ಬೀದರ್‌ | ಕಾಂಗ್ರೆಸ್‌ ಕಚೇರಿಯಲ್ಲಿ ಇಂದಿರಾ ಗಾಂಧಿ ಜಯಂತಿ ಆಚರಣೆ

Date:

ಬೀದರ್ ಜಿಲ್ಲೆಗೆ ಕೈಗಾರಿಕಾ ಪ್ರದೇಶಗಳ ಮಂಜೂರಾತಿ ನೀಡುವ ಮೂಲಕ ಜಿಲ್ಲೆಯ ಅಭಿವೃದ್ಧಿಗೆ ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರು ನೀಡಿದ ಕೊಡುಗೆ ಸ್ಮರಣೀಯವಾಗಿದೆ ಎಂದು ಮಾಜಿ ಸಂಸದ ನರಸಿಂಗ್‌ ರಾವ್ ಸೂರ್ಯವಂಶಿ ಹೇಳಿದರು.

- Advertisement -

ನಗರದ ಜಿಲ್ಲಾ ಕಾಂಗ್ರೆಸ್ ಸಮಿತಿ ಕಚೇರಿಯಲ್ಲಿ ಬುಧವಾರ ಮಾಜಿ ಪ್ರಧಾನಿ, ಉಕ್ಕಿನ ಮಹಿಳೆ ಇಂದಿರಾ ಗಾಂಧಿ ಅವರ 109ನೇ ಜಯಂತಿ ಅಂಗವಾಗಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕೃಷಿಮೇಳ | ‘ಪ್ರಕೃತಿ ಕೊಡಾದೆಲ್ಲ ಒಳ್ಳೀದೆ ಇರ್ತೈತಿ, ಮನ್ಷಾನೇ...

"ಪ್ರಕೃತಿ ಮನುಷ್ಯನಿಗೆ ಕೊಡುವುದೆಲ್ಲವೂ ಒಳ್ಳೆಯದೇ ಇರುತ್ತದೆ, ಆದರೆ ಮನುಷ್ಯ ಪ್ರಕೃತಿಯನ್ನು ಮರೆತು ಏನೇನೋ ಹುಡುಕಿಕೊಂಡು ಹೊರಟಿದ್ದಾನೆ" ಇದು ತಲೆಮಾರುಗಳಿಂದ ಕಂಬಳಿ ನೇಯ್ದು ಬದುಕು ಕಟ್ಟಿಕೊಂಡಿರುವ ಕಂಬಳಿ ನೇಕಾರರ ಮನದಾಳ. ಅಜ್ಜ-ಮುತ್ತಜ್ಜರ ಕಾಲದಿಂದಲೂ ನಡೆದುಕೊಂಡು...

ಒಕ್ಕಲಿಗ ರಾಜಕಾರಣದ ಅಸ್ಮಿತೆ: ಪಾರಂಪರಿಕ ಪ್ರಾಬಲ್ಯ ಮತ್ತು ಹೊಸ...

ರಾಜ್ಯದ ಒಕ್ಕಲಿಗ ರಾಜಕಾರಣವು ಇಂದು ಒಂದು ಮಹತ್ವದ ತಿರುವಿನಲ್ಲಿದೆ. ಒಂದು ಕಡೆ ದಶಕಗಳ ಅನುಭವ, ಭಾವನಾತ್ಮಕ ಬಾಂಧವ್ಯ ಮತ್ತು ಪಾರಂಪರಿಕ ಮತಬ್ಯಾಂಕ್ ಹೊಂದಿರುವ ದೇವೇಗೌಡರ ಕುಟುಂಬವಿದ್ದರೆ, ಇನ್ನೊಂದು ಕಡೆ ಆಕ್ರಮಣಕಾರಿ ರಾಜಕೀಯ ತಂತ್ರಗಾರಿಕೆ,...

ಸ್ಥಳೀಯ ಸಂಸ್ಥೆಗಳ ಚುನಾವಣೆ ವಿಳಂಬ: ಬುಡಮೇಲಾಗುತ್ತಿದೆಯೇ ಪಂಚಾಯತ್ ರಾಜ್...

