ಬೀದರ್‌ | ಅಪರಾಧಿಕ ಕೃತ್ಯದಲ್ಲಿ ಭಾಗಿ : ಇಬ್ಬರು ರೌಡಿಶೀಟರ್‌ಗಳ ಗಡಿಪಾರು

Date:

ಮಟ್ಕಾ, ಜೂಜಾಟ ಹಾಗೂ ಅಕ್ರಮ ಮಾದಕ ಗಾಂಜಾ ಮಾರಾಟ ದಂಧೆಯಲ್ಲಿ ಭಾಗಿಯಾಗಿ ಸಾರ್ವಜನಿಕರ‌ ಶಾಂತಿ, ನೆಮ್ಮದಿಗೆ ಕಂಟಕವಾಗಿದ್ದ ಇಬ್ಬರು ರೌಡಿಶೀಟರ್‌ಗಳನ್ನು ರಾಜ್ಯದ ಪ್ರತ್ಯೇಕ ಜಿಲ್ಲೆಗಳಿಗೆ ಗಡಿಪಾರು ಮಾಡಿ ಬೀದರ್ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಪ್ರದೀಪ ಗುಂಟಿ‌ ಅವರು ಆದೇಶ ಹೊರಡಿಸಿದ್ದಾರೆ.

- Advertisement -

ಬೀದರ್‌ ಜಿಲ್ಲೆಯ ಚಿಟಗುಪ್ಪ ಪಟ್ಟಣದ ವೀರಣ್ಣಾ ಅಡೆಪ್ಪಾ ಬರ್ಲಾ ಮತ್ತು ಬೀದರ್‌ ನಗರದ ಇರಾನಿ ಕಾಲೋನಿಯ ಜಾಫರ್‌ ಅಲಿ ಅಲಿಯಾಸ್‌ ಆಸೀಕ್‌ ಅಲಿ ಗಡಿಪಾರಾದ ರೌಡಿಶೀಟರ್‌ಗಳು. ವೀರಣ್ಣಾ ಬರ್ಲಾ ಚಾಮರಾಜನಗರ ಜಿಲ್ಲೆ ಹಾಗೂ ಜಾಫರ್‌ ಅಲಿಗೆ ಹಾಸನ ಜಿಲ್ಲೆಗೆ ಗಡಿಪಾರು ಮಾಡಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸಂವಿಧಾನದಲ್ಲಿ ಇಂಪೀಚ್‌ಮೆಂಟ್‌ ಮೂಲಕ ಮುಖ್ಯ ಚುನಾವಣಾ ಆಯುಕ್ತರನ್ನು ಪದಚ್ಯುತಿಗೊಳಿಸಲು...

ಮುಖ್ಯ ಚುನಾವಣಾ ಆಯುಕ್ತರಾದ ಗ್ಯಾನೇಶ್ ಕುಮಾರ್ ಅವರಿಗೆ 2023ರ ಕಾಯ್ದೆಯ ಮೂಲಕ ಸರ್ಕಾರ ಕಾನೂನು ರಕ್ಷಣೆ ಕೊಟ್ಟಿರಬಹುದು, ಆದರೆ ಅವರಿಗೆ ಯಾವುದೇ ರೀತಿಯ ಸಾಂವಿಧಾನಿಕ ರಕ್ಷಣೆ ಇಲ್ಲ. ಹಾಗಾಗಿ ಅವರು ತಾವಾಗಿಯೇ ರಾಜೀನಾಮೆ...

ದಿಕ್ಕು ತೋಚದೆ ತಬ್ಬಿಬ್ಬಾಗಿರುವ ಚುನಾವಣಾ ಆಯೋಗ: ದಿನೇ ದಿನೆ...

ಸೆಪ್ಟೆಂಬರ್ 23ರ 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯ ವರದಿಯ ನಂತರ ಆಯೋಗ ಹಲವು ಸ್ಪಷ್ಟನೆಗಳನ್ನು ನೀಡಿದ್ದರೂ, ಒಂದು ಮುಖ್ಯ ಪ್ರಶ್ನೆಗೆ ಇನ್ನೂ ಉತ್ತರವಿಲ್ಲ: ಕಾನೂನುಬದ್ಧವಾಗಿ ಮತದಾರರ ಪಟ್ಟಿಯಲ್ಲಿದ್ದ 16 ಲಕ್ಷಕ್ಕೂ ಹೆಚ್ಚು ಜನರ...

