ಬೀದರ್‌ | ಜಾನಪದ ಕಲೆಗೆ ಬೇಕು ಉತ್ತೇಜನ

Date:

ಜಾನಪದ ಕಲೆಗೆ ಉತ್ತೇಜನ ನೀಡುವ ಕೆಲಸ ಆಗಬೇಕು ಎಂದು ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಸದಸ್ಯ ಡಾ. ಸಂಜೀವಕುಮಾರ ಅತಿವಾಳೆ ಹೇಳಿದರು.

- Advertisement -

ಶ್ರೀ ಕೇತಕಿ ಶೈಕ್ಷಣಿಕ, ಸಾಮಾಜಿಕ ಮತ್ತು ಸಾಂಸ್ಕೃತಿಕ ಸಂಸ್ಥೆ ಹಾಗೂ ಬೆಂಗಳೂರಿನ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಯೋಗದಲ್ಲಿ ಬೀದರ್‌ ನಗರದ ಮಹಾಲಕ್ಷ್ಮಿ ಸಭಾಂಗಣದಲ್ಲಿ ಈಚೆಗೆ ಆಯೊಜಿಸಿದ್ದ ಜಿಲ್ಲಾಮಟ್ಟದ ಸಂಗೀತ ರಸಮಂಜರಿ ಹಾಗೂ ಜಾನಪದ ಸಾಂಸ್ಕೃತಿಕ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಇದು ಕೇವಲ ಒಂದು ಪಕ್ಷದ ಹೋರಾಟವಲ್ಲ, ವ್ಯವಸ್ಥೆಯ ಮೇಲಿನ...

ಜೆಪಿಯ ಟೀಕೆಗಳು ತೀಕ್ಷ್ಣವಾಗಿದ್ದರೂ, ಅದು ಅಹಿಂಸಾತ್ಮಕವಾಗಿದೆ. ಹೆದ್ದಾರಿ ತಡೆಗಳಿಲ್ಲ, ಬಲವಂತದ ಬಂದ್‌ಗಳಿಲ್ಲ. ವಾಸ್ತವವಾಗಿ, ಶಾಂತಿಯುತ ಸಭೆಗೆ ಜಾಗ ನೀಡದೆ ಸರ್ಕಾರವೇ ಅಡೆತಡೆಗಳನ್ನು ಸೃಷ್ಟಿಸುತ್ತಿದೆ. ಈ ಉದ್ದೇಶವನ್ನು ಬೆಂಬಲಿಸುವ ಜನರು ಹೆಚ್ಚಿನ ಸಂಖ್ಯೆಯಲ್ಲಿ ಬೀದಿಗೆ...

ನೊಬೆಲ್‌ ಪ್ರಶಸ್ತಿ ಸರಣಿ | ಭಾರತೀಯ ಮೂಲದ ದಕ್ಷಿಣ...

ಈ ಬಾರಿಯ ಶಾಂತಿ ನೊಬೆಲ್‌ ಪ್ರಶಸ್ತಿಯನ್ನು ಶಾಂತಿ ಮತ್ತು ಅಂತಾರಾಷ್ಟ್ರೀಯ ಕಾನೂನನ್ನು ಉತ್ತೇಜಿಸುವ ನಿಟ್ಟಿನಲ್ಲಿ ನಡೆಸಿದ ಪ್ರಯತ್ನಗಳಿಗಾಗಿ, ಮಾನವ ಹಕ್ಕುಗಳ ರಕ್ಷಣೆಗಾಗಿ ಜೀವನವನ್ನೇ ಮುಡಿಪಾಗಿಟ್ಟ ಭಾರತೀಯ ಮೂಲದ ದಕ್ಷಿಣ ಆಫ್ರಿಕಾದ ಡಾ. ನವನೀತಮ್‌...

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

“ಜಾನಪದ ಕಲೆಗಳು ಶ್ರೀಮಂತ ಕಲೆಗಳಾಗಿವೆ. ಹೀಗಾಗಿ ಅವುಗಳನ್ನು ಉಳಿಸಿ, ಬೆಳೆಸಬೇಕಿದೆ. ಜಾನಪದ ಕಾರ್ಯಕ್ರಮಗಳಿಗೆ ಸಹಾಯ ಧನ ಹಾಗೂ ಕಲಾವಿದರಿಗೆ ಪ್ರೋತ್ಸಾಹ ನೀಡುವುದರಿಂದ ಕಲೆಯ ಬೆಳವಣಿಗೆ ಸಾಧ್ಯವಾಗಲಿದೆ” ಎಂದರು.

