ಬೀದರ್‌ | ನಮ್ಮ ನಾಡಿನ ಸಂಸ್ಕೃತಿಯ ತಾಯಿಬೇರು ಜಾನಪದ: ಹಾವಗಿರಾವ ಮೈಲಾರೆ

Date:

ಜಾನಪದವು ನಮ್ಮ ನಾಡಿನ ಸಂಸ್ಕೃತಿ, ಪರಂಪರೆ ಹಾಗೂ ನೆಲಮೂಲದ ಬದುಕಿನ ಪ್ರತಿಬಿಂಬವಾಗಿದೆ. ಅದು ನಮ್ಮ ಸಂಸ್ಕೃತಿಯ ತಾಯಿಬೇರು ಎಂದು ಸದ್ಗುರು ಸಿದ್ಧಾರೂಢ ಪದವಿ ಮಹಾವಿದ್ಯಾಲಯದ ಆಡಳಿತಾಧಿಕಾರಿ ಡಾ.ಹಾವಗಿರಾವ ಮೈಲಾರೆ ಹೇಳಿದರು.

- Advertisement -

ಕರ್ನಾಟಕ ಜಾನಪದ ಪರಿಷತ್ತಿನ ಬೀದರ್ ತಾಲೂಕು ಘಟಕ ಹಾಗೂ ಜನಜನಿತ ಕಲಾ ಪ್ರದರ್ಶನ ಸಂಘದ ಸಂಯುಕ್ತ ಆಶ್ರಯದಲ್ಲಿ ಶುಕ್ರವಾರ ಸದ್ಗುರು ಸಿದ್ಧಾರೂಢ ಪದವಿ ಮಹಾವಿದ್ಯಾಲಯದಲ್ಲಿ ಆಯೋಜಿಸಿದ್ದ ‘ಶಾಲಾ ಕಾಲೇಜಿಗೊಂದು ಜಾನಪದ’ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬಿತ್ತನೆ ಗುರಿ ಅರ್ಧದಷ್ಟೂ ಮುಟ್ಟದ ಕೃಷಿ ಚಟುವಟಿಕೆ; ಜೋಳದ...

ಮುಂಗಾರು ಮಳೆ ಕೈಕೊಟ್ಟು ಬೆಳೆ ನಷ್ಟದಿಂದ ಕಂಗೆಟ್ಟ ಅನ್ನದಾತರಿಗೆ ಹಿಂಗಾರು ಹಂಗಾಮಿನಲ್ಲಾದರೂ ಮಳೆ ಆಸರೆಯಾಗಬಹುದು ಎಂಬ ನಿರೀಕ್ಷೆಯಿತ್ತು. ಆದರೆ ರೈತರ ಆ ನಿರೀಕ್ಷೆಯೂ ಹುಸಿಯಾಗಿದೆ. ಮುಂಗಾರಿನ ಬೆನ್ನಲ್ಲೇ ಹಿಂಗಾರು ಹಂಗಾಮಿನಲ್ಲೂ ಮಳೆ ಕೈಕೊಟ್ಟಿರುವುದರಿಂದ...

ಧಾರವಾಡದ ‘ಲಲಿತಕಲಾ ಅಕಾಡೆಮಿ’ಗೆ ದುಸ್ಥಿತಿ: ಕಲಾವಿದರಿಂದಲೇ ದೂರವಾದ ಪ್ರಾದೇಶಿಕ...

ಕಲಾವಿದರ ಬಹುದಿನಗಳ ಬೇಡಿಕೆಯಂತೆ ಸ್ಥಾಪನೆಯಾದ ಕೇಂದ್ರಕ್ಕೆ ಮೂರೇ ವರ್ಷಗಳಲ್ಲಿ ದುಸ್ಥಿತಿ; ಸಂಚಾಲಕರ ಏಕಪಕ್ಷೀಯ ಧೋರಣೆ, ಕಲಾವಿದರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದಿರುವುದು ಹಾಗೂ ಕಲಾ ಚಟುವಟಿಕೆಗಳ ಕೊರತೆಯ ವಿರುದ್ಧ ಹಿರಿಯ ಕಲಾವಿದರ ಆಕ್ರೋಶ. ಸಲಹಾ ಸಮಿತಿ...

ಗದಗ | ವರದಕ್ಷಿಣೆ ಮುಟ್ಟದ, ಒಗ್ಗಟ್ಟು ಬಿಡದ ತುಂಬು...

