ಬೀದರ್ | ಕಾರ್ಮಿಕ ದಿನಾಚರಣೆಗೆ ಕಡ್ಡಾಯ ರಜೆ ಘೋಷಿಸಲು ಒತ್ತಾಯ

Date:

ಬೀದರ ಜಿಲ್ಲೆಯ ವಿವಿಧ ಉದ್ಯೋಗ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸುತ್ತಿರುವ ಸಾವಿರಾರು ಕಾರ್ಮಿಕರಿಗೆ ಕಾರ್ಮಿಕ ದಿನಾಚರಣೆಯಂದು ಕಡ್ಡಾಯ ರಜೆ ಘೋಷಿಸುವಂತೆ ಆಗ್ರಹಿಸಿ ಜಿಲ್ಲಾ ಕಾರ್ಮಿಕ ಅಧಿಕಾರಿಗೆ ಕರ್ನಾಟಕ ರಾಜ್ಯ ಕಾರ್ಮಿಕ ಪಡೆ ಹಕ್ಕೊತ್ತಾಯ ಸಲ್ಲಿಸಲಾಗಿದೆ.

- Advertisement -

ಜಿಲ್ಲೆಯ ವಿವಿಧ ಕೈಗಾರಿಕೆಗಳು, ಸಂಸ್ಥೆಗಳು ಹಾಗೂ ಉದ್ಯೋಗ ಕ್ಷೇತ್ರಗಳಲ್ಲಿ ಕೆಲಸ ನಿರ್ವಹಿಸುತ್ತಿರುವ ಕಾರ್ಮಿಕರಿಗೆ ಸಾಮಾನ್ಯ ರಜೆಗಳಲ್ಲಿಯೂ ರಜೆ ನೀಡದೆ ದುಡಿಸಿಕೊಳ್ಳಲಾಗುತ್ತಿದೆ ಎಂಬ ಆರೋಪ ಕೇಳಿಬಂದಿದೆ. ಜೊತೆಗೆ ಸರ್ಕಾರ ನಿಗದಿಪಡಿಸಿದ ದಿನ ಕೂಲಿ ಪಾವತಿಸದೆ, ತಮ್ಮ ಇಚ್ಛೆಯಂತೆ ಕಡಿಮೆ ಕೂಲಿ ನೀಡುವ ಮೂಲಕ ಕಾರ್ಮಿಕರ ಮೇಲೆ ಅನ್ಯಾಯ ನಡೆಯುತ್ತಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ರೈತ ಹೋರಾಟದಿಂದ ವಿಧಾನಸಭಾಧ್ಯಕ್ಷ ಸ್ಥಾನದವರೆಗೆ ಕಾಗೋಡು ತಿಮ್ಮಪ್ಪ ಹಾದಿ…

ಕರ್ನಾಟಕದ ಸಾಮಾಜಿಕ ಮತ್ತು ರಾಜಕೀಯ ಇತಿಹಾಸದಲ್ಲಿ ಕೆಲವು ವ್ಯಕ್ತಿಗಳು ತಮ್ಮ ಹೋರಾಟ, ಸಾರ್ವಜನಿಕ ಬದುಕು ಹಾಗೂ ಜನಪರ ಚಟುವಟಿಕೆಗಳ ಮೂಲಕ ವಿಶೇಷ ಛಾಪು ಮೂಡಿಸಿದ್ದಾರೆ. ಅಂತಹವರ ಸಾಲಿನಲ್ಲಿ ಶಿವಮೊಗ್ಗ ಜಿಲ್ಲೆಯ ಸಾಗರದ ಕಾಂಗ್ರೆಸ್...

ಈ ದಿನ ಕವಿತೆ | ಎರಡು ದೀಪಗಳು- ಅಲಿ...

ವಾರಕ್ಕೊಂದು ಅನುವಾದಿತ ಕವಿತೆ ಮಾಲಿಕೆಯಲ್ಲಿ ಉರ್ದು ಕವಿ ಅಲಿ ಸರ್ದಾರ್ ಜಾಫ್ರಿಯವರ ಕವನವನ್ನು ಕನ್ನಡಕ್ಕೆ ಅನುವಾದಿಸಿದ್ದಾರೆ ಹಿರಿಯ ಅನುವಾದಕಿ ಸಿ ಎಚ್‌ ಭಾಗ್ಯ . ಕತ್ತಲ ಗವಿಯೊಳಗಿಂದರೆಕ್ಕೆಗಳು ಫಡಫಡಿಸುವ ಸದ್ದು ಕೇಳುವುದು.ನಿರ್ದಯಿ ಗಾಳಿಯುಮಂಜಿನ ಮೇಲೆ...

ಕರಸ್ಥಲದ ಲಿಂಗ ಮತ್ತು ಬೆರಳಿನ ಮಸಿ: ಸ್ಥಾವರ ಪ್ರಭುತ್ವದ...

ಭಾರತೀಯ ಸಮಾಜದ ಹಳ್ಳಿಯ ಭೌತಿಕ ವಿನ್ಯಾಸವನ್ನು ಗಮನಿಸಿದರೆ ಅದೊಂದು ಅಪ್ಪಟ ಘನೀಕೃತ ‘ಸ್ಥಾವರ’ ಮಾದರಿ. ಹಳ್ಳಿಯ ಹೃದಯಭಾಗದಲ್ಲಿ ಕೇವಲ ಪೂಜೆಯ ತಾಣವಲ್ಲ, ಇಡೀ ನೆಲದ ಮೇಲೆ ಅಧಿಪತ್ಯ ಸಾಧಿಸುವ ಕ್ಷೇತ್ರಾಧಿಪತಿಯ ‘ದೇವಸ್ಥಾನ’ ವಿರಾಜಮಾನವಾಗಿರುತ್ತದೆ....

