ಬೀದರ್ | ಜಿಪಂ, ತಾಪಂ ಮೀಸಲಾತಿ ಹಂಚಿಕೆಯಲ್ಲಿ ಒಬಿಸಿಗೆ ಅನ್ಯಾಯ: ಶ್ರೀಕಾಂತ ಸ್ವಾಮಿ ಆರೋಪ

Date:

ಬೀದರ್ ಜಿಲ್ಲಾ ಪಂಚಾಯಿತಿ ಹಾಗೂ ಜಿಲ್ಲೆಯ ಎಂಟು ತಾಲೂಕು ಪಂಚಾಯಿತಿಗಳ ಚುನಾವಣೆಗೆ ರಾಜ್ಯ ಸರ್ಕಾರ ನಿಗದಿಪಡಿಸಿರುವ ಮೀಸಲಾತಿಯಲ್ಲಿ ಹಿಂದುಳಿದ ವರ್ಗಗಳಾದ ಪ್ರವರ್ಗ-(ಎ) ಮತ್ತು ಪ್ರವರ್ಗ-(ಬಿ) ಸಮುದಾಯಗಳಿಗೆ ಅನ್ಯಾಯವಾಗಿದೆ. ಇದನ್ನು ಮರುಪರಿಶೀಲಿಸಿ, ಎಲ್ಲ ವರ್ಗಗಳಿಗೂ ನ್ಯಾಯ ಒದಗಿಸಿದ ಬಳಿಕವೇ ಚುನಾವಣೆ ನಡೆಸಬೇಕು ಎಂದು ಅಖಿಲ ಭಾರತ ಲಿಂಗಾಯತ ಸಮನ್ವಯ ಸಮಿತಿಯ ಕರ್ನಾಟಕ ರಾಜ್ಯ ಸಂಚಾಲಕ ಶ್ರೀ ಶ್ರೀಕಾಂತ ಸ್ವಾಮಿ ಆಗ್ರಹಿಸಿದ್ದಾರೆ.

- Advertisement -

ಈ ಕುರಿತು ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್‌ರಾಜ್ ಇಲಾಖೆಯ ಸರ್ಕಾರದ ಕಾರ್ಯದರ್ಶಿಗಳಿಗೆ ಅ.18ರಂದು ಮನವಿ ಸಲ್ಲಿಸಿರುವ ಅವರು, “ಬೀದರ್ ಜಿಲ್ಲೆಯಲ್ಲಿ ಹಿಂದುಳಿದ ವರ್ಗಗಳ ಜನಸಂಖ್ಯೆ ಸುಮಾರು ಶೇ.70ರಷ್ಟಿದೆ. ಆದರೆ ಜಿಲ್ಲಾ ಪಂಚಾಯಿತಿ ಹಾಗೂ ತಾಲೂಕು ಪಂಚಾಯಿತಿಗಳಲ್ಲಿ ಈ ವರ್ಗಗಳಿಗೆ ಸಮರ್ಪಕ ಪ್ರಾತಿನಿಧ್ಯ ಕಲ್ಪಿಸಿಲ್ಲ” ಎಂದು ಆರೋಪಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬಾಲಿವುಡ್‌ ಮೇಲೆ ಭೂಗತ ಲೋಕದ ಕರಿನೆರಳು: ದಾವೂದ್ ಇಬ್ರಾಹಿಂನಿಂದ...

ಒಂದು ಕಾಲದಲ್ಲಿ ಬಾಲಿವುಡ್ ಸಿನಿಮಾಗಳಿಗೆ ಹಣ ಹೂಡುತ್ತಿದ್ದ, ನಟ-ನಟಿಯರ ವೃತ್ತಿಜೀವನದ ಮೇಲೆ ಪ್ರಭಾವ ಬೀರುತ್ತಿದ್ದ ಭೂಗತ ಲೋಕ, ಈಗ ಗುಂಡಿನ ದಾಳಿ ಮತ್ತು ಜೀವಬೆದರಿಕೆಗಳ ಮೂಲಕ ಮತ್ತೊಮ್ಮೆ ತನ್ನ ಅಸ್ತಿತ್ವ ಪ್ರದರ್ಶಿಸುತ್ತಿದೆ. ದಾವೂದ್...

ಲೋಕಸಭೆಯ ಬಲ 850ಕ್ಕೆ ಏರಿಕೆ: ಕಲಾಪದ ಸಮಯ ಹೆಚ್ಚಳವಿಲ್ಲದಿದ್ದರೆ...

ಲೋಕಸಭೆಯ ಸದಸ್ಯರ ಬಲವನ್ನು 550ರಿಂದ 850ಕ್ಕೆ ಹೆಚ್ಚಿಸುವ ‘ಕ್ಷೇತ್ರ ಪುನರ್‌ವಿಂಗಡಣೆ ಮಸೂದೆ–2026’ ಸಂಸದೀಯ ಪ್ರಜಾಪ್ರಭುತ್ವದಲ್ಲಿ ಹೊಸ ಚರ್ಚೆ ಹುಟ್ಟುಹಾಕಿದೆ. ಜನಸಂಖ್ಯೆಗೆ ಅನುಗುಣವಾಗಿ ಸೀಟುಗಳ ಹೆಚ್ಚಳ ಅನಿವಾರ್ಯವಾದರೂ, ಸಂಸತ್ತಿನ ವಾರ್ಷಿಕ ಕಲಾಪದ ದಿನಗಳು ಮತ್ತು...