ಆಧುನಿಕತೆ ಬೆಳೆದಂತೆಲ್ಲ ಸಮಾಜದಲ್ಲಿ ಅವಿಭಕ್ತ ಕುಟುಂಬಗಳು ಕಣ್ಮರೆಯಾಗಿ ವಿಭಕ್ತ ಕುಟುಂಬಗಳ ಸಂಖ್ಯೆಗಳು ಹೆಚ್ಚಾಗುತ್ತಿವೆ. ನಾವು ನಮ್ಮವರು ಎನ್ನುವ ಭಾವನೆಗಳು ಮರೆಯಾಗುತ್ತಿರುವ ಹೊತ್ತಿನಲ್ಲಿ ನಂಬಿಕೆ, ವಿಶ್ವಾಸ, ಪ್ರೀತಿಯ ತಳಗಹದಿಯ ಮೇಲೆ ಇಂದಿಗೂ ಜಾಲವಾಡಗಿ ಅವಿಭಕ್ತ...

ವಿದ್ಯಾರ್ಥಿಗಳಿಗೆ ಜಾನಪದ ಸಂಸ್ಕೃತಿ, ಕಲೆ ಹಾಗೂ ಪರಂಪರೆಯ ಪರಿಚಯ ಮಾಡಿಕೊಡುವ ಇಂತಹ ಕಾರ್ಯಕ್ರಮಗಳು ಅತ್ಯಂತ ಉಪಯುಕ್ತವಾಗಿವೆ. ಜಾನಪದವು ನಮ್ಮ ಪೂರ್ವಜರ ಜೀವನಶೈಲಿ, ಅನುಭವ ಮತ್ತು ಮೌಲ್ಯಗಳನ್ನು ಮುಂದಿನ ಪೀಳಿಗೆಗೆ ತಲುಪಿಸುವ ಮಹತ್ವದ ಮಾಧ್ಯಮವಾಗಿದೆ ಎಂದು ತಿಳಿಸಿದರು.

ಮುಖ್ಯ ಅತಿಥಿ ಭೀಮರಾವ ಹಡಪದ ಅವರು ತಂದೆ-ತಾಯಿ, ಅಣ್ಣ-ತಮ್ಮ, ಅಜ್ಜ-ಅಜ್ಜಿ ಸೇರಿದಂತೆ ಕುಟುಂಬದ ಸಂಬಂಧಗಳಲ್ಲಿರುವ ಜೀವನಮೌಲ್ಯ ಹಾಗೂ ಭಾವನಾತ್ಮಕ ಸಂಬಂಧಗಳ ಮಹತ್ವವನ್ನು ಜಾನಪದ ಹಾಡುಗಳ ಮೂಲಕ ಸುಂದರವಾಗಿ ವಿವರಿಸಿದರು.

ರಾಷ್ಟ್ರೀಯ ಬುಡಕಟ್ಟು ಕಲಾ ಪರಿಷತ್ತಿನ ಪ್ರಧಾನ ಕಾರ್ಯದರ್ಶಿ ರಾಜಕುಮಾರ ಹೆಬ್ಬಾಳೆ ಮಾತನಾಡಿ, “ನಮ್ಮ ನೆಲಮೂಲದ ಸಂಸ್ಕೃತಿ, ಪರಂಪರೆ ಹಾಗೂ ಜೀವನಶೈಲಿಯನ್ನು ಪರಿಚಯಿಸುವುದೇ ಜಾನಪದದ ಮಹತ್ವವಾಗಿದೆ” ಎಂದರು.

ಇದೇ ಸಂದರ್ಭದಲ್ಲಿ ರಾಜ್ಯಮಟ್ಟದ ಜಾನಪದ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ದೇವಿದಾಸ ಚಿಮಕೋಡೆ ಅವರನ್ನು ಪರಿಷತ್ತಿನ ವತಿಯಿಂದ ವಿಶೇಷವಾಗಿ ಸನ್ಮಾನಿಸಲಾಯಿತು.