ಸ್ಟಿಂಗ್ ಆಪರೇಷನ್ | ಭ್ರಷ್ಟಾಚಾರ ಬಯಲಿಗೆಳೆಯುವ ಸಾಧನವಾಗಬೇಕೇ ವಿನಾ...

ಆಡಳಿತ ಪಕ್ಷವನ್ನು ಪ್ರಶ್ನಿಸುವುದು ಪ್ರಜಾಪ್ರಭುತ್ವದ ಮೂಲಭೂತ ಕರ್ತವ್ಯ. ಆದರೆ, ವಿರೋಧ ಪಕ್ಷಗಳಿಗೂ ತಮ್ಮ ಆರೋಪಗಳನ್ನು ಸಮರ್ಥಿಸುವ ಹೊಣೆಗಾರಿಕೆ ಇದೆ. ರಾಜಕೀಯ ಲಾಭಕ್ಕಾಗಿ ಗಂಭೀರ ಆರೋಪಗಳನ್ನು ಮುಂದಿಡುವುದು ಮತ್ತು ಅವುಗಳ ಸತ್ಯಾಸತ್ಯತೆಯನ್ನು ಪರಿಶೀಲಿಸುವ ಪ್ರಕ್ರಿಯೆಯನ್ನು...

ಚಿಟಗುಪ್ಪ ಪೊಲೀಸ್‌ ಠಾಣೆ ವ್ಯಾಪ್ತಿಯ ನಿವಾಸಿಯಾದ ರೌಡಿಶೀಟರ್‌ ವೀರಣ್ಣಾ ಬರ್ಲಾ ಈತ ಚಿಟಗುಪ್ಪಾ ಪಟ್ಟಣ ಹಾಗೂ ಸುತ್ತಮುತ್ತಲಿನ ಗ್ರಾಮದಲ್ಲಿ ಮಟ್ಕಾ, ಜೂಜಾಟ ನಡೆಸುತ್ತಿದ್ದನು. ಇದರಿಂದ ಬಡ ಕೂಲಿ ಕಾರ್ಮಿಕರು, ಸಣ್ಣಪುಟ್ಟ ವ್ಯಾಪಾರಿಗಳು ಈ ಜೂಜಾಟದಿಂದ ಹೆಚ್ಚಿನ ಹಣ ಬರುತ್ತದೆ ಎಂಬ ಆಸೆಯಿಂದ ತಮ್ಮ ದಿನನಿತ್ಯದ ಸಂಪಾದನೆಯ ಹಣ ಓಸಿ, ಮಟ್ಕಾ, ಜೂಜಾಟವೆಂಬ ಮೋಸದಾಟದಲ್ಲಿ ಹಾಕಿ ತಮ್ಮ ಹಣವನ್ನು ಕಳೆದುಕೊಳ್ಳುತ್ತಿದ್ದು, ಈ ಬಗ್ಗೆ ರೌಡಿ ವೀರಣ್ಣಾ ಬರ್ಲಾ ಮೇಲೆ ಸುಮಾರು 20 ಪ್ರಕರಣಗಳು ದಾಖಲಾಗಿದ್ದರೂ ಅಪರಾಧಿಕ ಕೃತ್ಯಗಳು ಮುಂದುವರೆಸಿದನು. ಸಮಾಜದಲ್ಲಿ ಶಾಂತಿ ಪಾಲನೆ ಮತ್ತು ಕಾನೂನು ಸುವ್ಯವಸ್ಥೆಗಾಗಿ ಸದರಿ ರೌಡಿಶೀಟರ್‌ಗೆ ಬೀದರ ಜಿಲ್ಲೆಯಿಂದ ಚಾಮರಾಜನಗರ ಜಿಲ್ಲೆಗೆ ಗಡಿಪಾರು ಮಾಡಲಾಗಿದೆ.

