ಬೀದರ್‌ | ಕಾವ್ಯ ಮೀಮಾಂಸೆಗೆ ಜಿ.ಎಸ್‌.ಶಿವರುದ್ರಪ್ಪ ಕೊಡುಗೆ ಅಪಾರ : ರಮೇಶ ಮೂಲಗೆ

Date:

ಕನ್ನಡ ಕಾವ್ಯ ಮತ್ತು ಕಾವ್ಯ ಮೀಮಾಂಸೆಯ ಕ್ಷೇತ್ರಕ್ಕೆ ಜಿ.ಎಸ್‌.ಶಿವರುದ್ರಪ್ಪ ಅವರ ಕೊಡುಗೆ ಅಪಾರ. ಪಾಶ್ಚಾತ್ಯ ಹಾಗೂ ಭಾರತೀಯ ಕಾವ್ಯ ಮೀಮಾಂಸೆ ಕುರಿತ ಅವರ ದೃಷ್ಟಿಕೋನ ಶ್ರೇಷ್ಠಮಟ್ಟದ್ದು ಎಂದು ಮಹಾರಾಷ್ಟ್ರದ ಉದಯಗಿರಿ ಮಹಾವಿದ್ಯಾಲಯದ ಕನ್ನಡ ವಿಭಾಗದ ಮುಖ್ಯಸ್ಥ ಡಾ.ರಮೇಶ ಮೂಲಗೆ ಹೇಳಿದರು.

- Advertisement -

ಕಮಲನಗರ ಪಟ್ಟಣದ ಡಾ.ಚನ್ನಬಸವ ಪಟ್ಟದ್ದೇವರು ಪ್ರೌಢ ಶಾಲೆ ಸಭಾಂಗಣದಲ್ಲಿ ಕರ್ನಾಟಕ ಸಾಹಿತ್ಯ ಅಕಾಡೆಮಿ, ಬೆಂಗಳೂರು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ಚಕೋರ ಸಾಹಿತ್ಯ ವಿಚಾರ ವೇದಿಕೆ ಸಹಯೋಗದಲ್ಲಿ ʼಜಿ.ಎಸ್.ಶಿವರುದ್ರಪ್ಪ ಅವರ ಕನ್ನಡ ಸಾಹಿತ್ಯದಲ್ಲಿ ಸೌಂದರ್ಯ ಮೀಮಾಂಸೆʼ ಕುರಿತು ಆಯೋಜಿಸಿದ್ದ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಮುಸ್ಲಿಯಾರ್ ಹೇಳಿಕೆ ಎಬ್ಬಿಸಿದ ಪ್ರಶ್ನೆ— ಧಾರ್ಮಿಕ ಮೌಲ್ಯಗಳ ನಡುವೆ...

ಮಹಿಳೆಯ ಗೌರವವನ್ನು ರಕ್ಷಿಸುವ ಹೆಸರಿನಲ್ಲಿ ಆಕೆಯ ಶಿಕ್ಷಣ, ಪ್ರತಿಭೆ, ವೃತ್ತಿ ಅಥವಾ ಸಾಮಾಜಿಕ ಸೇವೆಯ ಬಾಗಿಲುಗಳನ್ನು ಮುಚ್ಚುವುದು ಒಂದು ವಿಷಯ; ಧಾರ್ಮಿಕ ಹಯಾ ಮತ್ತು ಮೌಲ್ಯಗಳನ್ನು ಕಾಪಾಡಿಕೊಂಡೇ ಸಮಾಜದಲ್ಲಿ ಜವಾಬ್ದಾರಿಯುತವಾಗಿ ಪಾಲ್ಗೊಳ್ಳಲು ಅವಕಾಶ...

ಧಾರವಾಡ | ಹುಲಕೊಪ್ಪ‌ ಶಾಲೆ ಶೌಚಾಲಯ ಕಾಮಗಾರಿ ಅಪೂರ್ಣ;...

