ಬೀದರ್‌ | ಕನಿಷ್ಠ ವೇತನ ಪಾವತಿಗೆ ಅರಣ್ಯ ಇಲಾಖೆ ದಿನಗೂಲಿ ನೌಕರರ ಮನವಿ

Date:

ಔರಾದ ತಾಲ್ಲೂಕಿನ ಸಾಮಾಜಿಕ ಅರಣ್ಯ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ವೀಕ್ಷಕರು ಹಾಗೂ ದಿನಗೂಲಿ ನೌಕರರಿಗೆ ಸರ್ಕಾರ ನಿಗದಿಪಡಿಸಿದ ಕನಿಷ್ಠ ವೇತನ ಪಾವತಿಸಬೇಕೆಂದು ಅರಣ್ಯ ಇಲಾಖೆ ಸಂರಕ್ಷಣಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.

- Advertisement -

ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಮೊಹಮ್ಮದ್ ಆಯುಬ್ ಖಾನ್ ಅವರ ನೇತೃತ್ವದಲ್ಲಿ ಅ. 22ರಂದು ಸಮಾಜ ಅರಣ್ಯ ಇಲಾಖೆಯ ಬೀದರ್ ವಿಭಾಗದ ಸಂಬಂಧಪಟ್ಟ ಅಧಿಕಾರಿಗಳಿಗೆ ಸಲ್ಲಿಸಿದ ಮನವಿಯಲ್ಲಿ, ನೌಕರರಿಗೆ ಕಿರುಕುಳ ನೀಡುತ್ತಿರುವ ಆರೋಪದ ಕುರಿತು ತನಿಖೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

‘ದೇಶ್ ಕೋ ಬಿಕನೇ ನಹೀ ದೂಂಗಾ’ ಎಂದು ನವಮಂಗಳೂರು...

​ರೈಲ್ವೆ, ವಿಮಾನ ನಿಲ್ದಾಣ, ಟೆಲಿಕಾಂ ಸೇರಿದಂತೆ ದೇಶದ ಪ್ರಮುಖ ಜಯಶೀಲ ಸಾರ್ವಜನಿಕ ವಲಯಗಳನ್ನು ಈಗಾಗಲೇ ಆಯ್ದ ಕಾರ್ಪೊರೇಟ್ ಕುಳಗಳಿಗೆ ಒಪ್ಪಿಸಿರುವ ಮೋದಿ ಸರ್ಕಾರ, ಈಗ ತನ್ನ ದೃಷ್ಟಿಯನ್ನು ಕಡಲತೀರಗಳತ್ತ ಹರಿಸಿದೆ. ದೇಶದ ಆಮದು-ರಫ್ತು...

SIRನ ಒಳನೋಟ: ಸೇರ್ಪಡೆಗಿಂತ ಹೊರಗಿಡುವುದಕ್ಕೆ ಆದ್ಯತೆ ನೀಡಿದಾಗ ಏನಾಗುತ್ತದೆ?

SIR ಕರಡು ಪಟ್ಟಿಯಲ್ಲಿರುವ ಮತದಾರರ ಸಂಖ್ಯೆಯು ನೈಜ ವಯಸ್ಕ ಜನಸಂಖ್ಯೆಯ ಅಂದಾಜಿಗಿಂತ ಅಷ್ಟೊಂದು ದೊಡ್ಡ ಪ್ರಮಾಣದಲ್ಲಿ ಕಡಿಮೆಯಾಗಿರುವುದಕ್ಕೆ ಕಾರಣವೇನು? ಈ ಕಾಣೆಯಾದ ಮತದಾರರೆಲ್ಲ ಯಾರು? ಅವರು ಮತದಾರರ ಪಟ್ಟಿಯಲ್ಲಿ ಬಿಟ್ಟು ಹೋಗಿದ್ದು ಹೇಗೆ?...

OBC ಮೀಸಲಾತಿಗೆ ಮತಾಂತರದ ಬೇಲಿ: ಸುಪ್ರೀಂ ಹೊಸ ಆದೇಶದಲ್ಲಿ...

