ಬೀದರ್‌ | ಒಳಮೀಸಲಾತಿಯಿಂದ ಬಂಜಾರ ಸಮಾಜಕ್ಕೆ ಅನ್ಯಾಯ : ಶಾಸಕ ಪ್ರಭು ಚವ್ಹಾಣ

Date:

ರಾಜ್ಯ ಕಾಂಗ್ರೆಸ್ ಸರ್ಕಾರ ಒಳ ಮೀಸಲಾತಿಯ ಅವೈಜ್ಞಾನಿಕ ಹಂಚಿಕೆಯ ಮೂಲಕ ಬಂಜಾರ ಸಮಾಜಕ್ಕೆ ಅನ್ಯಾಯ ಮಾಡಿದೆ ಎಂದು ಮಾಜಿ ಸಚಿವ, ಶಾಸಕ ಪ್ರಭು ಬಿ. ಚವ್ಹಾಣ ಹೇಳಿದರು.

- Advertisement -

ಸೋಮವಾರ ಬೀದರ ನಗರದಲ್ಲಿ ಬೃಹತ್ ಜನಜಾಗೃತಿ ಸಮಾವೇಶದಲ್ಲಿ ಭಾಗವಹಿಸಿ ಅವರು ಮಾತನಾಡಿ, “ಕಾಂಗ್ರೆಸ್ ಸರ್ಕಾರ ಬಂಜಾರಾ ಸಮಾಜಕ್ಕೆ ಅನ್ಯಾಯ ಮಾಡಿದೆ. ಒಳ ಮೀಸಲಾತಿಯನ್ನು ಸಂಪೂರ್ಣ ಅವೈಜ್ಞಾನಿಕವಾಗಿ ಜಾರಿಗೊಳಿಸಿದ್ದು, ಬಂಜಾರಾ ಸಮಾಜದ ಜನಸಂಖ್ಯೆ, ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಸ್ಥಿತಿಗತಿಗಳನ್ನು ಪರಿಗಣಿಸಿಲ್ಲ.ಕೇವಲ ಬಂಜಾರಾ, ಭೋವಿ, ಕೊರಮ ಹಾಗೂ ಕೊರಚ ಸಮಾಜಗಳಿಗೆ ಶೇ. 4.5 ಮೀಸಲಾತಿ ನೀಡಲಾಗಿತ್ತು‌. ಈಗ ಈ ಸಮಾಜಗಳೊಂದಿಗೆ ಇನ್ನೂ 59 ಜಾತಿಗಳನ್ನು ಸೇರಿಸುವ ಮೂಲಕ  ಈ ಎಲ್ಲ ಸಮಾಜಗಳ ಹಕ್ಕನ್ನು ಕಸಿದುಕೊಂಡಿದ್ದು, ಎಲ್ಲರಿಗೂ ಅನ್ಯಾಯ ಆಗಿದೆ” ಎಂದು ಆರೋಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

“ರಾಜ್ಯಾದ್ಯಂತ ಜನಜಾಗೃತಿ ಸಮಾವೇಶಗಳನ್ನು ಹಮ್ಮಿಕೊಳ್ಳಲಾಗುತ್ತಿದ್ದು, ಈಗಾಗಲೇ ಕಲಬುರಗಿಯಲ್ಲಿ ಯಶಸ್ವಿಯಾಗಿ ನಡೆದಿವೆ. ಯಾದಗಿರಿ ಸೇರಿದಂತೆ ರಾಜ್ಯಾದ್ಯಂತ ಹೋರಾಟ ತೀವ್ರಗೊಳ್ಳಲಿದೆ. ಈ ಹೋರಾಟ ರಾಜಕೀಯಕ್ಕಾಗಿ ಅಲ್ಲ, ಸಮಾಜದ ಮಕ್ಕಳ ಭವಿಷ್ಯಕ್ಕಾಗಿ ನಡೆಯುತ್ತಿದೆ. ಐಎಎಸ್, ಐಪಿಎಸ್, ವೈದ್ಯರು, ಇಂಜಿನಿಯರ್‌ಗಳಾಗಿ ಉನ್ನತ ಹುದ್ದೆಗಳನ್ನು ಅಲಂಕರಿಸಬೇಕಾದರೆ ನ್ಯಾಯಯುತ ಮೀಸಲಾತಿ ದೊರೆಯಬೇಕು. ಸಮಾಜದ ಎಲ್ಲರೂ ಒಗ್ಗಟ್ಟಿನಿಂದ ಹೋರಾಟದಲ್ಲಿ ಭಾಗವಹಿಸಬೇಕು” ಎಂದು ಕರೆ ನೀಡಿದರು.