ಸೌದಿ ಅರೇಬಿಯಾದ ಕಂಠನಾಳಕ್ಕೇ ಕೈಹಾಕಿರುವ ಯೆಮನ್!

ಸೌದಿ ಅರೇಬಿಯಾದ ಜೀವನಾಡಿಗೇ ಕೈಹಾಕಿರುವ ಯೆಮನ್‌ನ ಈ ಪ್ರತಿರೋಧವು ಕೇವಲ ಒಂದು ಯುದ್ಧದ ಕಥೆಯಲ್ಲ; ಇದು ಮಧ್ಯಪ್ರಾಚ್ಯದ ರಾಜಕೀಯ ಇತಿಹಾಸವನ್ನೇ ಮರುಬರೆಯಬಹುದಾದ ಸಂಘರ್ಷವಾಗಿದೆ. ಅಲ್ಲಿಯವರೆಗೆ, ಯೆಮನ್ ಕೇವಲ ಅರಬ್ ಜಗತ್ತಿಗಷ್ಟೇ ಅಲ್ಲ, ಇಡೀ...
WhatsApp Image 2026 10 10 at 7.46.08 PM 15
ಜಾಹೀರಾತು

ಜಿಲ್ಲಾ ಪಂಚಾಯಿತಿಯ ಒಟ್ಟು 34 ಸ್ಥಾನಗಳಲ್ಲಿ ಪ್ರವರ್ಗ (ಎ) ವರ್ಗಕ್ಕೆ ಕೇವಲ ಎರಡು ಸ್ಥಾನಗಳನ್ನು ನೀಡಲಾಗಿದೆ. ಸರ್ಕಾರದ ನಿಯಮಾನುಸಾರ ಈ ವರ್ಗಕ್ಕೆ ಹೆಚ್ಚಿನ ಪ್ರಾತಿನಿಧ್ಯ ದೊರೆಯಬೇಕಿದ್ದು, ಇನ್ನೂ ಏಳು ಸ್ಥಾನಗಳನ್ನು ಹೆಚ್ಚುವರಿಯಾಗಿ ಕಲ್ಪಿಸಬೇಕು ಎಂದು ಮನವಿಯಲ್ಲಿ ಒತ್ತಾಯಿಸಿದ್ದಾರೆ.

Advertisements

ಪ್ರವರ್ಗ-(ಬಿ) ವರ್ಗಕ್ಕೆ ಜಿಲ್ಲಾ ಪಂಚಾಯಿತಿಯಲ್ಲಿ ಒಂದೂ ಸ್ಥಾನ ನೀಡಿಲ್ಲ. ಈ ವರ್ಗಕ್ಕೆ ನಿಯಮಾನುಸಾರ ಶೇ.5ರಷ್ಟು ಮೀಸಲಾತಿ ಕಲ್ಪಿಸಬೇಕಾದರೆ ಎರಡು ಸ್ಥಾನಗಳನ್ನು ನೀಡಬೇಕು. ಜಿಲ್ಲೆಯ ಎಂಟು ತಾಲೂಕು ಪಂಚಾಯಿತಿಗಳ ಪೈಕಿ ಕೇವಲ ಒಂದರಲ್ಲಿ ಪ್ರವರ್ಗ(ಬಿ)ಗೆ ಒಂದು ಸ್ಥಾನ ನೀಡಲಾಗಿದ್ದು, ಉಳಿದ ಏಳು ತಾಲೂಕು ಪಂಚಾಯಿತಿಗಳಲ್ಲಿ ಈ ವರ್ಗಕ್ಕೆ ಪ್ರಾತಿನಿಧ್ಯ ಇಲ್ಲದಂತಾಗಿದೆ ಎಂದು ಗಮನ ಸೆಳೆದಿದ್ದಾರೆ.

WhatsApp Image 2026 10 19 at 9.06.21 PM
ಶ್ರೀಕಾಂತ ಸ್ವಾಮಿ

ಜಿಲ್ಲೆಯಲ್ಲಿ ಲಿಂಗಾಯತ, ಮರಾಠ, ಮುಸ್ಲಿಂ, ಕುರುಬ, ವೀರಶೈವ, ಬಣಜಿಗ, ವಾಲ್ಮೀಕಿ, ಕ್ರೈಸ್ತ, ಹಟಗಾರ, ಮಡಿವಾಳ, ಕುಂಬಾರ, ಹಡಪದ, ಘಾಣಿಗ, ಹೂಗಾರ, ಕಮ್ಮಾರ, ಬಡಿಗ, ಶೀಲವಂತ, ನಾಯಕ, ಬೌದ್ಧ ಸೇರಿದಂತೆ ವಿವಿಧ ಸಮುದಾಯಗಳು ಹಿಂದುಳಿದ ವರ್ಗಗಳ ವ್ಯಾಪ್ತಿಯಲ್ಲಿವೆ. ಈ ಸಮುದಾಯಗಳ ಸಾಮಾಜಿಕ ಮತ್ತು ಆರ್ಥಿಕ ಸ್ಥಿತಿಗತಿಗಳನ್ನು ಪರಿಗಣಿಸಿ ಸ್ಥಳೀಯ ಸಂಸ್ಥೆಗಳಲ್ಲಿ ಸೂಕ್ತ ಪ್ರಾತಿನಿಧ್ಯ ಕಲ್ಪಿಸಬೇಕು ಎಂದು ಮನವಿಯಲ್ಲಿ ತಿಳಿಸಿದ್ದಾರೆ.

