ಬೀದರ್ ನಗರದ ವಿಸ್ಡಂ ಪದವಿಪೂರ್ವ ವಿಜ್ಞಾನ ಕಾಲೇಜು ಪ್ರಸಕ್ತ ಸಾಲಿನ ಎಸ್ಸೆಸ್ಸೆಲ್ಸಿ ಹಾಗೂ ಸಿಬಿಎಸ್‍ಇ 10ನೇ ತರಗತಿ ಪರೀಕ್ಷೆಯಲ್ಲಿ ಶೇ 95ಕ್ಕೂ ಅಧಿಕ ಅಂಕ ಪಡೆದ 150 ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಎರಡು ವರ್ಷ ಪಿಯುಸಿ ಶಿಕ್ಷಣಉಚಿತವಾಗಿ ನೀಡುವುದಾಗಿ ಪ್ರಕಟಿಸಿದೆ.
150 ಸ್ಥಾನಗಳಲ್ಲಿ ಕಲ್ಯಾಣ ಕರ್ನಾಟಕಕ್ಕೆ 50, ಬಡ, ತಂದೆಯನ್ನು ಕಳೆದುಕೊಂಡ, ಅಂಗವಿಕಲ ವಿದ್ಯಾರ್ಥಿಗಳಿಗೆ 50 ಹಾಗೂ ಕರ್ನಾಟಕ ಹೊರತುಪಡಿಸಿ ದೇಶದ ಇತರ ರಾಜ್ಯಗಳ ಸಿಬಿಎಸ್‍ಸಿ 10ನೇ ತೇರ್ಗಡೆಯಾದ ವಿದ್ಯಾರ್ಥಿಗಳಿಗೆ 50 ಸ್ಥಾನಗಳನ್ನು ಮೀಸಲಿಡಲಾಗುವುದು ಎಂದು ವಿಸ್ಡಂ ಪದವಿ ಪೂರ್ವ ವಿಜ್ಞಾನ ಕಾಲೇಜು ಅಧ್ಯಕ್ಷ ಮುಹಮ್ಮದ್ ಆಸಿಫುದ್ದೀನ್ ತಿಳಿಸಿದ್ದಾರೆ.
ಸಾಧಕ ವಿದ್ಯಾರ್ಥಿಗಳು ಪ್ರವೇಶ ಹಾಗೂ ಹೆಚ್ಚಿನ ಮಾಹಿತಿಗೆ ಅರುಣಕುಮಾರ ಪಾಟೀಲ(9686147666) ಸೈಯದ್ ಅಲಿ ( 9113018911) ಅವರನ್ನು ಸಂಪರ್ಕಿಸಬಹುದು ಎಂದು ಹೇಳಿದ್ದಾರೆ.
ವಿಸ್ಡಂ ಪದವಿಪೂರ್ವ ಕಾಲೇಜು ವತಿಯಿಂದ ಗುರುವಾರ (ಏ.30) ಸಂಜೆ 5ಕ್ಕೆ ಎಸ್‍ಎಸ್‍ಎಲ್‍ಸಿಯಲ್ಲಿ ಶಾಲೆಗೆ ಪ್ರಥಮ, ದ್ವಿತೀಯ ಹಾಗೂ ತೃತೀಯ ಸ್ಥಾನ ಪಡೆದ ಜಿಲ್ಲೆಯ ಕನ್ನಡ, ಉರ್ದು, ಮರಾಠಿ, ಆಂಗ್ಲಮಾಧ್ಯಮ ಸರ್ಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಪ್ರೌಢ ಶಾಲೆಗಳ ವಿದ್ಯಾರ್ಥಿಗಳು, ಪಾಲಕರು, ಶಾಲೆ ಆಡಳಿತ ಮಂಡಳಿ, ಮುಖ್ಯಶಿಕ್ಷಕರು, ಶಿಕ್ಷಕರಿಗೆ ಬೀದರ್ ನಗರದ ಪೂಜ್ಯ ಚನ್ನಬಸವ ಪಟ್ಟದ್ದೇವರು ರಂಗಮಂದಿರದಲ್ಲಿ ಸನ್ಮಾನ ಸಮಾರಂಭ ಹಮ್ಮಿಕೊಳ್ಳಲಾಗಿದೆ.
ಹೆಸರು ನೋಂದಣಿಗೆ ಮೊಬೈಲ್ ಸಂಖ್ಯೆ 9686147666 ಅಥವಾ 9113018911 ಗೆ ಸಂಪರ್ಕಿಸಬಹುದು ಎಂದು ಹೇಳಿದ್ದಾರೆ.
ಇದನ್ನೂ ಓದಿ : ಬೀದರ್ | ಬಿಸಿಲಿನ ಝಳ : ಕೆರೆಯಲ್ಲಿ ಈಜಲು ಹೋದ ಯುವಕ ನೀರುಪಾಲು




