ಬೀದರ್‌ | ಹಸಿರು ಬೀದರ್ ಚಳವಳಿ : ತಿಂಗಳಲ್ಲಿ 10 ಸಾವಿರ ಸಸಿ ನೆಡುವ ಗುರಿ : ಅಬ್ದುಲ್‌ ಖದೀರ್

Date:

ಬೀದರ್ ನಗರವನ್ನು ಹಸಿರು ಮಯಗೊಳಿಸುವ ಮಹತ್ವಾಕಾಂಕ್ಷೆಯ ಉದ್ದೇಶದಿಂದ ಬೀದರ್ ನಾಗರಿಕ ಸನ್ಮಾರ್ಗ ಸಮಿತಿ (ಬಿಎನ್‌ಎಸ್‌ಎಸ್), ಜಿಲ್ಲಾ ಆಡಳಿತ, ಸುಮಾರು 100 ಸ್ವಯಂಸೇವಾ ಸಂಸ್ಥೆಗಳು ಹಾಗೂ ಶಿಕ್ಷಣ ಸಂಸ್ಥೆಗಳ ಸಹಯೋಗದಲ್ಲಿ “ಹಸಿರು ಬೀದರ್ ಚಳವಳಿ”ಯನ್ನು ಆರಂಭಿಸಿದೆ ಎಂದು ಸಮಿತಿಯ ಅಧ್ಯಕ್ಷ ಡಾ. ಅಬ್ದುಲ್ ಖದೀರ್ ತಿಳಿಸಿದ್ದಾರೆ.

- Advertisement -

ನಗರದ ಶಹಾಪುರ ಗೇಟ್ ಸಮೀಪದ ಶಾಹೀನ್ ಶಿಕ್ಷಣ ಸಂಸ್ಥೆಗಳ ಸಮೂಹದ ಸಭಾಂಗಣದಲ್ಲಿ ಶುಕ್ರವಾರ ಆಯೋಜಿಸಿದ್ದ ವಿಶ್ವ ಪರಿಸರ ದಿನಾಚರಣೆ ಹಾಗೂ ಹಸಿರು ಬೀದರ್ ಚಳವಳಿ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, “ಒಂದು ಗಿಡ ಪೀಳಿಗೆಯ ಹೆಸರಿನಲ್ಲಿ” ಎಂಬ ಘೋಷವಾಕ್ಯದಡಿ ಒಂದು ತಿಂಗಳ ಅವಧಿಯಲ್ಲಿ ಬೀದರ್ ನಗರದಲ್ಲಿ 10 ಸಾವಿರ ಸಸಿಗಳನ್ನು ನೆಡುವ ಗುರಿ ಹೊಂದಲಾಗಿದೆ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಅಮೆರಿಕದ ಮಧ್ಯಂತರ ಚುನಾವಣೆ: ಬೆಲೆ ಏರಿಕೆ, ಇರಾನ್ ಯುದ್ಧದ...

ಅಮೆರಿಕದಲ್ಲಿ ಏರುತ್ತಿರುವ ಪೆಟ್ರೋಲ್ ಬೆಲೆ, ದುಬಾರಿಯಾಗುತ್ತಿರುವ ದಿನಬಳಕೆಯ ವಸ್ತುಗಳು ಹಾಗೂ ಇರಾನ್ ವಿರುದ್ಧದ ಯುದ್ಧದ ಆರ್ಥಿಕ ಪರಿಣಾಮಗಳು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆಡಳಿತಕ್ಕೆ ದೊಡ್ಡ ರಾಜಕೀಯ ಸವಾಲಾಗಿವೆ. ನವೆಂಬರ್ 3ರಂದು ನಡೆಯಲಿರುವ ಮಧ್ಯಂತರ...

ಖಾಲಿದ್‌ರಂತೆ ಸಿಜೆಪಿ ನಾಯಕರನ್ನೂ ದೀರ್ಘ ಜೈಲುವಾಸದ ಸುಳಿಯಲ್ಲಿ ಸಿಲುಕಿಸುವ...

