ಬೀದರ್ | ಬಜೆಟ್‌ನಲ್ಲಿ ಕುಂಬಾರ ಸಮಾಜ ಅಭಿವೃದ್ಧಿ ನಿಗಮಕ್ಕೆ ₹100 ಕೋಟಿ ಕೊಡಿ

Date:

2026-27ನೇ ಸಾಲಿನ ರಾಜ್ಯ ಬಜೆಟ್‌ನಲ್ಲಿ ಕರ್ನಾಟಕ ಕುಂಬಾರ ಸಮಾಜ ಅಭಿವೃದ್ಧಿ ನಿಗಮಗೆ ಕನಿಷ್ಠ ₹100 ಕೋಟಿ ಅನುದಾನ ಮೀಸಲಿಡುವಂತೆ ಜಿಲ್ಲಾ ಕುಂಬಾರ ಸಮಾಜ ಒತ್ತಾಯಿಸಿದೆ.

- Advertisement -

ಈ ಸಂಬಂಧ ಗುರುವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೆಸರಿಗೆ ಬರೆದ ಮನವಿ ಪತ್ರವನ್ನು ಅಪರ ಜಿಲ್ಲಾಧಿಕಾರಿ ಶಿವಾನಂದ ಬಿ.ಕರಾಳೆ ಅವರಿಗೆ ಸಲ್ಲಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

ಬೆವರಿನ ಹಣಕ್ಕೆ ಮೋದಿ ಸರ್ಕಾರದ ಕಂಟಕ: ಹೊಸ ಪಿಎಫ್...

ತಮ್ಮದೇ ಬೆವರಿನ ಗಳಿಕೆ, ತುರ್ತು ಬದುಕಿನ ಆಸರೆ ಪಿಎಫ್. ಆದರೆ ಇಂದು ಆ ಹಣವನ್ನು ಪಡೆಯಲಾಗದೆ ಗಾರ್ಮೆಂಟ್ಸ್ ಕಾರ್ಮಿಕರು ಕಣ್ಣೀರು ಹಾಕುವಂತಾಗಿದೆ. ಬಟ್ಟೆ ಕಾರ್ಖಾನೆಗಳ ಶ್ರಮಿಕರ ಬದುಕಿಗೆ ಕೇಂದ್ರದ ಮೋದಿ ಸರ್ಕಾರದ ಹೊಸ...

‘ರಾಜ್ಯದಲ್ಲಿ ಸುಮಾರು 25 ಲಕ್ಷ ಜನಸಂಖ್ಯೆ ಇರುವ ಕುಂಬಾರ ಸಮುದಾಯದವರು ಸಮಾಜಕ್ಕೆ ಹಲವು ಕೊಡುಗೆಗಳನ್ನು ನೀಡಿದ್ದಾರೆ. ಸಮುದಾಯದ ಅಭಿವೃದ್ಧಿಗಾಗಿ ಹಲವು ಬಾರಿ ಪ್ರತಿಭಟನೆಗಳು ನಡೆಸಿದರೂ ಸರ್ಕಾರಗಳು ಸ್ಪಂದಿಸುತ್ತಿಲ್ಲ’ ಎಂದು ಬೇಸರ ವ್ಯಕ್ತಪಡಿಸಿದರು.

‘ಕುಂಬಾರ ಸಮುದಾಯದ ಸದ್ಯ 2ಎ ಪ್ರವರ್ಗದಲ್ಲಿ ಇದೆ. ನೂರಕ್ಕೂ ಅಧಿಕ ಜಾತಿಗಳು ಈ ಪಟ್ಟಿಯಲ್ಲಿದ್ದು, ನಮ್ಮ ಜಾತಿಯವರಿಗೆ ಅವಕಾಶಗಳು ಕಡಿಮೆ ಆಗಿದೆ. ಹೀಗಾಗಿ ಸಮಾಜಕ್ಕೆ ವಿಶೇಷ ಮೀಸಲಾತಿ ಕಲ್ಪಿಸಬೇಕು. ಸಮಾಜದ ವಿದ್ಯಾರ್ಥಿಗಳಿಗೆ ಹಾಗೂ ಕುಂಬಾರಿಕೆ ವೃತ್ತಿ ಮಾಡುವವರಿಗೆ ಪ್ರೋತ್ಸಾಹಿಸಿ ಅಗತ್ಯ ನೆರವು ನೀಡಬೇಕು’ ಎಂದು ಮನವಿಯಲ್ಲಿ ತಿಳಿಸಲಾಗಿದೆ.

‘ಸಾಮಾಜಿಕ ಸಮಾನತೆಗೆ ಆದ್ಯತೆ ನೀಡುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ಬಾರಿ ಬಜೆಟ್‌ನಲ್ಲಿ ಕುಂಬಾರ ಸಮಾಜ ಅಭಿವೃದ್ಧಿಗೆ ಹೆಚ್ಚಿನ ಮೊತ್ತವನ್ನು ಮೀಸಲಿಟ್ಟು ಬರುವ ಬಜೆಟ್‌ನಲ್ಲಿ ವಿಶೇಷ ಪ್ಯಾಕೇಜ್ ಘೋಷಿಸುವ ಮೂಲಕ ಸಮುದಾಯದ ಆಶೋತ್ತರಗಳಿಗೆ ಸ್ಪಂದಿಸಬೇಕು’ ಎಂದು ಆಗ್ರಹಿಸಿದರು.

