ಬೀದರ್‌ | ಕಬ್ಬಿನ ದರ ನಿಗದಿಗೆ ಆಗ್ರಹಿಸಿ ಅನಿರ್ದಿಷ್ಟಾವಧಿ ಧರಣಿ‌ ಆರಂಭ

Date:

ಪ್ರಸಕ್ತ ವರ್ಷದ ಹಂಗಾಮಿನ ಪ್ರತಿ ಟನ್ ಕಬ್ಬಿಗೆ ₹5,500 ಬೆಲೆ ನಿಗದಿಪಡಿಸಿ, ₹4,000 ಮುಂಗಡ ಪಾವತಿಸಬೇಕು ಎಂದು ಆಗ್ರಹಿಸಿ ರೈತ ಸಂಘಗಳ ಸಮನ್ವಯ ಸಮಿತಿ ವತಿಯಿಂದ ಗುರುವಾರ ಬೀದರ್‌ ನಗರದ ಜಿಲ್ಲಾ ಉಸ್ತುವಾರಿ ಸಚಿವರ ಕಚೇರಿ ಎದುರು ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ ಆರಂಭಿಸಲಾಯಿತು.

- Advertisement -

ಧರಣಿ ಆರಂಭಕ್ಕೂ ಮುನ್ನ ಡಾ.ಬಿ.ಆರ್.‌ ಅಂಬೇಡ್ಕರ್ ವೃತ್ತದಿಂದ ಆರಂಭವಾದ ಪ್ರತಿಭಟನಾ ಮೆರವಣಿಗೆಯು ಭಗತ್‌ಸಿಂಗ್ ವೃತ್ತ ಹಾಗೂ ಬಸವೇಶ್ವರ ವೃತ್ತದ ಮೂಲಕ ಸಾಗಿಬಂದು ಜಿಲ್ಲಾ ಉಸ್ತುವಾರಿ ಸಚಿವರ ಕಚೇರಿ ತಲುಪಿತು. ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಘೋಷಣೆ ಕೂಗಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬಡತನದ ಮಾಪನ ಮತ್ತು ವಾಸ್ತವ ಚಿತ್ರಣ: ಆಳ ಅಗಲ

ವಿಶ್ವಬ್ಯಾಂಕ್‌ನ ಬಡತನ ಮತ್ತು ಸಮಾನತೆಯ ಇತ್ತೀಚಿನ ವರದಿಯ ಪ್ರಕಾರ 2011ರಿಂದ 2023ರ ಅವಧಿಯಲ್ಲಿ ಭಾರತದಲ್ಲಿ ಅಂದಾಜು 49.6 ಕೋಟಿ ಜನರು ಬಡತನದಿಂದ ಹೊರಬಂದಿದ್ದಾರೆ. ಈ ವರದಿಯನ್ನು ಆಧರಿಸಿ ಮೋದಿ ನೇತೃತ್ವದ ಕೇಂದ್ರ ಸರ್ಕಾರ...

ಗಾಂಧೀಯ ‘ರಾಮ’-ಮನುವಾದಿಗಳ ‘ಶ್ರೀರಾಮ’ನಲ್ಲ

ಸಮಾನತೆಯ ರಾಮರಾಜ್ಯಕ್ಕೂ, ವರ್ಣಾಶ್ರಮದ ರಾಜಕಾರಣಕ್ಕೂ ಇರುವ ವ್ಯತ್ಯಾಸವೇನು? ಗಾಂಧೀಜಿಯವರ ಪಾಲಿಗೆ ರಾಮ ಎಂದರೆ ಸತ್ಯ, ಅಹಿಂಸೆ, ಪ್ರೀತಿ ಮತ್ತು ಸರ್ವಧರ್ಮ ಸಮಭಾವದ ಸಂಕೇತ; ಅಂಬೇಡ್ಕರ್ ಅವರ ವಿಮರ್ಶೆಯಲ್ಲಿ ಪುರಾಣದ ರಾಮನ ಆಡಳಿತದಲ್ಲಿ ಜಾತಿ...

ಮಂಡೇಲ ನೇತೃತ್ವದಲ್ಲಿ ಗುಲಾಮಗಿರಿ – ವರ್ಣಭೇದ ನೀತಿ ವಿರುದ್ಧ...

ನೆಲ್ಸನ್ ಮಂಡೇಲಾ ಅವರಂತಹ ಮಹಾನ್ ನಾಯಕರು ಕಟ್ಟಿದ್ದ ಈ ಪಕ್ಷ ದಾರಿ ತಪ್ಪಿದ್ದಾದರೂ ಹೇಗೆ ಎಂಬ ಪ್ರಶ್ನೆಗೆ ರಾಜಕೀಯ ತಜ್ಞರು ಸ್ಪಷ್ಟ ಕಾರಣಗಳನ್ನು ನೀಡಿದ್ದಾರೆ. ಆಡಳಿತಶಾಹಿಯ ಭ್ರಷ್ಟಾಚಾರ, ಮಿತಿಮೀರಿದ ಬಡತನ, ನಿರುದ್ಯೋಗ, ಮತ್ತು...

