ಬೀದರ್ | ನ.7ಕ್ಕೆ ಜಿಲ್ಲಾ ಪ್ರಥಮ ದಲಿತ ಬಂಡಾಯ ಸಮ್ಮೇಳನ

Date:

ಬೀದರ್ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಘಟಕದ ವತಿಯಿಂದ ಜಿಲ್ಲಾ ಮಟ್ಟದ ಪ್ರಥಮ ದಲಿತ ಬಂಡಾಯ ಸಮ್ಮೇಳನವನ್ನು ನವೆಂಬರ್ 7ರಂದು ಆಯೋಜಿಸಲು ನಿರ್ಧರಿಸಲಾಗಿದೆ.

- Advertisement -

ನಗರದ ಕನ್ನಡ ಭವನದಲ್ಲಿ ಶನಿವಾರ ನಡೆದ ಸಮ್ಮೇಳನದ ಪೂರ್ವಭಾವಿ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಯಿತು. ನಗರದ ಪೂಜ್ಯ ಚನ್ನಬಸವ ಪಟ್ಟದ್ದೇವರು ರಂಗಮಂದಿರದಲ್ಲಿ ಸಮ್ಮೇಳನ ನಡೆಯಲಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಳಗಾವಿ | ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಕಬ್ಬು ಬೆಂಕಿಗಾಹುತಿ:...

ಬರಗಾಲದಿಂದ ಬೆಳೆ ನಷ್ಟ ಅನುಭವಿಸಿ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ರೈತರಿಗೆ ಇದೀಗ ವಿದ್ಯುತ್‌ ಶಾರ್ಟ್ ಸರ್ಕ್ಯೂಟ್ ಮತ್ತೊಂದು ಹೊಡೆತ ನೀಡಿದೆ. ವರ್ಷವಿಡೀ ಕಷ್ಟಪಟ್ಟು ಬೆಳೆಸಿದ ಕಬ್ಬು ಕಟಾವಿಗೆ ಬರುವ ಹೊತ್ತಿನಲ್ಲಿ ಬೆಂಕಿಗೆ ಆಹುತಿಯಾಗಿದ್ದು,...

ಹಾವೇರಿ | ಡಿಜಿಟಲ್ ಜನನ ಪ್ರಮಾಣ ಪತ್ರ ಗೊಂದಲ:...

ಹಳೆ ಮಾದರಿಯ ಕೈಬರಹ ಜನನ ಪ್ರಮಾನ ಪತ್ರದ ವಿಧಾನವನ್ನು ಬಿಟ್ಟು, ಡಿಜಿಟಲ್ ಜನನ ಪ್ರಮಾಣ ಪತ್ರ ನಿಯಮ ಜಾರಿಗೊಳಿಸಿದ್ದರಿಂದ ಹಲವು ಸಮಸ್ಯೆಗಳು ಎದುರಾಗಿದ್ದು, ಹದಿನಾರು ವರ್ಷಕ್ಕಿಂತ ಕೆಳಗಿನ ಮಕ್ಕಳಿಗೆ ಆಧಾರ್ ಕಾರ್ಡ್ ತಿದ್ದುಪಡಿ...

ವಲಸೆ ಹಳ್ಳಿಗರಿಗೆ ಮಾತ್ರವೇ? ಉದ್ಯೋಗಕ್ಕಾಗಿ ನಗರ ಸೇರುವ ಯುವಜನರೂ...

ಭಾರತವು ವಿಶ್ವದಲ್ಲೇ ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ದೇಶ. ಹೆಚ್ಚುತ್ತಿರುವ ಜನಸಂಖ್ಯೆಯೊಂದಿಗೆ ಆಹಾರ, ಶಿಕ್ಷಣ, ಆರೋಗ್ಯ, ವಸತಿ ಮತ್ತು ಉದ್ಯೋಗದ ಬೇಡಿಕೆಯೂ ಹೆಚ್ಚುತ್ತಿದೆ. ದೇಶದ ಅಭಿವೃದ್ಧಿಗೆ ಮಾನವ ಸಂಪನ್ಮೂಲವೇ ದೊಡ್ಡ ಶಕ್ತಿಯಾಗಿದ್ದರೂ, ಆ...

