ಬೀದರ್‌ | ನ.1ರಂದು ಸಚಿವ ಈಶ್ವರ ಖಂಡ್ರೆಗೆ ಅಭಿನಂದನಾ ಸಮಾರಂಭ

Date:

ಬೀದರ್‌ ತಾಲ್ಲೂಕಿನ ಅತಿವಾಳ ಸಮೀಪ ಡಾ. ಬಿ.ಆರ್. ಅಂಬೇಡ್ಕರ್ ಅಧ್ಯಯನ ಮತ್ತು ಸಾಂಸ್ಕೃತಿಕ ಕೇಂದ್ರ ಸ್ಥಾಪನೆಗೆ ರಾಜ್ಯ ಸರ್ಕಾರದಿಂದ 10 ಎಕರೆ ಜಮೀನು ಹಾಗೂ ₹15 ಕೋಟಿ ಅನುದಾನ ಮಂಜೂರು ಮಾಡಿಸಿದ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಅವರಿಗೆ ನವೆಂಬರ್ 1ರಂದು ಅಭಿನಂದನಾ ಸಮಾರಂಭ ಹಮ್ಮಿಕೊಳ್ಳಲಾಗಿದೆ.

- Advertisement -

ನಗರದ ಪೂಜ್ಯ ಚನ್ನಬಸವ ಪಟ್ಟದ್ದೇವರು ರಂಗಮಂದಿರದಲ್ಲಿ ಬೆಳಿಗ್ಗೆ 11 ಗಂಟೆಗೆ ನಡೆಯಲಿರುವ ಸಮಾರಂಭದಲ್ಲಿ ಸಚಿವರನ್ನು ದಲಿತ ಸಮುದಾಯದ ವತಿಯಿಂದ ಸನ್ಮಾನಿಸಲಾಗುವುದು ಎಂದು ಬೀದರ್ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ವಿನೋದಕುಮಾರ ಅಪ್ಪೆ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರೆಜಿಲ್‌ನಲ್ಲಿ ಒಂದೇ ಹುದ್ದೆಗೆ ಎರಡು ಬಾರಿ ಚುನಾವಣೆ: ಏನಿದು...

ಭಾರತಕ್ಕೂ ಎರಡನೇ ಸುತ್ತಿನ ಪದ್ಧತಿ ಅಗತ್ಯವಿದೆಯೇ ಎಂಬ ಚರ್ಚೆ ಆಗಿಂದಾಗ್ಗೆ ಮುನ್ನೆಲೆಗೆ ಬರುತ್ತಲೇ ಇರುತ್ತದೆ. ಹಲವು ಅಭ್ಯರ್ಥಿಗಳು ಕಣದಲ್ಲಿರುವಾಗ ಮತಗಳು ಹಂಚಿಹೋಗಿ, ಕೇವಲ ಶೇ 30 ಅಥವಾ 40ರಷ್ಟು ಮತ ಪಡೆದವರೂ ನಮ್ಮಲ್ಲಿ...

ಬೆಂಗಳೂರು ಪೌರಕಾರ್ಮಿಕರ ಶ್ವಾಸಕೋಶ ಹಿಂಡುತ್ತಿದೆ ಮಾಲಿನ್ಯ; BMTC ಸಿಬ್ಬಂದಿ,...

ಬೆಂಗಳೂರಿನಲ್ಲಿ ಮಾಲಿನ್ಯವು ಹೊಸ ತಂಬಾಕಾಗಿ ಪರಿಣಮಿಸಿದೆ. ಜನರ ಶ್ವಾಸಕೋಶವನ್ನು ಹಿಂಡುತ್ತಿದೆ. ಮಾಸ್ಕ್, ಕೈಗವಸು, ಆರೋಗ್ಯ ತಪಾಸಣೆ ಹಾಗೂ ಚಿಕಿತ್ಸಾ ಸೌಲಭ್ಯಗಳ ಕೊರತೆಗಳಿಂದಾಗಿ ಪೌರಕಾರ್ಮಿಕರು, ಬಿಎಂಟಿಸಿ ನೌಕರರು, ಸಂಚಾರ ಪೊಲೀಸರು ಹಾಗೂ ಕಟ್ಟಡ ಕಾರ್ಮಿಕರು...

ಗ್ರಾಮೀಣ ಮೀಸಲಾತಿಯಲ್ಲಿ ಸಾಮಾಜಿಕ ಅನ್ಯಾಯ; ಬರಿದಾಗುತ್ತಿರುವ ಬಡ ಮಕ್ಕಳ...

ಸರಕಾರಿ ಶಾಲೆ ಸೇರುವವರು ಕೇವಲ ಬಡತನ-ಕೆಳಮಟ್ಟದ ಕುಟುಂಬದವರು ಎಂಬಂತಾಗಿದೆ. ಈ ಋಣಾತ್ಮಕ ಭಾವನೆ ಹೋಗಲಾಡಿಸಲು ಕನ್ನಡದಲ್ಲಿ ಕಲಿತರೆ ಉನ್ನತ ಶಿಕ್ಷಣ, ಉದ್ಯೋಗ ಸ್ಪರ್ಧೆಯಲ್ಲಿ ಜಯಿಸಬಹುದೆಂಬ ವಿಶ್ವಾಸ ಮೂಡಿಸಬೇಕಾಗಿದೆ. ಈಗಿನ ಎಡಬಿಡಂಗಿ ಗ್ರಾಮೀಣ ಮೀಸಲಾತಿ...