ಕಬ್ಬು ಬೆಳೆಗಾರರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಲ್ಪಿಸಬೇಕು ಹಾಗೂ ರೈತರ ಹಕ್ಕುಗಳನ್ನು ರಕ್ಷಿಸಬೇಕು ಎಂದು ಒತ್ತಾಯಿಸಿದ ಮುಖಂಡರು, ಡಾ. ಎಂ.ಎಸ್. ಸ್ವಾಮಿನಾಥನ್ ಆಯೋಗದ ಶಿಫಾರಸಿನಂತೆ ಕೃಷಿ ಉತ್ಪನ್ನಗಳಿಗೆ ವೈಜ್ಞಾನಿಕ ಕನಿಷ್ಠ ಬೆಂಬಲ ಬೆಲೆ ನಿಗದಿಪಡಿಸುವ ಸಂಬಂಧ ಸಂಸತ್ತಿನಲ್ಲಿ ಕಾನೂನು ರೂಪಿಸಬೇಕು ಎಂದು ಆಗ್ರಹಿಸಿದರು.

2026ನೇ ಸಾಲಿನ ಕಬ್ಬು ಹಂಗಾಮಿಗೆ ಪ್ರತಿ ಟನ್‌ಗೆ ₹5,500 ದರ ನಿಗದಿಪಡಿಸಬೇಕು. ಕಬ್ಬು ಬೆಳೆಗಾರರಿಗೆ ಪ್ರತಿ ಟನ್‌ಗೆ ₹4,000 ಮುಂಗಡ ಪಾವತಿಸಬೇಕು. ರಾಜ್ಯದ ಎಲ್ಲ ಜಿಲ್ಲೆಗಳಲ್ಲೂ ಏಕರೂಪದ ಕಬ್ಬಿನ ಬೆಲೆ ಜಾರಿಗೊಳಿಸಬೇಕು. ಕೇಂದ್ರ ಸರ್ಕಾರ ನಿಗದಿಪಡಿಸಿರುವ ಪ್ರತಿ ಟನ್‌ಗೆ ₹3,650 ಎಫ್‌ಆರ್‌ಪಿ ದರ ಅವೈಜ್ಞಾನಿಕವಾಗಿದ್ದು, ರೈತರಿಗೆ ನ್ಯಾಯಯುತ ಬೆಲೆ ದೊರಕುವಂತೆ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಸ್ವಾಮಿನಾಥನ್ ಆಯೋಗದ ಶಿಫಾರಸಿನಂತೆ ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆಯ ಕಾನೂನುಬದ್ಧ ಖಾತರಿ ನೀಡಬೇಕು. ಸಕ್ಕರೆ ಕಾರ್ಖಾನೆ ಮಾಲೀಕರು ಮತ್ತು ರೈತ ಸಂಘಟನೆಗಳ ನಡುವೆ ಕಬ್ಬಿನ ಬೆಲೆ ನಿಗದಿ ಕುರಿತು ಒಮ್ಮತ ಮೂಡದ ಹಿನ್ನೆಲೆಯಲ್ಲಿ ಸರ್ಕಾರ ಮಧ್ಯಪ್ರವೇಶಿಸಿ ರೈತರಿಗೆ ನ್ಯಾಯ ಒದಗಿಸಬೇಕು ಎಂದು ಆಗ್ರಹಿಸಿದರು.

WhatsApp Image 2026 11 12 at 6.54.54 PM

ಧರಣಿ ಆರಂಭವಾದ ಐದು ದಿನಗಳೊಳಗಾಗಿ ಪ್ರತಿ ಟನ್ ಕಬ್ಬಿಗೆ ₹4,000 ಮುಂಗಡ ಹಣ ಘೋಷಿಸದಿದ್ದರೆ ಬೀದರ್ ಜಿಲ್ಲೆಯಾದ್ಯಂತ ರಸ್ತೆ ತಡೆ ಚಳವಳಿ ನಡೆಸಲಾಗುವುದು ಎಂದು ರೈತ ಮುಖಂಡರು ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.

