ಆಯುರ್ವೇದ ಚಿಕಿತ್ಸೆಗೆ ಜಾಗತಿಕ ಮಟ್ಟದಲ್ಲಿ ಮನ್ನಣೆ ಸಿಗುತ್ತಿದೆ ಎಂದು ಕೇಂದ್ರ ಸರ್ಕಾರದ ಆಯುಷ್ ಸಚಿವಾಲಯದ ಎನ್‍ಸಿಐಎಸ್‍ಎಂ ಆಯುರ್ವೇದ ಮಂಡಳಿ ಅಧ್ಯಕ್ಷ ಡಾ.ಅಲ್ಲಮಪ್ರಭು ಗುಡ್ಡಾ ಹೇಳಿದರು.
ಬೀದರ್ ನಗರದ ಚಿದಂಬರ ಶಿಕ್ಷಣ ಸಂಸ್ಥೆ ಸಂಚಾಲಿತ ನಗರದ ಎನ್.ಕೆ.ಜಾಬಶೆಟ್ಟಿ ಆಯುರ್ವೇದಿಕ್ ವೈದ್ಯಕೀಯ ಕಾಲೇಜಿನಲ್ಲಿ ಶನಿವಾರ ನಡೆದ ಪದವಿ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
“ಹತ್ತು ವರ್ಷಗಳ ಅವಧಿಯಲ್ಲಿ ಆಯುರ್ವೇದ ಚಿಕಿತ್ಸಾ ಪದ್ಧತಿಯು ಗಣನೀಯ ಪ್ರಗತಿ ಹೊಂದಿದೆ. ಎನ್.ಕೆ. ಜಾಬಶೆಟ್ಟಿ ಆಯುರ್ವೇದಿಕ್ ಕಾಲೇಜು ಉತ್ತಮವಾಗಿ ಕಾರ್ಯ ನಿರ್ವಹಿಸುತ್ತಿದೆ” ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಸಾನಿಧ್ಯ ವಹಿಸಿದ್ದ ಚಿದಂಬರ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಶಿವಕುಮಾರ ಸ್ವಾಮೀಜಿ ಮಾತನಾಡಿ, ಆಯುರ್ವೇದ ವೈದ್ಯಕೀಯ ಕ್ಷೇತ್ರದಲ್ಲೂ ವಿಪುಲ ಅವಕಾಶಗಳು ಇವೆ. ವೈದ್ಯರು ರೋಗಿಗಳಿಗೆ ಉತ್ತಮ ಚಿಕಿತ್ಸೆ ನೀಡಿ ವೃತ್ತಿಯ ಗೌರವ ಹೆಚ್ಚಿಸಬೇಕು. ಸಮಾಜಕ್ಕೆ ಕೊಡುಗೆ ನೀಡಬೇಕು ಎಂದು ಹೇಳಿದರು.
This video cannot be played in your browser. Open the video directly
ಸಮಾರಂಭದಲ್ಲಿ 4 ವಿದ್ಯಾರ್ಥಿಗಳಿಗೆ ಪಿಎಚ್‍ಡಿ, 16 ವಿದ್ಯಾರ್ಥಿಗಳಿಗೆ ಸ್ನಾತಕೋತ್ತರ ಹಾಗೂ 69 ವಿದ್ಯಾರ್ಥಿಗಳಿಗೆ ಸ್ನಾತಕ ಪದವಿ ಪ್ರದಾನ ಮಾಡಲಾಯಿತು.
ಇದನ್ನೂ ಓದಿ : ಬೀದರ್ | ಅ.24ರಿಂದ ಕಲ್ಯಾಣ ಪರ್ವ: ಭಿತ್ತಿ ಪತ್ರ ಬಿಡುಗಡೆ
ಶ್ರೀ ಚಿದಂಬರ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಬಿ.ಜಿ. ಶೆಟಕಾರ್, ಜಂಟಿ ಕಾರ್ಯದರ್ಶಿ ಮಡಿವಾಳಪ್ಪ ಗಂಗಶೆಟ್ಟಿ, ಸದಸ್ಯರಾದ ಶಿವಶರಣಪ್ಪ ಸಾವಳಗಿ, ಸುಭಾಷ್ ಉಪ್ಪೆ, ಉದಯಭಾನು ಸೂರ್ಯವಂಶಿ, ಸಹಜಾನಂದ ಕಂದಗೂಳ, ಸ್ವಾತ್ಮಾನಂದಗಿರಿ ಸ್ವಾಮೀಜಿ, ವಿನಾಯಕ ಶಿವಕುಮಾರ, ಆಡಳಿತಾಧಿಕಾರಿ ಹಾವಗಿರಾವ್ ಮೈಲಾರೆ ಇದ್ದರು. ಕಾಲೇಜು ಪ್ರಾಚಾರ್ಯ ಡಾ.ಚಂದ್ರಕಾಂತ ಹಳ್ಳಿ ಸ್ವಾಗತಿಸಿದರು. ಡಾ.ಶುಭದಾ, ಡಾ.ಆಶಾರಾಣಿ ನಿರೂಪಿಸಿದರು. ಪಂಚಕರ್ಮ ವಿಭಾಗದ ಮುಖ್ಯಸ್ಥ ಡಾ.ಚನ್ನಬಸವಣ್ಣ ವಂದಿಸಿದರು.