ಚುನಾವಣಾ ಆಯೋಗದ ಅಕ್ರಮ ಪ್ರಶ್ನಿಸಿದ ಸಿಜೆಪಿ ನಾಯಕರ ವಿರುದ್ಧ ಸರಣಿ ದೂರು ದಾಖಲಿಸಲಾಗುತ್ತಿದೆ. ಮೋದಿ ಸರ್ಕಾರದ ಅವಧಿಯಲ್ಲಿ ‘ವಿಚಾರಣೆಯೇ ಒಂದು ಶಿಕ್ಷೆ’ ಎನ್ನುವ ತಂತ್ರ ಪುನರಾವರ್ತನೆಯಾಗುತ್ತಿದೆಯೇ? ಉಮರ್‌ ಖಾಲಿದ್‌ ರೀತಿಯಲ್ಲೇ ಸೌರವ್ ದಾಸ್,...

ಎಚ್ಚೆತ್ತುಕೊಳ್ಳುತ್ತಿವೆ DMK, YSRCP; ಡಿಲಿಮಿಟೇಷನ್‌ ಮಸೂದೆ ಮತ್ತೆ ಸೋಲುವ...

ಮೋದಿಯವರ ಅಹಂಕಾರದ ಆಡಳಿತಕ್ಕೆ ದಕ್ಷಿಣ ಭಾರತವು ಎಂದಿಗೂ ತಲೆಬಾಗುವುದಿಲ್ಲ, ಮತ್ತು ಈ ಬಾರಿಯ ಅವರ ಹತಾಶೆಯ ರಾಜಕೀಯ ಕುತಂತ್ರಗಳು ಅವರ ಪಾಲಿಗೆ ತಿರುಗುಬಾಣವಾಗಿ ದೇಶದ ಪ್ರಜಾಪ್ರಭುತ್ವವು ಗೆಲ್ಲುವುದು ಖಚಿತ ಮಹಿಳಾ ಮೀಸಲಾತಿ ಎಂಬ ಪವಿತ್ರ...

“ನಗರದ ರಸ್ತೆ ಬದಿಗಳು, ಖಾಲಿ ಜಾಗಗಳು, ಹಳೆಯ ಹಾಗೂ ಹೊಸ ಸಾರ್ವಜನಿಕ ಉದ್ಯಾನಗಳು ಸೇರಿದಂತೆ ವಿವಿಧ ಪ್ರದೇಶಗಳಲ್ಲಿ ವಿವಿಧ ಜಾತಿಯ ಸಸಿಗಳನ್ನು ನೆಡಲಾಗುವುದು. ಸಸಿ ನೆಡುವುದಷ್ಟೇ ಅಲ್ಲದೆ ಅವುಗಳ ಸಮರ್ಪಕ ಸಂರಕ್ಷಣೆಗೆ ಅರಣ್ಯ ಇಲಾಖೆಯೊಂದಿಗೆ ಎರಡು ವರ್ಷಗಳ ಕಾಲ ಸಹಕಾರ ನೀಡಲಾಗುವುದು. ಸಾರ್ವಜನಿಕರನ್ನು ಸಸಿ ನೆಡುವ ಕಾರ್ಯದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ತೊಡಗಿಸಿಕೊಳ್ಳಲು ನಗರದ 8 ಸ್ಥಳಗಳಲ್ಲಿ ತಾತ್ಕಾಲಿಕ ಸಸಿ ಮಾರಾಟ ಕೇಂದ್ರಗಳನ್ನು ತೆರೆಯಲಾಗಿದೆ. ಸಮಿತಿ ರೂ. 6ಕ್ಕೆ ಖರೀದಿಸಿದ ಸಸಿಗಳನ್ನು ಸಾರ್ವಜನಿಕರಿಗೆ ರೂ. 5ಕ್ಕೆ ನೀಡಲಾಗುತ್ತಿದೆ. ಜೊತೆಗೆ ರೂ.130ಕ್ಕೆ ಪ್ಲಾಸ್ಟಿಕ್ ಟ್ರೀ ಗಾರ್ಡ್ ಹಾಗೂ ರೂ.1,100ಕ್ಕೆ ಸ್ಟೀಲ್ ಟ್ರೀ ಗಾರ್ಡ್‌ಗಳು ಲಭ್ಯವಿರುತ್ತವೆ” ಎಂದು ಮಾಹಿತಿ ನೀಡಿದರು.