WhatsApp Image 2026 11 13 at 8.18.17 PM

ಕಾರ್ಯಕ್ರಮದ ಆರಂಭದಲ್ಲಿ ಕಾಲೇಜಿನ ವಿದ್ಯಾರ್ಥಿಗಳು ಪ್ರಾರ್ಥನೆ ಹಾಗೂ ಸ್ವಾಗತಗೀತೆ ಹಾಡಿದರು. ಪರಿಷತ್ತಿನ ಅಧ್ಯಕ್ಷ ಎಸ್.ಬಿ. ಕುಚಬಾಳ ಪ್ರಾಸ್ತಾವಿಕವಾಗಿ ಮಾತನಾಡಿದರು. ಕಾಲೇಜಿನ ಪ್ರಾಚಾರ್ಯ ನಾಗಪ್ಪ ಜಾನಕನೋರ ಅಧ್ಯಕ್ಷತೆ ವಹಿಸಿದ್ದರು.

ಇದನ್ನೂ ಓದಿ : ಬೀದರ್‌ | ಅನುಭವ ಮಂಟಪ ಉತ್ಸವ : ನ.16ರಿಂದ 26ರವರೆಗೆ ‘ಜನಪದದಲ್ಲಿ ಬಸವ ದರ್ಶನ’ ಪ್ರವಚನ

ಪ್ರಮುಖರಾದ ಸಂಗೀತಾ ಕಾಂಬಳೆ, ದೇವಿದಾಸ ಚಿಮಕೋಡೆ ಹಾಗೂ ಎಸ್.ಬಿ.ಕುಚಬಾಳ ಅವರು ಜಾನಪದ ಗೀತೆಗಳನ್ನು ಪ್ರಸ್ತುತಪಡಿಸಿದರು. ಬಸವರಾಜ ಹೆಗ್ಗೆ ಕಾರ್ಯಕ್ರಮ ನಿರೂಪಿಸಿದರು. ಧನರಾಜ ಅನಕಲೆ ಸ್ವಾಗತಿಸಿದರು. ಪ್ರಕಾಶ ಕನ್ನಾಳೆ ವಂದಿಸಿದರು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಐಐಟಿ-ರೂರ್ಕಿಯಲ್ಲಿ ವಿದ್ಯಾರ್ಥಿ ಶವವಾಗಿ ಪತ್ತೆ; ಆತ್ಮಹತ್ಯೆ ಶಂಕೆ, 70 ಪರೀಕ್ಷೆಗಳು ಮುಂದೂಡಿಕೆ

ದೇಶದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳಲ್ಲಿ ಒಂದಾದ ರೂರ್ಕಿಯ ಭಾರತೀಯ ತಂತ್ರಜ್ಞಾನ ಸಂಸ್ಥೆಯ...

ಬೀದರ್‌ | ಕೃಷಿ, ಶಿಕ್ಷಣ, ವಸತಿ ಸಾಲ ಸೌಲಭ್ಯಕ್ಕೆ ಆದ್ಯತೆ ನೀಡಿ: ಸಂಸದ ಸಾಗರ್ ಖಂಡ್ರೆ

ಬೀದರ್ ಜಿಲ್ಲೆಯಲ್ಲಿ ಕೃಷಿ, ಶಿಕ್ಷಣ, ವಸತಿ ಸೇರಿದಂತೆ ವಿವಿಧ ಕ್ಷೇತ್ರಗಳ ಅಭಿವೃದ್ಧಿಗೆ...

ಬೆಳಗಾವಿ | 25 ವರ್ಷಗಳಿಂದ ಭಕ್ತರ ಪ್ರೀತಿ ಗಳಿಸಿದ್ದ ಧ್ರುವರಾಜ ಆನೆ ಇನ್ನಿಲ್ಲ; ಮಾವುತ ಕಣ್ಣೀರು

ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಅಲಕನೂರು ಗ್ರಾಮದ ಶ್ರೀ ಕರಿಸಿದ್ದೇಶ್ವರ ದೇವಾಲಯದ...

ಹವಾಮಾನ ವರದಿ: ಮುಂದಿನ 7 ದಿನ ರಾಜ್ಯಕ್ಕಿಲ್ಲ ಮಳೆ; ಚಳಿ-ಬಿಸಿಲಿನದ್ದೇ ಅಬ್ಬರ!

ಕಳೆದ ತಿಂಗಳು ಮಳೆ ಅಬ್ಬರ ಕಂಡಿದ್ದ ಕರ್ನಾಟಕದ ವಾತಾವರಣದಲ್ಲಿ ಈಗ ಭಾರೀ...