ಐದು ವರ್ಷಕ್ಕೊಮ್ಮೆ ಚುನಾವಣೆ ನಡೆಯಬೇಕು ಎಂಬುದು ಸಂವಿಧಾನದ ಆಶಯ. ಆದರೆ ಕರ್ನಾಟಕದಲ್ಲಿ ಗ್ರಾಮ ಪಂಚಾಯಿತಿ, ತಾಲೂಕು ಪಂಚಾಯಿತಿ, ಜಿಲ್ಲಾ ಪಂಚಾಯಿತಿ ಹಾಗೂ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಗಳ ವಿಳಂಬ ಪ್ರಜಾಪ್ರಭುತ್ವದ ವ್ಯವಸ್ಥೆಯ ಬಗ್ಗೆಯೇ...

1980ರ ಲೋಕಸಭೆ ಚುನಾವಣೆಯಲ್ಲಿ ಮೇದಕ್ ಕ್ಷೇತ್ರದಿಂದ ಸ್ಪರ್ಧಿಸಿದ್ದ ಇಂದಿರಾ ಗಾಂಧಿ ಅವರನ್ನು ಭೇಟಿಯಾದ ಸಂದರ್ಭವನ್ನು ಸ್ಮರಿಸಿದ ಅವರು, ತಾವು ಚಿಕ್ಕ ವಯಸ್ಸಿನಲ್ಲಿಯೇ ಸಂಸದರಾದಾಗ ಇಂದಿರಾ ಗಾಂಧಿ ಅವರು ತಾಯಿಯ ಮಮತೆಯಿಂದ ತಮ್ಮನ್ನು ಕಂಡಿದ್ದರು. ಆಗ ದೇಶದ ಕೈಗಾರಿಕಾರಹಿತ ಜಿಲ್ಲೆಗಳ ಪಟ್ಟಿಯಲ್ಲಿದ್ದ ಬೀದರ್ ಜಿಲ್ಲೆಯ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿ, ತಮ್ಮನ್ನು ಕಚೇರಿಗೆ ಕರೆಸಿಕೊಂಡು ವಿಶೇಷ ಪತ್ರದ ಮೂಲಕ ಬೀದರ್ ಹಾಗೂ ಹುಮನಾಬಾದ್‌ನಲ್ಲಿ ಎರಡು ಬೃಹತ್ ಕೈಗಾರಿಕಾ ಪ್ರದೇಶಗಳ ಸ್ಥಾಪನೆ ಮತ್ತು ಅಭಿವೃದ್ಧಿಗೆ ಅನುಮೋದನೆ ನೀಡಿದ್ದರು. ಇದು ಜಿಲ್ಲೆಯ ಬಗ್ಗೆ ಅವರಿಗಿದ್ದ ಕಾಳಜಿಗೆ ಸಾಕ್ಷಿಯಾಗಿದೆ ಎಂದು ತಿಳಿಸಿದರು.

WhatsApp Image 2026 11 13 at 8.18.17 PM 6

ಹಿರಿಯ ಮುಖಂಡ ಪಂಡಿತ್ ಚಿದ್ರಿ ಮಾತನಾಡಿ, “ದೇಶದ ಆರ್ಥಿಕ ಮತ್ತು ಸಾಮಾಜಿಕ ಬದಲಾವಣೆಯಲ್ಲಿ ಇಂದಿರಾ ಗಾಂಧಿ ಅವರ ಪಾತ್ರ ಮಹತ್ವದ್ದಾಗಿದೆ. ರಾಜಧನ ರದ್ದತಿ ಹಾಗೂ 14 ಪ್ರಮುಖ ವಾಣಿಜ್ಯ ಬ್ಯಾಂಕುಗಳ ರಾಷ್ಟ್ರೀಕರಣದಂತಹ ದಿಟ್ಟ ನಿರ್ಧಾರಗಳ ಮೂಲಕ ಬ್ಯಾಂಕಿಂಗ್ ಸೇವೆಗಳನ್ನು ಬಡವರಿಗೂ ತಲುಪಿಸಿದ ಕೀರ್ತಿ ಅವರಿಗೆ ಸಲ್ಲುತ್ತದೆ” ಎಂದರು.

ಹಿರಿಯ ಮುಖಂಡ ಶಂಕರ ದೊಡ್ಡಿ ಮಾತನಾಡಿ, “ವಿರೋಧ ಪಕ್ಷದ ನಾಯಕರೂ ಇಂದಿರಾ ಗಾಂಧಿ ಅವರ ದಿಟ್ಟತನ ಮತ್ತು ನಾಯಕತ್ವವನ್ನು ಮೆಚ್ಚಿಕೊಂಡಿದ್ದರು. ಅವರದ್ದು ಅಪರೂಪದ ವ್ಯಕ್ತಿತ್ವವಾಗಿತ್ತು” ಎಂದು ಸ್ಮರಿಸಿದರು.

ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಜಿಲ್ಲಾ ಅಧ್ಯಕ್ಷ ಅಮೃತರಾವ್ ಚಿಮಕೋಡೆ ಮಾತನಾಡಿ, “ದೇಶದ ಮೊದಲ ಮಹಿಳಾ ಪ್ರಧಾನಿಯಾಗಿ ಮಹಿಳಾ ಸಬಲೀಕರಣಕ್ಕೆ ಇಂದಿರಾ ಗಾಂಧಿ ಅವರು ಮಹತ್ವದ ಕೊಡುಗೆ ನೀಡಿದ್ದಾರೆ. ಮಹಿಳೆಯರಲ್ಲಿ ಆತ್ಮವಿಶ್ವಾಸ ಹಾಗೂ ಸಾಧನೆಯ ಛಲ ಮೂಡಿಸಿದ ನಾಯಕಿಯಾಗಿದ್ದರು” ಎಂದರು.

ಹಿರಿಯ ಮುಖಂಡ ಬಷೀರುದ್ದೀನ್ ಹಲಹಿಪ್ಪರಗಾ ಮಾತನಾಡಿ, “1974ರಲ್ಲಿ ಭಾರತವನ್ನು ಪರಮಾಣು ಶಕ್ತಿಯ ರಾಷ್ಟ್ರವನ್ನಾಗಿಸುವಲ್ಲಿ ಇಂದಿರಾ ಗಾಂಧಿ ಅವರ ದಿಟ್ಟ ನಾಯಕತ್ವ ಪ್ರಮುಖ ಪಾತ್ರ ವಹಿಸಿದೆ” ಎಂದು ಹೇಳಿದರು.

ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಮನ್ನಾನ್ ಸೇಠ್ ಮಾತನಾಡಿ, “ಕಾಂಗ್ರೆಸ್ ಕಾರ್ಯಕರ್ತರು ಪಕ್ಷದ ಸ್ವಾತಂತ್ರ್ಯ ಹೋರಾಟದ ಇತಿಹಾಸ, ತ್ಯಾಗ ಮತ್ತು ಸಾಧನೆಗಳನ್ನು ಅರಿತುಕೊಳ್ಳಬೇಕು. 1971ರ ಯುದ್ಧದಲ್ಲಿ ಪಾಕಿಸ್ತಾನವನ್ನು ಸೋಲಿಸಿ ಬಾಂಗ್ಲಾದೇಶದ ವಿಮೋಚನೆಗೆ ಕಾರಣರಾದ ಇಂದಿರಾ ಗಾಂಧಿ, ಪರಮಾಣು ಪರೀಕ್ಷೆಯ ಮೂಲಕ ಭಾರತದ ಸಾಮರ್ಥ್ಯವನ್ನು ಜಗತ್ತಿಗೆ ತೋರಿಸಿದ್ದರು. ಹಸಿರು ಕ್ರಾಂತಿಗೆ ವಿಜ್ಞಾನಿಗಳಿಗೆ ಬೆಂಬಲ ನೀಡುವ ಮೂಲಕ ರೈತರ ಏಳಿಗೆಗೂ ಮಹತ್ವದ ಕೊಡುಗೆ ನೀಡಿದ್ದರು” ಎಂದು ತಿಳಿಸಿದರು.