“ಹಸಿರು ಬೀದರ್ ಚಳವಳಿಗಾಗಿ ವಿಶೇಷ ‘ಮೊಬೈಲ್ ಆ್ಯಪ್’ ಸಿದ್ಧಪಡಿಸಲಾಗಿದ್ದು, ಸಾರ್ವಜನಿಕರು ತಮ್ಮ ಹೆಸರು ನೋಂದಾಯಿಸಿ ನೆಟ್ಟ ಸಸಿಯ ಒಂದು ತಿಂಗಳ ನಂತರದ ಛಾಯಾಚಿತ್ರವನ್ನು ಅಪ್‌ಲೋಡ್ ಮಾಡಿದರೆ ಇ-ಪ್ರಮಾಣ ಪತ್ರ, ಆರು ತಿಂಗಳ ನಂತರದ ಛಾಯಾಚಿತ್ರವನ್ನು ಅಪ್‌ಲೋಡ್ ಮಾಡಿದವರಿಗೆ ವಿಶೇಷ ಉಡುಗೊರೆ ಹಾಗೂ ಒಂದು ವರ್ಷದ ನಂತರದ ಛಾಯಾಚಿತ್ರವನ್ನು ಅಪ್‌ಲೋಡ್ ಮಾಡಿದವರಿಗೆ “ಪರಿಸರ ರಕ್ಷಕ” ಪ್ರಶಸ್ತಿ ನೀಡಲಾಗುವುದು” ಎಂದು ಹೇಳಿದರು.

“ಉತ್ತಮ ಮಳೆ, ಉತ್ತಮ ಬೆಳೆ ಹಾಗೂ ಆರೋಗ್ಯಕರ ಪರಿಸರಕ್ಕಾಗಿ ಸಸಿ ನೆಡುವುದು ಅತ್ಯಂತ ಅವಶ್ಯಕವಾಗಿದೆ. ದೇವಸ್ಥಾನ, ಮಸೀದಿ ಹಾಗೂ ಚರ್ಚ್‌ಗಳ ಧಾರ್ಮಿಕ ಮುಖಂಡರು ತಮ್ಮ ವ್ಯಾಪ್ತಿಯ ಜನರಲ್ಲಿ ಪರಿಸರ ಜಾಗೃತಿ ಮೂಡಿಸಿ ಸಸಿ ನೆಡುವಂತೆ ಪ್ರೇರೇಪಿಸಬೇಕು. ಅಲ್ಲದೆ ವಿವಿಧ ಸಂಘ-ಸಂಸ್ಥೆಗಳು, ದಾನಿಗಳು ಹಾಗೂ ಸಾರ್ವಜನಿಕರು ನೆಟ್ಟ ಸಸಿಗಳ ಸಂರಕ್ಷಣೆಗೆ ಅಗತ್ಯವಿರುವ ಟ್ರೀ ಗಾರ್ಡ್‌ಗಳನ್ನು ಬಿಎನ್‌ಎಸ್‌ಎಸ್‌ಗೆ ಕೊಡುಗೆಯಾಗಿ ನೀಡಬೇಕು. ನಗರದ ಸಾರ್ವಜನಿಕ ಉದ್ಯಾನಗಳ ಸಮರ್ಪಕ ನಿರ್ವಹಣೆಗಾಗಿ ಸ್ಥಳೀಯರ ಸಮಿತಿಗಳನ್ನು ರಚಿಸುವ ಅಗತ್ಯವಿದ್ದು, ಉದ್ಯಾನಗಳಲ್ಲಿ ಓಪನ್ ಜಿಮ್‌ಗಳನ್ನು ಸ್ಥಾಪಿಸಬೇಕು. ಅಲ್ಲದೆ ಮುಲ್ತಾನಿ ಬಾಷಾ ದರ್ಗಾ ಸಮೀಪದ ಉದ್ಯಾನದಲ್ಲಿ ಮಹಿಳೆಯರಿಗಾಗಿ ಪ್ರತ್ಯೇಕ ವಾಕಿಂಗ್ ಟ್ರ್ಯಾಕ್ ನಿರ್ಮಾಣ ಮಾಡಬೇಕಾಗಿದೆ” ಎಂದು ಅಭಿಪ್ರಾಯಪಟ್ಟರು.

