ಬೀದರ್‌ | ಮುಂಗಾರು ಪೂರ್ವ ಮಳೆ ಆರ್ಭಟ ಜೋರು

Date:

ಬೀದರ್‌ ನಗರ ಸೇರಿದಂತೆ ಜಿಲ್ಲಾದ್ಯಂತ ಹಲವೆಡೆ ಮಂಗಳವಾರ ತಡರಾತ್ರಿ ಎರಡು ಗಂಟೆಯಿಂದ ಶುರುವಾದ ಜೋರು ಮಳೆ ಬೆಳಿಗ್ಗೆವರೆಗೆ ಮುಂದುರೆಯಿತು.

- Advertisement -

ಬಿರುಗಾಳಿ, ಗುಡುಗು ಸಹಿತ ಆರಂಭವಾದ ಮಳೆ ರಭಸವಾಗಿ ಸುರಿಯಿತು. ಕೆಲವಡೆ ಬುಧವಾರ ಬೆಳಿಗ್ಗೆ ಎಂಟು ಗಂಟೆವರೆಗೂ ಉತ್ತಮ ಮಳೆಯಾಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ಭಾರೀ ಮಳೆಗೆ ಬೀದರ್‌ ನಗರದ ಪ್ರಮುಖ ರಸ್ತೆಗಳು ಜಲಾವೃತಗೊಂಡವು, ಬ್ಯಾಂಕ್‌ ಬಡಾವಣೆ ಸೇರಿ ಕೆಲ ಕಡೆ ನೀರು ಸರಾಗವಾಗಿ ಹರಿದು ಹೋಗಲು ಸೂಕ್ತ ಚರಂಡಿ ವ್ಯವಸ್ಥೆ ಇಲ್ಲದೆ ಮನೆಗಳ ಸುತ್ತಲೂ ಮಳೆನೀರು ಸಂಗ್ರಹಗೊಂಡು ನಿವಾಸಿಗಳು ಪರದಾಡಿದರು.

WhatsApp Image 2026 05 27 at 8.14.55 AM
ಬೀದರ್‌ ನಗರದ ಬ್ಯಾಂಕ್‌ ಕಾಲೋನಿಯಲ್ಲಿ ರಸ್ತೆ, ಚರಂಡಿ ವ್ಯವಸ್ಥೆ ಇಲ್ಲದೆ ಮನೆಗಳ ಸುತ್ತಲೂ ಮಳೆ ನೀರು ಸಂಗ್ರಹವಾದ ದೃಶ್ಯ

ದಿನವಿಡೀ ರಣಬಿಸಿಲಿನಿಂದ ಕಾವೇರಿದ್ದ ವಾತಾವರಣವು ಮಳೆಯಿಂದಾಗಿ ತಂಪಾಯಿತು. ಬಿಸಿಲಿನ ತೀವ್ರತೆಯಿಂದ ತತ್ತರಿಸಿದ್ದವರಿಗೆ ಸಂಪೂರ್ಣ ಮಳೆಗಾಲದ ಹಿತಾನುವಭ ಆಯಿತು.

ಜಿಲ್ಲೆಯಲ್ಲಿ ಕೆಲದಿನಗಳಿಂದ ಮುಂಗಾರು ಪೂರ್ವ ಮಳೆ ಶುರುವಾಗಿದ್ದು, ರೈತರು ಮುಂಗಾರು ಬಿತ್ತನೆಗೆ ಸಕಲ ಸಿದ್ಧತೆಯಲ್ಲಿ ತೊಡಗಿದ್ದಾರೆ. ಗ್ರಾಮೀಣ ಭಾಗದಲ್ಲಿ ರೈತರು ಇನ್ನಷ್ಟು ಮಳೆರಾಯನ ಆಗಮನದ ನಿರೀಕ್ಷೆಯಲ್ಲಿದ್ದಾರೆ.

WhatsApp Image 2026 05 27 at 9.46.51 AM
ಬಿರುಗಾಳಿಗೆ ಕಾರಿನ ಮೇಲೆ ಬಿದ್ದ ಮರ

ಹುಮನಾಬಾದ್‌ ತಾಲೂಕಿನ ಮೊಳಕೇರಾ ಗ್ರಾಮದಲ್ಲಿ ಸುರಿದ ಭಾರೀ ಮಳೆ ಮತ್ತು ಗಾಳಿಯಿಂದ ಲಕ್ಷ್ಮಿ ಮಂದಿರದ ಎದುರು ನಿಲ್ಲಿಸಿದ ಕಾರಿನ ಮೇಲೆ ಬೇವಿನ ಮರ ಮುರಿದು ಬಿತ್ತಿ ಕಾರಿನ ಗ್ಲಾಸ್ ಒಡೆದು ಹೋಗಿದೆ. ಇನ್ನು ಜಿಲ್ಲೆಯ ಕೆಲವೆಡೆ ಬಿರುಗಾಳಿ ಮಳೆಗೆ ಮನೆ ಮೇಲಿನ ಪತ್ರಾಸ್‌ ಹಾರಿ ಹೋಗಿರುವುದು ತಿಳಿದುಬಂದಿದೆ.

