ಬೀದರ್‌ | ಪಂಚ ಗ್ಯಾರಂಟಿ ಯೋಜನೆ ನಿಲ್ಲುವುದಿಲ್ಲ : ಎಚ್.ಎಂ.ರೇವಣ್ಣ

Date:

ಕೊಟ್ಟ ಮಾತಿನಂತೆ ರಾಜ್ಯದಲ್ಲಿ ಪಂಚ ಗ್ಯಾರಂಟಿ ಯೋಜನೆಗಳು ಮುಂದುವರೆಸಲಾಗುವುದು ಎಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ರಾಜ್ಯಾಧ್ಯಕ್ಷ ಹೆಚ್. ಎಂ.ರೇವಣ್ಣ ಹೇಳಿದರು.

- Advertisement -

ಸೋಮವಾರ ಬೀದರ್ ನಗರದ ಅತಿಥಿ ಗೃಹದಲ್ಲಿ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿ, “ರಾಜ್ಯದ ಜನರು ಭಯ ಪಡಬೇಕಿಲ್ಲ. ಗ್ಯಾರಂಟಿ ಯೋಜನೆಗಳು ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ. ಯೋಜನೆಗಳನ್ನು ಪರಿಷ್ಕರಣೆ ಮಾಡುವ ಕಾರ್ಯವನ್ನು ಕೈಗೈತ್ತಿಕೊಳ್ಳಲಾಗಿದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

‘ಹಾಸ್ಟೆಲ್‌’ ಇಲ್ಲದ ಶಿಕ್ಷಣದ ಸ್ವರೂಪ ಹೇಗಿರಲಿದೆ?

ಸಾಮಾನ್ಯವಾಗಿ ʼಶಿಕ್ಷಣʼ ಎಂದರೆ ʼತರಗತಿ, ಪಠ್ಯಪುಸ್ತಕ ಮತ್ತು ಪರೀಕ್ಷೆಗಳʼ ಸುತ್ತ ಹೆಣೆದುಕೊಂಡಿರುವ ಕಲ್ಪನೆ. ಆದರೆ ಒಬ್ಬ ವಿದ್ಯಾರ್ಥಿ ದಿನದ ಬಹುಪಾಲು ಕಳೆಯುವ ಜಾಗ ʼಹಾಸ್ಟೆಲ್‌ʼ. ಹೆಚ್ಚಾಗಿ ಚರ್ಚೆಗೆ ಬಾರದ ಈ ʼಹಾಸ್ಟೆಲ್‌ʼ ಎಂಬ...

ಬರದ ಬೇಗೆಯಲ್ಲಿ ರಾಜ್ಯ ಬೆಂದರೂ ಅನುದಾನಕ್ಕ ದನಿ ಎತ್ತದ...

ಸದಾ ಕಾಲ 'ಮೋದಿ ಜಪ' ಮಾಡುತ್ತಾ, ಕೇವಲ ರಾಜಕೀಯಕ್ಕಾಗಿ ಮತ್ತು ಪಕ್ಷದ ಅಜೆಂಡಾಗಳಿಗಾಗಿ ರಾಜ್ಯಾದ್ಯಂತ ಸುತ್ತುವ ಈ ಸಂಸದರಿಗೆ, ನಾಡಿನ ಜನತೆ ಬರಗಾಲದ ತೀವ್ರ ಸಂಕಷ್ಟದಲ್ಲಿ ಬೆಂದು ಹೋಗುತ್ತಿರುವಾಗ ಅದೇ ಪ್ರಧಾನಿ ನರೇಂದ್ರ...

SIR ಅಕ್ರಮ | ಗ್ಯಾನೇಶ್‌ ಕುಮಾರ್ ‘ಅಪರಾಧಿ’ಯಾದ್ರೆ, ಮೋದಿ-ಅಮಿತ್...

ಭಾರತೀಯ ಪ್ರಜಾಪ್ರಭುತ್ವದ ಇತಿಹಾಸದಲ್ಲೇ ಅತ್ಯಂತ ಕರಾಳ ಅಧ್ಯಾಯವೊಂದು ಈಗ ಜಗಜ್ಜಾಹೀರಾಗಿದೆ. ಪ್ರತಿಯೊಬ್ಬ ನಾಗರಿಕನ ಅತಿ ದೊಡ್ಡ ರಾಜಕೀಯ ಶಕ್ತಿಯಾಗಿರುವ 'ಮತದಾನದ ಹಕ್ಕು' ಮತ್ತು ಅದನ್ನು ಕಾಯಬೇಕಾದ ಸಾಂವಿಧಾನಿಕ ಸಂಸ್ಥೆಯನ್ನೇ ಆಡಳಿತಾರೂಢ ಮೋದಿ-ಅಮಿತ್ ಶಾ...

“2025 ಸೆ.8ರಂದು ಮುಖ್ಯಮಂತ್ರಿಯವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಮರಣ ಹೊಂದಿದ ಫಲಾನುಭವಿಗಳ ಬಗ್ಗೆ ಸಿಎಂ ಅವರು ಪ್ರಸ್ತಾಪಿಸಿದರು. ತದನಂತರ ನಾವು ರಾಜ್ಯದ 26 ಜಿಲ್ಲೆಗಳಲ್ಲಿ ಗ್ಯಾರಂಟಿ ಅನುಷ್ಠಾನದ ಮಾಹಿತಿ ಕಲೆಹಾಕಲು ಪ್ರವಾಸ ಮಾಡಿದ ಸಂದರ್ಭದಲ್ಲಿ ಕೆಲವು ಮೃತ ಫಲಾನುಭವಿಗಳ ಖಾತೆಗೆ ಗೃಹಲಕ್ಷ್ಮೀ ಹಣ ಜಮೆಯಾಗಿರುವುದು ಬೆಳಕಿಗೆ ಬಂದಿದೆ” ಎಂದರು.

ಮೃತರ ಖಾತೆಗಳಿಗೆ ಗೃಹಲಕ್ಷ್ಮಿ ಹಣ ಜಮೆಯಾಗಿರುವ ಬಗ್ಗೆ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಇಂತಹ ಪ್ರಕರಣಗಳನ್ನು ಪರಿಶೀಲನೆ ಮಾಡುವಂತೆ ಸೂಚನೆ ನೀಡಲಾಗಿತ್ತು. ಅಧಿಕಾರಿಗಳು ಪರಿಶೀಲನೆಯ ವೇಳೆ ರಾಜ್ಯದಲ್ಲಿ ₹114 ಕ್ಕೂ ಹೆಚ್ಚು ಕೋಟಿ ಮೃತ ಫಲಾನುಭವಿಗಳ ಖಾತೆಗೆ ಹಣ ಜಮೆಯಾಗಿದ್ದು ತಿಳಿದುಬಂದಿದೆ. ಈ ಪೈಕಿ ಜಿಲ್ಲೆಯಲ್ಲಿ 11.99 ಕೋಟಿ ರೂಪಾಯಿ ಜಮೆಯಾಗಿದೆ. ರಾಜ್ಯದಲ್ಲಿ ಫಲಾನುಭವಿಗಳ ಖಾತೆಗೆ ಜಮೆಯಾದ ₹14 ಕೋಟಿ ಹಾಗೂ ಜಿಲ್ಲೆಯಲ್ಲಿ ₹11.7 ಲಕ್ಷ ರೂಪಾಯಿ ಹಿಂಪಡೆಯಲಾಗಿದ್ದು, ಇನ್ನೂ ಹಿಂಪಡೆಯುವ ಕಾರ್ಯ ಮುಂದುವರೆದಿದೆ” ಎಂದು ಹೇಳಿದರು.

ಇದನ್ನೂ ಓದಿ : ಬೀದರ್‌ | ಆರ್‌ಎಸ್‌ಎಸ್ ನೋಂದಣಿ ಮಾಡಿಸಿಕೊಳ್ಳಲಿ : ರಾಷ್ಟ್ರಪತಿಗೆ ಮನವಿ

ಗ್ಯಾರಂಟಿ ಯೋಜನೆ ಅನುಷ್ಠಾನ ಪ್ರಾಧಿಕಾರದ ಜಿಲ್ಲಾಧ್ಯಕ್ಷ ಅಮೃತರಾವ ಚಿಮಕೋಡೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಶ್ರೀಧರ ಹಾಗೂ ಪ್ರಮುಖರಾದ ಮಾಳಪ್ಪ ಅಡಸಾರೆ, ಮಲ್ಲಿಕಾರ್ಜುನ ಬಿರಾದಾರ, ದತ್ತು ಮೂಲಗೆ, ಮುರಳೀಧರರಾವ್ ಏಕಲಾರಕರ್ ಸೇರಿದಂತೆ ಇತರರು ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗಲಕೋಟೆ | ಸಮುದಾಯಗಳ ಸಮಸ್ಯೆಗಳಿಗೆ ಸಂಘಟಿತ ಹೋರಾಟ ಅಗತ್ಯ

ರಾಜ್ಯದಲ್ಲಿ ಅಸ್ತಿತ್ವಕ್ಕೆ ಬಂದಿರುವ ಕರ್ನಾಟಕ ರಾಜ್ಯ ಬಲಗೈ ಸಮುದಾಯಗಳ ಒಕ್ಕೂಟದ ಮೂಲಕ...

ಬೀದರ್‌ | ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿಯಿಂದ ಅಣಕು ಶವಯಾತ್ರೆ

ರಾಜ್ಯ ಕಾಂಗ್ರೆಸ್ ಸರ್ಕಾರ ಆರ್ಥಿಕವಾಗಿ ದಿವಾಳಿಯಾಗಿದೆ ಹಾಗೂ ಅಭಿವೃದ್ಧಿ ಕಾರ್ಯಗಳು ಕುಂಠಿತಗೊಂಡಿವೆ...

ಬೀದರ್‌ | ವಿವಿಧ ಯೋಜನೆಗಳ ಸೌಲಭ್ಯಕ್ಕೆ ಅರ್ಜಿ ಆಹ್ವಾನ

ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ವತಿಯಿಂದ 2026–27ನೇ ಸಾಲಿನ ಧನಶ್ರೀ,...