಈಡೇರಿಕೆಗೆ ಆಗ್ರಹ

ಕಬ್ಬು ಬೆಳೆಗಾರರಿಗೆ ಪ್ರತಿ ಟನ್‌ಗೆ ₹8,500 ಕನಿಷ್ಠ ಬೆಲೆ ಹಾಗೂ ಹೆಚ್ಚುವರಿಯಾಗಿ...