ಸಮ್ಮೇಳನದ ಸ್ವಾಗತ ಸಮಿತಿಯ ಅಧ್ಯಕ್ಷರಾಗಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಸುರೇಶ ಚನ್ನಶೆಟ್ಟಿ ತಿಳಿಸಿದರು.

WhatsApp Image 2026 10 10 at 7.46.08 PM 22

“ಕನ್ನಡದ ಪ್ರಾತಿನಿಧಿಕ ಸಂಸ್ಥೆಯಾಗಿರುವ ಕನ್ನಡ ಸಾಹಿತ್ಯ ಪರಿಷತ್ತು ಸಾಮಾಜಿಕ ನ್ಯಾಯ, ಸಮಾನತೆ ಹಾಗೂ ನಾಡಿನ ಸಾಹಿತ್ಯ-ಸಂಸ್ಕೃತಿಯ ಸಂರಕ್ಷಣೆಯ ಆಶಯದೊಂದಿಗೆ ದಲಿತ-ಬಂಡಾಯ, ವಚನ ಮತ್ತು ದಾಸ ಸಾಹಿತ್ಯ ಸೇರಿದಂತೆ ವಿವಿಧ ಸಾಹಿತ್ಯ ಸಮ್ಮೇಳನಗಳನ್ನು ಆಯೋಜಿಸುತ್ತಿದೆ. ಇದೇ ನಿಟ್ಟಿನಲ್ಲಿ ಜಿಲ್ಲೆಯಲ್ಲಿ ಪ್ರಥಮ ಬಾರಿಗೆ ಜಿಲ್ಲಾ ಮಟ್ಟದ ದಲಿತ ಬಂಡಾಯ ಸಮ್ಮೇಳನ ಹಮ್ಮಿಕೊಳ್ಳಲಾಗುತ್ತಿದೆ. ಸಮ್ಮೇಳನದ ಸರ್ವಾಧ್ಯಕ್ಷರಾಗಿ ಹಿರಿಯ ಹೋರಾಟಗಾರ ಮಾರುತಿ ಬೌದ್ಧೆ ಅವರನ್ನು ಆಯ್ಕೆ ಮಾಡಲಾಗಿದೆ” ಎಂದು ಅವರು ಹೇಳಿದರು.

ಸಮ್ಮೇಳನವನ್ನು ಅದ್ದೂರಿಯಾಗಿ ಹಾಗೂ ಅರ್ಥಪೂರ್ಣವಾಗಿ ನಡೆಸುವ ಉದ್ದೇಶದಿಂದ ವಿವಿಧ ಸಮಿತಿಗಳನ್ನು ರಚಿಸುವುದು, ಸಮ್ಮೇಳನದ ಅಂಗವಾಗಿ ಸ್ಮರಣ ಸಂಚಿಕೆ ಹೊರತರುವುದು ಸೇರಿದಂತೆ ಹಲವು ವಿಷಯಗಳ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು. ಸಮ್ಮೇಳನದ ಯಶಸ್ಸಿಗೆ ಅಗತ್ಯವಾದ ಸಲಹೆ-ಸೂಚನೆಗಳನ್ನು ಸಭೆಯಲ್ಲಿ ಪಾಲ್ಗೊಂಡವರಿಂದ ಸಂಗ್ರಹಿಸಲಾಯಿತು.