“ನಾವು ಯಾರ ಬಳಿಯೂ ಭಿಕ್ಷೆ ಕೇಳುತ್ತಿಲ್ಲ. ಬಾಬಾಸಾಹೇಬ್ ಅಂಬೇಡ್ಕರ್ ಅವರು ನೀಡಿರುವ ಸಂವಿಧಾನಬದ್ಧ ಹಕ್ಕನ್ನು ಕೇಳುತ್ತಿದ್ದೇವೆ. ಸರ್ಕಾರ ಒಳ ಮೀಸಲಾತಿಯನ್ನು ಕೂಡಲೇ ಮರುಪರಿಶೀಲಿಸಿ ಎಲ್ಲ ಸಮಾಜಗಳಿಗೆ ನ್ಯಾಯ ಕಲ್ಪಿಸಬೇಕು. ಇಲ್ಲವಾದರೆ ಜಿಲ್ಲಾಧಿಕಾರಿಗಳ ಕಚೇರಿಗಳಿಗೆ, ಸಮಾಜ ಕಲ್ಯಾಣ ಇಲಾಖೆ ಕಚೇರಿಗಳಿಗೆ ಮುತ್ತಿಗೆ, ರಸ್ತೆ ತಡೆ ಸೇರಿದಂತೆ ರಾಜ್ಯಾದ್ಯಂತ ಉಗ್ರ ಸ್ವರೂಪದ ಹೋರಾಟಗಳನ್ನು ನಡೆಸಬೇಕಾಗುತ್ತದೆ” ಎಂದು ಎಚ್ಚರಿಕೆ ನೀಡಿದರು.

ಕಲಬುರಗಿಯ ಮಾಜಿ ಸಂಸದ ಡಾ.ಉಮೇಶ ಜಾಧವ ಮಾತನಾಡಿ, “ಬಂಜಾರಾ ಸಮಾಜ ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕವಾಗಿ ಸಾಕಷ್ಟು ಹಿಂದುಳಿದಿದ್ದು, ಕಾಂಗ್ರೆಸ್ ನಾಯಕರು ಬಂಜಾರಾ ಸಮಾಜವನ್ನು ಪರಿಶಿಷ್ಟ ಜಾತಿಯಿಂದ ತೆಗೆದುಹಾಕಲಾಗುತ್ತದೆ ಎಂದು ಅಪಪ್ರಚಾರ ಮಾಡಿ ಅಧಿಕಾರಕ್ಕೆ ಬಂದಿದ್ದಾರೆ. ಬಂಜಾರಾ ಸಮಾಜ ಸ್ವಾತಂತ್ರ್ಯ ಪೂರ್ವದಿಂದಲೂ ಪರಿಶಿಷ್ಟ ಜಾತಿಯಲ್ಲಿಯೇ ಇದ್ದು, ಅದನ್ನು ತೆಗೆದುಹಾಕುವ ಪ್ರಶ್ನೆಯೇ ಇಲ್ಲ. ಕಾಂಗ್ರೆಸ್ ಸರ್ಕಾರ ಉದ್ದೇಶಪೂರ್ವಕವಾಗಿ ಸಮಾಜಕ್ಕೆ ಅನ್ಯಾಯ ಮಾಡುತ್ತಿದ್ದು, ಎಲ್ಲರೂ ಇದರ ವಿರುದ್ಧ ಧ್ವನಿ ಎತ್ತಬೇಕು” ಎಂದು ಹೇಳಿದರು.

WhatsApp Image 2026 06 29 at 7.44.51 PM
ಪ್ರತಿಭಟನಾ ಮೆರವಣಿಗೆ ನಡೆಯಿತು.

ಶಿರಹಟ್ಟಿ ಕ್ಷೇತ್ರದ ಶಾಸಕ ಡಾ.ಚಂದ್ರು ಲಮಾಣಿ ಮಾತನಾಡಿ, “ಕಾಂಗ್ರೆಸ್ ಸರ್ಕಾರ ಪದೇ ಪದೇ ಬಂಜಾರಾ ಸಮಾಜವನ್ನು ನಿರ್ಲಕ್ಷಿಸುತ್ತಿದೆ. ಒಳ ಮೀಸಲಾತಿ ಮೂಲಕ ಸಮಾಜಕ್ಕೆ ಅನ್ಯಾಯ ಎಸಗಿದೆ. ಚುನಾವಣೆಗೂ ಮುನ್ನ ಸಮಾಜದ ಮತ ಪಡೆದು ಅಧಿಕಾರಕ್ಕೆ ಬಂದ ಕಾಂಗ್ರೆಸ್ ಈಗ ಅದೇ ಸಮಾಜದ ವಿರುದ್ಧ ನಿರ್ಧಾರ ಕೈಗೊಂಡಿದೆ. ನ್ಯಾಯ ದೊರೆಯುವವರೆಗೆ ನಮ್ಮ ಹೋರಾಟ ಮುಂದುವರಿಯಲಿದ್ದು, ಸಮಾಜದ ಹಿತಕ್ಕಾಗಿ ಯಾವುದೇ ತ್ಯಾಗಕ್ಕೂ ಸಿದ್ಧ” ಎಂದು ಹೇಳಿದರು.

