ಬೀದರ್ ಜಿಲ್ಲೆ ಹುಲಸೂರಿನಲ್ಲಿ ಮಳೆ ಅನಾಹುತಕ್ಕೆ ಕೆ.ಜಿ.ಎನ್. ಕಾಲೋನಿಯಲ್ಲಿ 6 ವರ್ಷದ ಬಾಲಕಿ ಮೃತಪಟ್ಟಿರುವ ಬಗ್ಗೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಕಂಬನಿ ಮಿಡಿದಿದ್ದಾರೆ.
ನಿನ್ನೆ ಸಂಜೆ ಸುರಿದ ಭಾರಿ ಆಲಿಕಲ್ಲು ಮಳೆಯಿಂದಾಗಿ ಪತ್ರೂಸ್ ಹಾರಿಹೋಗಿ, ಮೇಲಿಟ್ಟಿದ್ದ ಕಲ್ಲು ಬಿದ್ದು ಬಾಲಕಿ ಮೃತಪಟ್ಟಿರುವುದು ಅತ್ಯಂತ ನೋವಿನ ಸಂಗತಿ. ಈ ದುಃಖದ ಸಂದರ್ಭದಲ್ಲಿ ಸರ್ಕಾರ ಕುಟುಂಬದ ಜೊತೆ ನಿಲ್ಲುತ್ತದೆ. ಕುಟುಂಬದವರಿಗೆ ನಿಯಮಾನುಸಾರ ಪರಿಹಾರ ನೀಡುವಂತೆ ಜಿಲ್ಲಾಡಳಿತಕ್ಕೆ ಸೂಚಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಜಿಲ್ಲೆಯಲ್ಲಿ ಗಾಳಿ ಸಹಿತ ಮಳೆ ಬೀಳುತ್ತಿದ್ದು, ಜನರೂ ಸುರಕ್ಷತೆಯಿಂದ ಇರುವಂತೆ ಮನವಿ ಮಾಡಿದ್ದಾರೆ.
ಇದನ್ನೂ ಓದಿ : ಬೀದರ್ | ಬಿರುಗಾಳಿ ಮಳೆ : ಮನೆ ಮೇಲಿಂದ ಕಲ್ಲು ಬಿದ್ದು 6 ವರ್ಷದ ಬಾಲಕಿ ಸಾವು