ಬೀದರ್‌ ನಗರದ ಗಾಂಧಿ ಗಂಜ ಪೊಲೀಸ್ ಠಾಣೆ ವ್ಯಾಪ್ತಿಯ, ಇರಾನಿ ಕಾಲೋನಿಯ ನಿವಾಸಿ ರೌಡಿಶೀಟರ್ ಜಾಫರ ಅಲಿ @ ಆಸೀಕ್ ಈತನು ಜಿಲ್ಲೆಯಲ್ಲಿ ಸುಲಿಗೆ ಮಾಡುವುದು, ಸಾರ್ವಜನಿಕ ಸ್ಥಳಗಳಲ್ಲಿ ಜೀವ ಬೆದರಿಕೆ ಹಾಕುವುದು, ಅಕ್ರಮವಾಗಿ ಗಾಂಜಾ ಸಾಗಾಟ ಮತ್ತು ಮಾರಾಟ ಮಾಡುವುದನ್ನು ತನ್ನ ವೃತ್ತಿ ಮಾಡಿಕೊಂಡಿದ್ದು, ಇದರಿಂದ ಜಿಲ್ಲೆಯಲ್ಲಿ ಸಾಮಾಜಿಕ ಸ್ವಾಸ್ಥ್ಯ ಹಾಳುಮಾಡಿ ಯುವ ಜನರನ್ನು ಸೆಳೆದು ದುಶ್ಚಟಕ್ಕೆ ಬಲಿ ಮಾಡುತ್ತಿದ್ದನು. ಈತನ ವಿರುದ್ಧ ಸುಮಾರು 8 ಪ್ರಕರಣಗಳು ದಾಖಲಾಗಿದ್ದರೂ ಅಪರಾಧಿಕ ಕೃತ್ಯಗಳಿಂದ ದೂರವಾಗದೆ ತನ್ನ ಪ್ರವೃತಿಯನ್ನು ಮುಂದುವರೆಸಿಕೊಂಡಿದ್ದನು.

ಇದನ್ನೂ ಓದಿ : ಬೀದರ್‌ | 3 ತಿಂಗಳಿಂದ ಕಲಾವಿದರ ಕೈಗೆ ಸೇರದ ಮಾಸಾಶನ : ತಪ್ಪದ ಅಲೆದಾಟ

ಜಿಲ್ಲೆಯಲ್ಲಿ ಕಾನೂನು ವಿರುದ್ಧ ಚಟುವಟಿಕೆಯಲ್ಲಿ ಭಾಗಿಯಾಗಿ, ಕಾನೂನು ಮತ್ತು ಸುವ್ಯವಸ್ಥೆಯಲ್ಲಿ ಅಡೆತಡೆಯನ್ನುಂಟು ಮಾಡುವವರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಲಾಗುವುದು ಹಾಗೂ ಗಡಿಪಾರು ಮಾಡಲಾಗುವುದು. ಜಿಲ್ಲೆಯ ನಾಗರಿಕರು ಯಾವುದೇ ಕಾನೂನು ವಿರುದ್ದ ಚಟುವಟಿಕೆಯಲ್ಲಿ ಭಾಗಿಯಾಗಿ ಕಾನೂನು ಸಂಘರ್ಷದಲ್ಲಿ ಅಮೂಲ್ಯವಾದ ತನ್ನ ಹಾಗೂ ತನ್ನ ಕುಟುಂಬದ ಜೀವನವನ್ನು ಹಾಳುಮಾಡಿಕೊಳ್ಳಬೇಡಿ ಎಂದು ಸಾರ್ವಜನಿಕರಲ್ಲಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಪ್ರದೀಪ ಗುಂಟಿ ಅವರು ಕೋರಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸ್ಟಿಂಗ್ ಆಪರೇಷನ್ | ಭ್ರಷ್ಟಾಚಾರ ಬಯಲಿಗೆಳೆಯುವ ಸಾಧನವಾಗಬೇಕೇ ವಿನಾ ರಾಜಕೀಯ ಒತ್ತಡ, ಬ್ಲ್ಯಾಕ್‌ಮೇಲ್‌ನ ಆಯುಧವಾಗಬಾರದು

ಆಡಳಿತ ಪಕ್ಷವನ್ನು ಪ್ರಶ್ನಿಸುವುದು ಪ್ರಜಾಪ್ರಭುತ್ವದ ಮೂಲಭೂತ ಕರ್ತವ್ಯ. ಆದರೆ, ವಿರೋಧ ಪಕ್ಷಗಳಿಗೂ...

ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಅಪಪ್ರಚಾರ ವಿಡಿಯೋ: ಇಬ್ಬರು ಪೊಲೀಸ್ ವಶಕ್ಕೆ

ಕಾಂಗ್ರೆಸ್ ನಾಯಕ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ತೇಜೋವಧೆ ಮಾಡುವ ಉದ್ದೇಶದಿಂದ...

ಫಾರ್ಮ್‌ 6 ಸುಳ್ಳು ಘೋಷಣೆಗೆ ಒತ್ತು ನೀಡುತ್ತಿದೆ: ಚುನಾವಣಾ ಆಯೋಗದ ವಿರುದ್ಧ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ

ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ವೇಳೆ ಮತದಾರರ...