ಬೀದರ್‌ | ಬಿಸಿಲಿನ ಧಗೆಗೆ ತಂಪೆರದ ಜೋರು ಮಳೆ

Date:

ಬಿಸಿಲಿನ ಧಗೆಯಿಂದ ತತ್ತರಿಸಿದ್ದ ಬೀದರ್ ಜಿಲ್ಲೆಯ ಜನರಿಗೆ ಭಾನುವಾರ ಸಂಜೆ ಸುರಿದ ಜೋರು ಮಳೆಯ ಸಿಂಚನ ಇಳೆ ತಂಪುಗೊಳಿಸಿದೆ. ಧಗೆಯಿಂದ ಬೇಸತ್ತಿದ ಜನ ಕೊಂಚ ನಿರಾಳವಾಗಿದ್ದಾರೆ.

- Advertisement -

ಜಿಲ್ಲೆಯಲ್ಲಿ ಈ ಬಾರಿ ಬೇಸಿಗೆ ಬಿಸಿಲು ಪ್ರಖರವಾಗಿದೆ. ಕೆಲ ದಿನಗಳಿಂದ 40 ಡಿಗ್ರಿ ಸೆಲ್ಸಿಯಸ್‌ಕ್ಕೂ ಅಧಿಕ ಉಷ್ಣಾಂಶ ದಾಖಲಾಗುತ್ತಿದ್ದರಿಂದ ಜನ ಮಧ್ಯಾಹ್ನ ರಸ್ತೆಗಿಳಿಯಲು ಹಿಂಜರಿಯುವಂತಾಗಿದೆ. ಕೂಲಿಕಾರ್ಮಿಕರು, ಬೀದಿಬದಿ ವ್ಯಾಪಾರಿಗಳು ಬಿಸಿಲಿನಲ್ಲೇ ವ್ಯವಹಾರ ನಡೆಸಿ ಬೆವರಿಳಿಸುವುದು, ತಂಪು ಪಾನೀಯಗಳ ಮೊರೆ ಹೋಗುವುದು ಸಾಮಾನ್ಯವಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ದೇವಾ: ಸಂಗೀತ ಲೋಕದ ‘ತೇನಿಸೈ ತೆಂಡ್ರಲ್’

ಅಪಾರ ಶ್ರಮ, ನಿರಂತರ ಅಧ್ಯಯನ ಹಾಗೂ ಸತತ ಪ್ರಯತ್ನಗಳಿಂದ ಸಂಗೀತ ಕ್ಷೇತ್ರಕ್ಕೆ ಬಹುದೊಡ್ಡ ಕೊಡುಗೆ ನೀಡಿ, ಭಾರಿ ಜನಪ್ರಿಯತೆ ಗಳಿಸಿದರೂ ಸದಾ ವಿನಯ ಮತ್ತು ಸರಳತೆ ದೇವಾ ಅವರಲ್ಲಿ ಎದ್ದು ಕಾಣುತ್ತಿತ್ತು. ಇಂತಹ...

ಜಿರಳೆ ಪ್ರತಿಕೃತಿ ದಹನದ ನೆಪದಲ್ಲಿ ಯುವ ದನಿಯನ್ನು ಹತ್ತಿಕ್ಕುವ...

ದೆಹಲಿಯ ಪೀತಾಂಪುರದಲ್ಲಿ ಮಂಗಳವಾರ ನಡೆದ ದಸರಾ ಆಚರಣೆಯು ಈ ಬಾರಿ ಧಾರ್ಮಿಕ ಶ್ರದ್ಧೆಗಿಂತ ಹೆಚ್ಚಾಗಿ ಆಡಳಿತಾರೂಢ ಬಿಜೆಪಿ ಸರ್ಕಾರದ ಅಹಂಕಾರ ಮತ್ತು ಯುವಜನ ವಿರೋಧಿ ಮನಸ್ಥಿತಿಯ ನೇರ ಪ್ರದರ್ಶನವಾಗಿ ಮಾರ್ಪಟ್ಟಿತು. ರಾವಣ, ಕುಂಭಕರ್ಣ...

ಪಶ್ಚಿಮ ಪದವೀಧರರ ಕ್ಷೇತ್ರ: ಭದ್ರಕೋಟೆ ಮರುಹಿಡಿಯಲು ಕಾಂಗ್ರೆಸ್ ಯತ್ನ;...

ಪಶ್ಚಿಮ ಪದವೀಧರರ ಕ್ಷೇತ್ರದಿಂದ ವಿಧಾನ ಪರಿಷತ್ ಚುನಾವಣಾ ಕಾವು ಗರಿಗೆದರಿದೆ. ಬಿಜೆಪಿ ಮತ್ತು ಕಾಂಗ್ರೆಸ್‌ ಪಕ್ಷಗಳ ನಡುವೆ ಜಿದ್ದಾಜಿದ್ದಿಗೆ ವೇದಿಕೆ ಸಜ್ಜಾಗಿದೆ. ಒಂದು ಕಾಲದಲ್ಲಿ ಕಾಂಗ್ರೆಸ್ ಭದ್ರಕೋಟೆಯಾಗಿದ್ದ ಪಶ್ಚಿಮ ಪದವೀಧರರ ಕ್ಷೇತ್ರವೀಗ ಬಿಜೆಪಿಯ...

ಕಾದ ಹೆಂಚಿನಂತಾಗಿದ್ದ ಇಳೆಗೆ ಭಾನುವಾರ ಸಂಜೆ ಗುಡುಗು, ತಣ್ಣನೆಯ ಗಾಳಿಯೊಂದಿಗೆ ಭೂಮಿಗೆ ಮಳೆಹನಿಗಳು ತಲುಪುತ್ತಿದ್ದಂತೆ ಜನರ ಮನ ತಣಿಯಿತು.

ಔರಾದ್‌ ತಾಲೂಕಿನ ಕೆಲವೆಡೆ ಮಧ್ಯಾಹ್ನ 1 ಗಂಟೆಯವರೆಗೆ ಎಂದಿನಂತೆ ಸೂರ್ಯ ಬಿಸಿಲು ಎಂದಿನಂತೆ ಪ್ರಖರತೆಯಿಂದ ಕೂಡಿತು, ನಂತರ ದಟ್ಟ ಕಾರ್ಮೋಡ ಕವಿದು ಜಿಟಿಜಿಟಿ ಮಳೆ ಶುರುವಾಗಿ ಸಂಜೆವರೆಗೂ ಗುಡುಗು, ತಂಪು ಗಾಳಿ ಮಿಂಚಿನೊಂದಿಗೆ ಸಣ್ಣ ಮಳೆಯಾಯಿತು.

ಇದನ್ನೂ ಓದಿ : ಔರಾದ್‌ ಸೀಮೆಯ ಕನ್ನಡ | ಸುಡು ಬಿಸಲಾಗ ಭಾಳ ಓಡಾಡಬ್ಯಾಡ; ಬೇಮಾರ ಬಿದ್ದೂರ್ ಹೈರಾಣ ಅದಾ!‌

ಜಿಲ್ಲೆಯ ಭಾಲ್ಕಿ, ಹುಮನಾಬಾದ, ಚಿಟಗುಪ್ಪ, ಔರಾದ್‌ ಸೇರಿದಂತೆ ವಿವಿಧೆಡೆ ಜೋರು ಮಳೆಯಾಗಿದ್ದು, ಗುಡುಗು, ಮಿಂಚು ಸಹಿತ ತಂಪು ಗಾಳಿ ಬೀಸಿದೆ. ಕೆಲವೆಡೆ ಗುಡುಗು, ಗಾಳಿ, ಜಿಟಿಜಿಟಿ ಮಳೆ ಮುಂದುವರೆದಿದೆ ಖಚಿತ ಮೂಲಗಳಿಂದ ತಿಳಿದು ಬಂದಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

SIR ವಿರೋಧಿ ಪ್ರತಿಭಟನಾಕಾರರ ವಿರುದ್ಧ ಕ್ರಮ; ಸರ್ಕಾರದ ಧೋರಣೆ ವಿರುದ್ಧ 20 ದೇಶಗಳಲ್ಲಿ ಪ್ರತಿಭಟನೆ

ಭಾರತದಲ್ಲಿ ಮತದಾರರ ಪಟ್ಟಿಯಿಂದ ಕೋಟ್ಯಂತರ ಜನರ ಹೆಸರುಗಳನ್ನು ಕೈಬಿಟ್ಟಿರುವುದು ಹಾಗೂ ಮುಖ್ಯ...

ದೆಹಲಿ ಏರ್‌ಪೋರ್ಟ್‌ನಲ್ಲಿ ಪಂಜಾಬ್ ಸಿಎಂ ಭಗವಂತ್ ಮಾನ್ 3 ಗಂಟೆ ವಶಕ್ಕೆ, 50 ಸಾವಿರ ರೂ.ದಂಡ!

ಪ್ಯಾರಿಸ್‌ನಿಂದ ಹಿಂದಿರುಗುತ್ತಿದ್ದ ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಅವರನ್ನು ಭಾನುವಾರ ದೆಹಲಿ...

SBI ಮೇಲೆ ಸೈಬರ್ ದಾಳಿ: ಸಾವಿರಾರು ಗ್ರಾಹಕರ ಸೂಕ್ಷ್ಮ ವಿವರ ಡಾರ್ಕ್ ವೆಬ್‌ನಲ್ಲಿ ಬಹಿರಂಗ!

ಭಾರತೀಯ ಸ್ಟೇಟ್ ಬ್ಯಾಂಕ್ (SBI) ಮೇಲೆ ಸೈಬರ್ ದಾಳಿ ನಡೆದಿದ್ದು, ಸುಮಾರು...

ಮೀಸಲಾತಿ ಹೆಚ್ಚಳ ಮತ್ತು ನ್ಯಾಯಾಂಗದ ಮಿತಿ: ಸಾಮಾಜಿಕ ನ್ಯಾಯಕ್ಕೆ ಸಂವಿಧಾನಾತ್ಮಕ ಪರಿಹಾರವೇನು?

ಮೀಸಲಾತಿ ಬಯಸುವ ಜಾತಿಗಳೆಲ್ಲವೂ ಕೂಡ ವರ್ತಮಾನದ ಸಾಮಾಜಿಕ ಪರಿಸ್ಥಿತಿ ಮತ್ತು ಕಾನೂನು...