ಧರ್ಮ ಬದಲಾದರೆ ಸಾಮಾಜಿಕ ಹಿಂದುಳಿದಿರುವಿಕೆಯೂ ಅಳಿಸಿಹೋಗುತ್ತದೆಯೇ? ಮಂಡಲ್ ಆಯೋಗದ 11 ಮಾನದಂಡಗಳಲ್ಲಿ ಧರ್ಮಕ್ಕೆ ಸ್ಥಾನವಿಲ್ಲದಿದ್ದರೂ, ಮತಾಂತರವನ್ನು ಮೀಸಲಾತಿಯ ಅರ್ಹತೆಗೆ ಜೋಡಿಸಿರುವುದೇಕೆ? ಇಂದಿರಾ ಸಾಹ್ನಿ ತೀರ್ಪಿಗೆ ವಿರೋಧಾಭಾಸವಾಗಿದೆ ಸುಪ್ರೀಂ ಕೋರ್ಟ್‌ನ ಹೊಸ ತೀಪು! 1992ರಲ್ಲಿ ಸುಪ್ರೀಂ...

ಔರಾದ ತಾಲ್ಲೂಕಿನ ಸಮಾಜ ಅರಣ್ಯ ಇಲಾಖೆಯಲ್ಲಿ ಕೆಲಸ ಮಾಡುತ್ತಿರುವ ದಿನಗೂಲಿ ನೌಕರರಿಗೆ ಸರ್ಕಾರ ನಿಗದಿಪಡಿಸಿದ ಕನಿಷ್ಠ ವೇತನ ನೀಡುತ್ತಿಲ್ಲ. ವೇತನ ಪಾವತಿಸುವಂತೆ ಕೇಳಿದಾಗ ಸಂಬಂಧಪಟ್ಟ ವಲಯ ಅರಣ್ಯಾಧಿಕಾರಿ (ಆರ್‌ಎಫ್‌ಒ) ಅವರಿಂದ ಕಿರುಕುಳ ಎದುರಿಸಬೇಕಾಗುತ್ತಿದೆ ಎಂದು ನೌಕರರು ಆರೋಪಿಸಿದ್ದಾರೆ.

WhatsApp Image 2026 10 10 at 7.46.08 PM 18
ಜಾಹೀರಾತು

ಅರಣ್ಯದಲ್ಲಿ ಹುಲ್ಲು ಕತ್ತರಿಸುವುದು ಸೇರಿದಂತೆ ವಿವಿಧ ಹೆಚ್ಚುವರಿ ಕೆಲಸಗಳನ್ನು ನೌಕರರಿಂದ ಮಾಡಿಸಲಾಗುತ್ತಿದೆ. ಆ ಕೆಲಸಗಳಿಗೆ ತಗಲುವ ವೆಚ್ಚವನ್ನೂ ಪಾವತಿಸುತ್ತಿಲ್ಲ. ಈಗಾಗಲೇ ಕಡಿಮೆ ವೇತನದಲ್ಲಿ ದುಡಿಯುತ್ತಿರುವ ನೌಕರರು ಆರ್ಥಿಕ ಸಂಕಷ್ಟ ಎದುರಿಸುವಂತಾಗಿದೆ ಎಂದು ಮನವಿಯಲ್ಲಿ ತಿಳಿಸಿದ್ದಾರೆ.

ನೌಕರರಿಗೆ ಬಾಕಿ ಇರುವ ವೇತನವನ್ನು ಕೂಡಲೇ ಪಾವತಿಸಬೇಕು. ಹೆಚ್ಚುವರಿ ಕೆಲಸಗಳಿಗೆ ನಿಯಮಾನುಸಾರ ವೆಚ್ಚ ಭರಿಸಬೇಕು. ಕಿರುಕುಳ ನೀಡುತ್ತಿರುವ ಆರೋಪದ ಕುರಿತು ನಿಷ್ಪಕ್ಷಪಾತ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು. ನೌಕರರು ತಮ್ಮ ನ್ಯಾಯಯುತ ಬೇಡಿಕೆಗಳನ್ನು ಮಂಡಿಸಿದ ಕಾರಣಕ್ಕೆ ಯಾವುದೇ ಪ್ರತೀಕಾರದ ಕ್ರಮ ಕೈಗೊಳ್ಳದಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಬೇಕು. ನೌಕರರಿಗೆ ಬರಬೇಕಾದ ಕನಿಷ್ಠ ದಿನಗೂಲಿ ವೇತನ, ಬಾಕಿ ಮೊತ್ತ ಹಾಗೂ ಹೆಚ್ಚುವರಿ ಕೆಲಸಗಳ ವೆಚ್ಚವನ್ನು ಪರಿಶೀಲಿಸಿ, ಅವರ ಬ್ಯಾಂಕ್ ಖಾತೆಗಳಿಗೆ ನೇರವಾಗಿ ಜಮಾ ಮಾಡಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.

