ಬೀದರ್‌ | ಅಕ್ರಮ ಮಾದಕ ವಸ್ತು ಸಾಗಾಟ : ₹3 ಲಕ್ಷ ಮೌಲ್ಯದ ವಸ್ತು ಜಪ್ತಿ; ನಾಲ್ವರ ಬಂಧನ

Date:

ಬೀದರ ತಾಲೂಕಿನ ಬೆನಕನಳ್ಳಿ–ಮರಖಲ್ ರಸ್ತೆಯಲ್ಲಿ ಮೋಟಾರ್ ಸೈಕಲ್‌ಗಳಲ್ಲಿ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ 3 ಲಕ್ಷಕ್ಕೂ ಅಧಿಕ ಮೌಲ್ಯದ ಮಾದಕ ವಸ್ತುಗಳನ್ನು ಪೊಲೀಸರು ಜಪ್ತಿ ಮಾಡಿ, ನಾಲ್ವರನ್ನು ಬಂಧಿಸಿದ್ದಾರೆ.

- Advertisement -

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ್ ಗುಂಟಿ ಹಾಗೂ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಚಂದ್ರಕಾಂತ ಪೂಜಾರಿ ಅವರ ಮಾರ್ಗದರ್ಶನದಲ್ಲಿ, ಪೊಲೀಸ್ ಉಪಾಧೀಕ್ಷಕ ದೂದಪೀರ್ ಹುಸೇನ್ ಸಾಬ್ ಮುಲ್ಲಾ ಮತ್ತು ಸಿಪಿಐ ಜಿ.ಎಸ್.ಬಿರಾದರ್ ಅವರ ನೇತೃತ್ವದಲ್ಲಿ ಜನವಾಡಾ ಪೊಲೀಸ್ ಠಾಣೆ ಸಿಬ್ಬಂದಿ ವಿಶೇಷ ತಂಡ ರಚಿಸಿ ಕಾರ್ಯಾಚರಣೆ ನಡೆಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಡಾ. ಟಿ.ಎಸ್.‌ ಚನ್ನೇಶ್‌ ಸರಣಿ | ವೈದ್ಯಕೀಯ ನೊಬೆಲ್‌...

ನಮ್ಮ ಮೆದುಳು, ಭಾವನೆಗಳನ್ನು, ವರ್ತನೆಗಳನ್ನು ಮತ್ತು ದೈಹಿಕ ಕಾರ್ಯಗಳನ್ನು ಹೇಗೆ ನಿಯಂತ್ರಿಸುತ್ತದೆ ಎಂಬುದನ್ನು ಸಂಶೋಧನೆಯಿಂದ ಬಿಡಿಸಿಟ್ಟು 2026ರ ವೈದ್ಯಕೀಯ ನೊಬೆಲ್‌ ಪ್ರಶಸ್ತಿಗೆ ಪಾತ್ರರಾದ ಮೂವರು ಸಂಶೋಧಕರು ಮತ್ತು ಸಂಶೋಧನೆಯ ಸುತ್ತಲಿನ ವಿಶ್ಲೇಷಣಾತ್ಮಕ ಬರಹ ಈ...

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ಫೆ.16ರಂದು ಸಂಜೆ, ಬೀದರ ತಾಲೂಕಿನ ಬೆನಕನಳ್ಳಿ–ಮರಖಲ್ ರಸ್ತೆಯಲ್ಲಿ ಆರೋಪಿತರು ಮೋಟಾರ್ ಸೈಕಲ್‌ಗಳಲ್ಲಿ ಮಾದಕ ವಸ್ತುಗಳನ್ನು ಸಾಗಾಟ ಮಾಡುತ್ತಿದ್ದಾಗ ಖಚಿತ ಮಾಹಿತಿ ಮೇರೆಗೆ ಜನವಾಡ ಠಾಣೆಯ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ.