ಭಾರಿ ಮಳೆಗೆ ಬೀದರ್‌ ನಗರದ ರಸ್ತೆಯಲ್ಲಿ ನೀರು ಹೊಳೆಯಂತೆ ಹರಿಯಿತು.

ಇದನ್ನೂ ಓದಿ : ಬೀದರ್‌ | ಮನೆ ಮೇಲಿಂದ ಕಲ್ಲು ಬಿದ್ದು ಬಾಲಕಿ ಸಾವು : ಈಶ್ವರ ಖಂಡ್ರೆ ಕಂಬನಿ, ಪರಿಹಾರಕ್ಕೆ ಸೂಚನೆ

–ನಿಮ್ಮ ಊರು, ನಗರ, ಪಟ್ಟಣದ ಕುಂದು ಕೊರತೆಗಳ ಪೋಟೋ, ವಿಡಿಯೋ ಮಾಹಿತಿಯನ್ನು
ಈದಿನ.ಕಾಮ್ ನ್ಯೂಸ್ ಬೀದರ್ ಸಹಾಯವಾಣಿ 9035053805 ವಾಟ್ಸಪ್ ನಂಬರ್‌ಗೆ ಕಳುಹಿಸಿ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ʼವೋಟ್‌ ಚೋರಿʼ ಆರೋಪಕ್ಕೆ ಪುರಾವೆ ಅಗತ್ಯʼ: ಚುನಾವಣಾ ಆಯೋಗದ ಪರ 124 ನಿವೃತ್ತ ಅಧಿಕಾರಿಗಳ ಪತ್ರ

ಚುನಾವಣಾ ಅಕ್ರಮಗಳ ಆರೋಪಗಳಿಗೆ ವಿಶ್ವಾಸಾರ್ಹ ಪುರಾವೆಗಳು ಅಗತ್ಯ ಎಂದು ಪ್ರತಿಪಾದಿಸಿರುವ 124...

ಮುದ್ದೇಬಿಹಾಳ | ದೆಹಲಿ ಸಭೆಗೂ ಮುನ್ನ ಕಬ್ಬು ಬೆಳೆಗಾರರ ಬೇಡಿಕೆ ಈಡೇರಿಕೆಗೆ ಆಗ್ರಹ

ಕಬ್ಬು ಬೆಳೆಗಾರರಿಗೆ ಪ್ರತಿ ಟನ್‌ಗೆ ₹8,500 ಕನಿಷ್ಠ ಬೆಲೆ ಹಾಗೂ ಹೆಚ್ಚುವರಿಯಾಗಿ...

ಅಘೋಷಿತ ತುರ್ತು ಪರಿಸ್ಥಿತಿ: ಪ್ರತಿಭಟನಾಕಾರರ ಬಿಡುಗಡೆ ಮಾಡದಿದ್ದರೆ ಉಪವಾಸ; ವಾಂಗ್‌ಚುಕ್ ಎಚ್ಚರಿಕೆ

ದೆಹಲಿಯ ಜಂತರ್ ಮಂತರ್‌ನಲ್ಲಿ ಆಯೋಜಿಸಲಾಗಿದ್ದ ಪ್ರತಿಭಟನೆಯಲ್ಲಿ ಭಾಗವಹಿಸಲು ಆಗಮಿಸಿದ್ದ ವಿವಿಧ ನಾಯಕರು...

ಮುಂಬೈ | ಸಿಜೆಪಿ ಪ್ರತಿಭಟನೆಗೆ ಬೆಂಬಲ; ಬಾಲಿವುಡ್ ನಟ ಇಮ್ರಾನ್ ಖಾನ್ ಸೇರಿ 400ಕ್ಕೂ ಹೆಚ್ಚು ಮಂದಿ ವಶಕ್ಕೆ

ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಸಿಜೆಪಿ ನಡೆಸುತ್ತಿರುವ ಪ್ರತಿಭಟನೆಗೆ ಬೆಂಬಲ...