ಪ್ರತಿಭಟನೆಯಲ್ಲಿ ಸಮಿತಿಯ ಪ್ರಮುಖರಾದ ಮಲ್ಲಿಕಾರ್ಜುನ ಸ್ವಾಮಿ, ಸುಧಾಕರ ನಿರ್ಣಾ, ಮಲ್ಲಾರೆಡ್ಡಿ ಮುರಾಳ, ಬಸವರಾಜ ಸ್ವಾಮಿ, ಬಾಬುರಾವ ಹೊನ್ನಾ, ಗುಂಡುರೆಡ್ಡಿ, ಧೂಳಪ್ಪ ಆಣದೂರ, ಮಲ್ಲಿಕಾರ್ಜುನ ಬಿರಾದಾರ, ಹುಲೆಪ್ಪ ಹುಣಜಿ, ಅಶೋಕ ಕಾರಭಾರಿ, ಪಂಡರಿ ಮೇತ್ರೆ, ಸುಕೇಶ ರೆಡ್ಡಿ, ಜೈರಾಜ ಕೊಳ್ಳಾ, ಕಿರಣ ಖಂಡ್ರೆ, ಕೆ.ಡಿ.ಗಣೇಶ, ಖಾಸಿಂ ಅಲಿ, ಸುಭಾಷ ಮಾಶೆಟ್ಟಿ, ಓಂಪ್ರಕಾಶ ರೊಟ್ಟೆ, ಶಿವಾಜಿ ಮೇತ್ರೆ, ಕೊಂಡಿಬಾ ಪಾಂಡ್ರೆ, ಶಿವರಾಜ ಪಾಟೀಲ, ಶಿವರಾಯ ಮುಧಾಳೆ, ಶಕುಂತಲಾ, ಮಕಬುಲ್ ಸಾಬ್, ಬಸವರಾಜ ಅಷ್ಟೂರೆ, ವಿಠಲರಾವ ಮೇತ್ರೆ, ಅಣ್ಣೆಪ್ಪ ಶಶಿ, ಶಂಕರ ಪಾಟೀಲ ಅತಿವಾಳ, ವಿರೇಂದ್ರ ಪಾಟೀಲ, ವೀರಶೆಟ್ಟಿ ಕಾಳೆ, ಘಾಳೆಪ್ಪ ಬೊಂಡೆ, ಸಂತೋಷಕುಮಾರ ಎಸ್. ಗುದಗೆ ಸೇರಿದಂತೆ ಹಲವು ರೈತ ಮುಖಂಡರು ಪಾಲ್ಗೊಂಡಿದ್ದರು.

ಇದನ್ನೂ ಓದಿ : ಬೀದರ್ ವಿವಿ | ಪರೀಕ್ಷೆಗೂ ಮುನ್ನವೇ ಮುಂದಿನ ಸೆಮಿಸ್ಟರ್ ತರಗತಿ‌ ಪುನಾರಾರಂಭ?

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಲಿಂಗತ್ವ ಅಲ್ಪಸಂಖ್ಯಾತರ ಹಕ್ಕುಗಳ ವಿರುದ್ಧ WDI ಅರ್ಜಿ: ಜನವಾದಿ ಮಹಿಳಾ ಸಂಘಟನೆ ತೀವ್ರ ಖಂಡನೆ

ಭಾರತದಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಹಕ್ಕುಗಳ ವಿರುದ್ಧ ಮಹಿಳಾ ಘೋಷಣೆ ಅಂತಾರಾಷ್ಟ್ರೀಯ ಸಂಸ್ಥೆ...

ನ್ಯಾಯಾಧೀಶರ ಪುತ್ರನ ಕಾರು ಅಪಘಾತ: ಬಾಲಕನ ಜಾಮೀನು ರದ್ದು ಕೋರಿ ಕೇರಳ ಹೈಕೋರ್ಟ್‌ಗೆ ಸಂತ್ರಸ್ತ ಕುಟುಂಬ ಅರ್ಜಿ

ಕೊಚ್ಚಿಯ ಚೇರಾನಲ್ಲೂರ್‌ನಲ್ಲಿ ನಡೆದ ಮರ್ಸಿಡಿಸ್ ಬೆಂಝ್ ಕಾರು ಅಪಘಾತ ಪ್ರಕರಣದಲ್ಲಿ ಆರೋಪಿಯಾಗಿರುವ...

ಬಾಗಲಕೋಟೆ |6 ಪಟ್ಟಣ ಪಂಚಾಯಿತಿಗಳ ಮೇಲೆ ಲೋಕಾಯುಕ್ತ ದಾಳಿ

ಇ-ಸ್ವತ್ತು, ಎನ್‌ಓಸಿ, ಕಟ್ಟಡ ಪರವಾನಗಿ ಸೇರಿದಂತೆ ವಿವಿಧ ಅಕ್ರಮಗಳ ಆರೋಪ, 41...

ಕೆಪಿಸಿಸಿಯಲ್ಲಿ ಗುಂಪುಗಾರಿಕೆಗೆ ಬ್ರೇಕ್; ಸಂದರ್ಶನ ನಡೆಸಿ 112 ಕಾರ್ಯದರ್ಶಿಗಳ ನೇಮಕ: ಬಿ ಕೆ ಹರಿಪ್ರಸಾದ್

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯಲ್ಲಿ ಸಂಘಟನೆಯನ್ನು ಪುನರ್‌ರಚಿಸಿ, ಬಲಪಡಿಸಲು ಹೊಸ ರೀತಿಯ...