ಬೀದರ್‌ | ಅಂಬೇಡ್ಕರ್ ಭವನ ನಿರ್ಮಾಣಕ್ಕೆ ಜಾಗ ಕೊಡಿ : ಸಚಿವ ಈಶ್ವರ ಖಂಡ್ರೆಗೆ ಮನವಿ

Date:

ಬೀದರ ನಗರದ ಕುಂಬಾರವಾಡದಲ್ಲಿ ಡಾ. ಬಿ.ಆರ್.ಅಂಬೇಡ್ಕರ್ ಭವನ ನಿರ್ಮಾಣಕ್ಕೆ ಜಾಗ ಮಂಜೂರು ಮಾಡುವಂತೆ ರಮಾತಾಯಿ ಮಹಿಳಾ ಸಂಘದ ಪದಾಧಿಕಾರಿಗಳು ಹಾಗೂ ಪರಿಶಿಷ್ಟ ಜಾತಿ ಸಮುದಾಯದ ಮುಖಂಡರು ಗ್ರಾಮೀಣಾಭಿವೃದ್ಧಿ ಸಚಿವ ಈಶ್ವರ ಖಂಡ್ರೆ ಅವರಿಗೆ ಮನವಿ ಸಲ್ಲಿಸಿದರು.

- Advertisement -

ಭಾಲ್ಕಿಯಲ್ಲಿ ಸಚಿವ ನಿವಾಸದಲ್ಲಿ ಭೇಟಿ ಮಾಡಿದ ಸಂಘದ ಪದಾಧಿಕಾರಿಗಳು, ಕುಂಬಾರವಾಡದ ಸರ್ವೇ ನಂ. 51/1ರ 25 ಎಕರೆ ಸರ್ಕಾರಿ ಜಮೀನಿನಲ್ಲಿ 75 & 80 ಅಳತೆಯ ಖಾಲಿ ಜಾಗವಿದ್ದು, ಕಳೆದ 25 ವರ್ಷಗಳಿಂದ ಇದೇ ಸ್ಥಳದಲ್ಲಿ ಅಂಬೇಡ್ಕರ್ ಜಯಂತಿ, ಅಶೋಕ ದಶಮಿ, ಬುದ್ಧ ಪೂರ್ಣಿಮೆ ಹಾಗೂ ವಿವಿಧ ಸಾಮಾಜಿಕ ಕಾರ್ಯಕ್ರಮಗಳನ್ನು ನಡೆಸಿಕೊಂಡು ಬರುತ್ತಿದ್ದೇವೆ” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

“ಕುಂಬಾರವಾಡದಲ್ಲಿ ವಿವಿಧ ಜಾತಿ ಮತ್ತು ಧರ್ಮದ ಸಮುದಾಯಗಳಿಗೆ ದೇವಸ್ಥಾನ, ಮಸೀದಿ ಹಾಗೂ ಚರ್ಚ್‌ಗಳಂತಹ ಕಟ್ಟಡಗಳಿದ್ದರೂ, ಪರಿಶಿಷ್ಟ ಜಾತಿ ಸಮುದಾಯಕ್ಕೆ ಸಭೆ, ಸಮಾರಂಭಗಳು ನಡೆಸಲು ಸಮುದಾಯ ಭವನವಿಲ್ಲ. ಸದರಿ ಜಾಗವನ್ನು ಡಾ. ಬಿ.ಆರ್. ಅಂಬೇಡ್ಕರ್ ಸಮುದಾಯ ಭವನ ನಿರ್ಮಾಣಕ್ಕೆ ಮಂಜೂರು ಮಾಡಿ, ಕಟ್ಟಡ ನಿರ್ಮಾಣಕ್ಕಾಗಿ ಸರ್ಕಾರದಿಂದ ಒಂದು ಕೋಟಿ ಅನುದಾನ ನೀಡಬೇಕು. ಜಾಗ ಮಂಜೂರಾತಿಗಾಗಿ ಜಿಲ್ಲಾಧಿಕಾರಿ, ಮಹಾನಗರ ಪಾಲಿಕೆ ಆಯುಕ್ತರು ಹಾಗೂ ತಹಸೀಲ್ದಾರ್ ಅವರಿಗೆ ಈಗಾಗಲೇ ಮೂರು ಬಾರಿ ಮನವಿ ಸಲ್ಲಿಸಿದ್ದು, ಸ್ಥಳದಲ್ಲಿಯೇ ಧರಣಿ ಸತ್ಯಾಗ್ರಹ ಸಹ ನಡೆಸಲಾಗಿದೆ” ಎಂದು ತಿಳಿಸಿದರು.

ಬೇಡಿಕೆಗೆ ಸ್ಪಂದಿಸಿದ ಸಚಿವ ಈಶ್ವರ ಖಂಡ್ರೆ ಅವರು ಮಾತನಾಡಿ, “ಬುದ್ಧ, ಬಸವ ಮತ್ತು ಅಂಬೇಡ್ಕರ್ ಅವರ ತತ್ವಗಳನ್ನು ಮೈಗೂಡಿಸಿಕೊಂಡು ಕೆಲಸ ಮಾಡುತ್ತಿರುವ ತಾವು ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಚರ್ಚಿಸಿ, ಅಂಬೇಡ್ಕರ್ ಸಮುದಾಯ ಭವನ ನಿರ್ಮಾಣಕ್ಕಾಗಿ ಸ್ಥಳ ಮಂಜೂರು ಮಾಡುವ ಕುರಿತು ಅಗತ್ಯ ಕ್ರಮ ಕೈಗೊಳ್ಳುವೆ” ಎಂದು ಭರವಸೆ ನೀಡಿದರು.

ಇದನ್ನೂ ಓದಿ : ಭಾಲ್ಕಿ | ಭೀಮರಾಜ್ ಸೇನಾ ಸಂಘಟನೆಯಿಂದ ವೃದ್ಧರಿಗೆ ಮಾಸಿಕ ಪಿಂಚಣಿ

ರಮಾತಾಯಿ ಮಹಿಳಾ ಸಂಘದ ಪದಾಧಿಕಾರಿಗಳಾದ ಲಕ್ಷ್ಮೀ, ರಮಾಬಾಯಿ, ಸುಲೋಚನಾ, ಗಂಗಮ್ಮ, ಜ್ಯೋತಿ, ಲಕ್ಷ್ಮೀ ಕಾಳೆಕಾರ, ಶೋಭಾ, ಕಾಶಿಬಾಯಿ ಕಾಂಬ್ಳೆ, ಅಂಬವ್ವ, ಸುಮಿತ್ರಾ, ಅಂಬಿಕಾ, ನಾಗಮ್ಮ, ಶಕುಂತಲಾ, ರುಕ್ಮಿಣಿ, ಸರಸ್ವತಿ, ಪಂಚಶೀಲ, ಪ್ರಭಾವತಿ, ಸುಭಾಷ್ ವರ್ಮಾ, ಮಲ್ಲಿಕಾರ್ಜುನ ಮೊಳಕೆರೆ, ಗೌತಮ ಭೋಸ್ಲೆ, ತುಕಾರಾಮ ಕಡೆಮನಿ, ಶಿವಲಿಂಗಪ್ಪ ಕಡೆಮನಿ, ಸಿದ್ದಪ್ಪ ಕಾಂಬ್ಳೆ, ಸಾಯಿನಾಥ ಕಳೆಕಾರ, ಸದಾನಂದ ಕಳೆಕಾರ, ಸಿದ್ದಾರ್ಥ ಕಾಂಬ್ಳೆ, ಆನಂದ ಕಡೆಮನಿ, ನರಸಿಂಗ್ ನಾಗೂರೆ, ಭರತ್ ಕಾಂಬ್ಳೆ, ದಿಗಂಬರ ಹಾಗೂ ಸಂತೋಷ್ ಬೆನ್ನಕನಳ್ಳಿಕರ್ ಮತ್ತಿತರರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮುಂಬೈ ಗರ್ಬಾ ಉತ್ಸವಕ್ಕೆ ಮುಸ್ಲಿಮರ ಪ್ರವೇಶಕ್ಕೆ ನಿರ್ಬಂಧ: ತಿಲಕ, ಆಧಾರ್ ಕಾರ್ಡ್ ಹಾಗೂ ಕುಟುಂಬ ಸಮೇತ ಆಗಮನ ಕಡ್ಡಾಯ!

ಮುಂಬೈನ ಬೋರಿವಲಿಯಲ್ಲಿ ಆಯೋಜಿಸಲಾಗುತ್ತಿರುವ ಮುಂಬರುವ ನವರಾತ್ರಿ ಗರ್ಬಾ ಮತ್ತು ದಾಂಡಿಯಾ ಉತ್ಸವದಲ್ಲಿ...

ಯುಪಿ ಚುನಾವಣೆ | ಪ್ರತಿ ಕ್ಷೇತ್ರದಲ್ಲೂ ಬಿಜೆಪಿ ಮತಗಳನ್ನು 27,000 ಕಡಿತಗೊಳಿಸುತ್ತೇವೆ: ಅಖಿಲೇಶ್ ಪ್ರತಿಜ್ಞೆ

2027ರ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಗೆ ಎಲ್ಲ ಪಕ್ಷಗಳು ಸಿದ್ದತೆಯಲ್ಲಿ ತೊಡಗಿವೆ....

ಅಮೃತಸರದಲ್ಲಿ ಕಳೆದುಹೋಗಿ ಗಯಾದಲ್ಲಿ ಪತ್ತೆ; ಎಐ ತಂತ್ರಜ್ಞಾನದ ನೆರವಿನಿಂದ ಕುಟುಂಬವನ್ನು ಸೇರಿದ ವ್ಯಕ್ತಿ

ಪಂಜಾಬ್‌ನಿಂದ ದಾರಿ ತಪ್ಪಿ 1,200 ಕಿಲೋಮೀಟರ್‌ಗೂ ಹೆಚ್ಚು ದೂರದ ಬಿಹಾರ ತಲುಪಿದ್ದ...

ಕೊಲ್ಹಾರ | ಶಾಸಕರಿಲ್ಲದ ಪ್ರಜಾಸೇವಾ ಆಂದೋಲನ: ಅಹವಾಲು ಹೊತ್ತುಬಂದವರಿಗೆ ನಿರಾಸೆ, ಅಧಿಕಾರಿಗಳಿಂದ ಪರಿಹಾರದ ಭರವಸೆ

ವಿಜಯಪುರ ಜಿಲ್ಲೆಯ ಕೊಲ್ಹಾರ ಪಟ್ಟಣದಲ್ಲಿ ಶಾಸಕರಿಲ್ಲದೆ ಪ್ರಜಾಸೇವಾ ಆಂದೋಲನ ನಡೆಯಿತು. ಇದರಿಂದಾಗಿ...