ಬೀದರ್‌ | ಸೆ.27ರಂದು ಹೂಗಾರ ಮಾದಯ್ಯನವರ ಜಯಂತಿ ಅದ್ದೂರಿ ಆಚರಣೆ

Date:

ಅಖಂಡ ಕರ್ನಾಟಕ ಹೂಗಾರ ಮಹಾಸಭಾ ಬೀದರ್ ಜಿಲ್ಲಾ ಘಟಕದ ವತಿಯಿಂದ ಸೆ.27ರಂದು ಹೂಗಾರ ಮಾದಯ್ಯನವರ ಜಯಂತಿಯನ್ನು ವಿಜೃಂಭಣೆಯಿಂದ ಆಚರಿಸಲಾಗುವುದು ಎಂದು ಮಹಾಸಭಾದ ರಾಜ್ಯ ಕಾರ್ಯದರ್ಶಿ ಚಂದ್ರಕಾಂತ ಹೂಗಾರ ತಿಳಿಸಿದರು.

- Advertisement -

ನಗರದ ಜಿಲ್ಲಾ ಪತ್ರಿಕಾ ಭವನದಲ್ಲಿ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, “ಇದೇ ಮೊದಲ ಬಾರಿಗೆ ಬೀದರ್ ನಗರದ ಡಾ.ಚನ್ನಬಸವ ಪಟ್ಟದ್ದೇವರ ರಂಗಮಂದಿರದಲ್ಲಿ ಜಯಂತಿಯ ಮುಖ್ಯ ಸಮಾರಂಭ ಆಯೋಜಿಸಲಾಗಿದೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

‘ಹಾಸ್ಟೆಲ್‌’ ಇಲ್ಲದ ಶಿಕ್ಷಣದ ಸ್ವರೂಪ ಹೇಗಿರಲಿದೆ?

ಸಾಮಾನ್ಯವಾಗಿ ʼಶಿಕ್ಷಣʼ ಎಂದರೆ ʼತರಗತಿ, ಪಠ್ಯಪುಸ್ತಕ ಮತ್ತು ಪರೀಕ್ಷೆಗಳʼ ಸುತ್ತ ಹೆಣೆದುಕೊಂಡಿರುವ ಕಲ್ಪನೆ. ಆದರೆ ಒಬ್ಬ ವಿದ್ಯಾರ್ಥಿ ದಿನದ ಬಹುಪಾಲು ಕಳೆಯುವ ಜಾಗ ʼಹಾಸ್ಟೆಲ್‌ʼ. ಹೆಚ್ಚಾಗಿ ಚರ್ಚೆಗೆ ಬಾರದ ಈ ʼಹಾಸ್ಟೆಲ್‌ʼ ಎಂಬ...

ಬರದ ಬೇಗೆಯಲ್ಲಿ ರಾಜ್ಯ ಬೆಂದರೂ ಅನುದಾನಕ್ಕ ದನಿ ಎತ್ತದ...

ಸದಾ ಕಾಲ 'ಮೋದಿ ಜಪ' ಮಾಡುತ್ತಾ, ಕೇವಲ ರಾಜಕೀಯಕ್ಕಾಗಿ ಮತ್ತು ಪಕ್ಷದ ಅಜೆಂಡಾಗಳಿಗಾಗಿ ರಾಜ್ಯಾದ್ಯಂತ ಸುತ್ತುವ ಈ ಸಂಸದರಿಗೆ, ನಾಡಿನ ಜನತೆ ಬರಗಾಲದ ತೀವ್ರ ಸಂಕಷ್ಟದಲ್ಲಿ ಬೆಂದು ಹೋಗುತ್ತಿರುವಾಗ ಅದೇ ಪ್ರಧಾನಿ ನರೇಂದ್ರ...

SIR ಅಕ್ರಮ | ಗ್ಯಾನೇಶ್‌ ಕುಮಾರ್ ‘ಅಪರಾಧಿ’ಯಾದ್ರೆ, ಮೋದಿ-ಅಮಿತ್...

ಭಾರತೀಯ ಪ್ರಜಾಪ್ರಭುತ್ವದ ಇತಿಹಾಸದಲ್ಲೇ ಅತ್ಯಂತ ಕರಾಳ ಅಧ್ಯಾಯವೊಂದು ಈಗ ಜಗಜ್ಜಾಹೀರಾಗಿದೆ. ಪ್ರತಿಯೊಬ್ಬ ನಾಗರಿಕನ ಅತಿ ದೊಡ್ಡ ರಾಜಕೀಯ ಶಕ್ತಿಯಾಗಿರುವ 'ಮತದಾನದ ಹಕ್ಕು' ಮತ್ತು ಅದನ್ನು ಕಾಯಬೇಕಾದ ಸಾಂವಿಧಾನಿಕ ಸಂಸ್ಥೆಯನ್ನೇ ಆಡಳಿತಾರೂಢ ಮೋದಿ-ಅಮಿತ್ ಶಾ...