ಧಾರವಾಡ ಜಿಲ್ಲೆಯ ಕಲಘಟಗಿ ಪ್ರಾಥಮಿಕ ಶಾಲೆಯಲ್ಲಿ‌ ಶೌಚಾಲಯ ಸೇರಿದಂತೆ ಮೂಲಭೂತ ಸೌಲಭ್ಯಗಳ ಕೊರತೆಯಿಂದ ವಿದ್ಯಾರ್ಥಿಗಳು ಸಮಸ್ಯೆ ಎದುರಿಸುತ್ತಿದ್ದಾರೆ. ಹೈಟೆಕ್ ಶೌಚಾಲಯ ಆರಂಭವಾಗಿ ಸುಮಾರು ವರ್ಷಗಳೇ ಕಳೆದರೂ ಇನ್ನೂ ಕಾಮಗಾರಿ ಮುಗಿದಿಲ್ಲ. ಶಾಲೆಯ...

ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಮತ್ತು ಸದ್ಯದ ಬಿಕ್ಕಟ್ಟುಗಳು

ಇಂದು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ. ಜಾಗತಿಕವಾಗಿ ಕುಸಿಯುತ್ತಿರುವ ಪ್ರಜಾಪ್ರಭುತ್ವವನ್ನು ಎತ್ತಿಹಿಡಿಯಲು ಯುನೈಟೆಡ್ ನೇಷನ್ಸ್ ಜನರಲ್ ಅಸೆಂಬ್ಲಿಯು ಸೆಪ್ಟಂಬರ್ 15ನ್ನು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನಾಗಿ ಆಚರಿಸುವ ಘೋಷಣೆ ಮಾಡಿತು. ಪರಿಣಾಮ ಇಂಟರ್ ಪಾರ್ಲಿಮೆಂಟರಿ ಯೂನಿಯನ್...

ʼನವೋದಯದ ಸಂದರ್ಭದಲ್ಲಿ ರಮ್ಯ ಕವಿತೆಗಳ ಮೂಲಕ ಕಾವ್ಯಯಾನ ಆರಂಭಿಸಿದ ಅವರು ನಂತರ ತಮ್ಮದೇ ಆದ ಭಿನ್ನ ಕಾವ್ಯಮಾರ್ಗವನ್ನು ರೂಪಿಸಿಕೊಂಡರು. ಎಪ್ಪತ್ತರ ದಶಕದಲ್ಲಿ ಜಿ.ಎಸ್.ಎಸ್ ಹೋರಾಟಗಾರರಿಗೆ ಸ್ಫೂರ್ತಿಯಾಗಿದ್ದರು. ತುರ್ತುಪರಿಸ್ಥಿತಿಯ ಸಂದರ್ಭದಲ್ಲಿ ಹೋರಾಟದ ಮಾರ್ಗವನ್ನು ತೋರಿಸಿದವರು ಅವರು. ಆಧುನಿಕ ಜೀವನ ಶೈಲಿಯ ಯಾಂತ್ರಿಕ ಬುದುಕನ್ನು ಅವರು ತಮ್ಮ ಮುಂಬೈ ಜಾತಕ ಕವನದಲ್ಲಿ ಮನಮುಟ್ಟುವಂತೆ ನಿರೂಪಿಸಿದ್ದಾರೆʼ ಎಂದರು.

ತಹಸೀಲ್ದಾರ್ ಅಮಿತಕುಮಾರ ಕುಲಕರ್ಣಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ʼಕನ್ನಡ ಸಾಹಿತ್ಯ ಪರಂಪರೆ ಶ್ರೇಷ್ಠವಾದದ್ದು. ಉದಯೋನ್ಮುಖ ಕವಿಗಳು ಹಳೆಯ ಕಾವ್ಯಗಳನ್ನು ಅಧ್ಯಯನ ಮಾಡುವುದರಿಂದ ಜ್ಞಾನದ ಹರಿವು ಹೆಚ್ಚುತ್ತದೆʼ ಎಂದರು.