‘ಕರ್ನಾಟಕ ಕುಂಬಾರ ಅಭಿವೃದ್ಧಿ ನಿಗಮಕ್ಕೆ ಪ್ರತಿವರ್ಷ ಕನಿಷ್ಠ ₹100 ಕೋಟಿ ಅನುದಾನ ನೀಡಬೇಕು. ಸಮುದಾಯದವರಿಗೆ ರಾಜಕೀಯ ಸ್ಥಾನ-ಮಾನ ನೀಡಬೇಕು. ಪ್ರತಿ ಜಿಲ್ಲಾ ಮತ್ತು ತಾಲೂಕು ಕೇಂದ್ರಗಳಲ್ಲಿ ಸರ್ವಜ್ಞ ಭವನ ನಿರ್ಮಾಣ ಮಾಡಬೇಕು.ಕುಂಬಾರಿಕೆ ಕರಕುಶಲ ಉತ್ಪನ್ನಗಳ ಮಾರುಕಟ್ಟೆಗೆ ಅವಕಾಶ ಕಲ್ಪಿಸಬೇಕು. ಪ್ರತಿ ವರ್ಷ ಕುಂಬಾರ ಸಮಾಜದ ವಿಶೇಷ ಸಾಧಕರಿಗೆ ಸರ್ಕಾರವೇ ‘ಸರ್ವಜ್ಞ ಶ್ರೀ’ ಪ್ರಶಸ್ತಿ ನೀಡಬೇಕು ಎಂದು ಒತ್ತಾಯಿಸಿದ್ದಾರೆ.

ಇದನ್ನೂ ಓದಿ : ಬೀದರ್‌ | ʼಮನರೇಗಾʼ ಬಲ : ವಿಧಾನಸೌಧದಂತೆ ಕಂಗೊಳಿಸುತ್ತಿರುವ ʼಗ್ರಾಮ ಸೌಧʼ

ಈ ಸಂದರ್ಭದಲ್ಲಿ ಜಿಲ್ಲಾ ಕುಂಬಾರ ಸಮಾಜ ಜಿಲ್ಲಾಧ್ಯಕ್ಷ ವಿಠಲ ಕುಂಬಾರ ಸೇರಿದಂತೆ ಸಮಾಜದ ಪ್ರಮುಖರಾದ ಬಾಲಾಜಿ ಕುಂಬಾರ, ಉಮೇಶ್ ನೌಬಾದ್, ಶಿವರಾಜ್ ಕಾಳಶೆಟ್ಟಿ, ಪವನ ಕೆ.ಆಣದೂರ, ಪಂಡರಿ ಶ್ರೀಮಂಡಲ್, ಮಲ್ಲಿಕಾರ್ಜುನ ಕುಂಬಾರ, ವೀರೇಶ ಬಾಳೂರ ಸೇರಿದಂತೆ ಮತ್ತಿತರರು ಹಾಜರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಯುವ ಪೀಳಿಗೆ ಸಾಮಾಜಿಕ ಪ್ರಜ್ಞೆ ಬೆಳೆಸಿಕೊಳ್ಳಲಿ: ಮುಬಾಶಿರ್ ಸಿಂಧೆ

ಯುವ ಪೀಳಿಗೆ ಸಾಮಾಜಿಕ ಪ್ರಜ್ಞೆ ಬೆಳೆಸಿಕೊಂಡು ಸಮಾಜದ ಅಭಿವೃದ್ಧಿಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕು...

ಬೀದರ್‌ | ಐತಿಹಾಸಿಕ ಕರೇಜ್ ಅಭಿವೃದ್ಧಿಗೆ ಬುಡಾ ಕೈಜೋಡಿಸಲಿ

ಬೀದರ್‌ ನಗರದಲ್ಲಿರುವ ಐತಿಹಾಸಿಕ ಕರೇಜ್ ಜಲವ್ಯವಸ್ಥೆಯನ್ನು ಸಂರಕ್ಷಿಸಿ, ಅಂತರ್ಜಲ ಮರುಪೂರಣ ಹಾಗೂ...

ಬೀದರ್‌ | ʼಯುವ ಸೌರಭʼ ಸಾಂಸ್ಕೃತಿಕ ಕಾರ್ಯಕ್ರಮ, ಪ್ರತಿಭೆ ಅನಾವರಣ

ವಿದ್ಯಾರ್ಥಿಗಳಲ್ಲಿರುವ  ಪ್ರತಿಭೆಯನ್ನು ಅನಾವರಣಗೊಳಿಸಲು ‘ಯುವ ಸೌರಭ’ದಂತಹ ಸಾಂಸ್ಕೃತಿಕ ಕಾರ್ಯಕ್ರಮಗಳು ಸೂಕ್ತ ವೇದಿಕೆಯಾಗಿವೆ....

ಬಸವಕಲ್ಯಾಣ | ಕಿಟ್ಟಾ ಗ್ರಾಮದ 20 ಬಡ ಕುಟುಂಬಗಳಿಗೆ ನಿವೇಶನ ನೀಡಲು ಆಗ್ರಹ

ಬಸವಕಲ್ಯಾಣ ತಾಲ್ಲೂಕಿನ ಕಿಟ್ಟಾ ಗ್ರಾಮದ ಸರ್ವೆ ನಂ. 249ರಲ್ಲಿ ಸುಮಾರು 20...