WhatsApp Image 2026 10 24 at 4.32.41 PM

ಸಮ್ಮೇಳನದ ನಿಯೋಜಿತ ಸರ್ವಾಧ್ಯಕ್ಷ ಮಾರುತಿ ಬೌದ್ಧೆ, ಫರ್ನಾಂಡಿಸ್ ಹಿಪ್ಪಳಗಾಂವ್, ಮಾಳಪ್ಪ ಅಡಸಾರೆ, ಕಾಶಿನಾಥ ಚೆಲ್ವಾ, ಗಾಲೀಬ್ ಹಾಸ್ಮಿ, ಜಗದೀಶ್ವರ ಬಿರಾದಾರ, ಸುಧಾಮಣಿ ಗುಪ್ತಾ, ಸಿದ್ರಾಮ ಕನೇರಿ, ಅನೀಲ ನಿಡೋದಾ, ಬುದ್ಧಪ್ರಕಾಶ ಭಾವಿಕಟ್ಟಿ, ಎಂ.ಎಸ್. ಮನೋಹರ, ಶಿವಶಂಕರ ಟೋಕರೆ, ಮಹೇಶ್ ಗೋರನಾಳಕರ್, ಅಭಿ ಕಾಳೆ, ಅರುಣ ಪಟೇಲ್, ದೇವೆಂದ್ರ ಭಾಲ್ಕೆ, ವಿನಯಕುಮಾರ್ ಮಾಳಗೆ, ಶ್ರೀಮಂತ ಸಪಾಟೆ, ಸಂತೋಷ ಜೋಳದಾಬಕೆ, ವಿನೋದಕುಮಾರ್ ಬಂದ್ಗೆ, ಸಿದ್ಧರೂಢ ಭಾಲ್ಕೆ, ಸುಬ್ಬಣ್ಣ ಕರಕನಳ್ಳಿ, ಬಾಲಾಜಿ ಕುಂಬಾರ, ಶರಣು ಫುಲೆ, ರಾಜಕುಮಾರ ವಾಘಮಾರೆ, ಪವನ ಪಠಾರೆ, ಬಸಯ್ಯ ಹಿರೇಮಠ, ರಾಹುಲ ಹಾಲೆಹಿಪ್ಪರಗಿಕರ್, ನಾಗಶೇನ್ ಗಾಯಕವಾಡ, ಗಣಪತಿ ಭಕ್ತಾ, ರಮೇಶ ಉಮಾಪುರೆ, ಮಹಾಲಿಂಗ ಬೆಲ್ದಾಳ, ಖಲೀಲ್ ಮಿಯ್ಯಾ ಸೇರಿದಂತೆ ವಿವಿಧ ಸಂಘ-ಸಂಸ್ಥೆಗಳ ಪದಾಧಿಕಾರಿಗಳು ಹಾಗೂ ಸಾಹಿತ್ಯಾಸಕ್ತರು ಸಭೆಯಲ್ಲಿ ಪಾಲ್ಗೊಂಡು ಸಲಹೆಗಳನ್ನು ನೀಡಿದರು.

ಇದನ್ನೂ ಓದಿ : ಬೀದರ್ | ಅ.27, 28ರಂದು ಅಖಿಲ ಕರ್ನಾಟಕ 23ನೇ ಹಸ್ತಪ್ರತಿ ಸಮ್ಮೇಳನ

WhatsApp Image 2026 10 10 at 6.59.42 PM 11
eedina
ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉದ್ಯೋಗ ಸೃಷ್ಟಿ, ನೈಸರ್ಗಿಕ, ಪಾರಂಪರಿಕ ತಾಣಗಳ ಪರಿಚಯಿಸಲು ಕ್ರಾಂತಿಕಾರಿ ಹೆಜ್ಜೆ: ಸಿಎಂ ಡಿ.ಕೆ. ಶಿವಕುಮಾರ್

"ಕರ್ನಾಟಕವು ನೈಸರ್ಗಿಕ ಹಾಗೂ ಪಾರಂಪರಿಕ ಸಂಪತ್ತಿನಿಂದ ಶ್ರೀಮಂತವಾಗಿದೆ. ಹಂಪಿ, ಬೇಲೂರು, ಮಲೆನಾಡು,...

ಹವಾಮಾನ ವರದಿ: ಮುಂದಿನ 5 ದಿನ 12 ಜಿಲ್ಲೆಗಳಲ್ಲಿ ಭಾರಿ ಮಳೆ

ರಾಜ್ಯದಲ್ಲಿ ಹಿಂಗಾರು ಮತ್ತು ತಮಿಳುನಾಡು ಕರಾವಳಿಯಲ್ಲಾಗಿರುವ ಹವಾಮಾನ ಬದಲಾವಣೆಯ ಪ್ರಭಾವದಿಂದಾಗಿ ಮುಂದಿನ...

ವಲಸೆ ಹಳ್ಳಿಗರಿಗೆ ಮಾತ್ರವೇ? ಉದ್ಯೋಗಕ್ಕಾಗಿ ನಗರ ಸೇರುವ ಯುವಜನರೂ ವಲಸಿಗರೇ..?

ಭಾರತವು ವಿಶ್ವದಲ್ಲೇ ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ದೇಶ. ಹೆಚ್ಚುತ್ತಿರುವ ಜನಸಂಖ್ಯೆಯೊಂದಿಗೆ...