ಅಧ್ಯಕ್ಷತೆ ವಹಿಸಿದ್ದ ಶ್ರೀ ಕೇತಕಿ ಶೈಕ್ಷಣಿಕ, ಸಾಮಾಜಿಕ ಮತ್ತು ಸಾಂಸ್ಕೃತಿಕ ಸಂಸ್ಥೆಯ ಅಧ್ಯಕ್ಷ ಹಣ್ಮು ಪಾಜಿ ಮಾತನಾಡಿ, “ಜಿಲ್ಲೆಯಲ್ಲಿ ಬಹಳಷ್ಟು ಪ್ರತಿಭಾವಂತ ಜಾನಪದ ಕಲಾವಿದರು ಇದ್ದಾರೆ. ಕಾರ್ಯಕ್ರಮಗಳ ಆಯೋಜನೆ ಮೂಲಕ ಅವರಿಗೆ ವೇದಿಕೆ ಕಲ್ಪಿಸಬೇಕಾಗಿದೆ. ಸಂಸ್ಥೆಯು ಅನೇಕ ವರ್ಷಗಳಿಂದ ಕನ್ನಡ ಭಾಷೆ, ಕಲೆ, ಸಾಹಿತ್ಯ, ಸಂಸ್ಕೃತಿಯ ಬೆಳವಣಿಗೆಗೆ ಪೂರಕ ಚಟುವಟಿಕೆಗಳನ್ನು ನಡೆಸಿಕೊಂಡು ಬರುತ್ತಿದೆ. ಮುಂದಿನ ದಿನಗಳಲ್ಲೂ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಿದೆ” ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಗಣೇಶ ಸಿ.ಎ ಹಾಗೂ ತಂಡದವರು ಜಾನಪದ ಗೀತೆ, ಸೃಜನ್ಯ ಮತ್ತು ತಂಡ ಭಾವಗೀತೆ, ಭವಾನಿ ಶಿವಕುಮಾರ ಹಾಗೂ ತಂಡ ಕನ್ನಡ ಗೀತೆ, ಅಶ್ವಿನಿ ರಾಜಕುಮಾರ ಹಿರೇಮಠ ದಂಪತಿ ಸುಗಮ ಸಂಗೀತ, ಪ್ರಕಾಶ ಕುಲಕರ್ಣಿ ಮತ್ತು ತಂಡದವರು ಹಾಸ್ಯ ಹಾಗೂ ಗಾಯನ ನಡೆಸಿಕೊಟ್ಟರು. ಕುಮಾರ ಬಸವ ಪ್ರಸಾದ್, ತಬಲಾ ಪ್ರತೀಕ್ ಹಾಗೂ ತಂಡವದರು ತಬಲಾ ಸೋಲೋ, ನಾಟ್ಯಶ್ರೀ ನೃತ್ಯಾಲಯದ ರಾಣಿ ಸತ್ಯಮೂರ್ತಿ ಭರತನಾಟ್ಯ, ಶ್ರೀದೇವಿ ಮತ್ತು ತಂಡ ಭಜನೆ, ದೇವಗಿರಿ ತಾಂಡಾದ ಸೇವಾಲಾಲ ಕಲಾ ತಂಡ ಲಂಬಾಣಿ ನೃತ್ಯ, ಜೈ ಭವಾನಿ ರಂಗ ಭೂಮಿ ಕಲಾವಿದರ ಸಂಘ ಹಲಗೆ ಹಾಗೂ ಚಿನ್ನಮ್ಮ ಲಾಧಾ ಮತ್ತು ತಂಡದವರು ಡೊಳ್ಳು ಕುಣಿತ ಪ್ರದರ್ಶಿಸಿದರು.