ಈ ಸಂದರ್ಭದಲ್ಲಿ ಔರಾದ ತಾಲ್ಲೂಕು ಘಟಕದ ಅಧ್ಯಕ್ಷ ಶಶಿರಾವ ಜಾಧವ, ಸುರೇಶ ಜಾಧವ, ಶಿವಾಜಿ ಕುಂಬಾರ, ರಾಜಕುಮಾರ ವಲ್ಲೇಪುರ, ರಾಜಕುಮಾರ ನರಸಗೊಂಡ, ತುಳಸಿರಾಮ ಬೋರ್ಗಿ, ಸಂತೋಷ ತೋರಣಾ, ಮಸ್ತಾನ್ ಖತಗಾಂವ ಸೇರಿದಂತೆ ಇತರರು ಉಪಸ್ಥಿತರಿದ್ದರು.

ಇದನ್ನೂ ಓದಿ : ಬೀದರ್‌ | ಅದ್ದೂರಿ ಕನ್ನಡ ರಾಜ್ಯೋತ್ಸವ ಆಚರಿಸೋಣ : ಡಿಸಿ ಶಿಲ್ಪಾ ಶರ್ಮಾ

WhatsApp Image 2026 10 10 at 6.59.42 PM 10
ಜಾಹೀರಾತು
eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ಮಧ್ಯಾಹ್ನವೇ ಮಳೆ ಅಬ್ಬರ; 13 ಜಿಲ್ಲೆಗಳಲ್ಲಿ ಇನ್ನೂ 4 ದಿನ ಭರ್ಜರಿ ಮಳೆ: ಹವಾಮಾನ ಇಲಾಖೆ

ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಹಿಂಗಾರು ಮಳೆ...

ಪ್ಯಾರಾ ಏಷ್ಯನ್ ಗೇಮ್ಸ್ 2026: ಒಂದೇ ದಿನ ಎರಡು ಚಿನ್ನದ ಪದಕ ಗೆದ್ದು ಬೀಗಿದ ಶೀತಲ್ ದೇವಿ

ಏಷ್ಯನ್ ಪ್ಯಾರಾ ಗೇಮ್ಸ್ 2026 ರಲ್ಲಿ ಭಾರತದ ಹೆಮ್ಮೆಯ ಪ್ಯಾರಾ ಆರ್ಚರಿ...

ಮೈಸೂರು ದಸರಾ: ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕನಿಗೆ ಗಂಭೀರ ಗಾಯ, ಐಸಿಯುನಲ್ಲಿ ಚಿಕಿತ್ಸೆ

ಮೈಸೂರಿನ ದಸರಾ ಜಂಬೂಸವಾರಿ ಮೆರವಣಿಗೆಯ ವೇಳೆ ಪೊಲೀಸರು ನಡೆಸಿದ ಲಘು ಲಾಠಿ...

ಪಕ್ಷಾಂತರ ಪರ್ವ: ಮೋದಿ ಸರ್ಕಾರದ ಅಧಿಕಾರದ ಆಸೆಗೆ ಪ್ರಜಾಸತ್ತಾತ್ಮಕ ಮೌಲ್ಯಗಳ ಬಲಿ

ಭಾರತದಲ್ಲಿ 2022 ಮತ್ತು 2026ರ ನಡುವಿನ ಅವಧಿಯಲ್ಲಿ ರಾಜಕೀಯ ಕ್ಷೇತ್ರದಲ್ಲಿ ಬಹುದೊಡ್ಡ...