ಜಿಲ್ಲಾ ಪಂಚಾಯಿತಿಯನ್ನು ಜಿಲ್ಲಾ ಘಟಕವಾಗಿ ಹಾಗೂ ತಾಲೂಕು ಪಂಚಾಯಿತಿಯನ್ನು ತಾಲೂಕು ಘಟಕವಾಗಿ ಪರಿಗಣಿಸಿ, ಆಯಾ ಘಟಕಗಳ ವ್ಯಾಪ್ತಿಯಲ್ಲಿ ಎಲ್ಲ ಪ್ರವರ್ಗಗಳಿಗೂ ಸರ್ಕಾರ ನಿಗದಿಪಡಿಸಿರುವ ಮೀಸಲಾತಿ ಪ್ರಮಾಣಕ್ಕೆ ಅನುಗುಣವಾಗಿ ಸ್ಥಾನಗಳನ್ನು ಹಂಚಿಕೆ ಮಾಡಬೇಕು. ಯಾವುದೇ ವರ್ಗಕ್ಕೆ ಅನ್ಯಾಯವಾಗದಂತೆ ಮೀಸಲಾತಿಯನ್ನು ಸಮಾನಾಂತರವಾಗಿ ಹಂಚಿಕೆ ಮಾಡುವ ಅಗತ್ಯವಿದೆ ಎಂದು ಅವರು ಒತ್ತಾಯಿಸಿದ್ದಾರೆ.

WhatsApp Image 2026 10 10 at 6.59.31 PM 5
ಜಾಹೀರಾತು

ಹಿಂದುಳಿದ ವರ್ಗಗಳ ಮೀಸಲಾತಿ ಕಡಿತಗೊಂಡಿರುವುದರಿಂದ ದೊಡ್ಡ ಪ್ರಮಾಣದ ಜನಸಮುದಾಯಕ್ಕೆ ಅನ್ಯಾಯವಾಗಿದೆ. ಸರ್ಕಾರ ಈ ಲೋಪವನ್ನು ಸರಿಪಡಿಸಿ ನ್ಯಾಯಯುತ ಮೀಸಲಾತಿ ನಿಗದಿಪಡಿಸಿದ ಬಳಿಕ ಚುನಾವಣೆ ನಡೆಸಬೇಕು. ಇಲ್ಲವಾದಲ್ಲಿ ಸರ್ಕಾರದ ವಿರುದ್ಧ ಹೋರಾಟ ನಡೆಸುವುದರ ಜೊತೆಗೆ ನ್ಯಾಯಕ್ಕಾಗಿ ನ್ಯಾಯಾಲಯದ ಮೊರೆ ಹೋಗಬೇಕಾಗುತ್ತದೆ ಎಂದು ಶ್ರೀಕಾಂತ ಸ್ವಾಮಿ ಎಚ್ಚರಿಸಿದ್ದಾರೆ.

ಇದನ್ನೂ ಓದಿ : ಬಸವಕಲ್ಯಾಣದಲ್ಲಿ ಅ.24ರಿಂದ ʼಕಲ್ಯಾಣ ಪರ್ವʼ ರಜತ ಮಹೋತ್ಸವ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

CJP ನಾಯಕರ ನ್ಯಾಯಾಂಗ ಬಂಧನ ವಿಸ್ತರಣೆಗೆ ಪೊಲೀಸರ ಮನವಿ; ಮ್ಯಾಜಿಸ್ಟ್ರೇಟ್ ಮುಂದೆ ಹಾಜರು

CJP ನಾಯಕರಾದ ಸೌರವ್ ದಾಸ್ ಮತ್ತು ಆಶುತೋಷ್ ರಂಕಾ ಅವರನ್ನು ಸೋಮವಾರ...

ಏಷ್ಯನ್ ಪ್ಯಾರಾ ಗೇಮ್ಸ್‌ನಲ್ಲಿ ಭಾರತದ ಪದಕ ಬೇಟೆ: ಮೊದಲ ದಿನವೇ 4 ಚಿನ್ನ ಸೇರಿ 11 ಪದಕಗಳ ಸಾಧನೆ!

ಜಪಾನ್‌ನ ಐಚಿ–ನಾಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಪ್ಯಾರಾ ಕ್ರೀಡಾಕೂಟದಲ್ಲಿ ಭಾರತ ಭರ್ಜರಿ...