ಬೀದರ್‌ | ರಾಡ್‌ನಿಂದ ಮಾರಣಾಂತಿಕ ಹಲ್ಲೆಗೈದು ಪತ್ನಿಯನ್ನು ಕೊಂದ ಪತಿ!

Date:

ಪತಿಯೊಬ್ಬ ಪತ್ನಿಯ ಮೇಲೆ ಕಬ್ಬಿಣದ ರಾಡ್‌ನಿಂದ ಮಾರಣಾಂತಿಕ ಹಲ್ಲೆ ನಡೆಸಿದ ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದ ಮಹಿಳೆ, ಎರಡು ದಿನಗಳ ಬಳಿಕ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿರುವ ಘಟನೆ ಭಾಲ್ಕಿ ತಾಲೂಕಿನ ಹೊನ್ನಿಕೇರಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.

- Advertisement -

ಬೀದರ್ ತಾಲೂಕಿನ ಹೊನ್ನಿಕೇರಿ ಗ್ರಾಮದ ಸಂಜನಾ (26) ಮೃತಪಟ್ಟ ಮಹಿಳೆ. ಆರೋಪಿ ಪತಿಯನ್ನು ಭಾಲ್ಕಿ ತಾಲೂಕಿನ ಬೋಳೆಗಾವ್ ಗ್ರಾಮದ ಭಗವತ್ ಜ್ಞಾನೇಶ್ವರ ಎಂದು ಗುರುತಿಸಲಾಗಿದೆ. ಸದ್ಯ ಬೀದರ್ ನಗರದ ಶಿವನಗರದಲ್ಲಿ ಪತ್ನಿಯೊಂದಿಗೆ ವಾಸವಾಗಿದ್ದ ಎನ್ನಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹಮ್ ಔರತೇನ್ ಆಜಾದ್ ಹೈ: ಸುರಕ್ಷತೆಯ ಹೆಸರಲ್ಲಿ ಕಡಿವಾಣ...

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಹಿಳೆಯರು ಮತ್ತು ಅಪ್ರಾಪ್ತೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳಿಗೆ ಕಡಿವಾಣ ಇಲ್ಲದಂತಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಅಭದ್ರತೆಯ ವಾತಾವರಣವಿರುವಾಗ ಈ ಲೋಪಗಳನ್ನು ಸರಿಪಡಿಸದೆಯೇ ದೌರ್ಜನ್ಯಕ್ಕೆ ಒಳಗಾಗುತ್ತಿರುವ ಸ್ರೀ ಸಮುದಾಯದ ಉಡುವ,...

ತಮ್ಮ ವಿರುದ್ಧ ತಾವೇ’ಆರೋಪಪಟ್ಟಿ’ ಸಿದ್ಧಪಡಿಸಿಕೊಂಡ ಗ್ಯಾನೇಶ್ ಕುಮಾರ್: ಪ್ರೆಸ್...

ಚುನಾವಣಾ ಆಯೋಗದ ಇತ್ತೀಚಿನ ನಡೆಗಳು ಮತ್ತು ಸಾಂವಿಧಾನಿಕ ವೈಫಲ್ಯದ ಅಸಲಿಯತ್ತನ್ನು ಸ್ವರಾಜ್ ಇಂಡಿಯಾ ಸದಸ್ಯ ಹಾಗೂ ‘ಭಾರತ್ ಜೋಡೊ ಅಭಿಯಾನ’ದ ರಾಷ್ಟ್ರೀಯ ಸಂಚಾಲಕ ಯೋಗೇಂದ್ರ ಯಾದವ್ ಅವರು 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯಲ್ಲಿ...

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ಎರಡು ವರ್ಷಗಳ ಹಿಂದೆ ಸಂಜನಾ ಮತ್ತು ಭಗವತ್ ವಿವಾಹವಾಗಿತ್ತು. ಆರಂಭದಲ್ಲಿ ದಾಂಪತ್ಯ ಜೀವನ ಸುಗಮವಾಗಿದ್ದರೂ, ಬಳಿಕ ಗಂಡನ ಮನೆಯವರು ವಿನಾಕಾರಣ ಜಗಳ ಮಾಡುತ್ತಿದ್ದರು. ವರ್ಷದ ಹಿಂದೆ ಸಂಜನಾಗೆ ನೀರಿನಲ್ಲಿ ಕೀಟನಾಶಕ ಬೆರೆಸಿ ನೀಡಲು ಯತ್ನಿಸಲಾಗಿತ್ತು. ಈ ಬಗ್ಗೆ ಅನುಮಾನ ವ್ಯಕ್ತವಾದ ನಂತರ ಸಂಜನ್ ಕೆಲ ತಿಂಗಳು ತವರು ಮನೆಯಲ್ಲಿ ಉಳಿದು, ಬಳಿಕ ಮತ್ತೆ ಗಂಡನ ಮನೆಗೆ ತೆರಳಿದ್ದರು ಎಂದು ದೂರಿನಲ್ಲಿ ಆರೋಪಿಸಲಾಗಿದೆ.

ಜೂನ್ 25ರಂದು ಸಂಜೆ ಮೈಲಾರ ಮಲ್ಲಣ್ಣ ದೇವಸ್ಥಾನ ದರ್ಶನಕ್ಕೆ ಹೋಗಿ, ಅಲ್ಲಿಂದ ತವರು ಮನೆಗೆ ಹೋಗೋಣ ಎಂದು ಹೇಳಿ ಪತಿ ಭಾಗವತ್ ಪತ್ನಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಾನೆ. ದೇವಸ್ಥಾನದಿಂದ ಹಿಂದಿರುಗುವ ವೇಳೆ ಹೊನ್ನಿಕೇರಿ ಅರಣ್ಯ ಪ್ರದೇಶದಲ್ಲಿ ಕಾರು ನಿಲ್ಲಿಸಿ, ಕಬ್ಬಿಣದ ರಾಡ್‌ನಿಂದ ತಲೆ ಹಾಗೂ ಕತ್ತಿನ ಭಾಗಕ್ಕೆ ಮಾರಣಾಂತಿಕವಾಗಿ ಹಲ್ಲೆ ನಡೆಸಿ, ಬಟ್ಟೆಯಿಂದ ಕುತ್ತಿಗೆ ಬಿಗಿದು ಕೊಲೆ ಮಾಡಲು ಯತ್ನಿಸಿದ್ದಾನೆ ಎಂದು ಮೃತಳ ಕುಟುಂಬಸ್ಥರು ಆರೋಪಿಸಿದ್ದಾರೆ.

ಘಟನೆಯ ಮಾಹಿತಿ ತಿಳಿದ ಕೂಡಲೇ ಕುಟುಂಬಸ್ಥರು ಸ್ಥಳಕ್ಕೆ ಧಾವಿಸಿ ಸಂಜನಾಳನ್ನು ಬೀದರ್‌ನ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು. ಬಳಿಕ ಹೆಚ್ಚಿನ ಚಿಕಿತ್ಸೆಗೆ ಮಹಾರಾಷ್ಟ್ರದ ಸೊಲ್ಲಾಪುರದ ಖಾಸಗಿ ಆಸ್ಪತ್ರೆಗೆ ಸ್ಥಳಾಂತರಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ.

ಪತಿ ವಿವಾಹೇತರ ಸಂಬಂಧ ಹೊಂದಿದ್ದನ್ನು ಸಂಜನಾ ಪ್ರಶ್ನಿಸಿದ್ದಕ್ಕೆ ಈ ಕೃತ್ಯ ಎಸಗಿರಬಹುದು ಎಂದು ಕುಟುಂಬಸ್ಥರು ಶಂಕೆ ವ್ಯಕ್ತಪಡಿಸಿದ್ದಾರೆ. ಆದರೆ ಕೊಲೆಯ ನಿಖರ ಕಾರಣ ಪೊಲೀಸ್ ತನಿಖೆಯಿಂದಲೇ ತಿಳಿದುಬರಬೇಕಿದೆ.

ಸಂಜನಾ ಅವರ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಬೀದರ್‌ನ ಬ್ರೀಮ್ಸ್ ಆಸ್ಪತ್ರೆಗೆ ತರಲಾಗಿದ್ದು, ಆಸ್ಪತ್ರೆಯ ಶವಗಾರದ ಬಳಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು.

ಇದನ್ನೂ ಓದಿ : ಬೀದರ್‌ | ನೀಗದ ಕನ್ನಡ ಶಿಕ್ಷಕರ ಕೊರತೆ: ಗಡಿಭಾಗದ 21 ಪ್ರೌಢ ಶಾಲೆಗಳಿಗೆ ʼಅತಿಥಿʼಗಳೇ ಆಧಾರ!

ಈ ಸಂಬಂಧ ಮೃತಳ ಸಹೋದರ ನೀಡಿದ ದೂರಿನ ಮೇರೆಗೆ ಧನ್ನೂರಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಪ್ರಕರಣದ ಕುರಿತು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಜನವರಿಯಲ್ಲಿ ಅಗ್ನಿವೀರ ಸೇನಾ ಭರ್ತಿ ರ‍್ಯಾಲಿ

ಬೀದರ್‌ ನಗರದಲ್ಲಿ 2027ರ ಜನವರಿ ತಿಂಗಳಲ್ಲಿ 15 ದಿನಗಳ ಕಾಲ ಅಗ್ನಿವೀರ...

ದೇವಿಯಿಂದ ಕತ್ತಿ ಪಡೆದ ರಾಜರ ಕಥೆಗಳು ಶಾಲಾ ಪಠ್ಯದಲ್ಲಿ; NCERTಯಿಂದ ಮತ್ತೊಂದು ವಿವಾದ?

"ಭಾರತದಲ್ಲಿ ದೇವಿಯರ ಆರಾಧನೆಗೂ, ಯುದ್ಧಕ್ಕೂ ಅನಾದಿ ಕಾಲದಿಂದಲೂ ಅವಿನಾಭಾವ ಸಂಬಂಧವಿದೆ. ಪ್ರಾಚೀನ...

‘INDIA’ ಮೈತ್ರಿಕೂಟದ ಸಭೆಗಾಗಿ ದೆಹಲಿಗೆ ಮಮತಾ ಪ್ರಯಾಣ: ‘ದಿಮಾಗಿ ನಕ್ಸಲರ’ ಜತೆ ಸಮಾಲೋಚನೆ ಎಂದ ಸುವೇಂದು ಅಧಿಕಾರಿ

ಬುಧವಾರ ನಡೆಯಲಿರುವ 'INDIA' ಮೈತ್ರಿಕೂಟದ ಪ್ರಮುಖ ಸಭೆಯಲ್ಲಿ ಪಾಲ್ಗೊಳ್ಳಲು ಪಶ್ಚಿಮ ಬಂಗಾಳದ...

ಮೋದಿ ಪ್ರಮಾಣಪತ್ರ ವಿವಾದ: ಕೇಜ್ರಿವಾಲ್ ಮೇಲ್ಮನವಿ ವಜಾಗೊಳಿಸಿದ ಗುಜರಾತ್ ಹೈಕೋರ್ಟ್

ಪ್ರಧಾನಿ ನರೇಂದ್ರ ಮೋದಿ ಅವರ ಶೈಕ್ಷಣಿಕ ಪದವಿ ಪ್ರಮಾಣಪತ್ರವನ್ನು ಬಹಿರಂಗಪಡಿಸುವಂತೆ ಗುಜರಾತ್...