ಬೀದರ್ | ಕೆಮಿಕಲ್ ಕಾರ್ಖಾನೆಯಲ್ಲಿ ವಿಷಾನಿಲ ಸೋರಿಕೆ; ಇಬ್ಬರು ಸಾವು

Date:

ಬೀದರ್ ಜಿಲ್ಲೆ ಹುಮನಾಬಾದ್‌ ಹೊರವಲಯದ ಕೈಗಾರಿಕಾ ಪ್ರದೇಶದಲ್ಲಿನ ಕೆಮಿಕಲ್ ಕಾರ್ಖಾನೆಯಲ್ಲಿ ವಿಷ ಅನಿಲ ಸೋರಿಕೆಯಾಗಿ ಇಬ್ಬರು ಮೃತಪಟ್ಟಿದ್ದಾರೆ.

- Advertisement -

ಮಧ್ಯಪ್ರದೇಶ ಮೂಲದ ಇಂದ್ರಜಿತ್ (23) ಹಾಗೂ ತಾಲೂಕಿನ ವಡ್ಡನಕೇರಾ ಗ್ರಾಮದ ಮೊಹಮ್ಮದ್ ಶಾಬಾದ್ (21) ಮೃತ ದುರ್ದೈವಿಗಳು ಎಂದು ತಿಳಿದು ಬಂದಿದೆ. ಘಟನೆಯಲ್ಲಿ ಎಂಟು ಮಂದಿ ಅಸ್ವಸ್ಥರಾಗಿದ್ದು, ತಾಲೂಕು ಆಸ್ಪತ್ರೆಗೆ ದಾಖಲಿಸಿದ್ದಾರೆ. ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಭಾನುವಾರ ತಡರಾತ್ರಿ ಪ್ರಸನ್ನ ಪ್ರೀ ಪ್ರೋಸೆಸಿಂಗ್ ಲಿಮಿಟೆಡ್ ಎಂಬ ರಾಸಾಯನಿಕ ತಯಾರಿಕಾ ಕಾರ್ಖಾನೆಯಲ್ಲಿ ಘಟನೆ ನಡೆದಿದೆ. ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ನೂರಾರು ಜನರು ತಾಲೂಕು ಆಸ್ಪತ್ರೆ ಎದುರು ಜಮಾವಣೆಗೊಂಡರು.

ಘಟನಾ ಸ್ಥಳಕ್ಕೆ ಜಿಲ್ಲಾಧಿಕಾರಿ ಗೋವಿಂದ ರೆಡ್ಡಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಚನ್ನಬಸವಣ್ಣ ಎಸ್.ಎಲ್, ಡಿವೈಎಸ್‌ಪಿ ಜೆಎಸ್ ನ್ಯಾಮೇಗೌಡರ್, ಸಿಪಿಐ ಗುರು ಪಾಟೀಲ ಭೇಟಿ ನೀಡಿ ಘಟಕದ ಕಾರ್ಯ ಸ್ಥಗಿತಗೊಳಿಸಿ ಸಂಬಂಧಿಸಿದವರನ್ನು ವಿಚಾರಿಸಿದ್ದಾರೆ.‌

ಈ ಸುದ್ದಿ ಓದಿದ್ದೀರಾ? ಉಡುಪಿ | ಕ್ಷೀಣಿಸುತ್ತಿರುವ ಕೃಷಿ, ಹೈನುಗಾರಿಕೆ; ರೈತರಲ್ಲಿ ಆತಂಕ

ಸುತ್ತಮುತ್ತಲಿನ ಪರಿಸರದಲ್ಲಿ ಗ್ಯಾಸ್ ಸೋರಿಕೆ‌ ಆಗಿಲ್ಲ. ಸಾರ್ವಜನಿಕರು ಆತಂಕಕ್ಕೆ ಒಳಗಾಗುವ ಅಗತ್ಯವಿಲ್ಲ ಎಂದು ಜಿಲ್ಲಾಧಿಕಾರಿ ಗೋವಿಂದ ರೆಡ್ಡಿ ತಿಳಿಸಿದ್ದಾರೆ.‌

ಶಾಸಕ ಡಾ.ಸಿದ್ದಲಿಂಗಪ್ಪ ಪಾಟೀಲ್, ವಿಧಾನ ಪರಿಷತ್ ಸದಸ್ಯ ಭೀಮರಾವ್ ಪಾಟೀಲ್ ಆಸ್ಪತ್ರೆಗೆ ಭೇಟಿ ನೀಡಿ‌ ಪರೀಶಿಲಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ಸಾರಿಗೆ ಬಸ್ ಟಾಯರ್ ಸ್ಪೋಟ ಪರಿಣಾಮ ಕಂಡಕ್ಟರ್ ಕಾಲಿಗೆ ಗಾಯ

ಲಕ್ಷ್ಮೇಶ್ವರ ಮಾರ್ಗದಲ್ಲಿ ಸಂಚರಿಸುತ್ತಿದ್ದ ವಾಯವ್ಯ ಕರ್ನಾಟಕ ಸಾರಿಗೆ ಸಂಸ್ಥೆಯ ಬಸ್ (ಸಂಖ್ಯೆ:...

ಉಡುಪಿ | ತುಳುನಾಡ ರಕ್ಷಣಾ ವೇದಿಕೆ ಮಹಿಳಾ ಘಟಕದಿಂದ ಅರ್ಥಪೂರ್ಣ ಗಾಂಧಿ ಜಯಂತಿ

ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜಯಂತಿಯ ಅಂಗವಾಗಿ ತುಳುನಾಡ ರಕ್ಷಣಾ ವೇದಿಕೆ (ರಿ.)...

ಉಡುಪಿ | ಸಮುದಾಯದ ಅಭಿವೃದ್ಧಿಗೆ ಉದ್ಯಮಿಗಳ ಒಗ್ಗಟ್ಟು ಅಗತ್ಯ: ಮುಮ್ತಾಜ್ ಮನ್ಸೂರಿ

ನಮ್ಮ ಸಮುದಾಯದ ದುರ್ಬಲ ವರ್ಗಗಳನ್ನು ಮೇಲಕ್ಕೆತ್ತಲು ಎಲ್ಲರೂ ಬೆಂಬಲ ಮತ್ತು ಸಹಕಾರದೊಂದಿಗೆ...