ಬೀದರ್‌ | ಜಾನಪದ ಹಾಡುಗಾರ್ತಿ ಇಂದ್ರಮ್ಮಗೆ ಒಲಿದ ಅಕಾಡೆಮಿ ವಾರ್ಷಿಕ ಗೌರವ ಪ್ರಶಸ್ತಿ

Date:

ಕರ್ನಾಟಕ ಜಾನಪದ ಅಕಾಡೆಮಿಯು 2025ನೇ ಸಾಲಿನ ಪ್ರಶಸ್ತಿಗಳನ್ನು ಪ್ರಕಟಿಸಿದ್ದು, ಔರಾದ್‌ ತಾಲ್ಲೂಕಿನ ಜೋಜನಾ ಗ್ರಾಮದ ಇಂದ್ರಮ್ಮಾ ಶಾಮರಾವ್‌ ಜಾನಪದ ಅಕಾಡೆಮಿ ವಾರ್ಷಿಕ ಗೌರವ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

- Advertisement -

ಇಂದ್ರಮ್ಮಾ (77) ಅವರು, ಕಳೆದ 35 ವರ್ಷಗಳಿಂದ ಹಂತಿ ಪದ, ಮೊಹರಂ ಪದ, ಬುಲಾಯಿ ಪದಗಳ ಗಾಯನದಿಂದ ಜಿಲ್ಲೆ ಅಲ್ಲದೆ ರಾಜ್ಯದ ವಿವಿಧೆಡೆ ಜರುಗಿದ ಸಭೆ, ಸಮಾರಂಭ, ಜಾತ್ರೆ, ಉತ್ಸವಗಳಲ್ಲಿ ಭಾಗವಹಿಸಿ ಸಂಗೀತ ಸೇವೆ ಸಲ್ಲಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಇಂದ್ರಮ್ಮಾ ಅವರ ಜಾನಪದ ಗಾಯನ ಸೇವೆಯನ್ನು ಪರಿಗಣಿಸಿ ಬೀದರ್‌ ಜಿಲ್ಲೆಯಿಂದ ಪ್ರಸಕ್ತ ಸಾಲಿನ ಕರ್ನಾಟಕ ಜಾನಪದ ಅಕಾಡೆಮಿಯ ವಾರ್ಷಿಕ ಗೌರವ ಪ್ರಶಸ್ತಿಗೆ ಆಯ್ಕೆ ಮಾಡಿದೆ. ಪ್ರಶಸ್ತಿಯು ₹25 ಸಾವಿರ ನಗದು ಹಾಗೂ ಪ್ರಶಸ್ತಿ ಫಲಕ ಒಳಗೊಂಡಿದೆ.

ಇದನ್ನೂ ಓದಿ : ಶೌಚಾಲಯ ಕಾಣದ ರಾಜ್ಯದ 170 ಸರ್ಕಾರಿ ಶಾಲೆಗಳು

Advertisements

ʼಕರ್ನಾಟಕ ಜಾನಪದ ಅಕಾಡೆಮಿ ಪ್ರಶಸ್ತಿಗೆ ಆಯ್ಕೆ ಮಾಡಿದ ಅಕಾಡೆಮಿ ಅಧ್ಯಕ್ಷ ಹಾಗೂ ಅಕಾಡೆಮಿ ಸದಸ್ಯರಿಗೆ ಧನ್ಯವಾದ ಸಲ್ಲಿಸುವೆ. ಪೂರ್ವಜರಿಂದ ಬಂದ ಕಲೆಯನ್ನು ಮೈಗೂಡಿಸಿಕೊಂಡು ಎಲೆಮರೆ ಕಾಯಿಯಂತೆ ಜಾನಪದ ಕಲಾ ಸೇವೆ ಮಾಡುತ್ತಿರುವ ನನ್ನನ್ನು ಗುರುತಿಸಿ ಆಯ್ಕೆ ಮಾಡಿದ್ದು ಸಂತಸ ತಂದಿದೆʼ ಎಂದು ಪ್ರತಿಕ್ರಿಯಿಸಿದರು.

WhatsApp Image 2025 12 23 at 5.42.23 PM
eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

Bhalki Ground Report | ಮುಸ್ಲಿಮರ ಮತ ಹಕ್ಕಿಗೆ ಕನ್ನ: ಬಗೆದಷ್ಟು ಬಯಲಾಗ್ತಿದೆ ‘ಫಾರ್ಮ್-7’ರ ಸಂಚು?

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಸಚಿವ ಈಶ್ವರ ಬಿ.ಖಂಡ್ರೆ ಅವರು ಪ್ರತಿನಿಧಿಸುವ...

ಹುಲಸೂರ | ಮುಚಳಂಬ ಗ್ರಾಮದಲ್ಲಿ ಬಸ್ ತಂಗುದಾಣ ನಿರ್ಮಾಣಕ್ಕೆ ಆಗ್ರಹ

ಹುಲಸೂರ ತಾಲೂಕಿನ ಮುಚಳಂಬ ಗ್ರಾಮದಲ್ಲಿ ಸಾರ್ವಜನಿಕರ ಅನುಕೂಲಕ್ಕಾಗಿ ಸುಸಜ್ಜಿತ ಬಸ್ ತಂಗುದಾಣ...

ಔರಾದ್‌ | 20 ದಿನಗಳಿಂದ ಕೆಟ್ಟು ನಿಂತ ಶುದ್ಧ ಕುಡಿಯುವ ನೀರಿನ ಘಟಕ: ದುರಸ್ತಿಗೆ ಶೆಂಬೆಳ್ಳಿ ಗ್ರಾಮಸ್ಥರ ಆಗ್ರಹ

ಔರಾದ್‌ ತಾಲೂಕಿನ ಶೆಂಬೆಳ್ಳಿ ಗ್ರಾಮದಲ್ಲಿ ಸರ್ಕಾರಿ ಶಾಲೆ ಸಮೀಪವಿರುವ ಶುದ್ಧ ಕುಡಿಯುವ...

ಬೀದರ್‌ | ಬಿಎಸ್‌ಎಸ್‌ಕೆ ಶೀಘ್ರ ಪುನಶ್ಚೇತನಕ್ಕೆ ಜೈಕರವೇ ಆಗ್ರಹ

ಬೀದರ್ ಜಿಲ್ಲೆಯ ರೈತರು ಹಾಗೂ ಕಾರ್ಮಿಕರ ಪ್ರಮುಖ ಆಧಾರವಾಗಿರುವ ಹುಮನಾಬಾದ್ ತಾಲೂಕಿನ...