ಅಂದು ಬೆಳಿಗ್ಗೆ 9 ಗಂಟೆಗೆ ಬಸವೇಶ್ವರ ಚೌಕ್‌ನಿಂದ (ನಯಾ ಕಮಾನ್) ಬೃಹತ್ ಮೆರವಣಿಗೆ ಆರಂಭವಾಗಲಿದೆ. ಮಹಾವೀರ ವೃತ್ತ, ಭಗತಸಿಂಗ್ ಸರ್ಕಲ್, ಅಂಬೇಡ್ಕರ್ ವೃತ್ತ, ಶಿವಾಜಿ ಚೌಕ್, ಹರಳಯ್ಯ ಚೌಕ್, ಮೋಹನ್ ಮಾರ್ಕೆಟ್, ಗುದಗೆ ಆಸ್ಪತ್ರೆ ಮುಂಭಾಗದಿಂದ ರೋಟರಿ ಸರ್ಕಲ್ ಮಾರ್ಗವಾಗಿ ಮೆರವಣಿಗೆಯು ಡಾ.ಚನ್ನಬಸವ ಪಟ್ಟದ್ದೇವರ ರಂಗಮಂದಿರ ತಲುಪಲಿದೆ ಎಂದು ವಿವರಿಸಿದರು.

ಕಾರ್ಯಕ್ರಮದಲ್ಲಿ ಬಸವ ಸೇವಾ ಪ್ರತಿಷ್ಠಾನದ ಡಾ.ಗಂಗಾಂಬಿಕಾ ಅಕ್ಕ, ರಾಷ್ಟ್ರೀಯ ಬಸವದಳ ಜಿಲ್ಲಾಧ್ಯಕ್ಷ ಸೋಮಶೇಖರ ಪಾಟೀಲ ಗಾದಗಿ ಸೇರಿದಂತೆ ಮುಖಂಡರಾದ ರಜನೀಶ ವಾಲಿ, ದೀಪಕ ವಾಲಿ, ಹೂಗಾರ ಸಮಾಜದ ರಾಜ್ಯಾಧ್ಯಕ್ಷ ಬಸವರಾಜ ಹೂಗಾರ ಹಾಗೂ ಜಿಲ್ಲಾಧ್ಯಕ್ಷ ಕಪಿಲ್ ಹೂಗಾರ ಸೇರಿದಂತೆ ಗಣ್ಯರು ಮೆರವಣಿಗೆಗೆ ಚಾಲನೆ ನೀಡಲಿದ್ದಾರೆ ಎಂದರು.

ಸಮಾರಂಭದಲ್ಲಿ ಭಾಗವಹಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಅವರನ್ನು ಭೇಟಿಯಾಗಿ ಆಹ್ವಾನಿಸಲಾಗಿದೆ. ಜಿಲ್ಲೆಯ ಎಲ್ಲ ಶಾಸಕರಿಗೆ ವೈಯಕ್ತಿಕವಾಗಿ ಆಹ್ವಾನಿಸಲಾಗಿದ್ದು, ಕಾರ್ಯಕ್ರಮದಲ್ಲಿ ಭಾಗವಹಿಸುವ ಭರವಸೆ ನೀಡಿದ್ದಾರೆ. ಇದೇ ವೇಳೆ ರಾಜ್ಯ ಸರ್ಕಾರಕ್ಕೆ ವಿವಿಧ ಬೇಡಿಕೆಗಳ ಮನವಿ ಪತ್ರ ಸಲ್ಲಿಸಲಾಗಿದೆ ಎಂದು ಹೇಳಿದರು.

ಜಿಲ್ಲಾ ಹೂಗಾರ ಸಮಾಜದ ಜಿಲ್ಲಾ ಕಾರ್ಯಾಧ್ಯಕ್ಷ ಸಿದ್ದಪ್ಪ ಫುಲಾರಿ ಮಾತನಾಡಿ, “2023ರಲ್ಲಿ ಅಂದಿನ ಸಿಎಂ ಬಸವರಾಜ ಬೊಮ್ಮಾಯಿ ಅವರು ಕರ್ನಾಟಕ ರಾಜ್ಯ ಹೂಗಾರ ಸಮಾಜ ಅಭಿವೃದ್ಧಿ ನಿಗಮ ಘೋಷಿಸಿದ್ದರು. ಆದರೆ, ಈವರೆಗೆ ನಿಗಮಕ್ಕೆ ಅಧ್ಯಕ್ಷರ ನೇಮಕವಾಗಿಲ್ಲ, ನಯಾ ಪೈಸೆ ಅನುದಾನವೂ ನೀಡಿಲ್ಲ. ಸಿಎಂ ಡಿ.ಕೆ.ಶಿವಕುಮಾರ ಅವರು ಮುಂಬರುವ ಬಜೆಟ್‌ನಲ್ಲಿ ಹೂಗಾರ ಸಮಾಜ ಅಭಿವೃದ್ಧಿ ನಿಗಮಕ್ಕೆ ಅಧ್ಯಕ್ಷರ ನೇಮಕ ಜೊತೆಗೆ, ₹100 ಕೋಟಿ ಅನುದಾನ ಮೀಸಲಿಡಬೇಕು” ಎಂದು ಒತ್ತಾಯಿಸಿದರು.

