ಬೀದರ್‌ | ಬಿರುಗಾಳಿ ಮಳೆ : ಮನೆ ಮೇಲಿಂದ ಕಲ್ಲು ಬಿದ್ದು 6 ವರ್ಷದ ಬಾಲಕಿ ಸಾವು

Date:

ಹುಲಸೂರ ತಾಲೂಕು ವ್ಯಾಪ್ತಿಯಲ್ಲಿ ಮಂಗಳವಾರ ಸಂಜೆ ಬಿರುಗಾಳಿ, ಗುಡುಗು ಹಾಗೂ ಆಲಿಕಲ್ಲು ಸಹಿತ ಮಳೆ ಸುರಿದಿದ್ದು, ಗಾಳಿಯ ರಭಸಕ್ಕೆ ಮನೆ ಮೇಲಿನ ಪತ್ರಾಸ್‌ ಮೇಲಿಟ್ಟ ಪೇಚಿಂಗ್‌ ಕಲ್ಲು ತಲೆ ಮೇಲೆ ಬಿದ್ದು ಬಾಲಕಿಯೊಬ್ಬಳು ಮೃತಪಟ್ಟಿದ್ದಾಳೆ.

- Advertisement -

ಹುಲಸೂರ ಪಟ್ಟಣದ‌ ತಹಸೀಲ್‌ ಕಚೇರಿ ಮುಂಭಾಗದ ಕೆಜಿಎನ್‌ ಕಾಲೋನಿಯ ಮಾಹೇರಾ ಇಸ್ಮಾಯಿಲ್‌ ಶೇಖ್ (6) ಸಾವನ್ನಪ್ಪಿರುವ ಬಾಲಕಿ ಎಂದು ತಿಳಿದುಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ಮಂಗಳವಾರ ಸಂಜೆ ಬಿರುಗಾಳಿ, ಆಲಿಕಲ್ಲು ಸಹಿತ ಜೋರು ಮಳೆ ಆರಂಭವಾಗಿದೆ. ಬಿರುಗಾಳಿ ರಭಸಕ್ಕೆ ಪತ್ರಾಸ್‌ ಹಾರಾಡಿದಾಗ, ಮನೆ ಮೇಲಿಟ್ಟಿದ್ದ ಕೆಂಪು ಕಲ್ಲು ಬಾಲಕಿಯ ಎದೆ ಮೇಲೆ ಬಿದ್ದಿದೆ. ಗಂಭೀರ ಗಾಯಗೊಂಡ ಬಾಲಕಿಯನ್ನು ಪಟ್ಟಣದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು, ಆದರೆ, ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾಳೆ ಎಂದು ಮೂಲಗಳಿಂದ ತಿಳಿದು ಬಂದಿದೆ.

ಬಾಲಕಿ ತಾಯಿ ಸೇರಿ ಇನ್ನೂ ಮೂವರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನುಪಟ್ಟಣದ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆಗಾಗಿ ಮಹಾರಾಷ್ಟ್ರದ ಶಹಜಾನಿ ಔರಾದ್‌ ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ.

ಘಟನಾ ಸ್ಥಳಕ್ಕೆ ತಹಸೀಲ್ದಾರ್‌ ಶಿವಾನಂದ ಮೇತ್ರೆ, ಪಿಎಸ್‌ಐ ಶಿವಪ್ಪ ಮೇಟಿ ಹಾಗೂ ಕಂದಾಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದ್ದಾರೆ. ಹುಲಸೂರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಬಾಲಕಿಯ ಶವ ಮರಣೋತ್ತರ ಪರೀಕ್ಷೆ ನಡೆಸಿ ಪೋಷಕರಿಗೆ ಒಪ್ಪಿಸಲಾಗಿದೆ.

ಇದನ್ನೂ ಓದಿ : ಬೀದರ್‌ | ಮೂರು ದಿನಗಳ ಬಸವ ಸಂಸ್ಕೃತಿ ಚಿಂತನ ಶಿಬಿರಕ್ಕೆ ಚಾಲನೆ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯತ್ನಾಳ್ ವಿರುದ್ಧ ಹೊರ್ತಿ ವಾಗ್ದಾಳಿ; ಅರ್ಜಿ ವಾಪಸ್ ಪಡೆದ ಹಿಂದಿನ ಸತ್ಯ ಬಹಿರಂಗಪಡಿಸಲು ಸವಾಲು

ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕುವಂತೆ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಬರೆದಿರುವ...

ಲೈಂಗಿಕ ಕಿರುಕುಳ ಆರೋಪ; ಪ್ರಾಧ್ಯಾಪಕ ಹುದ್ದೆಯಿಂದ ಕಾಂಗ್ರೆಸ್ ಸಂಸದ ಬಿಮೋಲ್ ವಜಾ

11 ವಿದ್ಯಾರ್ಥಿನಿಯರು ಲೈಂಗಿಕ ಕಿರುಕುಳ ಹಾಗೂ ಅನುಚಿತ ವರ್ತನೆಯ ಆರೋಪದಡಿ ದೂರು...

ಬೀದರ್‌ | ಕಾನ್ಶಿರಾಂ ಹೋರಾಟ ಬಹುಜನರ ರಾಜಕೀಯ ಜಾಗೃತಿಗೆ ದಾರಿದೀಪ

ಬೀದರ್ ಜಿಲ್ಲಾ ದಲಿತ ಸಂಘಟನೆಗಳ ಒಕ್ಕೂಟ ಹಾಗೂ ವಿವಿಧ ಬಹುಜನ ಸಂಘಟನೆಗಳ...

ವಿಜಯನಗರ | ಎಸ್‌ಐಆರ್ ರದ್ದತಿಗೆ ಆಗ್ರಹಿಸಿ ವಿದ್ಯಾರ್ಥಿ-ಯುವಜನ ಸಂಘಟನೆಗಳ ಬೃಹತ್ ಪ್ರತಿಭಟನೆ

ಜನವಿರೋಧಿ ಎಸ್‌ಐಆರ್ (SIR) ರದ್ದುಪಡಿಸಿ ಹಾಗೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...