ಬೀದರ್‌ | ಚಂದಾ ಹಣ ಕೊಟ್ಟಿಲ್ಲ ಎಂಬ ಕಾರಣಕ್ಕೆ ಮಾರಣಾಂತಿಕ ಹಲ್ಲೆ : ನಾಲ್ವರ ಬಂಧನ

Date:

ಮಹಾಹಾಶಿವರಾತ್ರಿ ಹಬ್ಬದ ಪ್ರಯುಕ್ತ ಬಲವಂತದಿಂದ ಚಂದಾ ವಸೂಲಿಗೆ ಯತ್ನಿಸಿ, ಹಣ ನೀಡದಿದ್ದಕ್ಕೆ ಮೂವರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಮಾರಣಾಂತಿಕ ಹಲ್ಲೆ ನಡೆಸಿರುವ ಆಘಾತಕಾರಿ ಘಟನೆ ಬೀದರ್ ನಗರದ ಮೈಲೂರು ಬಡಾವಣೆಯಲ್ಲಿ‌ ಶನಿವಾರ ನಡೆದಿದೆ.

- Advertisement -

ಗಾಯಾಳು ಮಹೇಶ ಬಿರಾದರ್‌ ನೀಡಿದ ದೂರಿನ ಮೇರೆಗೆ ಏಳು ಜನ ಹಾಗೂ ಇತರರ ಗಾಂಧಿ ಗಂಜ ಠಾಣೆಯಲ್ಲಿ ವಿರುದ್ಧ ಪ್ರಕರಣ ದಾಖಲಾಗಿದ್ದು. ವಿದ್ಯಾನಗರ ಕಾಲೋನಿಯ ಕೃಷ್ಣ, ನರೇಂದ್ರ, ಕಿರಣ್‌ ಮತ್ತು ನಿಖಿಲ್‌ ಅವರನ್ನು ಪೊಲೀಸರು ವಶಕ್ಕೆ ಪಡೆದು ನ್ಯಾಯಾಂಗ ಬಂಧನಕ್ಕೆ ಕಳುಹಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಘಟನೆ ಏನು?

ಬೀದರ್ ನಗರದ ಮೈಲೂರು ಕ್ರಾಸ್‌ ಬಳಿ ಮಹೇಶ್‌ ಜಗದೀಶ್‌ ಬಿರಾದಾರ ಎಂಬುವವರ ಫೋಟೋ ಸ್ಟುಡಿಯೋ ಇದೆ. ಮಹೇಶ್‌, ಇವರ ಸಹೋದರ ಸಚಿನ್‌ ಹಾಗೂ ವಿಷ್ಣು, ರೋಹಿತ್‌ ಮೈಕಲ್‌ ಸ್ಟುಡಿಯೋದಲ್ಲಿ ಕೆಲಸ ಮಾಡುತ್ತಾರೆ. ನಿನ್ನೆ (ಫೆ.7) ರಂದು ಸಂಜೆ ಕೃಷ್ಣ, ನರೇಂದ್ರ, ಕಿರಣ್‌ ಮತ್ತು ನಿಖಿಲ್‌ ಸೇರಿ ಏಳೆಂಟು ಜನ ಮಹೇಶ ಅವರ ಫೋಟೋ ಸ್ಟುಡಿಯೋಗೆ ತೆರಳಿ ಶಿವರಾತ್ರಿ ಹಬ್ಬಕ್ಕೆ ಚಂದಾ (ಪಟ್ಟಿ) ಕೊಡಬೇಕೆಂದು ಮಹೇಶ ಅವರ ತಮ್ಮ ಸಚಿನ್‌ಗೆ ಕೇಳಿದ್ದಾರೆ. ಆಗ ʼನನ್ನ ಅಣ್ಣ ಇಲ್ಲ. ಆಮೇಲೆ ಬನ್ನಿ’ ಎಂದು ಹೇಳಿದ್ದಾರೆ. ಅದಕ್ಕೆ ಕೋಪಗೊಂಡು ಅವಾಚ್ಯವಾಗಿ ನಿಂದಿಸಿ, ಅವರ ಮೇಲೆ ಹಲ್ಲೆ ನಡೆಸಿದ್ದಾರೆ. ಜಗಳ ಬಿಡಿಸಲು ಹೋದ ವಿಷ್ಣುವಿಗೂ ಹೊಡೆದಿದ್ದಾರೆ.

ಸಚಿನ್‌ ಅವರು, ಮಹೇಶ್‌ ಅವರಿಗೆ ಕರೆ ಮಾಡಿ ವಿಷಯ ತಿಳಿಸಿದಾಗ ಮಹೇಶ ಸ್ಟುಡಿಯೋಗೆ ಧಾವಿಸಿ ಹಲ್ಲೆ ನಡೆಸಿದರನ್ನು ಮಹೇಶ್‌ ʼಯಾಕೆ ಹೊಡೆದಿದ್ದಿರಾʼ ಎಂದು ಪ್ರಶ್ನಿಸಿದ್ದಾರೆ. ಇದರಿಂದ ಸಿಟ್ಟಿಗೆದ್ದು ಮಹೇಶ್‌ಗೂ ಹೊಡೆದು, ಚಾಕುವಿನಿಂದ ಕುತ್ತಿಗೆ ಹಿಂಭಾಗದಲ್ಲಿ ಇರಿದು ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದಾರೆ. ಆನಂತರ ಜೀವ ಬೆದರಿಕೆ ಕೂಡ ಒಡ್ಡಿದ್ದಾರೆ. ಕೊಲೆ ಮಾಡುವ ಉದ್ದೇಶದಿಂದಲೇ ಈ ರೀತಿ ಮಾಡಿದ್ದಾರೆ ಎಂದು ಮಹೇಶ್‌ ಅವರು ದೂರಿನಲ್ಲಿ ತಿಳಿಸಿದ್ದಾರೆ.