ಇದನ್ನೂ ಓದಿ : ನ.25ರಿಂದ ಬೆಂಗಳೂರಿನಲ್ಲಿ ಬಿಸಿಯೂಟ ನೌಕರರ ಅನಿರ್ದಿಷ್ಟಾವಧಿ ಹೋರಾಟ

ಕಾರ್ಯಕ್ರಮದಲ್ಲಿ ಡಿಸಿಸಿ ಉಪಾಧ್ಯಕ್ಷ ವೆಂಕಟ್ರಾವ್ ಶಿಂಧೆ, ಮುಂಚೂಣಿ ಘಟಕಗಳ ಅಧ್ಯಕ್ಷರಾದ ಸಂಜುಕುಮಾರ್ ಡಿ.ಕೆ., ನಿಸಾರ್ ಅಹಮದ್, ಎಂ.ಎ. ಸಮೀ, ಸಂಜುಕುಮಾರ್ ಕಾರ್ಕನಾಳಿಕರ್, ಪ್ರದೀಪ್ ಕುಶನೂರ್, ಮುಖಂಡರಾದ ಶಂಕರ ರೆಡ್ಡಿ, ಗೋವರ್ಧನ್ ರಾಠೋಡ್, ಚಂದ್ರಕಾಂತ ಪಾಟೀಲ್, ಜುಬೇರ್ ಪಟೇಲ್, ಸಾಯಿಕುಮಾರ್ ಘೋಡ್ಕೆ, ಶಿವಕುಮಾರ್, ಪ್ರಶಾಂತ ದೊಡ್ಡಿ, ಮೋಹನ್ ಕಾಳೇಕರ್, ಜಯಸೂರಜ್, ವಿನಯಕುಮಾರ್ ಮಾಳಗೆ, ರವೀಂದ್ರಕುಮಾರ್, ಪವನ್ ಮಿಠಾರೆ, ಭೀಮರಾವ್ ಮಾಲಗತ್ತಿ, ಸುಕೀರ್ತಿ, ಸಂಗೀತಾ ಕಾರಬಾರಿ, ಸಂಗೀತಾ ಪಾಟೀಲ್ ಸೇರಿದಂತೆ ಜಿಲ್ಲಾ ಹಾಗೂ ತಾಲೂಕು ಮಟ್ಟದ ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು. ಜಿಲ್ಲಾ ಕಾಂಗ್ರೆಸ್ ಸಮಿತಿ ಪ್ರಧಾನ ಕಾರ್ಯದರ್ಶಿ ಜಾರ್ಜ್ ಫರ್ನಾಂಡಿಸ್ ನಿರೂಪಿಸಿ ಸ್ವಾಗತಿಸಿದರು. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮೊಹಮ್ಮದ್ ಯೂಸುಫ್ ವಂದನಾರ್ಪಣೆ ಸಲ್ಲಿಸಿದರು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಟ್ರಂಪ್-ಕ್ಸಿ-ಪುಟಿನ್ ತ್ರಿಪಕ್ಷೀಯ ಸಭೆ: ಪ್ರಧಾನಿ ಮೋದಿ ವಿದೇಶಾಂಗ ನೀತಿಯನ್ನು ಪ್ರಶ್ನಿಸಿದ ರಾಹುಲ್ ಗಾಂಧಿ

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಮತ್ತು...

ಶಿವಮೊಗ್ಗ | ಬೈಪಾಸ್‌ ರಸ್ತೆ ಅಕ್ರಮ ಒತ್ತುವರಿ ತೆರವು: ಪೊಲೀಸರ ಕಾರ್ಯಕ್ಕೆ ಜನರ ಮೆಚ್ಚುಗೆ

ಶಿವಮೊಗ್ಗ ನಗರದ ಹೊರವಲಯದ ಬೈಪಾಸ್ ರಸ್ತೆಯಲ್ಲಿ ಸಾರ್ವಜನಿಕ ಸಂಚಾರಕ್ಕೆ ಅಡ್ಡಿಯಾಗಿದ್ದ ಅಂಗಡಿಗಳನ್ನು,...

ಶಿವಮೊಗ್ಗ | ಬಸವಣ್ಣನವರ ಕುರಿತು ಅವಹೇಳನಕಾರಿ ಹೇಳಿಕೆ : ಡಾ. ಬಸವ ಮರುಳಸಿದ್ಧ ಸ್ವಾಮಿಜಿ ಖಂಡನೆ

ಬಸವಣ್ಣನವರ ಮತ್ತು ಲಿಂಗಾಯತ ಸಮುದಾಯದ ಕುರಿತು ಅಮೆರಿಕದ ಪ್ರಜೆಯಾದ ರವಿ ಹಂಜ್...

ಅಖಿಲೇಶ್ ಅಯೋಧ್ಯೆಯಿಂದ ಸ್ಪರ್ಧಿಸಿದರೆ, ಅಲ್ಲಿಂದಲೇ ನಾಮಪತ್ರ ಸಲ್ಲಿಸುವೆ: ಯೋಗಿ ಆದಿತ್ಯನಾಥ್

ಮುಂಬರುವ 2027ರ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಅಯೋಧ್ಯೆ ಕ್ಷೇತ್ರದಿಂದ ಸ್ಪರ್ಧಿಸುವಂತೆ...