ಬೀದರ್‌ | ಅಕ್ರಮ ಮಾದಕ ವಸ್ತು ಸಾಗಾಟ : ಮೂವರ ಬಂಧನ

Date:

ಬೀದರ ನಗರದ ಶಹಾಪುರ ಗ್ರಾಮದಿಂದ ಎರಡು ಮೋಟಾರ್ ಸೈಕಲ್‌ಗಳಲ್ಲಿ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಮಾದಕ ವಸ್ತುಗಳನ್ನು ಪೊಲೀಸರು ಜಪ್ತಿ ಮಾಡಿ, ಮೂವರನ್ನು ಬಂಧಿಸಿದ್ದಾರೆ.

- Advertisement -

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ್ ಗುಂಟಿ ಹಾಗೂ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಚಂದ್ರಕಾಂತ ಪೂಜಾರಿ ಅವರ ಮಾರ್ಗದರ್ಶನದಲ್ಲಿ, ಸೆನ್‌ ಠಾಣೆಯ ಡಿಎಸ್‌ಪಿ ಎಸ್.ಎನ್.ಸನದಿ,‌ ಬೀದರ್‌ ಉಪವಿಭಾಗ ಪೊಲೀಸ್ ಉಪಾಧೀಕ್ಷಕ ದೂದಪೀರ್ ಹುಸೇನ್ ಸಾಬ್ ಮುಲ್ಲಾ ಅವರ ನೇತೃತ್ವದಲ್ಲಿ ಮಾರ್ಕೆಟ್‌ ಪೊಲೀಸ್‌ ಠಾಣೆ ಪಿಎಸ್‌ಐ ಸಿದ್ದಣ್ಣ ಗಿರಿಗೌಡರ್‌ ನೇತ್ರತ್ವದಲ್ಲಿ ಕಾರ್ಯಾಚರಣೆ ನಡೆಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಮಾ.2ರಂದು ಮಧ್ಯಾಹ್ನ 3 ಗಂಟೆ ಸುಮಾರಿಗೆ ಬೀದರ ನಗರದ ಶಹಾಪುರ ಕಡೆಯಿಂದ ಆರೋಪಿತರು ಎರಡು ಮೋಟಾರ್ ಸೈಕಲ್‌ಗಳಲ್ಲಿ ಮಾದಕ ವಸ್ತುಗಳನ್ನು ಸಾಗಾಟ ಮಾಡುತ್ತಿದ್ದಾಗ ಖಚಿತ ಮಾಹಿತಿ ಮೇರೆಗೆ ಮಾರ್ಕೆಟ್ ಠಾಣೆಯ ಪೊಲೀಸರು‌ ದಾಳಿ ನಡೆಸಿದರು.

ಆರೋಪಿಗಳ ಬಳಿ ಪರಿಶೀಲನೆ ನಡೆಸಿದಾಗ ಎರಡು ಪ್ಲಾಸ್ಟಿಕ್‌ ಚೀಲಗಳಲ್ಲಿ ಕಫ್‌ ಸಿರಾಫ್‌ ಹಾಗೂ ನಶೆ ಗುಳಿಗೆಗಳು ಪತ್ತೆಯಾಗಿವೆ. ಅವರನ್ನು ವಿಚಾರಣೆಗೆ ಒಳಪಡಿಸಿದಾಗ ಬೀದರ್‌ ನಗರದಲ್ಲಿ ಅನಧಿಕೃತವಾಗಿ ಮಾರಾಟಕ್ಕೆ ತೆಗೆದುಕೊಂಡು ಹೋಗುತ್ತಿರುವುದಾಗಿ ತಿಳಿಸಿದರು. ಆರೋಪಿತರಿಂದ ₹59.51 ಸಾವಿರ ಮೌಲ್ಯದ 100 ಕಫ್ ಸಿರಪ್‌ ಬಾಟಲಿ, ಎರಡು ಬಾಕ್ಸ್‌ನಲ್ಲಿ 2,160 ನಶೆ ಗುಳಿಗೆಗಳು ಹಾಗೂ ₹75 ಸಾವಿರ ಮೌಲ್ಯದ 2 ದ್ವಿಚಕ್ರ ವಾಹನ ಸೇರಿ ಒಟ್ಟು ₹1,34,511 ಮೌಲ್ಯದ ವಸ್ತುಗಳನ್ನು ಜಪ್ತಿ ಮಾಡಲಾಗಿದೆ.

ಈ ಕುರಿತು ಬೀದರ್‌ನ ಮಾರ್ಕೆಟ್ ಪೊಲೀಸ್ ಠಾಣೆಯಲ್ಲಿ ಎನ್‌ಡಿಪಿಎಸ್ ಕಾಯ್ದೆ ಕಲಂ 21, 22(ಬಿ) ಅಡಿ ಪ್ರಕರಣ ದಾಖಲಿಸಿ ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿದೆ ಎಂದು ಎಸ್ಪಿ ಪ್ರದೀಪ ಗುಂಟಿ ಅವರು ಮಂಗಳವಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ : ಬೀದರ್‌ | ಗ್ರಾಪಂ ಮಾಜಿ ಅಧ್ಯಕ್ಷೆಗೆ ಇಲ್ಲ ಸ್ವಂತ ಸೂರು : ಅನ್ನ-ಆಸರೆಗೆ ವೃದ್ಧ ದಂಪತಿ ಪರದಾಟ!

ಈ ಯಶಸ್ವಿ ಕಾರ್ಯಾಚರಣೆಗೆ ಪೊಲೀಸ್ ತಂಡವನ್ನು ಎಸ್ಪಿ ಪ್ರದೀಪ ಗುಂಟಿ ಅವರು ಶ್ಲಾಘಿಸಿದ್ದಾರೆ. ಪದೇ ಪದೇ ಇಂತಹ ಕಾನೂನು ವಿರೋಧಿ ಚಟುವಟಿಕೆಗಳಲ್ಲಿ ತೊಡಗಿದವರ ವಿರುದ್ಧ ಗುಂಡಾ ಕಾಯ್ದೆ ತೆರೆದು ಕಟ್ಟುನಿಟ್ಟಿನ ಕ್ರಮಕೈಗೊಂಡು ಗಡಿಪಾರು ಮಾಡಲಾಗುವುದು ಎಂದು ಅವರು ಎಚ್ಚರಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ನೀರು, ಆರೋಗ್ಯ ಸೇವೆ ಪರಿಶೀಲನೆ; ಕಾರ್ಮಿಕರ ಸಮಸ್ಯೆ ಆಲಿಸಿದ ಸಿಇಒ

ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರಿನ ವ್ಯವಸ್ಥೆ, ಆರೋಗ್ಯ ಸೇವೆ ಹಾಗೂ ಅಭಿವೃದ್ಧಿ...

ಭಾಲ್ಕಿ | ವಿಬಿ-ಜಿ ರಾಮ್ ಜಿ ಕಾರ್ಮಿಕರಿಗೆ ಜಾಗೃತಿ ಕಾರ್ಯಕ್ರಮ

ಗ್ರಾಮೀಣ ಭಾಗದ ಕೂಲಿ ಕಾರ್ಮಿಕರು ವಿಬಿ-ಜಿ ರಾಮ್ ಜಿ ಯೋಜನೆಯ ಸದುಪಯೋಗ...

ಬಸವಕಲ್ಯಾಣ | ಜಾತ್ಯತೀತ ಸಮಾಜ ನಿರ್ಮಾಣಕ್ಕೆ ಬಸವತತ್ವವೇ ದಾರಿ: ಸಚಿವ ಈಶ್ವರ ಖಂಡ್ರೆ

ಜಗತ್ತಿನ ಎಲ್ಲ ಸಮಸ್ಯೆಗಳಿಗೆ ವಚನಗಳು ದಿವ್ಯೌಷಧಿಗಳಾಗಿವೆ. ಸಮ ಸಮಾಜ ನಿರ್ಮಾಣಕ್ಕಾಗಿ ಶರಣರು...

ಬೀದರ್ ದಕ್ಷಿಣ ಕ್ಷೇತ್ರದಲ್ಲಿ 1 ಜಿ.ಪಂ. ಕ್ಷೇತ್ರವನ್ನಾದರೂ ಎಸ್‌ಸಿಗೆ ಮೀಸಲಿಡಿ

ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಕನಿಷ್ಠ ಒಂದು ಜಿಲ್ಲಾ ಪಂಚಾಯಿತಿ...