ಜಿಲ್ಲೆ ಸೇರಿ ಎಲ್ಲ ಸರಕಾರಿ, ಅರೆ ಸರಕಾರಿ, ಬ್ಯಾಂಕ್, ಕಚೇರಿ ಸೇರಿದಂತೆ ಎಲ್ಲ ಖಾಸಗಿ ಶಾಲಾ-ಕಾಲೇಜು, ಸಾರ್ವಜನಿಕ ವಲಯಗಳಲ್ಲಿ ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವಣ್ಣ ಹೆಸರಿನ ಭಾವಚಿತ್ರ ಕಡ್ಡಾಯವಾಗಿ ಅಳವಡಿಸಿ ಬಸವ ಜಯಂತಿ ದಿನದಂದು ಪೂಜೆ ಸಲ್ಲಿಸಬೇಕೆಂದು ನಮ್ಮ ಕರ್ನಾಟಕ ಸೇನೆಯ ಜಿಲ್ಲಾ ಘಟಕದ ಪದಾಧಿಕಾರಿಗಳು ಮನವಿ ಮಾಡಿದ್ದಾರೆ.
ಈ ಕುರಿತು ಪಟ್ಟಣದ ತಹಸೀಲ್ ಕಚೇರಿಯಲ್ಲಿ ನಮ್ಮ ಕರ್ನಾಟಕ ಸೇನೆ ಜಿಲ್ಲಾ ಘಟಕದ ಗೌರವಾಧ್ಯಕ್ಷ ರಮೇಶ ಚಿದ್ರಿ ಮತ್ತು ಜಿಲ್ಲಾಧ್ಯಕ್ಷ ಗಣೇಶ ಪಾಟೀಲ್ ನೇತೃತ್ವದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೆಸರಿಗೆ ಬರೆದ ಹಕ್ಕೊತ್ತಾಯ ಪತ್ರವನ್ನು ತಹಸೀಲ್ದಾರ ಮಲ್ಲಿಕಾರ್ಜುನ ವಡ್ಡನಕೇರಿ ಅವರಿಗೆ ಸಲ್ಲಿಸಿದರು.
ವಿಶ್ವಗುರು ಬಸವಣ್ಣನವರ ಬಗ್ಗೆ ತಮಗೆ ಅಪಾರ ಅಭಿಮಾನವಿದೆ. ಬಸವ ಜಯಂತಿ ದಿನದಂತೆ ತಾವುಗಳು ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದ್ದೀರಿ. ಎಲ್ಲ ಸರಕಾರಿ ಕಚೇರಿಗಳಲ್ಲಿ ಬಸವಣ್ಣನವರ ಭಾವಚಿತ್ರ ಅಳವಡಿಸುವಂತೆ ಆದೇಶ ಹೊರಡಿಸಿ
ಬಸವಣ್ಣನವರಿಗೆ ನಿಜವಾದ ಗೌರವ ಸಲ್ಲಿಸಿದ್ದೀರಿ. ಅದರಂತೆ ಎಲ್ಲ ಸರಕಾರಿ ಕಚೇರಿ, ಅರೆ ಸರಕಾರಿ, ಬ್ಯಾಂಕ್ ಮತ್ತು ಖಾಸಗಿ ಶಾಲಾ-ಕಾಲೇಜುಗಳಲ್ಲಿ ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವಣ್ಣ ಎಂಬ ಮುದ್ರಿತ ಬಸವಣ್ಣನವರ ಭಾವಚಿತ್ರ ಅಳವಡಿಸಲು ಆದೇಶ ಹೊರಡಿಸಬೇಕು ಎಂದು ಸಿಎಂ ಸಿದ್ದರಾಮಯ್ಯನವರಿಗೆ ಬರೆದ ಪತ್ರದಲ್ಲಿ ಮನವಿ ಮಾಡಲಾಗಿದೆ.
ಇದನ್ನೂ ಓದಿ : ಬೀದರ್ | ಬಸವ ಜಯಂತಿ ಉತ್ಸವ : ಬೃಹತ್ ಕಾರು ರ‍್ಯಾಲಿ; ಇಷ್ಟಲಿಂಗ ಪೂಜೆ
ಈ ಸಂದರ್ಭದಲ್ಲಿ ಸಂಘಟನೆಯ ಜಿಲ್ಲಾ ಯುವ ಘಟಕದ ಅಧ್ಯಕ್ಷ ಸುದೀಪ ತುಗಾಂವೆ, ಪ್ರಧಾನ ಕಾರ್ಯದರ್ಶಿ ಭದ್ರಯ್ಯ ಸ್ವಾಮಿ, ತಾಲೂಕು ಅಧ್ಯಕ್ಷ ಬಸವರಾಜ ಕಾರಬಾರಿ, ಉಪಾಧ್ಯಕ್ಷ ಜಗನ್ನಾಥ ಪಾಟೀಲ್, ಮಹೇಶ ರಾಚೋಟೆ, ತಾಲೂಕು ಯುವ ಘಟಕದ ಅಧ್ಯಕ್ಷ ಕಾಶಿನಾಥ ಚಳಕಾಪೂರೆ, ಸಂಘಟನಾ ಕಾರ್ಯದರ್ಶಿ ಸಂಗಮೇಶ ಮಾರ್ಗೆ, ಉಪಾಧ್ಯಕ್ಷ