ಇದನ್ನೂ ಓದಿ : ಬೀದರ್‌ | ‘ಮಿಯಾಝಕಿ’ ಮಾವು ಕೆಜಿಗೆ ₹2.5 ಲಕ್ಷ : ಜಗತ್ತಿನ ದುಬಾರಿ ಬೆಲೆಯ ಬೆಳೆ ಬೆಳೆದು ಮಾದರಿಯಾದ ರೈತ

ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಚಂದ್ರಕಾಂತ ಪೂಜಾರಿ, ರಾಷ್ಟ್ರೀಯ ಭ್ರಷ್ಟಾಚಾರ ನಿರ್ಮೂಲನೆ ಕಾರ್ಯಾಚರಣೆ ಸಮಿತಿಯ ಅಧ್ಯಕ್ಷ ಅನಂತ ರೆಡ್ಡಿ, ಹಿರಿಯ ಸಾಹಿತಿ ಎಂ.ಜಿ. ದೇಶಪಾಂಡೆ, ಉದ್ಯಮಿ ರವಿ ದುರ್ಗೆ, ಮುಖಂಡ ಬಸವರಾಜ ಶಹಾಪುರೆ, ಕರಂ ಫೌಂಡೇಷನ್ ಅಧ್ಯಕ್ಷ ಸರ್ದಾರ್ ಮನ್ಮೀತ್‍ಸಿಂಗ್ ಮತ್ತಿತರರು ಇದ್ದರು. ರವೀಂದ್ರ ಚವಾಣ್ ಸ್ವಾಗತಿಸಿದರು. ಪರಮೇಶ ಡಿ. ವಿಳಾಸಪುರ ನಿರೂಪಿಸಿದರು. ಸಂಗಮೇಶ ಶಹಾಪುರೆ ವಂದಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

SIR | ಸಿಜೆಪಿ ಪ್ರತಿಭಟನೆ – ದೆಹಲಿ ದಿಗ್ಭಂದನ; ‘ಸರ್ಕಾರದ ದಮನ ತುರ್ತು ಪರಿಸ್ಥಿತಿಗಿಂತಲೂ ಭೀಕರವಾಗಿದೆ’: ಅಭಿಜಿತ್ ದೀಪ್ಕೆ ಕಿಡಿ

ಮತದಾರರ ಪಟ್ಟಿಯಿಂದ 13 ಕೋಟಿಗೂ ಹೆಚ್ಚು ಹೆಸರುಗಳನ್ನು ಅಕ್ರಮವಾಗಿ ಕೈಬಿಡಲಾಗಿರುವ ಎಸ್‌ಐಆರ್...

SIR | ಸಿಜೆಪಿ ಪ್ರತಿಭಟನೆಗೂ ಮುನ್ನವೇ ದೆಹಲಿಯಲ್ಲಿ 1,000 ಮಂದಿ ಬಂಧನ

ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ...

ನೊಬೆಲ್‌ ಪ್ರಶಸ್ತಿ ಸರಣಿ | ಭಾರತೀಯ ಮೂಲದ ದಕ್ಷಿಣ ಆಫ್ರಿಕಾದ ನವಿ ಪಿಳ್ಳೈಗೆ ಒಲಿದ ಶಾಂತಿ ಪುರಸ್ಕಾರ

ಈ ಬಾರಿಯ ಶಾಂತಿ ನೊಬೆಲ್‌ ಪ್ರಶಸ್ತಿಯನ್ನು ಶಾಂತಿ ಮತ್ತು ಅಂತಾರಾಷ್ಟ್ರೀಯ ಕಾನೂನನ್ನು...

ನಮ್ಮ‌ ಪ್ರಸ್ತಾಪಗಳನ್ನು ರಾಷ್ಟ್ರಪತಿ ನಿರಾಕರಿಸಿದ್ದು ಅಚ್ಚರಿ ಮೂಡಿಸಿದೆ, ಸಾಕ್ಷ್ಯ ಕೇಳಿದ್ದಾರೆ – ಕೊಡುತ್ತೇವೆ: ರಾಹುಲ್ ಗಾಂಧಿ

ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಕ್ರಮವಾಗಿ ತೆಗೆದುಹಾಕಿರುವ ಕುರಿತು ನಾವು ಎತ್ತಿರುವ ವಿಷಯವನ್ನು...