ಅಂಬೇಡ್ಕರ್ ಅಧ್ಯಯನ ಮತ್ತು ಸಾಂಸ್ಕೃತಿಕ ಕೇಂದ್ರ ಸ್ಥಾಪನೆಯು ದಲಿತ ಸಮುದಾಯದ ಬಹುದಿನಗಳ ಬೇಡಿಕೆಯಾಗಿತ್ತು. ಸರ್ಕಾರದಿಂದ ಜಮೀನು ಮತ್ತು ಅನುದಾನ ಮಂಜೂರು ಮಾಡಿಸುವ ಮೂಲಕ ಈ ಬೇಡಿಕೆ ಈಡೇರಿಸಲು ಸಚಿವರು ಸಹಕರಿಸಿದ್ದಾರೆ. ಸುಮಾರು ₹50 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ಈ ಕೇಂದ್ರವು ಶೈಕ್ಷಣಿಕ, ಸಾಂಸ್ಕೃತಿಕ ಹಾಗೂ ಸಾಮಾಜಿಕ ಜಾಗೃತಿಯ ಪ್ರಮುಖ ಕೇಂದ್ರವಾಗಿ ರೂಪುಗೊಳ್ಳಲಿದೆ ಎಂದು ಅವರು ಹೇಳಿದ್ದಾರೆ.

WhatsApp Image 2026 10 10 at 7.46.08 PM 26

ಅಭಿನಂದನಾ ಸಮಾರಂಭದಲ್ಲಿ ದಲಿತ ಸಮುದಾಯದವರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಆಯೋಜನಾ ಸಮಿತಿಯ ವಿನೋದಕುಮಾರ ಅಪ್ಪೆ, ವಿಠ್ಠಲದಾಸ್ ಪ್ಯಾಗೆ, ವಿಜಯಕುಮಾರ ಸೋನಾರೆ, ಮಾರುತಿ ಭಂಗೂರೆ, ಪ್ರಶಾಂತ ದೊಡ್ಡಿ, ವಿನಯಕುಮಾರ ಮಾಳಗೆ, ವಿನೋದ ಬಂದಗೆ, ಸೂರ್ಯಕಾಂತ ಸಾಧುರೆ ಹಾಗೂ ಶಿವಕುಮಾರ ನೀಲಕಟ್ಟಿ ಮನವಿ ಮಾಡಿದ್ದಾರೆ.

ಇದನ್ನೂ ಓದಿ : ಬೀದರ್‌ | ವಾಲ್ಮೀಕಿ ರಾಮಾಯಣ ಮಾನವ ಸಂಬಂಧಗಳ ಮೌಲ್ಯ ಸಾರುತ್ತದೆ: ನಾ.ಗೀತಾಚಾರ್ಯ

WhatsApp Image 2026 10 10 at 6.59.42 PM 13
eedina
ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

SIR | ಬೀದರ್ ಜಿಲ್ಲೆಯ 2.15 ಲಕ್ಷ ಮತದಾರರು ಕರಡು ಪಟ್ಟಿಯಿಂದ ಹೊರಕ್ಕೆ!

ಬೀದರ್ ಜಿಲ್ಲೆಯಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆ...

ಬೆಳಗಾವಿಯಲ್ಲಿ ಡಿ. 7ರಿಂದ ಚಳಿಗಾಲದ ಅಧಿವೇಶನ

ರಾಜ್ಯ ಕರ್ನಾಟಕ ವಿಧಾನಮಂಡಲದ ಉಭಯ ಸದನಗಳ ಚಳಿಗಾಲದ ಅಧಿವೇಶನವನ್ನು ಬೆಳಗಾವಿಯ ಸುವರ್ಣ...

ಪ್ರಶಾಂತ್ ಕಿಶೋರ್ ಆಪ್ತ, ‘ಜನ್ ಸುರಾಜ್’ ಡಿಜಿಟಲ್ ಮ್ಯಾನೇಜರ್ ರೈಲಿನಿಂದ ನಾಪತ್ತೆ, ನಿಗೂಢ ಸಾವು

ರಾಜಕೀಯ ತಂತ್ರಜ್ಞ ಪ್ರಶಾಂತ್ ಕಿಶೋರ್ ನೇತೃತ್ವದ 'ಜನ್ ಸುರಾಜ್ ಪಾರ್ಟಿ'ಯ (ಜೆಎಸ್‌ಪಿ)...

ಬೀದರ್‌ | ಹಸ್ತಪ್ರತಿ ಸಂರಕ್ಷಣೆಗೆ ಪ್ರತ್ಯೇಕ ಇಲಾಖೆ ಸ್ಥಾಪಿಸಿ: ನಾ.ಗೀತಾಚಾರ್ಯ

ರಾಜ್ಯದ ಅಮೂಲ್ಯ ಜ್ಞಾನಸಂಪತ್ತಾಗಿರುವ ಹಸ್ತಪ್ರತಿಗಳ ಸಂರಕ್ಷಣೆ ಹಾಗೂ ನಿರ್ವಹಣೆಗೆ ಸಮಗ್ರ ನೀತಿ...