ಆರೋಪಿತರಿಂದ ₹90.11 ಸಾವಿರ ಮೌಲ್ಯದ 200 ವಿವಿಧ ಮಾದಕ ಸಿರಪ್‌ ಬಾಟಲಿ, ಗುಳಿಗೆಗಳು, ₹2.05 ಲಕ್ಷ ಮೌಲ್ಯದ ನಾಲ್ಕು ದ್ವಿಚಕ್ರ ವಾಹನ, ನಗದು ₹10,100 ಸೇರಿ ಒಟ್ಟು ₹3,05,216 ಮೌಲ್ಯದ ವಸ್ತುಗಳನ್ನು ಜಪ್ತಿ ಮಾಡಲಾಗಿದೆ.

ಈ ಸಂಬಂಧ ಜನವಾಡಾ ಪೊಲೀಸ್ ಠಾಣೆಯಲ್ಲಿ NDPS ಕಾಯ್ದೆ ಕಲಂ 21, 22(ಬಿ) ಪ್ರಕಾರ ಪ್ರಕರಣ ದಾಖಲಿಸಿ ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿದೆ ಎಂದು ಎಸ್ಪಿ ಪ್ರದೀಪ ಗುಂಟಿ ಅವರು ತಿಳಿಸಿದ್ದಾರೆ.

ಇದನ್ನೂ ಓದಿ : ಜನಪರ, ಜೀವಪರ ಸಾಹಿತ್ಯ ರಚನೆಯಾಗಲಿ : ಮಾಣಿಕ ನೇಳಗಿ

ಈ ಯಶಸ್ವಿ ಕಾರ್ಯಾಚರಣೆಗೆ ಪೊಲೀಸ್ ತಂಡವನ್ನು ಜಿಲ್ಲಾ ಎಸ್‌ಪಿ ಪ್ರಶಂಸಿಸಿದ್ದು, ಇಂತಹ ಕಾನೂನು ವಿರೋಧಿ ಚಟುವಟಿಕೆಗಳಲ್ಲಿ ತೊಡಗಿದವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವುದಾಗಿ ಅವರು ಎಚ್ಚರಿಸಿದ್ದಾರೆ.

6378a520579666f153c2fe302416fd40eb44392fa3ff3c717bc425bc472039bf?s=150&d=mp&r=g
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಕಾವ್ಯ ಸಮಾಜದ ನೋವು, ನಲಿವಿಗೆ ಸ್ಪಂದಿಸಲಿ : ಶಶಿಕಾಂತ ಶೆಂಬೆಳ್ಳಿ

ಸಾಹಿತ್ಯವು ಆತ್ಮಸಂತೋಷ ನೀಡುವುದರ ಜೊತೆಗೆ ಸಮಾಜದ ನೋವು-ನಲಿವುಗಳಿಗೆ ಸ್ಪಂದಿಸುವಂತಿರಬೇಕು. ಕಾಲದಿಂದ ಕಾಲಕ್ಕೆ...

ಬೀದರ್‌ | ಅ.7ರಂದು ಆಣದೂರ ಆರೋಗ್ಯ ಕೇಂದ್ರದಲ್ಲಿ ಸಾಮೂಹಿಕ ರಕ್ತದಾನ ಶಿಬಿರ

ಬೀದರ್‌ ತಾಲೂಕಿನ ಆಣದೂರ ಪ್ರಾಥಮಿಕ ಆರೋಗ್ಯ ಕೇಂದ್ರದ ಆವರಣದಲ್ಲಿ ಅ.7ರಂದು ಬೆಳಿಗ್ಗೆ...

ಬೀದರ್ | ಉದ್ಯೋಗ ಖಾತ್ರಿ ಯೋಜನೆಯಡಿ 20 ಲಕ್ಷ ಮಾನವ ದಿನ ಸೃಜನೆ: ಈಶ್ವರ ಖಂಡ್ರೆ

ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಜುಲೈ 1ರಿಂದ ಬೀದರ್ ಜಿಲ್ಲೆಯಲ್ಲಿ 20...

ಬೀದರ್‌ | ಚಾಕುವಿನಿಂದ ಇರಿದು ಮಾವನನ್ನೆ ಕೊಂದ ಅಳಿಯ

ಹಣ ನೀಡುವ ವಿಚಾರಕ್ಕೆ ಹಲವು ದಿನಗಳಿಂದ ನಡೆಯುತ್ತಿದ್ದ ಗಲಾಟೆ ವಿಕೋಪಕ್ಕೆ ತಿರುಗಿ,...