ಪ್ರತಿ ವರ್ಷ ಮೇ 1ರಂದು ಕಾರ್ಮಿಕ ದಿನಾಚರಣೆ ಆಚರಿಸಲಾಗುತ್ತಿದ್ದರೂ, ಆ ದಿನವೇ ಕಾರ್ಮಿಕರಿಗೆ ರಜೆ ನೀಡದಿರುವುದು ವಿಷಾದನೀಯವಾಗಿದ್ದು, ಇದು ಕಾರ್ಮಿಕರ ಹಕ್ಕುಗಳ ಉಲ್ಲಂಘನೆಯಾಗಿದೆ ಎಂದು ಸಂಘದ ಮುಖಂಡರು ತಿಳಿಸಿದ್ದಾರೆ.

ಸಾಮಾನ್ಯ ರಜೆಗಳನ್ನು ಹೊರತುಪಡಿಸಿ, ಕಾರ್ಮಿಕ ದಿನಾಚರಣೆಯಂದು ಜಿಲ್ಲೆಯ ಎಲ್ಲಾ ವಿವಿಧ ಉದ್ಯೋಗ ಸಂಸ್ಥೆಗಳಲ್ಲಿ ಕಾರ್ಮಿಕರಿಗೆ ಕಡ್ಡಾಯ ರಜೆ ನೀಡುವಂತೆ ಹಾಗೂ ನಿಯಮ ಉಲ್ಲಂಘಿಸುವ ಸಂಸ್ಥೆಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಬುಧವಾರ ಜಿಲ್ಲಾ ಕಾರ್ಮಿಕ ಅಧಿಕಾರಿಗೆ ಮನವಿ ಸಲ್ಲಿಸಲಾಯಿತು.

ಇದನ್ನೂ ಓದಿ : ಬೀದರ್‌ | ಬಿಸಿಲಿನ ಝಳ : ಕೆರೆಯಲ್ಲಿ ಈಜಲು ಹೋದ ಯುವಕ ನೀರುಪಾಲು

ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಕಾರ್ಮಿಕ ಪಡೆ ಕಲ್ಯಾಣ ಕರ್ನಾಟಕ ವಿಭಾಗದ ಅಧ್ಯಕ್ಷ ಸೋಮನಾಥ ಎಂ. ಪಾಂಚಾಳ, ಸಂತೋಷ ಪಾಟೀಲ, ದಯಾನಂದ ಕಟ್ಟಿಮನಿ, ಶ್ರೀಮಂತ ರಾಮಗೊಂಡಿ ‌ಮತ್ತಿತರರಿದ್ದರು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪಂಜಾಬ್ ಚುನಾವಣೆಗೆ AAP ಮೊದಲ ಪಟ್ಟಿ ಬಿಡುಗಡೆ!

ಆಮ್ ಆದ್ಮಿ ಪಾರ್ಟಿ (ಎಎಪಿ) 2027ರ ಪಂಜಾಬ್ ವಿಧಾನಸಭೆ ಚುನಾವಣೆಗೆ ತನ್ನ...

ದೇಶವನ್ನೇ ಬೆಚ್ಚಿ ಬೀಳಿಸಿವೆ 2 ಘಟನೆಗಳು; ಶಾಲೆಗಳಲ್ಲೇ ಬಾಲಕಿಯರ ಮೇಲೆ‌ ಮಾರಕ‌ ದಾಳಿ

ಹರಿಯಾಣ ಮತ್ತು ಆಂಧ್ರಪ್ರದೇಶದ ಶಾಲಾ ಆವರಣಗಳಲ್ಲೇ ನಡೆದಿರುವ ಎರಡು ಭೀಕರ ಘಟನೆಗಳು...

ಬಾಗಲಕೋಟೆ | ಇಳಕಲ್‌ನಲ್ಲಿ ನ.1ರಂದು ʼಯುವ ಸಾಂಸ್ಕೃತಿಕ ಉತ್ಸವʼ

ಯುವಜನರಲ್ಲಿ ನೈತಿಕ ಮೌಲ್ಯಗಳು, ಸಾಮಾಜಿಕ ಜಾಗೃತಿ, ಸೌಹಾರ್ದತೆ ಹಾಗೂ ಸಕಾರಾತ್ಮಕ ಚಿಂತನೆಗಳನ್ನು...

ಅತಿದೊಡ್ಡ ಕ್ರಿಪ್ಟೋ ದರೋಡೆ; ₹60 ಸಾವಿರ ಕೋಟಿ ಏನಿದು, ಯಾರು ಮಾಡಿದ್ದು?

ದೋಚಿದ ಇಷ್ಟೊಂದು ಅಗಾಧ ಪ್ರಮಾಣದ ಹಣವನ್ನು ಮರೆಮಾಚಲು ಹ್ಯಾಕರ್‌ಗಳು ಅತ್ಯಂತ ಸಂಕೀರ್ಣವಾದ...