ಈ ಸಂಬಂಧ ಗಾಂಧಿಗಂಜ್‌ ಠಾಣೆಯಲ್ಲಿ 7 ಜನ ಸೇರಿ ಇತರರ ವಿರುದ್ಧ 115(5), 118(1), 109, 352, 351(2) ಜೊತೆ 109 ಬಿಎನ್‌ಎಸ್ ಅಡಿಯಲ್ಲಿ ದೂರು ದಾಖಲಾಗಿದೆ.

ʼಸಾರ್ವಜನಿಕ ಸ್ಥಳದಲ್ಲಿ ಸಾರ್ವಜನಿಕರಿಗೆ ಯಾರೇ ಆಗಲಿ ತೊಂದರೆ ಅಥವಾ ಅಪರಾಧ ಕೃತ್ಯ ಎಸಗಿದಲ್ಲಿ ಅಂಥವರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಲಾಗುವುದು. ಇಂತಹ ಘಟನೆಗಳು ಕಂಡು ಬಂದಲ್ಲಿ ಸಾರ್ವಜನಿಕರು ತಕ್ಷಣವೇ ಪೊಲೀಸ್ ಇಲಾಖೆಗೆ ಮಾಹಿತಿ ನೀಡಿದ್ದಲ್ಲಿ ದುಷ್ಕರ್ಮಿಗಳ ವಿರುದ್ಧ ಸೂಕ್ತ ಕಠಿಣ ಕಾನೂನು ಕ್ರಮ ಜರುಗಿಸಲಾಗುವುದು. ಇಂತಹ ಕೃತ್ಯದಲ್ಲಿ ಪದೇ ಪದೇ ಭಾಗಿಯಾದವರ ವಿರುದ್ಧ ರೌಡಿ ಶೀಟರ್‌ ತೆರೆದು ಸೂಕ್ತ ಕಾನೂನು ಕಠಿಣ ಕ್ರಮ ಜರುಗಿಸಲಾಗುವುದುʼ ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಪ್ರದೀಪ್‌ ಗುಂಟಿ ಎಚ್ಚರಿಸಿದ್ದಾರೆ.

ಇದನ್ನೂ ಓದಿ : ಬೀದರ್‌ | ಗಂಡನ ಮನೆಯವರ ಕಿರುಕುಳ : 11 ತಿಂಗಳ ಮಗು ಬಿಟ್ಟು ಮಹಿಳೆ ಆತ್ಮಹತ್ಯೆ

ಠಾಣೆಯ ಪಿಐ ಆನಂದರಾವ್‌, ಪಿಎಸ್‌ಐ ದಶರಥ ಹಾಗೂ ಸಿಬ್ಬಂದಿಗಳಾದ ನವೀನ್‌, ಅನಿಲ್‌, ಇರ್ಫಾನ್‌, ಗಂಗಾಧರ್‌, ಸುಧಾಕರ್‌ ಅವರನ್ನು ಒಳಗೊಂಡ ತಂಡವು ಪ್ರಕರಣ ದಾಖಲಾದ 24 ಗಂಟೆಗಳಲ್ಲಿ ಆರೋಪಿಗಳನ್ನು ಬಂಧಿಸಿರುವುದಕ್ಕೆ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಪ್ರದೀಪ್‌ ಗುಂಟಿ ಅವರು ಅಧಿಕಾರಿ ಹಾಗೂ ಸಿಬ್ಬಂದಿ ಕಾರ್ಯವೈಖರಿಯನ್ನು ಶ್ಲಾಘಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಕಲ್ಯಾಣ ಕರ್ನಾಟಕದ ಪ್ರಗತಿಗೆ ಗುಣಮಟ್ಟದ ಶಿಕ್ಷಣ ಅಗತ್ಯ : ಮೀನಾಕ್ಷಿ ಬಿರಾದರ್

ಕಲ್ಯಾಣ ಕರ್ನಾಟಕ ಭಾಗ ಆರ್ಥಿಕ , ಔದ್ಯೋಗಿಕ, ಸಾಮಾಜಿಕ ಮತ್ತು ಸಾಂಸ್ಕೃತಿಕ...

ಬೀದರ್‌ | ಹಾಲಿಗಿಂತ ನೀರು ದುಬಾರಿಯಾಗುವ ಕಾಲ ದೂರವಿಲ್ಲ: ಮಾರುತಿ ಬೌದ್ಧೆ

ನಿಸರ್ಗದತ್ತವಾಗಿ ಉಚಿತವಾಗಿ ದೊರೆಯಬೇಕಾದ ನೀರು ಮುಂದೊಂದು ದಿನ ಹಾಲಿನ ದರಕ್ಕಿಂತಲೂ ದುಬಾರಿಯಾಗಿ...

ಬೀದರ್ ಕಾರುಣ್ಯ ಸೌಹಾರ್ದ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ

ಬೀದರ್ ಕಾರುಣ್ಯ ಸೌಹಾರ್ದ ಸಹಕಾರಿ ಸಂಘದಿಂದ 2025-26ನೇ ಸಾಲಿನಲ್ಲಿ 1,970 ಮಂದಿಗೆ...

ಬಸವಕಲ್ಯಾಣ | ಅಲ್ಲಮ ಜಗತ್ತಿನ ಶ್ರೇಷ್ಠ ಅನುಭಾವಿ

ಅಲ್ಲಮಪ್ರಭು ಅವರು ಜಗತ್ತಿನ ಶ್ರೇಷ್ಠ ಅನುಭಾವಿಗಳಾಗಿದ್ದು, ಅವರ ಚಿಂತನೆ ಹಾಗೂ ವಚನಗಳ...