ಸಮಾವೇಶಕ್ಕೂ ಮುನ್ನ ಅಪಾರ ಸಂಖ್ಯೆಯಲ್ಲಿ ಬಂಜಾರಾ ಸಮಾಜದ ಮುಖಂಡರು, ಮಹಿಳೆಯರು, ಯುವಕರು ಕಾಲ್ನಡಿಗೆಯ ಮುಖಾಂತರ ಝೀರಾ ಫಂಕ್ಷನ್ ಹಾಲ್ ವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದರು. ಪ್ರತಿಭಟನೆ ಉದ್ದಕ್ಕೂ ರಾಜ್ಯ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಬಂಜಾರಾ ಸಮಾಜಕ್ಕೆ ಆಗಿರುವ ಅನ್ಯಾಯ ಖಂಡಿಸಿದರು.

ಸಮಾಜದ ಮುಖಂಡರಾದ ಕಲಬುರಗಿಯ ಮಣಿಕಂಠ ರಾಠೋಡ ಹಾಗೂ ಲಿಂಬಾ ನಾಯಕ್ ಅವರು ಮಾತನಾಡಿ, ಬಂಜಾರಾ ಸಮಾಜದ ಹಕ್ಕುಗಳ ರಕ್ಷಣೆಗಾಗಿ ಎಲ್ಲರೂ ಸಂಘಟಿತರಾಗಿ ಹೋರಾಟ ನಡೆಸುವಂತೆ ಕರೆ ನೀಡಿದರು.

ಇದನ್ನೂ ಓದಿ : ಬೀದರ್‌ | ಸಾಮಾಜಿಕ ಭದ್ರತಾ ಪಿಂಚಣಿ ಶೀಘ್ರ ಬಿಡುಗಡೆಗೆ ಆಗ್ರಹ

ಸಮಾವೇಶದಲ್ಲಿ ಪ್ರಮುಖರಾದ ಬಸವರಾಜ ಪವಾರ, ಅಣ್ಣಾರಾವ ರಾಠೋಡ, ತಾನಾಜಿ ರಾಠೋಡ, ರಾಮಶೆಟ್ಟಿ ಪನ್ನಾಳೆ, ಗುರುನಾಥ ರಾಜಗೀರೆ, ಶಿವಾಜಿರಾವ ಪಾಟೀಲ ಮುಂಗನಾಳ, ಸಚಿನ್ ರಾಠೋಡ, ಸುಜಿತ್ ರಾಠೋಡ, ಪ್ರದೀಪ್ ಪವಾರ, ಗೋಪಾಲಸಿಂಗ್ ರಾಠೋಡ, ವೀರಶೆಟ್ಟಿ ರಾಠೋಡ, ಮಾಣಿಕ ಪವಾರ, ಭಗುಸಿಂಗ್ ಜಾಧವ, ಶಿವಲೀಲಾ ಚಿದ್ರೆ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈಸೂರು | ಅ.13ರಂದು ಯುವ ದಸರಾ ಉದ್ಘಾಟಿಸಲಿರುವ ನಟ ಪ್ರಭುದೇವ್‌

2026ರ ಯುವ ದಸರಾ ಕಾರ್ಯಕ್ರಮವನ್ನು ಅಕ್ಟೋಬರ್ 13ರಂದು ಖ್ಯಾತ ನೃತ್ಯ ನಿರ್ದೇಶಕ...

ಯಾದಗಿರಿ–ಶಹಾಪುರ ಬೈಪಾಸ್‌ ರೈಲ್ವೆ ಮೇಲ್ಸೇತುವೆ, ಭೀಮಾ ನದಿ ಬ್ರಿಡ್ಜ್ ದುರಸ್ತಿಗೆ ಉಮೇಶ ಕೆ. ಮುದ್ನಾಳ ಆಗ್ರಹ

ಯಾದಗಿರಿ ನಗರದ ಗುರುಶಿಣಗಿ ಮೂಲಕ ಶಹಾಪುರಕ್ಕೆ ಸಂಪರ್ಕ ಕಲ್ಪಿಸುವ ಯಾದಗಿರಿ–ಶಹಾಪುರ ಬೈಪಾಸ್...

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ, ಚೀನಾಗೆ ಹೆದರಿದಿರೇ?

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ...