ಬೀದರ್‌ | ಪ್ರಥಮ ದಲಿತ ಬಂಡಾಯ ಸಮ್ಮೇಳನ ಸರ್ವಾಧ್ಯಕ್ಷರಿಗೆ ಆಹ್ವಾನ

Date:

ಬೀದರ ನಗರದ ಪೂಜ್ಯ ಚನ್ನಬಸವ ಪಟ್ಟದ್ದೇವರು ರಂಗಮಂದಿರದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ನ.7ರಂದು ಆಯೋಜಿಸಲಾಗುತ್ತಿರುವ ಜಿಲ್ಲೆಯ ಪ್ರಥಮ ದಲಿತ ಬಂಡಾಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಆಯ್ಕೆಯಾಗಿರುವ ಹಿರಿಯ ಹೋರಾಟಗಾರ, ಚಿಂತಕ ಮಾರುತಿ ಬೌದ್ಧೆ ಮತ್ತು ಅವರ ಧರ್ಮಪತ್ನಿ ಕಸ್ತೂರಬಾಯಿ ಬೌದ್ಧೆ ಅವರನ್ನು ಸಮ್ಮೇಳನಕ್ಕೆ ಆತ್ಮೀಯವಾಗಿ ಆಹ್ವಾನಿಸಲಾಯಿತು.

- Advertisement -

ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಸುರೇಶ್ ಚನ್ನಶೆಟ್ಟಿ ಅವರು ಸಮ್ಮೇಳನದ ಆಮಂತ್ರಣ ಪತ್ರಿಕೆಯನ್ನು ಮಾರುತಿ ಬೌದ್ಧೆ ದಂಪತಿಗೆ ನೀಡಿ ಅಧಿಕೃತವಾಗಿ ಆಹ್ವಾನಿಸಿದರು. ಸಮ್ಮೇಳನದ ಉದ್ದೇಶ, ಮಹತ್ವ ಹಾಗೂ ಸಿದ್ಧತೆಗಳ ಕುರಿತು ಚರ್ಚಿಸಿ, ದಂಪತಿಗೆ ಗೌರವಪೂರ್ವಕವಾಗಿ ಅಭಿನಂದಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಅಕ್ಕಿ ಬೆಲೆ ಏರಿಕೆಯ ಬಿಸಿ: ಗ್ರಾಹಕರ ಕೈ ಸುಡುತ್ತಿದೆ,...

ಅಡುಗೆ ಮನೆಯ ದಿನನಿತ್ಯದ ಅಗತ್ಯವಾಗಿರುವ ಅಕ್ಕಿಯ ಬೆಲೆ ದಿನದಿಂದ ದಿನಕ್ಕೆ ಏರುತ್ತಿದ್ದು, ಸಾಮಾನ್ಯ ಕುಟುಂಬಗಳ ಆರ್ಥಿಕ ಪರಿಸ್ಥಿತಿಯನ್ನು ಮತ್ತಷ್ಟು ಸಂಕಷ್ಟಕ್ಕೆ ದೂಡಿದೆ. ಈಗಾಗಲೇ ಅಗತ್ಯ ವಸ್ತುಗಳ ಬೆಲೆ ಏರಿಕೆ, ಹಣದುಬ್ಬರ, ಉದ್ಯೋಗ ಮತ್ತು...

ಮನುಷ್ಯ ಜಾತಿ ಒಂದೇ; ಮೇಲು–ಕೀಳು ಎಂಬ ಭೇದವೇಕೆ?

ಒಂದೆಡೆ ಧರ್ಮದ ಭೇದ ಮರೆತು ಸಹಬಾಳ್ವೆ ನಡೆಸುವ ಹಳ್ಳಿಗಳು; ಮತ್ತೊಂದೆಡೆ ಜಾತಿಯ ಹೆಸರಿನಲ್ಲಿ ಅಸ್ಪೃಶ್ಯತೆ, ಹಲ್ಲೆ ಮತ್ತು ಸಾಮಾಜಿಕ ಬಹಿಷ್ಕಾರ! ರಾಯಚೂರಿನ ತಿಡಿಗೋಳ ಘಟನೆ ಮನುಷ್ಯತ್ವ, ಸಮಾನತೆ ಮತ್ತು ಸಂವಿಧಾನದ ಆಶಯಗಳ ಕುರಿತು...

ʼಸ್ಟಿಂಗ್‌ʼ ಸರ್ಕಸ್‌ | ಬೇಳೆ ಬೇಯಿಸಿಕೊಂಡವರಾರೋ, ಸಂತ್ರಸ್ತರಾರೋ!

ರಾಜ್ಯಾದ್ಯಂತ ಈಗ ಭಾರೀ ಸದ್ದು ಮಾಡುತ್ತಿರುವ ಸ್ಟಿಂಗ್ ಆಪರೇಷನ್ ಪ್ರಕರಣವು ಹೊಸ ಪರ-ವಿರೋಧ ಚರ್ಚೆಗಳಿಗೆ ವೇದಿಕೆ ಸೃಷ್ಟಿಸಿದೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವರ್ಚಸ್ಸನ್ನು ಕುಗ್ಗಿಸಲು ಮತ್ತು ಅವರ ತೇಜೋವಧೆ ಮಾಡಲೆಂದೇ ಈ...

ಸುರೇಶ ಚನ್ನಶೆಟ್ಟಿ ಮಾತನಾಡಿ, “ಬೀದರ ಜಿಲ್ಲೆಯ ಸಾಮಾಜಿಕ, ಸಾಹಿತ್ಯಿಕ ಹಾಗೂ ಸಾಂಸ್ಕೃತಿಕ ಇತಿಹಾಸದಲ್ಲಿ ಮಹತ್ವದ ಸ್ಥಾನ ಪಡೆಯಲಿರುವ ಈ ಪ್ರಥಮ ದಲಿತ ಬಂಡಾಯ ಸಮ್ಮೇಳನವು ದಲಿತ ಚಳವಳಿಯ ಇತಿಹಾಸ, ಸಮಾನತೆಯ ಆಶಯಗಳು, ಸಾಮಾಜಿಕ ನ್ಯಾಯದ ಹೋರಾಟಗಳು ಹಾಗೂ ಶೋಷಿತ ಸಮುದಾಯಗಳ ಸಾಹಿತ್ಯಿಕ ಮತ್ತು ಸಾಂಸ್ಕೃತಿಕ ಅಭಿವ್ಯಕ್ತಿಗೆ ಮಹತ್ವದ ವೇದಿಕೆಯಾಗಲಿದೆ” ಎಂಬ ಆಶಯ ವ್ಯಕ್ತಪಡಿಸಿದರು.

ಜಿಲ್ಲೆಯಲ್ಲಿ ಪ್ರಥಮ ಬಾರಿಗೆ ಜರುಗುತ್ತಿರುವ ದಲಿತ ಬಂಡಾಯ ಸಮ್ಮೇಳನವನ್ನು ಯಶಸ್ವಿಗೊಳಿಸಲು ಜಿಲ್ಲೆಯ ಹೋರಾಟಗಾರರು, ಸಾಹಿತಿಗಳು, ಚಿಂತಕರು ಹಾಗೂ ಪ್ರಗತಿಪರರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಕನ್ನಡ ಸಾಹಿತ್ಯ ಪರಿಷತ್ತಿನ ಪದಾಧಿಕಾರಿಗಳು, ಸಂಘಟಕರು ಹಾಗೂ ಹಿತೈಷಿಗಳು ಮನವಿ ಮಾಡಿದ್ದಾರೆ.

WhatsApp Image 2026 10 10 at 7.46.08 PM 33

ಈ ವೇಳೆ ಪ್ರಮುಖರಾದ ವಿನಯಕುಮಾರ ಮಾಳಗೆ, ಮಹೇಶ ಗೋರನಾಳಕರ, ಸಂಜೀವಕುಮಾರ ಅಲ್ಲೂರೆ, ವಿನೋದಕುಮಾರ ಬಂದಗೆ, ಅಭಿ ಕಾಳೆ, ವಿಜಯಕುಮಾರ ಸೋನಾರೆ, ಸಿದ್ಧಾರೂಢ ಭಾಲ್ಕೆ, ಬಾಬುರಾವ ದಾನಿ, ಎಂ.ಎಸ್.ಮನೋಹರ, ಶಿವಶಂಕರ ಟೋಕರೆ, ಟಿ.ಎಂ.ಮಚ್ಚೆ ಮತ್ತಿತರರಿದ್ದರು.

ಇದನ್ನೂ ಓದಿ : ಹುಮನಾಬಾದ್‌ | ತ್ಯಾಜ್ಯ ವಿಲೇವಾರಿ ಘಟಕ ಸ್ಥಳಾಂತರಕ್ಕೆ ಆಗ್ರಹಿಸಿ ಧರಣಿ

WhatsApp Image 2026 10 10 at 6.59.42 PM 17
eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

1,271 ಉದ್ಯೋಗಗಳಿಗೆ ‘ಕ್ಯಾನ್ವಾ’ ಕತ್ತರಿ; ಕೆಲಸ ಕಳೆದುಕೊಂಡವರಿಗೆ 6 ತಿಂಗಳ ಸಂಬಳ, ಮ್ಯಾಕ್‌ಬುಕ್ ಕೊಡುಗೆ!

 ಟೆಕ್ ಜಗತ್ತಿನ ಮುಂದುವರಿದ ಉದ್ಯೋಗ ಕಡಿತದ ಅಲೆಯಲ್ಲಿ ಜನಪ್ರಿಯ ಡಿಸೈನ್ ಸಾಫ್ಟ್‌ವೇರ್...

ಜಾತಿಗಣತಿ ವರದಿ ಜಾರಿಗೆ ಆಗ್ರಹ, ಸರ್ಕಾರದ ವಿರುದ್ಧ ಸಿಡಿದೆದ್ದ ಹಿಂದುಳಿದ ವರ್ಗಗಳ ಒಕ್ಕೂಟ

ರಾಜ್ಯ ರಾಜಕಾರಣದಲ್ಲಿ ತೀವ್ರ ಕುತೂಹಲ ಹಾಗೂ ಚರ್ಚೆಗೆ ಗ್ರಾಸವಾಗಿರುವ ಬಹುನಿರೀಕ್ಷಿತ ‘ಸಾಮಾಜಿಕ...

ಮೆಟಾ ಇಂಡಿಯಾ ವಿರುದ್ಧ ದೆಹಲಿ ಪೊಲೀಸರಿಂದ ಎಫ್‌ಐಆರ್ ದಾಖಲು: NHRC ನಿರ್ದೇಶನದಂತೆ ಕ್ರಮ

ಸಾಮಾಜಿಕ ಜಾಲತಾಣ ದೈತ್ಯ ಸಂಸ್ಥೆಯಾದ 'ಮೆಟಾ' ಒಡೆತನದ ಪ್ಲಾಟ್‌ಫಾರ್ಮ್‌ಗಳಲ್ಲಿ ಮಕ್ಕಳ ಮೇಲಿನ...

ಮನುಷ್ಯ ಜಾತಿ ಒಂದೇ; ಮೇಲು–ಕೀಳು ಎಂಬ ಭೇದವೇಕೆ?

ಒಂದೆಡೆ ಧರ್ಮದ ಭೇದ ಮರೆತು ಸಹಬಾಳ್ವೆ ನಡೆಸುವ ಹಳ್ಳಿಗಳು; ಮತ್ತೊಂದೆಡೆ ಜಾತಿಯ...