ಗ್ರೀನ್ ಇಂಡಿಯಾ ಪ್ರಾಜೆಕ್ಟ್ ಸಂಸ್ಥೆಯ ಅಧ್ಯಕ್ಷ ಸರ್ದಾರ್ ಮನ್‌ಮೀತ್ ಸಿಂಗ್ ಮಾತನಾಡಿ, ಮುಂದಿನ ದಿನಗಳಲ್ಲಿ ಸಸಿಗಳ ಮೂಲಕವೇ “ಬೀದರ್” ಎಂಬ ಹೆಸರನ್ನು ಅರಳಿಸುವ ಕನಸು ತಮ್ಮದಾಗಿದೆ. ಅರಣ್ಯ ಇಲಾಖೆ ಹಾಗೂ ಸಾರ್ವಜನಿಕರ ಸಹಕಾರ ದೊರೆತರೆ 1.5 ಲಕ್ಷದಿಂದ 2 ಲಕ್ಷ ಸಸಿಗಳನ್ನು ನೆಟ್ಟು, ವಿಮಾನದಲ್ಲಿ ಪ್ರಯಾಣಿಸುವವರಿಗೂ ಸ್ಪಷ್ಟವಾಗಿ ಕಾಣುವ ರೀತಿಯಲ್ಲಿ ಇಂಗ್ಲಿಷ್‌ನಲ್ಲಿ “ಬೀದರ್” ಎಂಬ ಅಕ್ಷರಗಳನ್ನು ರೂಪಿಸುವ ಮಹತ್ವಾಕಾಂಕ್ಷೆಯ ಯೋಜನೆಯನ್ನು ಜಾರಿಗೆ ತರಲು ಬಯಸಿರುವುದಾಗಿ ತಿಳಿಸಿದರು.

ʼವಾಹನದಲ್ಲಿ ಭಾರತ್ ಕೀ ಪರ್ಯಾವರಣ ಯಾತ್ರೆ ನಡೆಸಿ, ಸಾರ್ವಜನಿಕರ ಸಹಕಾರದೊಂದಿಗೆ ದೇಶದಾದ್ಯಂತ 5 ಲಕ್ಷ ಸಸಿ ನೆಟ್ಟಿರುವೆ. ಸ್ವಾತಂತ್ರ್ಯದ ಅಮೃತ ಮಹೋತ್ಸವ ಅಂಗವಾಗಿ 75 ಸಾವಿರ ಸಸಿ ನೆಟ್ಟು, ಅವುಗಳನ್ನು ಹುತಾತ್ಮರಿಗೆ ಸಮರ್ಪಿಸಿರುವೆ. ಪ್ರತಿಯೊಬ್ಬರೂ ಸಸಿ ನೆಟ್ಟರೆ ಮುಂದಿನ ಐದು ವರ್ಷಗಳಲ್ಲಿ ಬೀದರ್ ʼಹಸಿರು ಬೀದರ್ʼ ಆಗಲಿದೆ. ಮೃತಪಟ್ಟವರ ಸಮಾಧಿ ಬಳಿ ಸಸಿ ನೆಡುವ ಪರಿಪಾಠ ಬೆಳೆಯಬೇಕಾಗಿದೆ” ಎಂದರು.

ಇದನ್ನೂ ಓದಿ : ‘ಕಲ್ಯಾಣ’ದಲ್ಲಿ ಏಕೈಕ ಕೃಷಿ ಡಿಪ್ಲೋಮಾ ಕಾಲೇಜು : ಕೃಷಿಕರ ಮಕ್ಕಳಿಗೆ ಶೇ.50 ಸೀಟು ಮೀಸಲು

ಕಾರ್ಯಕ್ರಮದಲ್ಲಿ ಸಾಮಾಜಿಕ ಅರಣ್ಯ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಶ್ರೀನಿವಾಸ್ ಯರಡೋನಿ, ವಲಯ ಅರಣ್ಯಾಧಿಕಾರಿ ಶಿವಕುಮಾರ, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ವೀರೇಶ್, ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾ ಘಟಕದ ಅಧ್ಯಕ್ಷ ಸುರೇಶ್ ಚನಶೆಟ್ಟಿ, ರೋಟರಿ ಕಲ್ಯಾಣ ಝೋನ್ ಸಹಾಯಕ ಗವರ್ನರ್ ಹಾವಶೆಟ್ಟಿ ಪಾಟೀಲ, ಬೀದರ್ ನಾಗರಿಕ ಸನ್ಮಾರ್ಗ ಸಮಿತಿಯ ಪ್ರಧಾನ ಕಾರ್ಯದರ್ಶಿ ಅಶೋಕ ವಡಗಾವೆ, ಟ್ರಸ್ಟಿಗಳಾದ ವೀರೇಶ್ ಖೇಳಗಿ, ರಫೀಕ್ ಸಾಬ್ ಗಾದಗಿ, ಡಾ.ರಾಜಶೇಖರ ಸೇಡಂಕರ್, ಡಾ. ಶ್ವೇತಾ ಪಾಟೀಲ, ಪ್ರಾಚಾರ್ಯ ಖಾಜಾ ಪಟೇಲ್, ಟೀಮ್‌ ಯುವಾ ಸಂಯೋಜಕ ವಿನಯಕುಮಾರ ಮಾಳಗೆ ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾತ್ರೋರಾತ್ರಿ ತುರ್ತು ವಿಚಾರಣೆ ಕೋರಿ ದೆಹಲಿ ಹೈಕೋರ್ಟ್ ಮೊರೆಹೋದ ಸಿಜೆಪಿ ನಾಯಕರು

ತಮ್ಮ ನ್ಯಾಯಾಂಗ ಬಂಧನ ವಿಸ್ತರಣೆಯನ್ನು ಪ್ರಶ್ನಿಸಿ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ)...

ಹೊರದೇಶಗಳ ದೊಂಬಿಯನ್ನು ಭಾರತದ ಯುವ ಹೋರಾಟಕ್ಕೆ ಸಮೀಕರಿಸುತ್ತಿರುವ ʼಮಡಿಲ ಮಾಧ್ಯಮʼಗಳು; ಇದೇನಾ ಪತ್ರಿಕೋದ್ಯಮ?

ಹೊರದೇಶಗಳ ಬೀದಿಗಳಲ್ಲಿ ನಡೆಯುವ ದೊಂಬಿ, ಲೂಟಿಗೂ, ಭಾರತದ ಯುವಕರು ಸಂವಿಧಾನದತ್ತ ಹಕ್ಕಿಗಾಗಿ...

ಪ್ರಧಾನಿ ಮೋದಿ ಜೊತೆ ನಾಳೆ ಖರ್ಗೆ ಸಭೆ: ಎಸ್‌ಐಆರ್, ಕ್ಷೇತ್ರ ಪುನರ್‌ವಿಂಗಡಣೆ, ಮಹಿಳಾ ಮೀಸಲಾತಿ ಕುರಿತು ಚರ್ಚೆ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್), ಕ್ಷೇತ್ರ ಮರುವಿಂಗಡಣೆ ಮತ್ತು...

ಏಷ್ಯನ್ ಪ್ಯಾರಾ ಗೇಮ್ಸ್: ಮಹಿಳೆಯರ 200 ಮೀಟರ್ಸ್ ಓಟದಲ್ಲಿ ಸಿಮ್ರಾನ್‌ಗೆ ಚಿನ್ನ, ತೇಜಲ್‌ಬೆನ್‌ಗೆ ಕಂಚು

ಮಂಗಳವಾರ ಜಪಾನಿನ ನಗೋಯಾದಲ್ಲಿ ನಡೆದ ಏಷ್ಯನ್ ಪ್ಯಾರಾ ಗೇಮ್ಸ್‌ನ ಮಹಿಳೆಯರ 200...