IMG 20260924 WA0022

ರಾಜ್ಯದಲ್ಲಿ ಹೂಗಾರ ಸಮಾಜವು ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಹಾಗೂ ರಾಜಕೀಯವಾಗಿ ಹಿಂದುಳಿದ ಸಮಾಜವಾಗಿದ್ದು, ಶೈಕ್ಷಣಿಕ ಅಭಿವೃದ್ಧಿ, ಸಮಾಜದ ಗುರುಪೀಠ, ವಿದ್ಯಾಸಂಸ್ಥೆ ಹಾಗೂ ಕಟ್ಟಡ ನಿರ್ಮಾಣಕ್ಕಾಗಿ ರಾಜ್ಯದಲ್ಲಿ ಒಂದು ಕಡೆ 15 ಎಕರೆ ಜಮೀನು ಮಂಜೂರು ಮಾಡಬೇಕು. ಮುಂದಿನ ವರ್ಷದಿಂದ ಹೂಗಾರ ಮಾದಯ್ಯನವರ ಜಯಂತಿಯನ್ನು ರಾಜ್ಯ ಸರ್ಕಾರ ಗೌರವಪೂರ್ವಕವಾಗಿ ಆಚರಿಸಲು ಆದೇಶಿಸಬೇಕು” ಎಂದು ಆಗ್ರಹಿಸಿದರು.

ಮೆರವಣಿಗೆ ಸಮಿತಿ ಅಧ್ಯಕ್ಷ ಮಂಜುನಾಥ ಹೂಗಾರ ಮಾತನಾಡಿ, “ಬಸವಾದಿ ಶರಣರ ವಚನಕಾರ ಹೂಗಾರ ಮಾದಯ್ಯನವರು ಕಾಯಕ ನಿಷ್ಠೆಗೆ ಹೆಸರಾದವರು. ಅವರ ಬದುಕು ಒಂದು ಸಮುದಾಯಕ್ಕೆ ಸೀಮಿತವಾಗದೆ ಇಡೀ ಸಮಾಜಕ್ಕೆ ಆದರ್ಶವಾಗಿದೆ. ಇಂತಹ ನಿಷ್ಠಾವಂತ ಶರಣರ ಜಯಂತಿಯಲ್ಲಿ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಯಶಸ್ವಿಗೊಳಿಸಬೇಕು ಎಂದು ಮನವಿ ಮಾಡಿದರು.

ಇದನ್ನೂ ಓದಿ : ಬೀದರ್‌ನಲ್ಲಿ ಸೆ.28ರಂದು ಉದ್ಯೋಗ ಮೇಳ

ಪತ್ರಿಕಾಗೋಷ್ಠಿಯಲ್ಲಿ ಹೂಗಾರ ಸಮಾಜದ ಜಿಲ್ಲಾಧ್ಯಕ್ಷ ಕಪಿಲ್ ಹೂಗಾರ, ಪ್ರಧಾನ ಕಾರ್ಯದರ್ಶಿ ಶ್ರೀನಿವಾಸ ಹೂಗಾರ, ಪದಾಧಿಕಾರಿಗಳಾದ ಹಣಮಂತಪ್ಪ ಹೂಗಾರ, ಸಿದ್ದು ಹೂಗಾರ, ಸತೀಶ ಹೂಗಾರ, ವಿಶ್ವಾ ಹೂಗಾರ, ಪ್ರಭುಶೆಟ್ಟಿ ಹೂಗಾರ ಸೇರಿದಂತೆ ಮತ್ತಿತರರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ದೇವರೇ ಈ ದೇಶವನ್ನು ಕಾಪಾಡಬೇಕು’: ರೈಲು ಪ್ರಯಾಣದ ಗದ್ದಲಕ್ಕೆ ಬೇಸತ್ತ ತೇಜಸ್ವಿ ಸೂರ್ಯ ಪತ್ನಿ

ರೈಲು ಪ್ರಯಾಣದ ವೇಳೆ ಸಹಪ್ರಯಾಣಿಕರ ಗದ್ದಲದಿಂದ ತೀವ್ರ ಕಿರಿಕಿರಿ ಅನುಭವಿಸಿರುವುದಾಗಿ ಬಿಜೆಪಿ...

ಬೀದರ್ | ಬರ ಪರಿಸ್ಥಿತಿ : ವಿಶೇಷ ಪ್ಯಾಕೇಜ್ ಘೋಷಿಸಲು ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಮಳೆಯ ಕೊರತೆಯಿಂದ ಕೃಷಿ ಚಟುವಟಿಕೆಗಳಿಗೆ ತೀವ್ರ ಹಿನ್ನಡೆಯಾಗಿದ್ದು, ಬೆಳೆ...

SIR ರದ್ದುಪಡಿಸಿ, ಮುಖ್ಯ ಚುನಾವಣಾ ಆಯುಕ್ತರನ್ನು ಜೈಲಿಗಟ್ಟಬೇಕು: ನಟ ಪ್ರಕಾಶ್‌ ರಾಜ್‌

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ - SIR ಪ್ರಕ್ರಿಯೆಯನ್ನು ರದ್ದುಪಡಿಸಬೇಕು...