ಕಸಾಪ ತಾಲೂಕು ಅಧ್ಯಕ್ಷ ಪ್ರಶಾಂತ ಮಠಪತಿ ಮಾತನಾಡಿ, ʼಪಾಶ್ಚಾತ್ಯ ಹಾಗೂ ಭಾರತೀಯ ಕಾವ್ಯ ಮೀಮಾಂಸೆಯ ಸೇತುವಂತೆ ಜಿ.ಎಸ್.ಎಸ್ ಕೆಲಸ ಮಾಡಿದ್ದಾರೆ. ಜತೆಗೆ ಪಾಶ್ಚಾತ್ಯ ಹಾಗೂ ಭಾರತೀಯ ಕಾವ್ಯ ಮೀಮಾಂಸೆಯ ಸಾಮ್ಯತೆಗಳನ್ನು ಅವರು ಗುರುತಿಸಿದರು. ಅವರು ಕನ್ನಡ ಸಾಹಿತ್ಯದಲ್ಲಿ ವಿಮರ್ಶೆಯ ದೃಷ್ಟಿಕೋನವನ್ನು ಬೆಳೆಸಿದ ಕವಿ ಹೃದಯಿ ವಿದ್ವಾಂಸರಾಗಿದ್ದರುʼ ಎಂದರು.

ತಾ.ಪಂ ಇಒ ಹಣಮಂತರಾಯ ಕೌಟಗೆ ಮಾತನಾಡಿ, ʼಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ಜಿ.ಎಸ್.ಎಸ್ ಕವಿಯಾಗಿಯೂ, ವಿದ್ವಾಂಸರಾಗಿಯೂ ಗುರುತಿಸಿಕೊಂಡವರು. ಅವರು ಕೇವಲ ವ್ಯಕ್ತಿಗಳನ್ನು ಬೆಳೆಸದೆ ಸಮುದಾಯವನ್ನು ಕಟ್ಟುವ ಪ್ರಯತ್ನ ಮಾಡಿದರು. ಪ್ರಸ್ತುತ ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ಗಂಭೀರವಾದ ಸಂಶೋಧನೆ ನಡೆಯಬೇಕುʼ ಎಂದರು.

ಚಕೋರ ಸಾಹಿತ್ಯ ವಿಚಾರ ವೇದಿಕೆ ಜಿಲ್ಲಾ ಸಂಚಾಲಕಿ ಡಾ.ಮಕ್ತುಂಬಿ ಎಂ, ಪಿಎಸ್‌ಐ ಆಶಾ ರಾಠೋಡ ಮಾತನಾಡಿದರು.
ಭಾಲ್ಕಿ ಹಿರೇಮಠದ ಪೂಜ್ಯ ಮಹಾಲಿಂಗ ದೇವರು ದಿವ್ಯ ಸಾನಿಧ್ಯ ವಹಿಸಿದ್ದರು. ಆಡಳಿತ ಅಧಿಕಾರಿ ಚನ್ನಬಸವ ಘಾಳೆ ಅಧ್ಯಕ್ಷತೆ ವಹಿಸಿದ್ದರು.

ಇದನ್ನೂ ಓದಿ : ಬೀದರ್ | 2 ಎಕರೆ ನಿವೇಶನ ಮಂಜೂರು : ಅಲೆಮಾರಿಗಳ ಹೋರಾಟಕ್ಕೆ ಜಯ; ಧರಣಿ ಅಂತ್ಯ

ಕಸಾಪ ಗೌರವಾಧ್ಯಕ್ಷ ಪ್ರೊ.ಎಸ್.ಎನ್.ಶಿವಣಕರ, ಉಪಾಧ್ಯಕ್ಷ ಧನರಾಜ ಭವರಾ, ಮಡಿವಾಳಪ್ಪ ಮಹಾಜನ, ಸಂತೋಷ ಸುಲಾಕೆ, ತಾಪಂ ಮಾಜಿ ಅಧ್ಯಕ್ಷ ಶ್ರೀರಂಗ ಪರಿಹಾರ, ಡಾ.ಎಸ್.ಎಸ್.ಮೈನಾಳೆ, ಮನೋಜ ಹಿರೇಮಠ, ಮಹಾದೇವ ಬಿರಾದಾರ, ರಾಜೇಶ್ವರಿ ಬಿರಾದಾರ, ಪಲ್ಲವಿ ನಾಯಕ್, ಶಿವಕುಮಾರ ಏಕಲಾರೆ, ಸುಭಾಷ ಧರಣೆ, ಜ್ಞಾನೋಬಾ ಹಂಡೆ, ದೇವಿದಾಸ ಡಾಂಗೆ, ನಿಜಲಿಂಗಯ್ಯ ಸ್ವಾಮಿ, ಶರಣಬಸವ ಗೋರ್ಟಾ ಇತರರಿದ್ದರು. ಡಾ.ಚನ್ನಬಸವ ಪಟ್ಟದ್ದೇವರು ಪ್ರೌಢ ಶಾಲೆ ಮಕ್ಕಳು ನಾಡಗೀತೆ ಹಾಡಿದರು. ಸಾಹಿತಿ ಸಂಗಮೇಶ ಮುರ್ಕೆ ಸ್ವಾಗತಿಸಿದರು. ಮಹಾದೇವ ಮಡಿವಾಳ ನಿರೂಪಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ನೆಟ್‌ವರ್ಕ್ ಸಮಸ್ಯೆ : ಮೊಬೈಲ್‌ ಕರೆ, ರೇಷನ್‌ ಕಾರ್ಡ್ ಬಯೋಮೆಟ್ರಿಕ್‌ಗಾಗಿ ಗ್ರಾಮಸ್ಥರ ಪರದಾಟ!

ದೇಶ 5ಜಿ ಅಂತರ್ಜಾಲ ಸೇವೆ, ಎಐ ತಂತ್ರಜ್ಞಾನದಂತಹ ಅತ್ಯಾಧುನಿಕ ಕಾಲದಲ್ಲಿದೆ. ಆದರೆ,...

ಬೀದರ್‌ ವಿವಿ ಪ್ರಥಮ ಘಟಿಕೋತ್ಸವ : 20 ವಿದ್ಯಾರ್ಥಿಗಳಿಗೆ ಚಿನ್ನದ ಪದಕ, ಇಬ್ಬರಿಗೆ ಗೌರವ ಡಾಕ್ಟರೇಟ್

ಭಾಲ್ಕಿ ತಾಲೂಕಿನ ಹಾಲಹಳ್ಳಿ(ಕೆ) ಸಮೀಪದ ಬೀದರ್ ವಿಶ್ವವಿದ್ಯಾಲಯದ ಪ್ರಥಮ ಘಟಿಕೋತ್ಸವ ಸಮಾರಂಭವು...

ಬೀದರ್‌ | ಮನ್ನಳ್ಳಿಯಲ್ಲಿ ಜನ ಸ್ಪಂದನ: 193 ದೂರುಗಳು ಸ್ಥಳದಲ್ಲೇ ಇತ್ಯರ್ಥ

ಜನರ ಸಮಸ್ಯೆಗಳನ್ನು ಅವರ ಬಳಿಯೇ ಆಲಿಸಿ, ಸಂಬಂಧಿಸಿದ ಇಲಾಖೆಗಳ ಸಹಕಾರದೊಂದಿಗೆ ತ್ವರಿತವಾಗಿ...

ಬೀದರ್‌ ನಗರಾಭಿವೃದ್ಧಿ ಪ್ರಾಧಿಕಾರಕ್ಕೆ ವಿನೋದ ಅಪ್ಪೆ ನೂತನ ಅಧ್ಯಕ್ಷ

ಬೀದರ್‌ ನಗರಾಭಿವೃದ್ಧಿ ಪ್ರಾಧಿಕಾರ (ಬುಡಾ)ದ ನೂತನ ಅಧ್ಯಕ್ಷರಾಗಿ ವಿನೋದ ಅಪ್ಪೆ ಅವರನ್ನು...